ಹನೂರು:ಟೊಮೋಟೋ ಫಸಲಿನ ಜೊತೆ ಗಾಂಜಾ ಬೆಳೆದಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ರಾಮಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಹನೂರು ಸಮೀಪದ ದೊಮ್ಮನಗದ್ದೆ ನಿವಾಸಿ ಹನುಮನಾಯಕನನ್ನು ಬಂಧಿಸಿ 37 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ರಾಮಾಪುರ ಇನ್ಸ್‍ಪೆಕ್ಟರ್ ಮನೋಜ್‍ಕುಮಾರ್ ಸಿಬ್ಬಂದಿಗಳಾದ ನಾಗೇಂದ್ರ, ರಘು, ರವಿಪ್ರಸಾದ್, ಮನೋಹರ್, ಪ್ರಕಾಶ್ ಪ್ರದೀಪ್, ಮಂಜುನಾಥ್ ದಾಳಿಯಲ್ಲಿ ಭಾಗವಹಿಸಿದರು. ಖಚಿತ ಮಾಹಿತಿ ದೊರೆತ ಮೇರೆಗೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ದೊಮ್ಮನಗದ್ದೆ ಗ್ರಾಮದ ನಿವಾಸಿ ಹನುಮನಾಯಕ…
ಬಾಣೂರು ಬಳಿ ಜೂಜು ಅಡ್ಡೆ ಮೇಲೆ ದಾಳಿ
October 13, 2018ಹನೂರು: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆಯ ಮೇಲೆ ಹನೂರು ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಪಣಕ್ಕಿಟ್ಟಿದ್ದ ನಗದು ಸಮೇತ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹನೂರು ಪೊಲೀಸ್ ಠಾಣೆ ಸರಹದ್ದಿನ ಚಿಕ್ಕಲ್ಲೂರು ಬಳಿ ಇರುವ ಬಾಣೂರು ಗ್ರಾಮದ 11 ಮಂದಿ ಸಾರ್ವಜನಿಕ ರಸ್ತೆ ಬದಿಯ ಜಮೀನೊಂದರಲ್ಲಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹನೂರು ಇನ್ಸ್‍ಪೆಕ್ಟರ್ ಮೋಹಿತ್ ಸಹದೇವ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ…
ಬಾಲಕರಿಬ್ಬರು ಕೆರೆಯಲ್ಲಿ ಜಲಸಮಾಧಿ
October 12, 2018ಬೇಗೂರು: ಸಮೀಪದ ಬೆಳಚಲವಾಡಿ ಗ್ರಾಮದ ಕೆರೆಗೆ ಈಜಲು ತೆರಳಿದ್ದ ಬಾಲಕರಿಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ. ಬೆಳಚಲವಾಡಿ ಗ್ರಾಮದ ಶಿವಣ್ಣ ಎಂಬುವರ ಮಗ ಬೇಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ 10 ನೇತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಚಂದನ್(17) ಹಾಗೂ ಇದೇ ಗ್ರಾಮದ ಮಹೇಶ್ ಎಂಬು ವರ ಮಗ 9ನೇ ತರಗತಿಯ ಪ್ರವೀಣ್ (15) ಮೃತಪಟ್ಟವರು. ಈ ಇಬ್ಬರು ಬಾಲಕರು ಬುಧವಾರ ಶಾಲೆಯಲ್ಲಿ ನಡೆದ ವಿಶ್ವಾಸ ಕಿರಣ ತರಗತಿಗೆ ಹಾಜರಾಗಿ ಮಧ್ಯಾಹ್ನ ಮನೆಗೆ ತೆರಳಿದ್ದು, ನಂತರ ಡ್ಯಾನ್ಸ್ ತರಗತಿಗೆ ತೆರಳುವುದಾಗಿ ಹೇಳಿ…
ನಾಳೆಯಿಂದ ಚಾಮರಾಜನಗರದಲ್ಲಿ ದಸರಾ
October 12, 2018ಚಾಮರಾಜನಗರ: ಚಾ.ನಗರದಲ್ಲಿ ಅ.13ರಿಂದ 16ರವರೆಗೆ ಆಯೋಜಿಸಿರುವ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ, ರಂಗೋಲಿ ಸ್ಪರ್ಧೆ, ರೈತ ದಸರಾ, ದಸರಾ ನಡಿಗೆ ಹಾಗೂ ಚಲನಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಅವರು ದಸರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಪ್ರತಿದಿನ ಸಂಜೆ 4.30ರಿಂದ ರಾತ್ರಿ 10.30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೊದಲ…
ಮರಗಳ್ಳತನ ವೇಳೆ ಮರಬಿದ್ದು ವ್ಯಕ್ತಿ ಸಾವು
October 12, 2018ಗುಂಡ್ಲುಪೇಟೆ: ಗಂಧದ ಮರಗಳನ್ನು ಕದ್ದೊಯ್ಯುತ್ತಿದ್ದ ವ್ಯಕ್ತಿಯೊಬ್ಬ ಹಳ್ಳದಲ್ಲಿ ಕಾಲುಜಾರಿ ಬಿದ್ದು ಸಾವಿಗೀಡಾಗಿರುವ ಘಟನೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ತಾಲೂಕಿನ ಭೀಮನಬೀಡು ಗ್ರಾಮದ ದಾಸಶೆಟ್ಟಿ(45) ಎಂಬಾತ ಹುಂಡೀಪುರ ಗ್ರಾಮ ಪಂಚಾಯಿತಿ ಸದಸ್ಯ ಯೋಗೇಶ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಗಂಧದ ಮರ ಗಳನ್ನು ಕತ್ತರಿಸಿ ತಲೆಯ ಮೇಲೆ ಹೊತ್ತೊಯ್ಯುತ್ತಿದ್ದ. ಈ ವೇಳೆ ಚೌಡಹಳ್ಳಿ ಗ್ರಾಮದ ಬಳಿ ಬಂದಾಗ ಸಮೀಪದ ಹಳ್ಳದಲ್ಲಿ ಜಾರಿಬಿದ್ದ ಎನ್ನಲಾಗಿದೆ. ಈ ವೇಳೆ ತಾನು ಹೊತ್ತು ಕೊಂಡಿದ್ದ ಮರವೇ ತಲೆಯ ಮೇಲೆ ಬಿದ್ದ ಪರಿಣಾಮ ಆತ…
ಪಿಂಚಣಿ ಪಾವತಿಗೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
October 11, 2018ಗುಂಡ್ಲುಪೇಟೆ: ಕಳೆದ ನಾಲ್ಕೈದು ತಿಂಗಳಿನಿಂದ ಪಿಂಚಣಿ ಪಾವತಿಸಿಲ್ಲದಿರುವ ಬಗ್ಗೆ ತಾಲೂಕಿನ ವಿವಿಧ ಗ್ರಾಮದ ಫಲಾನು ಭವಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಕೂಡಲೇ ಪಿಂಚಣಿ ಪಾವತಿಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಸಿ.ಭಾರತಿ ಅವರನ್ನು ಒತ್ತಾಯಿಸಿದರು. ತಾಲೂಕಿನ ಕೊಡಸೋಗೆ, ಸೋಮನಪುರ, ಕಡತಾಳಕಟ್ಟೆಹುಂಡಿ, ಶೀಲ ವಂತಪುರ ಗ್ರಾಮಗಳ ಸುಮಾರು 100ಕ್ಕೂ ಹೆಚ್ಚಿನ ಫಲಾನುಭವಿಗಳು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಬಾಕಿ ಯುಳಿದಿರುವ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಪಿಂಚಣಿ ಪಾವತಿಗೆ ಒತ್ತಾಯಿಸಿದರು. ಬ್ಯಾಂಕುಗಳಲ್ಲಿ ಶೂನ್ಯ ಖಾತೆ ಹೊಂದಿರುವವರ ಖಾತೆಗೆ ಯಾವುದೇ…
ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ
October 11, 2018ಕೊಳ್ಳೇಗಾಲ: 4 ದಿನದ ಹಿಂದೆ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ ಯಾಗಿರುವ ಘಟನೆ ತಾಲೂಕಿನ ಸಿಲಕಲ್ ಪುರದಲ್ಲಿ ನಡೆದಿದೆ. ಗ್ರಾಮದ ಪ್ರೀತಂ(7) ಮೃತಪಟ್ಟ ಬಾಲಕ. ಗ್ರಾಮದ ನಂಜುಂಡ ಮತ್ತು ಸವಿತಾ ಎಂಬ ದಂಪತಿ ಪುತ್ರನಾಗಿದ್ದು, ಕಳೆದ ಅ.6 ರಂದು ಕಾಣೆಯಾಗಿದ್ದ. ಆತಂಕಗೊಂಡ ಪೆÇೀಷಕರು ದೂರು ನೀಡಿದ್ದರು. ಇಂದು ಮಧ್ಯಾಹ್ನ ಗ್ರಾಮದ ಸಮೀಪದ ಕೆರೆಯಲ್ಲಿ ಬಾಲಕನ ಶವ ಪತ್ತೆ ಯಾಗಿದೆ. ಪೆÇೀಷಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಕೊಳ್ಳೇಗಾಲ ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಅ.13ರಿಂದ ಚಾಮರಾಜನಗರದಲ್ಲಿ ದಸರಾ ಮಹೋತ್ಸವ
October 10, 2018ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಚಾಮರಾಜನಗರ ದಲ್ಲೂ ಅ.13ರಂದು ಚಾಲನೆ ನೀಡಲಾಗುವುದು. ಜಿಲ್ಲಾ ಕೇಂದ್ರವಾದ ಬಳಿಕ ಚಾಮರಾಜ ನಗರದಲ್ಲಿ 5ನೇ ವರ್ಷದ ದಸರಾ ಕಾರ್ಯಕ್ರಮವನ್ನು ಇಲ್ಲಿನ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಬೃಹತ್ ವೇದಿಕೆ ಸಿದ್ಧಗೊಳ್ಳುತ್ತಿದೆ. ಅ.13ರಿಂದ 16ರವರೆಗೆ (4 ದಿನಗಳು) ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸ್ಥಳೀಯ ಹಾಗೂ ರಾಜ್ಯ ಮಟ್ಟದ ಕಲಾವಿದರು ಪಾಲ್ಗೊಳ್ಳುತ್ತಿರುವುದರಿಂದ ಮಹೋತ್ಸವಕ್ಕೆ ಮತ್ತಷ್ಟು ಮೆರಗು ನೀಡಿದೆ. ಅ.13ರಂದು ಬೆಳಿಗ್ಗೆ 10ಗಂಟೆಗೆ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ…
ಗುಂಡ್ಲುಪೇಟೆ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ
October 10, 2018ಗುಂಡ್ಲುಪೇಟೆ: ನೆರೆ ರಾಜ್ಯ ಕೇರಳದ ಕಸಾಯಿಖಾನೆ ಮತ್ತು ಆಸ್ಪತ್ರೆ ತ್ಯಾಜ್ಯಗಳನ್ನು ತಂದು ಪಟ್ಟಣದ ವ್ಯಾಪ್ತಿಯಲ್ಲಿ ಸುರಿಯುತ್ತಿರುವುದನ್ನು ತಡೆ ಗಟ್ಟುವಲ್ಲಿ ತಾಲೂಕು ಆಡಳಿತ ವಿಫಲ ವಾಗಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಮಂಗಳ ವಾರ ಕÀರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಕಾವಲು ಪಡೆ ಸೇರಿ ದಂತೆ ವಿವಿಧ ಪ್ರಗತಿ ಪರ ಸಂಘಟನೆಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ದಲ್ಲಿ ಸಮಾವೇಶಗೊಂಡ ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ತಾಲೂಕು ಆಡಳಿತದ ವಿರುದ್ಧ…
ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಪರ್ವ
October 9, 2018ಹನೂರು: ಸುಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಸೋಮವಾರ ವಿಜೃಂಭಣೆಯಿಂದ ಜರುಗಿತು. ಭಾನುವಾರ ರಾತ್ರಿ ಹಾಗೂ ಇಂದು ದೇವಸ್ಥಾನ ಮುಂಭಾಗ ಹಾಗೂ ರಂಗ ಮಂದಿರ ವಿವಿಧೆಡೆ ಬಿಡಾರ ಹೂಡಿದ್ದ ಭಕ್ತರು ಮಾದಪ್ಪನ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಭಕ್ತರನ್ನು ರಂಜಿಸಿದರು. ಬೆಳಿಗ್ಗೆಯಿಂದಲೇ ಲಕ್ಷ ಬಿಲ್ವಾರ್ಚನೆ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ಜರುಗಿದವು. ಹರಕೆ ಹೊತ್ತ ಭಕ್ತರು ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪ ಉತ್ಸವಗಳನ್ನು ನೆರ ವೇರಿಸಿ ಇಷ್ಟಾರ್ಥ ಸಿದ್ಧಿಗಾಗಿ…