ಚಾಮರಾಜನಗರ

ಚಾ.ನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಪಂಗೆ ವಾರ್ಡ್‍ವಾರು ಮೀಸಲಾತಿ ಪ್ರಕಟ
ಚಾಮರಾಜನಗರ

ಚಾ.ನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಪಂಗೆ ವಾರ್ಡ್‍ವಾರು ಮೀಸಲಾತಿ ಪ್ರಕಟ

August 3, 2018

ಚಾಮರಾಜನಗರ:  ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಚಾಮರಾಜನಗರ ನಗರಸಭೆಯ 31 ವಾರ್ಡ್, ಕೊಳ್ಳೇಗಾಲ ನಗರಸಭೆಯ 31 ವಾರ್ಡ್, ಗುಂಡ್ಲುಪೇಟೆ ಪುರಸಭೆಯ 23 ವಾರ್ಡ್, ಯಳಂದೂರು ಪಟ್ಟಣ ಪಂಚಾಯಿತಿಯ 11 ವಾರ್ಡ್, ಹನೂರು ಪಟ್ಟಣ ಪಂಚಾಯಿತಿಯ 13 ವಾರ್ಡ್‍ಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ಅದರ ವಿವರ ಇಂತಿದೆ. ಚಾ.ನಗರ ನಗರಸಭೆ: 1ನೇ ವಾರ್ಡ್-ಪರಿಶಿಷ್ಟ ಜಾತಿ ಮಹಿಳೆ, 2ನೇ ವಾರ್ಡ್-ಹಿಂ.ವರ್ಗ(ಎ) ಮಹಿಳೆ, 3ನೇ ವಾರ್ಡ್-ಸಾಮಾನ್ಯ, 4ನೇ ವಾರ್ಡ್- ಸಾಮಾನ್ಯ, 5ನೇ ವಾರ್ಡ್-ಸಾಮಾನ್ಯ ಮಹಿಳೆ, 6ನೇ ವಾರ್ಡ್-ಹಿಂ.ವರ್ಗ…

ಚಾಮರಾಜನಗರ-ಕೊಳ್ಳೇಗಾಲ ನಗರಸಭೆಗೆ ಚುನಾವಣೆ ನಿಗದಿ ಜಿಲ್ಲೆಯಲ್ಲಿ ಗರಿಗೆದರಿದ ಸ್ಥಳೀಯ ರಾಜಕೀಯ
ಚಾಮರಾಜನಗರ

ಚಾಮರಾಜನಗರ-ಕೊಳ್ಳೇಗಾಲ ನಗರಸಭೆಗೆ ಚುನಾವಣೆ ನಿಗದಿ ಜಿಲ್ಲೆಯಲ್ಲಿ ಗರಿಗೆದರಿದ ಸ್ಥಳೀಯ ರಾಜಕೀಯ

August 3, 2018

ಚಾಮರಾಜನಗರ:  ರಾಜ್ಯ ಚುನಾ ವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಗೊಳಸುತ್ತಿದ್ದಂತೆಯೇ ಜಿಲ್ಲೆಯ ಸ್ಥಳೀಯ ರಾಜಕೀಯ ಚಟುವಟಿಕೆ ಗರಿಗೆದರಿದೆ. ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇ ಗಾಲ ನಗರಸಭೆಗೆ ಇದೇ ತಿಂಗಳ 29ರಂದು ಚುನಾವಣೆ ನಡೆಯಲಿದೆ. ಈ ಎರಡೂ ನಗರಸಭೆಯ ತಲಾ 31 ಸ್ಥಾನಗಳಿಗೆ ಮತ ದಾನ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡ ಳಿತ ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿದ್ದು, ಗುಂಡ್ಲುಪೇಟೆ ಪುರಸಭೆ, ಯಳಂ ದೂರು ಹಾಗೂ ಹನೂರು ಪಟ್ಟಣ ಪಂಚಾಯ್ತಿಗಳಿಗೆ ಅವಧಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅಲ್ಲಿ…

ಹುಟ್ಟೂರಿಗೆ ಆಗಮಿಸಿದ ಸೈನಿಕನಿಗೆ ಅದ್ಧೂರಿ ಸ್ವಾಗತ
ಚಾಮರಾಜನಗರ

ಹುಟ್ಟೂರಿಗೆ ಆಗಮಿಸಿದ ಸೈನಿಕನಿಗೆ ಅದ್ಧೂರಿ ಸ್ವಾಗತ

August 3, 2018

ಚಾಮರಾಜನಗರ: ಭಾರತೀಯ ಸೇನೆಯಲ್ಲಿ ಸುಮಾರು 22 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ತನ್ನ ಹುಟ್ಟೂರು ಚಾಮರಾಜನಗರಕ್ಕೆ ಆಗಮಿಸಿದ ಸೈನಿಕ ಆರ್.ಮಂಜುನಾಥ್ ಅವರನ್ನು ದೇಶ ಪ್ರೇಮಿಗಳು, ಹಿತೈಷಿಗಳು ಹಾಗೂ ಕುಟುಂಬಸ್ಥರು ಅದ್ಧೂರಿಯಾಗಿ ಸ್ವಾಗತಿಸಿ, ಮೆರವಣಿಗೆ ನಡೆಸಿದರು. ನಗರದ ದೇವಾಂಗ ಬೀದಿಯ ನಿವಾಸಿ ಸಿ.ಎಸ್.ರಂಗಸ್ವಾಮಿ ಮತ್ತು ಮಂಗಳಮ್ಮ ಅವರ ದ್ವಿತೀಯ ಪುತ್ರ ಆರ್.ಮಂಜುನಾಥ್, ಕಳೆದ 22 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಿವೃತ್ತರಾದ ಕಾರಣ ನಗರಕ್ಕೆ ಬುಧವಾರ ರಾತ್ರಿ ಆಗಮಿಸಿದರು. ಈ ವೇಳೆ ಅವರನ್ನು ಪಟಾಕಿ ಸಿಡಿಸಿ,…

ಉದ್ದೇಶಿತ ಕೆರೆಗಳಿಗೆ ನೀರು ಹರಿಸಲು ಕ್ರಮ
ಚಾಮರಾಜನಗರ

ಉದ್ದೇಶಿತ ಕೆರೆಗಳಿಗೆ ನೀರು ಹರಿಸಲು ಕ್ರಮ

August 2, 2018

ಗುಂಡ್ಲುಪೇಟೆ:  ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಹಂತಹಂತವಾಗಿ ಉದ್ದೇಶಿತ ಎಲ್ಲಾ ಕೆರೆ ಗಳಿಗೂ ಕಬಿನಿ ನದಿ ಮೂಲದಿಂದ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಸಿ.ಎಂ.ಎಸ್.ಕಲಾಮಂದಿರ ದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕ ರಸಿ ಮಾತನಾಡಿ, ಈಗಾಗಲೇ ಬೆಳಚಲವಾಡಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಮರಹಳ್ಳಿ ಸೇರಿದಂತೆ ಹಂತಹಂತವಾಗಿ ಉದ್ದೇಶಿತ ಎಲ್ಲಾ ಕೆರೆಗಳಿಗೂ ಕಬಿನಿ ನದಿ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಅಭಿವೃದ್ಧಿ ಕಾರ್ಯಗಳಿಗೆ…

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

August 2, 2018

ಚಾಮರಾಜನಗರ:  ಜಿಲ್ಲೆಯ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿ ಕಾರಿಗಳು ಆಗಸ್ಟ್ 6 ರಿಂದ 29ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಆಯಾ ತಾಲೂಕಿನ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು. ಆಗಸ್ಟ್ 6ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಆಗಸ್ಟ್ 14ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು. ಆಗಸ್ಟ್ 20ರಂದು ಯಳಂದೂರು, 24ರಂದು ಕೊಳ್ಳೇಗಾಲ ಹಾಗೂ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ…

ತೇಜೋವಧೆಗೆ ಯತ್ನಿಸುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಚಿಂತನೆ
ಚಾಮರಾಜನಗರ

ತೇಜೋವಧೆಗೆ ಯತ್ನಿಸುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಚಿಂತನೆ

August 2, 2018

ಗುಂಡ್ಲುಪೇಟೆ:  ಲಂಚದ ಆರೋಪ ಹೊರಿಸಿ ನನ್ನನ್ನು ತೇಜೋವಧೆ ಮಾಡಲೆಂದು ಪ್ರಯತ್ನಿಸುತ್ತಿ ರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಚಿಂತಿಸಿದ್ದೇನೆ ಎಂದು ತಾಲೂಕಿನ ಬೇಗೂರು ಗ್ರಾಮಪಂಚಾಯಿತಿ ಅಧ್ಯಕ್ಷ ಬಿ.ಎಸ್.ಚೇತನ್ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೇಶನರಹಿತರ ಪಟ್ಟಿ ಸಿದ್ಧಪಡಿಸಲು ಗ್ರಾಮ ಸಭೆಯನ್ನು ಬೇಗೂರು ಗ್ರಾಮದಲ್ಲಿ ಕರೆಯಲಾಗಿತ್ತು. ಈ ವೇಳೆ ಏಕಾಏಕಿ ಸಭೆಗೆ ಬಂದ ಬಾರ್ ಮಾಲೀಕ ಗೋವಿಂದ ಎಂಬುವರು ಬಾರ್ ಲೈಸೆನ್ಸ್ ನವೀಕರಣಕ್ಕಾಗಿ ಅಧ್ಯಕ್ಷರಿಗೆ 50 ಸಾವಿರ ಲಂಚ ನೀಡಿದ್ದೇನೆ ಎಂದು ಗಂಭೀರವಾಗಿ ಆರೋಪಿಸಿದ್ದರು….

ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ
ಚಾಮರಾಜನಗರ

ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ

August 2, 2018

ಕೊಳ್ಳೇಗಾಲ: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಮುಂಬ ರುವ ಚುನಾವಣೆಯಲ್ಲಿ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಮುಖಂಡರೂ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರೂ ಆದ ಕೆ.ಶಿವರಾಮು ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಾರ್ಟಿ ವರಿಷ್ಠರಿಗೆ ಚಾ.ನಗರ ಕ್ಷೇತ್ರದಿಂದ ಲೋಕಸಭೆ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದೇನೆ. ಪಕ್ಷವು ನನಗೆ ಅವಕಾಶ ನೀಡಿ ಟಿಕೆಟ್ ನೀಡಿದಲ್ಲಿ ನಾನು ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಹೇಳಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಆಹಾರ ಮಂತ್ರಿ…

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯ
ಚಾಮರಾಜನಗರ

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯ

August 2, 2018

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ವತಿಯಿಂದ ಚಂದಕವಾಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ ಸಿ.ಜಿ, ಉತ್ತಮ ಸಮಾಜ ಮತ್ತು ಉತ್ತಮ ನಾಗರಿಕರಾಗಲು ಕಾನೂನು ಅರಿವು ಹೊಂದು ವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ, ನಮ್ಮ ನೆಲದ ಕಾನೂನನ್ನು ಗೌರವಿಸಬೇಕು. ನಮ್ಮ ಸಂವಿಧಾನ ಎಲ್ಲಾ ಕಾನೂನುಗಳಿಗೂ ಅಡಿ ಪಾಯವಾಗಿದ್ದು,…

ಪ್ರತಿಭಾ ಪುರಸ್ಕಾರಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ

ಪ್ರತಿಭಾ ಪುರಸ್ಕಾರಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

August 2, 2018

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2018ರ ಮಾರ್ಚ್ ಮತ್ತು ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದ ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ಪ್ರವರ್ಗ 1, 2ಎ, 3ಎ ಹಾಗೂ 3ಬಿ.ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿ ಗಳು ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ www….

ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಪ.ಜಾ. ರೈತರಿಂದ ಅರ್ಜಿ ಆಹ್ವಾನ
ಚಾಮರಾಜನಗರ

ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಪ.ಜಾ. ರೈತರಿಂದ ಅರ್ಜಿ ಆಹ್ವಾನ

August 2, 2018

ಚಾಮರಾಜನಗರ:  ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತಿಸಣ್ಣ ರೈತರಿಂದ ಗಂಗಾಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 60 ವರ್ಷದೊಳಗಿನ ವಯೋ ಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಾಗಿದ್ದಲ್ಲಿ 98 ಸಾವಿರ ರೂ. ಹಾಗೂ ನಗರ ಪ್ರದೇಶದವರಾಗಿದ್ದಲ್ಲಿ 1 ಲಕ್ಷದ 20 ಸಾವಿರ ರೂ. ಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಪರಿಶಿಷ್ಟ ಜಾತಿಯ…

1 97 98 99 100 101 141
Translate »