ಗ್ರಾಮಸ್ಥರಿಂದ ಅಹವಾಲು ಸಲ್ಲಿಕೆ, ಕಾಲೋನಿಯ ಪ್ರತಿ ಬೀದಿಗೆ ಸಿಇಓ ಭೇಟಿ ಚಾಮರಾಜನಗರ: ದಲಿತ ಸಮು ದಾಯಗಳ ಅಭಿವೃದ್ಧಿಯ ಅವಲೋಕನ ಹಾಗೂ ಗ್ರಾಮದ ಪರಿಸ್ಥಿತಿ ವಾಸ್ತವ ದರ್ಶನದ ಉದ್ದೇಶದೊಂದಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಆರಂಭಿಸಿರುವ ಮುಸ್ಸಂಜೆ ಮಾತು ಕಾರ್ಯಕ್ರಮಕ್ಕೆ ಗುಂಡ್ಲುಪೇಟೆ ತಾಲೂಕಿನ ಸಿದ್ದಯ್ಯನಪುರ ಕಾಲೋನಿಯಲ್ಲಿ ಶನಿ ವಾರ ಚಾಲನೆ ದೊರೆತಿದೆ. ಶನಿವಾರ ಸಂಜೆ ಜಿಲ್ಲಾ ಮಟ್ಟದ ಅಧಿ ಕಾರಿಗಳೊಡನೆ ಒಡಗೂಡಿ ದಲಿತ ಸಮು ದಾಯದವರೊಂದಿಗೆ ಸಮಾಲೋಚನೆ ನಡೆಸುವ ಮುಸ್ಸಂಜೆ ಮಾತುಕತೆಗಾಗಿ ಆಗಮಿಸಿದ ಸಿಇಒ ಅವರನ್ನು…
ಕೆಪಿಎಸ್‍ಸಿ ನೇಮಕಾತಿ ಕುರಿತು ಸಿಎಂ ಜೊತೆ ಚರ್ಚೆ: ಪುಟ್ಟರಂಗಶೆಟ್ಟಿ
November 19, 2018ಚಾಮರಾಜನಗರ: ಕರ್ನಾಟಕ ಲೋಕಸೇವಾ ಆಯೋಗದ ನೇರ ನೇಮಕಾತಿ ಸಂಬಂಧ ತಳೆದಿರುವ ನಿಲುವಿನ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕ್ಯಾಬಿನೆಟ್‍ನಲ್ಲಿ ವಿಷಯ ಪ್ರಸ್ತಾಪಿಸಿ ಸಂಬಂಧಪಟ್ಟ ವರ್ಗಗಳಿಗೆ ಅನ್ಯಾಯವಾಗದಂತೆ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ: 08: ಸೆಹಿಮ:95 ಬೆಂಗಳೂರು ದಿನಾಂಕ: 20.06.1995ರಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸುವಾಗ ಯಾವ ರೀತಿ ಆಯ್ಕೆ ವಿಧಾನ ಅನುಸರಿಸಬೇಕು ಎಂಬುದನ್ನು…
ಆರೋಗ್ಯಕ್ಕೆ ಪ್ರಕೃತಿ ಚಿಕಿತ್ಸೆ ಉತ್ತಮ: ಡಾ.ಮಾನಸ
November 19, 2018ಚಾಮರಾಜನಗರ: ಪ್ರಕೃತಿ ಚಿಕಿತ್ಸಾ ಪದ್ಧತಿ ಅತ್ಯಂತ ಸುಲಭವಾಗಿ ದೊರೆಯು ತ್ತಿದೆ. ನಮ್ಮ ದೇಶದ ಪದ್ಧತಿಯಾದ ಇದಕ್ಕೆ ವಿದೇಶದಲ್ಲಿ ಹೆಚ್ಚಿನ ಬೇಡಿಕೆಯಿದೆ. ಮನುಷ್ಯನ ಆರೋಗ್ಯ ಕಾಪಾಡಲು ಪ್ರಕೃತಿ ಚಿಕಿತ್ಸೆ ಉತ್ತಮವಾಗಿದೆ ಎಂದು ವೈದ್ಯೆ ಡಾ.ಮಾನಸ ಹೆಳಿದರು. ನಗರದ ಸರ್ಕಾರಿ ಪ್ರಕೃತಿ ಚಿಕಿತ್ಸಾಲಯದಲ್ಲಿ ಭಾನುವಾರ ನಡೆದ ಮೊದಲ ವರ್ಷದ ಪ್ರಕೃತಿ ಚಿಕಿತ್ಸಾ ದಿನಾಚರಣೆಯಲ್ಲಿ ಭಾಗ ವಹಿಸಿ ಅವರು ಮಾತನಾಡಿದರು.ಪ್ರಕೃತಿ ಚಿಕಿತ್ಸೆ ಆರ್ಯುವೇದದಂತೆ ಅತ್ಯಂತ ಹಳೆಯ ಪದ್ಧತಿಯಾಗಿದೆ. ಗ್ರಾಮೀಣ ಜನರು ಹೆಚ್ಚು ಪ್ರಕೃತಿ ಜೊತೆ ಒಡನಾಟ ಇಟ್ಟುಕೊಟ್ಟಿದ್ದರಿಂದಾಗಿಯೇ ಅವರು ನೂರಾರು ಕಾಲ…
ಧರ್ಮಸ್ಥಳ ಸಂಘದಿಂದ 65 ಕೋಟಿ ರೂ. ಸಾಲ ನೀಡುವ ಗುರಿ: ಸತೀಶ್‍ಶೆಟ್ಟಿ
November 19, 2018ಗುಂಡ್ಲುಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ತಾಲೂಕಿಗೆ 65 ಕೋಟಿ ರೂಪಾಯಿಗಳ ಸಾಲವನ್ನು ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಎಸ್‍ಕೆಡಿಆರ್‍ಡಿಪಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್‍ಶೆಟ್ಟಿ ಹೇಳಿದರು. ಪಟ್ಟಣದಲ್ಲಿರುವ ಯೋಜನಾ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2018-19ನೇ ಸಾಲಿನ ಪ್ರಗತಿ ಪರಿಶೀಲನೆ ಮತ್ತು ಅನುದಾನ ವಿತ ರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ವರ್ಷ ತಾಲೂಕಿಗೆ ವಾರ್ಷಿಕ 65 ಕೋಟಿ ರೂ.ಗಳ ಸಾಲವನ್ನು ನೀಡಬೇಕೆಂಬ ಗುರಿ ಹೊಂದಲಾಗಿದ್ದು, ಈಗಾ ಗಲೇ 35 ಕೋಟಿ ರೂ.ಗಳನ್ನು ವಿತರಿಸಲಾ ಗಿದೆ….
ನ.26, ಕನಕದಾಸರ ಜಯಂತಿ ಆಚರಿಸಲು ನಿರ್ಧಾರ
November 19, 2018ಚಾಮರಾಜನಗರ: ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ನ. 26ರಂದು ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅರ್ಥಪೂರ್ಣ ವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನಕದಾಸರ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ತೀರ್ಮಾನಿಸಲಾಯಿತು. ಜಯಂತಿ ಕಾರ್ಯಕ್ರಮ ಆಯೋಜನೆ ಸಂಬಂಧ ಸಮುದಾ ಯದ ಮುಖಂಡರು ಹಾಗೂ ವಿವಿಧ…
ಚಂಗಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಕಾವೇರಿ ಭೇಟಿ
November 19, 2018ಕುಡಿಯುವ ನೀರು, ವಿದ್ಯುತ್, ರಸ್ತೆ, ಆಸ್ಪತ್ರೆ, ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಅಹವಾಲು ಸಲ್ಲಿಕೆ ಶೀಘ್ರದಲ್ಲಿಯೇ ಮೂಲ ಸೌಲಭ್ಯ ಕಲ್ಪಿಸುವ ಭರವಸೆ, ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ತಾಕೀತು ಹನೂರು: ಹನೂರು ತಾಲೂ ಕಿನ ಮಲೆಮಹದೇಶ್ವರ ಬೆಟ್ಟದ ಸಮೀ ಪವಿರುವ ಚಂಗಡಿ ಗ್ರಾಮಕ್ಕೆ ಶುಕ್ರವಾರ ಸಂಜೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಅಧಿಕಾರಿಗಳ ಜೊತೆ ಭೇಟಿ ನೀಡಿ ಗ್ರಾಮ ಸ್ಥರ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಬಗೆ ಹರಿಸುವ ಭರವಸೆ ನೀಡಿದರು. ದೂರುಗಳ ಸುರಿಮಳೆ: ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು…
ಸುಜಲ ಯೋಜನೆ ಸದ್ಬಳಕೆಗೆ ಸಚಿವ ಪುಟ್ಟರಂಗಶೆಟ್ಟಿ ಸಲಹೆ
November 18, 2018ಚಾಮರಾಜನಗರ: ಒಣ ಭೂಮಿ ಪ್ರದೇಶ ಹಾಗೂ ಮಳೆಯಾಶ್ರಿತ ಕೃಷಿಗೆ ಸಂಬಂಧಿಸಿದಂತೆ ಆಧುನಿಕ ಮತ್ತು ವೈಜ್ಞಾನಿಕ ಮಾರ್ಗ ಅನುಸರಿಸುವ ಸುಜಲ ಯೋಜನೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗ ಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ನಗರದ ಶಿವಕುಮಾರಸ್ವಾಮಿ ಭವನ ದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ ರೈತರಿಗೆ ಹಮ್ಮಿಕೊಳ್ಳಲಾ ಗಿದ್ದ ಭೂ ಸಂಪನ್ಮೂಲ ಮಾಹಿತಿ ಕಾರ್ಯಾ ಗಾರ ಉದ್ಘಾಟಿಸಿ…
ಚಾಮರಾಜನಗರ ಸಬ್ ರಿಜಿಸ್ಟರ್ ಕಚೇರಿಯ ಮೇಲೆ ಎಸಿಬಿ ದಾಳಿ ಪ್ರಕರಣ
November 18, 2018ಉಪನೋಂದಣಾಧಿಕಾರಿ ಸೇರಿ 8 ಮಂದಿಗೆ ನೋಟೀಸ್ ಚಾಮರಾಜನಗರ: ನಗರದ ಉಪ ನೋಂದಣಾಧಿಕಾರಿಗಳ ಕಚೇರಿ (ಸಬ್ ರಿಜಿಸ್ಟರ್ ಆಫೀಸ್)ಮೇಲೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು (ಎಸಿಬಿ) ದಾಳಿ ನಡೆಸಿ ಮಧ್ಯ ರಾತ್ರಿಯವರೆಗೂ ಕಡತಗಳ ಪರಿಶೀಲನೆ ನಡೆಸಿದರು. ಈ ವೇಳೆ ಕಚೇರಿಯಲ್ಲಿ ಹೆಚ್ಚುವರಿ ಹಣ ದೊರೆತ ಕಾರಣ ಉಪನೋಂದಣಾಧಿಕಾರಿ ಗೀತಾ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ನೋಟೀಸ್ ಜಾರಿಗೊಳಿಸಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಕಟ್ಟಡದಲ್ಲಿರುವ ಸಬ್ ರಿಜಿಸ್ಟರ್ ಕಚೇರಿಯಲ್ಲಿ ದಾಖ ಲಾತಿ ರಿಜಿಸ್ಟರ್ ಮಾಡಿಸಲು, ವಿವಾಹ ನೋಂದಣಿ…
ಉದ್ಯೋಗ ಖಾತರಿ ಯೋಜನೆ ಸದ್ಬಳಕೆಗೆ ಸಿಇಓ ಸಲಹೆ
November 18, 2018ಚಾಮರಾಜನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು, ಮಹಿಳಾ ಸ್ವ-ಸಹಾಯ ಸಂಘದ ಸದ ಸ್ಯರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಸಲಹೆ ನೀಡಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಜಿಲ್ಲಾ ಪಂಚಾಯಿತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರಿಗೆ ಹಮ್ಮಿಕೊಳ್ಳ…
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
November 18, 2018ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾ ಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಪಂಚಾಯಿತಿ ಅಧಿಕಾರಿಯ ಮೂಲಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಾಪಂ ಕಚೇರಿ ಮುಂಭಾಗ ಸಮಾವೇಶಗೊಂಡ ನೌಕರರು, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದರು. ನಂತರ ನೌಕರರ ಸಂಘದ ಜಿಲ್ಲಾ ಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಸರ್ಕಾರ ರಾಜ್ಯಾದ್ಯಂತ ಎಲ್ಲಾ ಗ್ರಾಪಂಗಳಲ್ಲಿ ಕೈಬಿ ಟ್ಟಿದ್ದ 18 ಸಾವಿರ…