ಚಾಮರಾಜನಗರ

ನಾಗಮಣಿ ಮಾರಾಟ ಯತ್ನ: ವ್ಯಕ್ತಿ ಬಂಧನ
ಚಾಮರಾಜನಗರ

ನಾಗಮಣಿ ಮಾರಾಟ ಯತ್ನ: ವ್ಯಕ್ತಿ ಬಂಧನ

November 29, 2018

ಹನೂರು: ತಾಲೂಕಿನಲ್ಲಿ ಅಮಾಯಕರನ್ನು ವಂಚಿಸಿ ನಾಗಮಣಿ ಮಾರಾ ಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸಿಇಎನ್ ಪೊಲೀಸರು ಮಂಗಳವಾರ ಬಂಧಿಸಿ ದ್ದಾರೆ. ತಾಲೂಕಿನ ಎಂ.ಜಿ.ದೊಡ್ಡಿ ಗ್ರಾಮದ ಮುತ್ತು ಬಂಧಿತ ಆರೋಪಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಸಿ.ಇ.ಎನ್ ಇನ್‍ಸ್ಪ್ಪೆಕ್ಟರ್ ರವೀಂದ್ರ ಹಾಗೂ ಎಎಸ್‍ಐಗಳಾದ ಜಯಶಂಕರ್, ಮಹದೇವಪ್ಪ, ಪೇದೆಗಳಾದ ಹೆಚ್.ಡಿ.ಸ್ವಾಮಿ, ಸಿದ್ದ ಮಲ್ಲಶೆಟ್ಟಿ, ವ್ಯಾಪಾರಿಗಳ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿ ಮುತ್ತು ಎಂಬುವನನ್ನು ಬಂಧಿಸಿ ಆತನಿಂದ ಒಂದು ನಾಗಮಣಿಯನ್ನು ವಶಪಡಿಸಿಕೊಂಡಿದ್ದಾರೆ….

ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆ
ಚಾಮರಾಜನಗರ

ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆ

November 27, 2018

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಾಗ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ್ದಂತೆ ಆಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಇರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಸೋಮವಾರ ಆಯೋ ಜಿಸಿದ್ದ ‘ಸಂವಿಧಾನ ದಿನಾಚರಣೆ’…

ಜಿಲ್ಲಾಸ್ಪತ್ರೆಯ ಶುಶ್ರೂಷಕರ ಪ್ರತಿಭಟನೆ
ಚಾಮರಾಜನಗರ

ಜಿಲ್ಲಾಸ್ಪತ್ರೆಯ ಶುಶ್ರೂಷಕರ ಪ್ರತಿಭಟನೆ

November 27, 2018

ಚಾಮರಾಜನಗರ:  ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ಟೈಫಂಡರಿ ಆಧಾರದಲ್ಲಿ ಶುಶ್ರೂಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮನ್ನೇ ಸೇವೆಯಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಶುಶ್ರೂಷಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಶುಶ್ರೂಷಕರಿಗೆ ಬಹುಜನ ವಿದ್ಯಾರ್ಥಿ ಸಂಘ ಹಾಗೂ ಜಿಲ್ಲಾ ರೈತ ಸಂಘ ಬೆಂಬಲ ಸೂಚಿಸಿದ್ದರು. ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಆರಂಭಿಸಿದ ಶುಶ್ರೂಷಕರು (ನರ್ಸ್‍ಗಳು), ಬಹುಜನ ವಿದ್ಯಾರ್ಥಿ ಸಂಘ ಹಾಗೂ ರೈತ ಸಂಘದ ಕಾರ್ಯಕರ್ತರು, ಮೆಡಿಕಲ್ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ರಾಜೇಂದ್ರ, ವೈದ್ಯಕೀಯ ಶಿಕ್ಷಣ…

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯುವ ಸಂಸತ್ ಸ್ಪರ್ಧೆ
ಚಾಮರಾಜನಗರ

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯುವ ಸಂಸತ್ ಸ್ಪರ್ಧೆ

November 27, 2018

ಚಾಮರಾಜನಗರ:  ವಿದ್ಯಾರ್ಥಿ ಗಳ ಸರ್ವತೋಮುಖ ಬೆಳವಣಿಗೆಗೆ ಎಷ್ಟೆಲ್ಲ ಅವಕಾಶಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಲ್ಪಿಸುತ್ತಿದೆ. ಅದರಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸುವ ಸಂಸತ್ ಸ್ಪರ್ಧೆಯು ಒಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ತಿಳಿಸಿದರು. ನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯಲ್ಲಿ ಜಿಲ್ಲಾ ಪಂಚಾಯಿತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯ ಪೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿ ಯೊಂದು ವಿದ್ಯಾರ್ಥಿಯಲ್ಲಿ ಒಂದೊಂದು ಪ್ರತಿಭೆಗಳು ಇರುತ್ತದೆ. ಅಂತಹÀ ಸಮರ್ಥ್ಯಗಳಿರುವ…

ನಿಷ್ಠೆಯಿಂದ ಕರ್ತವ್ಯ ಪಾಲನೆ ಅಗತ್ಯ
ಚಾಮರಾಜನಗರ

ನಿಷ್ಠೆಯಿಂದ ಕರ್ತವ್ಯ ಪಾಲನೆ ಅಗತ್ಯ

November 27, 2018

ಗುಂಡ್ಲುಪೇಟೆ: ಪ್ರತಿಯೊಬ್ಬರೂ ಇತರರ ಮೂಲಹಕ್ಕು ಗಳಿಗೆ ಅಡ್ಡಿ ಮಾಡದೆ ತಮ್ಮ ಕರ್ತವ್ಯ ಗಳನ್ನು ನಿಷ್ಠೆಯಿಂದ ಪಾಲಿಸಿದರೆ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂ ಎಫ್‍ಸಿ ನ್ಯಾಯಾಧೀಶ ಜೆ.ಯೋಗೇಶ್ ಹೇಳಿದರು. ಇಲ್ಲಿನ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕಿ ಯರ ವಿದ್ಯಾರ್ಥಿನಿಲಯದಲ್ಲಿ ಆಯೋಜಿ ಸಿದ್ದ ಸಂವಿಧಾನ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ನಡೆಸಿ ಅಮೇರಿಕಾದ ಸಂವಿ…

ಪ್ರವಾಸಿ ತಾಣ, ರೇಷ್ಮೆ ಇಲಾಖೆ ಕೇಂದ್ರಗಳಿಗೆ ಸಚಿವ ಸಾರಾ ಮಹೇಶ್ ಭೇಟಿ
ಚಾಮರಾಜನಗರ

ಪ್ರವಾಸಿ ತಾಣ, ರೇಷ್ಮೆ ಇಲಾಖೆ ಕೇಂದ್ರಗಳಿಗೆ ಸಚಿವ ಸಾರಾ ಮಹೇಶ್ ಭೇಟಿ

November 27, 2018

ಚಾಮರಾಜನಗರ:  ಪ್ರವಾಸೋ ದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ರೇಷ್ಮೆ ಇಲಾಖೆ ಕೇಂದ್ರ, ಮಾರು ಕಟ್ಟೆಗಳಿಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿ ವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಸಂಸದ ಆರ್. ಧ್ರುವ ನಾರಾಯಣ, ಶಾಸಕ ಎನ್.ಮಹೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ.ಯೋಗೀಶ್ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಬೆಳಿಗ್ಗೆಯಿಂದಲೇ ಪ್ರವಾಸೋದ್ಯಮ, ರೇಷ್ಮೆ ಸಚಿವರು ಭೇಟಿ ನೀಡುವ ಕಾರ್ಯಕ್ರಮ ಆರಂಭಿಸಿದರು….

ಚಾಮರಾಜನಗರ ಜಿಪಂ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ
ಚಾಮರಾಜನಗರ

ಚಾಮರಾಜನಗರ ಜಿಪಂ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ

November 23, 2018

ಸೌಲಭ್ಯಗಳು ಪೋಲಾಗದಂತೆ ಎಚ್ಚರ ವಹಿಸಲು ಸೂಚನೆ ಚಾಮರಾಜನಗರ: ಗ್ರಾಮೀಣ ಭಾಗಗಳಲ್ಲಿ ವಿದ್ಯುತ್, ನೀರು ಇತರೆ ಪ್ರಮುಖ ಸೌಲಭ್ಯಗಳು ಪೋಲಾಗದಂತೆ ಅಧಿಕಾರಿಗಳು ಹೆಚ್ಚು ಗಮನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗ ಣದಲ್ಲಿ ಗುರುವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಹಗಲು ಹೊತ್ತಿ ನಲ್ಲಿಯೂ ಬೀದಿ ದೀಪಗಳು ಬೆಳಗುತ್ತಿ ರುವುದನ್ನು ಗಮನಿಸಿದ್ದೇನೆ. ಹೀಗೆ ವಿದ್ಯುತ್‍ನ್ನು ನಿರ್ಲಕ್ಷ್ಯ…

ಡಿವೈಎಸ್‍ಪಿಯಿಂದ ತಹಶೀಲ್ದಾರ್‍ಗೆ ಧಮ್ಕಿ
ಚಾಮರಾಜನಗರ

ಡಿವೈಎಸ್‍ಪಿಯಿಂದ ತಹಶೀಲ್ದಾರ್‍ಗೆ ಧಮ್ಕಿ

November 23, 2018

ಗುಂಡ್ಲುಪೇಟೆ:  ಜಮೀನಿನಲ್ಲಿ ಬೆಳೆದಿದ್ದ ಸಾಗುವಾನಿ ಮರಗಳನ್ನು ಅನುಮತಿಯಿಲ್ಲದೆ ಕಡಿದ ಬಗ್ಗೆ ಪರಿಶೀಲನೆ ನಡೆಸಿದ ಗ್ರೇಡ್-2 ತಹಸೀಲ್ದಾರ್ ಅವರಿಗೆ ಎಸಿಬಿ ಡಿವೈಎಸ್‍ಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬೆಳಚಲವಾಡಿ ಗ್ರಾಮದ ನಿವಾಸಿ ಪುಟ್ಟಸ್ವಾಮಾರಾಧ್ಯರ ಪುತ್ರ, ಚಿಕ್ಕಬಳ್ಳಾಪುರದಲ್ಲಿ ಎಸಿಬಿ ಡಿವೈಎಸ್‍ಪಿಯಾಗಿರುವ ಪ್ರಸಾದ್ ಅವರು ಪಟ್ಟಣದ ಗ್ರೇಡ್-2 ತಹಶೀಲ್ದಾರ್ ಸುದರ್ಶನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏನಿದು ಪ್ರಕರಣ?: ಪುಟ್ಟಸ್ವಾಮಾರಾಧ್ಯ ಅವರು…

ನ.30ರಂದು ರೈತ ಸಂಘಟನೆಯಿಂದ ಸಿಎಂಗೆ ಕಪ್ಪು  ಬಾವುಟ ಪ್ರದರ್ಶಿಸಲು ನಿರ್ಧಾರ: ಹೊನ್ನೂರು ಪ್ರಕಾಶ
ಚಾಮರಾಜನಗರ

ನ.30ರಂದು ರೈತ ಸಂಘಟನೆಯಿಂದ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ನಿರ್ಧಾರ: ಹೊನ್ನೂರು ಪ್ರಕಾಶ

November 23, 2018

ಹನೂರು: ವಿವಿಧ ಕಾಮ ಗಾರಿಗಳ ಉದ್ಘಾಟನೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ನ. 30ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಗಮಿ ಸುತ್ತಿದ್ದು, ಅವರಿಗೆ ಕಪ್ಪು ಬಾವುಟ ತೋರಿ ಸಲಾಗುವುದು ಎಂದು ರೈತ ಸಂಘದ ಜಿಲ್ಲಾ ಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು. ಹನೂರು ಪಟ್ಟಣದ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹನೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಇಲ್ಲಿನ ಶಾಸಕರು ಕ್ಷೇತ್ರ ವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲ ರಾಗಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಇಂದಿಗೂ ಮೂಲ ಸೌಲಭ್ಯಗಳ…

ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿ ಪ್ರತ್ಯಕ್ಷ: ಜನರಲ್ಲಿ ಆತಂಕ
ಚಾಮರಾಜನಗರ

ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿ ಪ್ರತ್ಯಕ್ಷ: ಜನರಲ್ಲಿ ಆತಂಕ

November 23, 2018

ಗುಂಡ್ಲುಪೇಟೆ:  ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಎದುರಾಗಿದೆ. ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ತೀವ್ರ ನಿಗಾ ಇಟ್ಟಿದೆ. ಹುಲಿಯ ಕಾಲಿನಲ್ಲಿ ಗಾಯವಾಗಿದ್ದು, ನಾಡಿನತ್ತ ಬಂದಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ಸಂಜೆವರೆಗೂ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚಾರಣೆ ನಡೆಸಿದರೂ ಯಾವುದೇ ಪ್ರಯೋಜ ವಾಗಲಿಲ್ಲ. ಬಳಿಕ, ಮಳೆಯ ಕಾರಣದಿಂದ ಕಾರ್ಯಾಚಾರಣೆ ಸ್ಥಗಿತ ಗೊಳಿಸಲಾಗಿದೆ. ಗೋಪಾಲಸ್ವಾಮಿಬೆಟ್ಟ ಅರಣ್ಯ ವಲಯದ ಹಿರೀಕೆರೆ ಸಮೀಪ ಬುಧವಾರ ಅರಣ್ಯ ಸಿಬ್ಬಂದಿಗೆ ಹುಲಿ…

1 52 53 54 55 56 141
Translate »