ಚನ್ನರಾಯಪಟ್ಟಣ: ಕೆರೆ ಯಲ್ಲಿ ರಾಸುಗಳಿಗೆ ನೀರು ಕುಡಿಸಲು ಹೋದ ರೈತ ಕಾಲು ಜಾರಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಗೆಜಗಾರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಭೈರೇಗೌಡ (41) ಮೃತ ರೈತ. ಜಮೀನಿಂದ ಮನೆಗೆ ಬರುವಾಗ ಗ್ರಾಮದ ಹಿರೀಕೆರೆಯಲ್ಲಿ ರಾಸುಗಳಿಗೆ ನೀರು ಕುಡಿಸಲು ತೆರಳಿದ್ದ ಸಂದರ್ಭ ದಲ್ಲಿ ಕಾಲುಜಾರಿ ನೀರಿಗೆ ಬಿದ್ದ ಪರಿಣಾಮ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
7 ಮಂದಿ ಅಂತರಜಿಲ್ಲಾ ಕಳ್ಳರ ಬಂಧನ
August 12, 2018ಚನ್ನರಾಯಪಟ್ಟಣ: ಏಳು ಮಂದಿ ಅಂತರ ಜಿಲ್ಲಾ ವಾಹನ ಕಳ್ಳರನ್ನು ಬಂಧಿಸುವಲ್ಲಿ ತಾಲೂಕಿನ ನುಗ್ಗೇಹಳ್ಳಿ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಂಜುನಾಥ್, ಸುರೇಶ್, ಮಹೇಶ್, ಯಶ್, ಮಲ್ಲಿಕ್, ಬಾಷಾ ಬಂಧಿತ ಆರೋಪಿಗಳು. ಜೂ.18 ರಂದು ಬಳಘಟ್ಟ ಗ್ರಾಮದಲ್ಲಿ ಟ್ರಾಕ್ಟರ್ ಕಳ್ಳತನ ಹಿನ್ನೆಲೆ ಪ್ರಕರಣ ದಾಖ ಲಾಗಿತ್ತು. ಕಳ್ಳರ ಜಾಡು ಹಿಡಿಯಲು ಡಿವೈಎಸ್ಪಿ ಶಶಿಧರ್ ನೇತೃತ್ವದ ತಂಡ ರಚಿಸಲಾಗಿತ್ತು. ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿ ಗಳನ್ನು ಬಂಧಿಸಿದ್ದಾರೆ. 8 ಟ್ರಾಕ್ಟರ್, 6 ಬೈಕ್, ಓಮ್ನಿ ವ್ಯಾನ್ ಸೇರಿದಂತೆ ಬಂಧಿತರಿಂದ…
ಬಿಜೆಪಿಯ 20 ಶಾಸಕರು ಜೆಡಿಎಸ್‍ಗೆ ಬರಲು ಸಿದ್ಧ
August 11, 2018ಹಾಸನ: ಬಿಜೆಪಿಯ 20 ಶಾಸಕರು ಜೆಡಿಎಸ್‍ಗೆ ಬರಲು ಸಿದ್ಧರಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರೋಗ್ಯದ ದೃಷ್ಟಿಯಿಂದ ಆಪರೇಷನ್ ಕಮಲ ಮಾಡಲು ನಾವು ಸಿದ್ಧರಿಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್, ಜೆಡಿಎಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡುತ್ತಾ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ಬಿಜೆಪಿಯ 20ಕ್ಕೂ ಹೆಚ್ಚು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ. ಆಪರೇಷನ್ ಕಮಲ…
ಪೂರ್ವಭಾವಿ ಸಭೆಯಲ್ಲಿ ಅಸಮಾಧಾನ, ಭಿನ್ನಮತ
August 11, 2018ಬೇಲೂರು: ವಿವಿಧ ಮಹನೀ ಯರ ಜಯಂತಿ ಹಿನ್ನೆಲೆ ತಹಶೀಲ್ದಾರ್ ಕೆ.ರಾಜು ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಅಧಿಕಾರಿಗಳ ಗೈರು ಸಭಿಕರನ್ನು ಅಸಮಾ ಧಾನಕ್ಕೊಳ ಗಾಗುವಂತೆ ಮಾಡಿದರೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸುವ ಕುರಿತು ವಿಶ್ವಕರ್ಮ ಸಮುದಾಯದವ ರಲ್ಲೇ ಭಿನ್ನಮತ ವ್ಯಕ್ತವಾಯಿತು. ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಕೆ.ರಾಜು, ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿ ಗಳು ಹಾಗೂ ಸಂಘ ಸಂಸ್ಥೆ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಿದ್ದೇವೆ. ಆದರೆ…
ಶಾಲಾ ವಾಹನ ಡಿಕ್ಕಿ: 3 ವರ್ಷದ ಕಂದಮ್ಮ ಸಾವು
August 11, 2018ಬೇಲೂರು: ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಯಗಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಮೇಶ್, ನಂದಿನಿ ದಂಪತಿ ದ್ವಿತೀಯ ಪುತ್ರಿ ತಾರಣ್ಯ (3) ಮೃತಪಟ್ಟ ಕಂದಮ್ಮ. ನಂದಿನಿ ತಮ್ಮ ಮೊದಲ ಮಗುವನ್ನು ಶಾಲಾ ವ್ಯಾನ್‍ಗೆ ಹತ್ತಿಸುವ ವೇಳೆ ಮನೆ ಮುಂದೆ ಆಟ ವಾಡುತ್ತಿದ್ದ ತಾರುಣ್ಯ ವ್ಯಾನ್ ಬಳಿ ತೆರಳಿದ್ದಾಳೆ. ಇದನ್ನು ಗಮನಿಸದೆ ಮೊಬೈಲ್ ಕರೆಯಲ್ಲಿ ನಿರತನಾಗಿದ್ದ ವ್ಯಾನ್ ಚಾಲಕನ ಅಜಾಗರೂಕತೆಯ ವಾಹನ ಚಲಾಯಿಸಿ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಮಗು ಮೃತಪಟ್ಟಿದೆ….
ಸಾಲಬಾಧೆ: ರೈತ ಆತ್ಮಹತ್ಯೆ
August 11, 2018ಚನ್ನರಾಯಪಟ್ಟಣ: ಸಾಲಬಾಧೆಯಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಳದರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚನ್ನಕೇಶವ(46) ಮೃತ ರೈತ. ಗುರುವಾರ ಮುಂಜಾನೆ ಯೇ ಜಮೀನಿನ ಕೆಲಸಕ್ಕೆ ತೆರಳಿ ಅಲ್ಲೇ ವಿಷ ಸೇವಿಸಿದ್ದರು. ಬೆಳಗಿನ ಉಪಹಾರ ಸೇವನೆಗೆ ಮನೆಗೆ ಬರದಿದ್ದರಿಂದ ಪತ್ನಿ ಮಂಜುಳಾ ಜಮೀನಿಗೆ ತೆರಳಿ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೃತರು ಉದಯಪುರ ಕಾವೇರಿ ಗ್ರಾಮೀಣ ಬ್ಯಾಂಕ್‍ನಲ್ಲಿ 1.50 ಲಕ್ಷ ರೂ. ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ ರೂ. ಸಿಂಡಿಕೇಟ್ ಬ್ಯಾಂಕ್‍ನಲ್ಲಿ…
ವಿವಿಧ ಬೇಡಿಕೆಗಾಗಿ ಜಿಲ್ಲೆಯಲ್ಲಿ ಪ್ರತ್ಯೇಕ ಪ್ರತಿಭಟನೆ
August 10, 2018ಹಾಸನ: ದಲಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಬಳಿಕ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಬಡ್ತಿ ಮೀಸಲಾತಿಯನ್ನುರದ್ದು ಪಡಿಸುವಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಅಭದ್ರತೆ ಹಾಗೂ ಆತಂಕ ಉಂಟಾಗಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
ಕ್ವಿಟ್ ಇಂಡಿಯಾ ನೆನಪಿನಲ್ಲಿ ‘ಜೈಲ್ ಭರೋ’ ಚಳವಳಿ
August 10, 2018ಹಾಸನ: ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥವಾಗಿ ನಗರದಲ್ಲಿ ಗುರುವಾರ ವಿವಿಧ ಬೇಡಿಕೆ ಈಡೇರಿಸು ವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹೇಮಾವತಿ ಪ್ರತಿಮೆಯ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ವಿರೋಧಿಸಿ ಹಾಗೂ ರೈತರು, ಕೂಲಿ ಕಾರ್ಮಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನಲ್ಲಿ ‘ಜೈಲ್ ಭರೋ’ ಚಳುವಳಿ…
ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಲಹೆ
August 10, 2018ಹಾಸನ: ‘ಶಿಕ್ಷಣ ಜೀವನದ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು’ ಎಂದು ಶಾಸಕ ಪ್ರೀತಮ್ ಜೆ.ಗೌಡ ಸಲಹೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ಗುರುವಾರ ಜ್ಞಾನಧಾರೆ ಶಿಕ್ಷಣ ಸಂಸ್ಥೆ ಯಿಂದ ನಡೆದ 2018-19ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಈ ಸಂದರ್ಭದಲ್ಲಿ ಹಲವು ಕೆಟ್ಟ ಆಲೋ ಚನೆಗಳು ಮನಸಿನಲ್ಲಿ ಮೂಡುವುದು ಸಹಜ. ಆದರೆ, ಇದಕ್ಕೆ ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು….
ನಿಷ್ಪಕ್ಷಪಾತವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚನೆ
August 10, 2018ಹಾಸನ: ‘ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಯಾವುದೇ ಗೊಂದಲಗಳಿಲ್ಲದಂತೆ ನಿಷ್ಪಕ್ಷಪಾತವಾಗಿ ನೆರವೇರಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಗರಸಭೆ, ಪುರಸಭೆ ಚುನಾ ವಣೆಗಳ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿದ ಅವರು ಪ್ರತಿಯೊಂದು ಚುನಾವಣೆಯೂ ಅತ್ಯಂತ ಪ್ರಮುಖವಾಗಿರುತ್ತದೆ ಯಾವುದೇ ನಿರ್ಲಕ್ಷ್ಯ ತೋರದೆ ಜವಾಬ್ದಾರಿ ಯಿಂದ ನಡೆಸಬೇಕು ಎಂದರು. ನಾಮಪತ್ರಗಳ ಸ್ವೀಕಾರ, ಪರಿಶೀಲನೆ, ಜಾತಿ ಪ್ರಮಾಣ ಪತ್ರಗಳನ್ನು ಗಮನಿಸು ವುದು ಚಿಹ್ನೆಗಳನ್ನು ನೀಡುವ ವಿಚಾರವನ್ನು…