ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಆಗಸ್ಟ್ ತಿಂಗಳಲ್ಲಿ ಟಿಕೆಟ್ ಪಡೆಯದೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸು ತ್ತಿದ್ದ 283 ಪ್ರಯಾಣಿಕರಿಂದ 37640 ರೂ. ದಂಡವನ್ನು ವಸೂಲಿ ಮಾಡಿದೆ. ಆಗಸ್ಟ್ ತಿಂಗಳಲ್ಲಿ 2096 ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 202 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ತಿಳಿಸಿದ್ದಾರೆ.
ಸೆ.24, ಮಹಂತಾಳಪುರದಲ್ಲಿ ಅಂಚೆ ಸಂತೆ
September 19, 2018ಚಾಮರಾಜನಗರ: ಅಂಚೆ ಇಲಾಖೆಯು ಜಿಲ್ಲೆಯ ಸಂತೆಮರಹಳ್ಳಿ ಹೋಬಳಿಯ ಮಹಂತಾಳಪುರ ಗ್ರಾಮದಲ್ಲಿ ಸೆಪ್ಟೆಂಬರ್ 24ರಂದು ಅಂಚೆ ಸಂತೆ ನಡೆಸಲಿದೆ.ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುವುದು. ಮಹಂತಾಳಪುರ ಹಾಗೂ…
ಹಾಸ್ಟೆಲ್‍ಗಳಿಗೆ ಗುಣಮಟ್ಟದ ಸೌಲಭ್ಯ ಕಲ್ಪಿಸಿ
September 18, 2018ಚಾಮರಾಜನಗರ: ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ನಿರ್ವಹಣೆಯ ಹಾಸ್ಟೆಲ್‍ಗಳಿಗೆ ಅಧಿಕಾರಿಗಳು ವ್ಯಾಪಕವಾಗಿ ಭೇಟಿ ನೀಡಿ ಮೂಲ ಸೌಕರ್ಯವನ್ನು ಅಭಿವೃದ್ಧಿಗೊಳಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಎಂಎಸ್‍ಎಂಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾದ ರಾಜೇಂದ್ರಕುಮಾರ್ ಕಠಾರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಾಸ್ಟೆಲ್‍ಗಳ ನಿರ್ವಹಣೆಗಾಗಿ ಸರ್ಕಾರ ಹೆಚ್ಚು ಅನುದಾನ ನೀಡುತ್ತಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ…
ಆಧಾರ್ ಅದಾಲತ್ ಸದ್ಬಳಕೆಗೆ ತಹಶೀಲ್ದಾರ್ ಸಲಹೆ
September 18, 2018ಗುಂಡ್ಲುಪೇಟೆ: ಆಧಾರ್ ಅದಾಲತ್ ಕಾರ್ಯಕ್ರಮವನ್ನು ತಾಲೂಕಿನ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಸಿ.ಭಾರತಿ ಸಲಹೆ ನೀಡಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಬೆಂಗಳೂರಿನ ಇ-ಆಡಳಿತದಿಂದ ಹಮ್ಮಿಕೊಂಡಿರುವ ಆಧಾರ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸೆ. 22ರವರೆಗೆ ಪ್ರತಿದಿನ ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಆಧಾರ್ ಕಾರ್ಡ್‍ಗೆ ಸಂಬಂಧಿಸಿದ ಮಾಹಿತಿಯನ್ನು ಬಯೋಮೆಟ್ರಿಕ್ ಪದ್ಧತಿಯಲ್ಲಿ ಮಾಡಲಾಗುತ್ತಿದೆ. ತಾಲೂಕಿನ ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ವೈಎಪಿ ಸೇರಿದಂತೆ…
ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
September 18, 201840 ರೂ. ಪೆಟ್ರೋಲ್ ಮಾರಾಟ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಚಾಮರಾಜನಗರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿ ನಗರದಲ್ಲಿ ಸೋಮ ವಾರ ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಯಿತು. ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಮುಂಭಾಗ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ತಳ್ಳುವ ಗಾಡಿಯಲ್ಲಿ ಪೆಟ್ರೋಲ್ ತುಂಬಿ ಕೊಂಡು ಭುವನೇಶ್ವರಿ ವೃತ್ತದವರೆಗೆ ಮೆರ ವಣಿಗೆ ನಡೆಸಿದರು. ಬಳಿಕ, ಲೀಟರ್ ಪೆಟ್ರೋಲ್ ಅನ್ನು 40 ರೂ.ಗೆ ಮಾರಾಟ ಮಾಡುವ ಜೊತೆಗೆ…
ಕಂದಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣ
September 18, 2018ಜನಪ್ರತಿನಿಧಿಗಳು, ಪೊಲೀಸರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಯಳಂದೂರು: ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರÀ ನಾಮಫಲಕಕ್ಕೆ ಸಗಣಿ ಬಳಿದು ಅಪಮಾನ ಮಾಡಿರುವ ಆರೋಪಿಗಳನ್ನು ಬಂಧಿಸು ವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಸೋಮ ವಾರ ಕಂದಹಳ್ಳಿ ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಗ್ರಾಮದ ಅಂಬೇಡ್ಕರ್ ಭಾವಚಿತ್ರ ಇರುವ ಸ್ಥಳದಲ್ಲಿ ಸಮಾವೇಶಗೊಂಡ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆ ಗಳ ಮುಖಂಡರು ಯಳಂದೂರಿನ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಪೊಲೀಸ್ ಇಲಾಖೆ, ಸ್ಥಳೀಯ ಜನಪ್ರತಿ…
ರಾಮಸಮುದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
September 18, 2018ಚಾಮರಾಜನಗರ: ರಾಜಕೀಯ ದ್ವೇಷದಿಂದ ಕಾಂಗ್ರೆಸ್ ಹಾಗೂ ಬಿಎಸ್‍ಪಿ ಕಾರ್ಯಕರ್ತರ ನಡುವೆ ನಡೆದಿದ್ದ ಘರ್ಷಣೆಯ ಹಿನ್ನೆಲೆಯಲ್ಲಿ ಸೋಮವಾರ ರಾಮಸಮುದ್ರದ ಬಡಾವಣೆಯಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಡಾವಣೆಯ ಮುಖ್ಯ ದ್ವಾರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಕೆಎಸ್‍ಆರ್‍ಪಿ)ಯನ್ನು ನಿಯೋಜಿಸಲಾಗಿದೆ. ಬಡಾವಣೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹಾಗಾಗಿ, ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕಲ್ಲು ತೂರಾಟ ಹಾಗೂ ಘರ್ಷಣೆಯಿಂದ ಗಾಯಗೊಂಡಿರುವ ಕಾಂಗ್ರೆಸ್‍ನ ಐವರು ಹಾಘೂ ಬಿಎಸ್‍ಪಿಯ ಮೂವರು ಕಾರ್ಯಕರ್ತರಿಗೆ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ನಿವೃತ್ತ ನೌಕರರ ಸಂಘದ 11ನೇ ವಾರ್ಷಿಕೋತ್ಸವ: 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯ
September 17, 2018ಚಾಮರಾಜನಗರ: ‘ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು 6ನೇ ವೇತನ ಆಯೋಗದ ಶಿಫಾರಸುಗಳನ್ನು ನಿವೃತ್ತ ನೌಕರ ರಿಗೂ ಯಥಾವತ್ ಜಾರಿ ಗೊಳಿಸಬೇಕು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಬೋಬಡೆ ಒತ್ತಾಯಿಸಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಭಾನುವಾರ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ನಡೆದ 11ನೇ ವಾರ್ಷಿಕೋತ್ಸವ ಸಮಾ ರಂಭ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ಮುಖ್ಯಮಂತ್ರಿಯವರು ನಿವೃತ್ತ ನೌಕರರಿಗೆ 6ನೇ ವೇತನ ಆಯೋಗದ ಮೊದಲನೇ ವರದಿಯನ್ನು…
ಮೊಬೈಲ್ ಪ್ರಪಂಚದಲ್ಲಿ ಮುಳುಗಿದ ದೇಶಿ ಕ್ರೀಡೆ
September 17, 2018ಚಾಮರಾಜನಗರ: ಶ್ರೀಕೃಷ್ಣ ಪ್ರತಿಷ್ಠಾನದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಾಮಿ ಹಾಗೂ ರಾಧಾಷ್ಠಮಿಯ ಅಂಗವಾಗಿ ಕೆಸರುಗದ್ದೆ ಓಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ನಗರದ ತೆರೆದ ವಿಶ್ವವಿದ್ಯಾಲಯದ ಹಿಂಭಾಗದಲ್ಲಿರುವ ಚಿಕ್ಕಶೆಟ್ಟಿ ಎಂಬುವ ವರ ಜಮೀನಿನಲ್ಲಿ ಆಯೋಜಿಸಲಾಗಿದ್ದ ಕೆಸರುಗದ್ದೆ ಓಟದ ಸ್ಪರ್ಧೆಯ ಉದ್ಘಾಟನೆ ಯನ್ನು ಶ್ರೀಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸೋಮ ಶೇಖರ್ ಬಿಸಲ್ವಾಡಿ ಚಾಲನೆ ನೀಡಿದರು. ಕೆಸರು ಗದ್ದೆ ಓಟದಲ್ಲಿ ಸುಮಾರು 30ಕ್ಕೂ ಹೆಚ್ಚು ಬಾಲಕರು ಕೆಸರು ಗದ್ದೆ ಓಟ, ಕಬಡ್ಡಿ ಹಾಗೂ…
ಸೆ. 22, ವಿಶ್ವಕರ್ಮ ಜಯಂತಿ ಆಚರಣೆಗೆ ತೀರ್ಮಾನ
September 17, 2018ಚಾಮರಾಜನಗರ: ಜಿಲ್ಲಾಡ ಳಿತದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸೆ. 22ರಂದು ಜಿಲ್ಲಾ ಕೇಂದ್ರದಲ್ಲಿ ಹಮ್ಮಿ ಕೊಳ್ಳಲು ತೀರ್ಮಾನಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಚರಣೆ ಸಂಬಂಧ ಪೂರ್ವ ಭಾವಿ ಸಭೆಯಲ್ಲಿ ವಿಶ್ವಕರ್ಮ ಜಯಂತಿ ಕಾರ್ಯ ಕ್ರಮವನ್ನು ಅರ್ಥಪೂರ್ಣವಾಗಿ ಆಯೋ ಜಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಕಾರ್ಯಕ್ರಮಕ್ಕೆ ಅಗತ್ಯವಿರುವ…