ಹಾಸನ: ಬೆಂಗಳೂರು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆ. 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಸನದ ವಿವಿಧ 7 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಹಾಸನದ ಮಹಿಳಾ ಪ್ರಥಮ ದರ್ಜೆ ಕಾಲೇಜು, ಎಂ.ಕೃಷ್ಣ ಪದವಿ ಪೂರ್ವ ಕಾಲೇಜು, ಸಿ.ಕೆ.ಎಸ್.ಇಂಗ್ಲೀಷ್ ಪ್ರಾಥಮಿಕ ಶಾಲೆ, ಬಾಲಕಿಯರ ವಿಭಜಿತ ಪದವಿ ಪೂರ್ವ ಕಾಲೇಜು, ಪ್ರಧಾನ ಬಾಲಕಿಯರ ಪದವಿ ಪೂರ್ವ ಕಾಲೇಜು, ಸುಜಲ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಕಲಾ…
ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
August 4, 2018ಹಾಸನ: ವಿದ್ಯಾರ್ಥಿನಿ ರಕ್ಷಿತಾ ಹತ್ಯೆ ಖಂಡಿಸಿ ನಗರದಲ್ಲಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ)ಯಿಂದ ಪ್ರತಿಭಟನೆ ನಡೆಯಿತು. ಇಲ್ಲಿನ ಹೇಮಾವತಿ ಪ್ರತಿಮೆ ಬಳಿಯಿಂದ ಸಮಾವೇ±ಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಿಜಿಎಸ್ ಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ವಾಪಸ್ ತೆರಳುತ್ತಿರುವಾಗ ಯುವಕನೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಕೊಲೆ ಮಾಡಿದ್ದಾನೆ. ಈ ಆರೋಪಿಯನ್ನು ಕೂಡಲೇ…
ಮಕ್ಕಳಲ್ಲಿ ನೈತಿಕ, ಸಾಮಾಜಿಕ ಮೌಲ್ಯ ಬೆಳೆಸಲು ಸಲಹೆ
August 4, 2018ಹೊಳೆನರಸೀಪುರ: ‘ಮಕ್ಕಳಿಗೆ ವಿದ್ಯಾರ್ಥಿ ದೆಸೆಯಿಂದಲೇ ನೈತಿಕ, ಸಾಮಾಜಿಕ, ಶೈಕ್ಷಣಿಕ ಮೌಲ್ಯ ಬೆಳೆಸಬೇಕು’ ಎಂದು ತಹಶೀಲ್ದಾರ್ ವೈ.ಎಂ.ರೇಣು ಕುಮಾರ್ ಸಲಹೆ ನೀಡಿದರು. ಪಟ್ಟಣದ ಚೆನ್ನಾಂಬಿಕಾ ಚಿತ್ರಮಂದಿರ ದಲ್ಲಿ ನಡೆದ ‘ಅರಿವು’ ಎಂಬ ಮಕ್ಕಳ ಚಲನ ಚಿತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಅರಿವು ಮೂಡಿಸಲು ಈ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಶೈಕ್ಷಣಿಕ ವಾಗಿ ವಿಷಯಾಧಾರಿತ ಶಿಕ್ಷಣದ ಜೊತೆಗೆ ಮನೋರಂಜನೆಯ ಮೂಲಕ ಶಿಕ್ಷಣ ನೀಡಬೇಕು. ಇದಕ್ಕೆ ಪೂರಕವಾಗಿ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ವಿದ್ಯಾರ್ಥಿಗಳು ಬುದ್ಧ,…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಕಲ ಸಿದ್ಧತೆ
August 4, 2018ಹಾಸನ: ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ. ಜಿಲ್ಲೆಯ 2 ನಗರಸಭೆ ಹಾಗೂ 3 ಪುರಸಭೆಗಳ 135 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದೆ. ಹಾಸನ, ಅರಸೀಕೆರೆ ನಗರಸಭೆಗಳು ಹಾಗೂ ಚನ್ನರಾಯಪಟ್ಟಣ, ಹೊಳೆನರಸೀಪುರ ಮತ್ತು ಸಕಲೇಶಪುರ ಪುರಸಭೆಗಳಿಗೆ ಆ. 29ರಂದು ಮತದಾನ ನಡೆಯಲಿದೆ. ಒಟ್ಟು 135 ವಾರ್ಡ್‍ಗಳ ಚುನಾವಣೆಗೆ ಜಿಲ್ಲೆಯಲ್ಲಿ 269ಮತಗಟ್ಟೆ ಸ್ಥಾಪಿಸಲಾಗಿದೆ. 1,06,769ಪುರುಷ ಹಾಗೂ 1,07,903ಮಹಿಳಾ ಮತದಾರರು, 7 ಮಂದಿ ಲಿಂಗ ಅಲ್ಪಸಂಖ್ಯಾತರು ಸೇರಿದಂತೆ 2,14,679 ಮಂದಿ ಮತದಾನದ ಹಕ್ಕು…
ಕನ್ನಡದ ಅನಘ್ರ್ಯ ರತ್ನ ಕೆಎಸ್‍ಎನ್
August 4, 2018ಅರಸೀಕೆರೆ: ‘ಕೆ.ಎಸ್.ನರಸಿಂಹಸ್ವಾಮಿ ಅವರು ಬೆಲೆ ಕಟ್ಟಲಾಗದ ಕನ್ನಡ ಶಬ್ದ ಕೋಶ. ಕನ್ನಡ ನಾಡಿಗೆ ಕವಿತೆ ಮತ್ತು ಕಾವ್ಯಗಳನ್ನು ನೀಡಿದ ಆನಘ್ರ್ಯ ರತ್ನ’ ಎಂದು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ನಡೆದ ಕೆಎಸ್‍ಎನ್ ಮಾತು-ಕತೆ ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೆ.ಎಸ್.ಎನ್ ಬಡತನದ ಜೀವನದಲ್ಲೂ ಕವಿತೆ ಮತ್ತು ಕಾವ್ಯಗಳಿಗೆ ಹೆಚ್ಚಿನ ಆದ್ಯತೆ…
ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ: ಮಂಜುನಾಥ್
August 4, 2018ಹಾಸನ: ಮೋಟಾರು ವಾಹನ (ತಿದ್ದುಪಡಿ) ಮಸೂದೆ-2017 ಅನ್ನು ಹಿಂಪಡೆಯಬೇಕು ಹಾಗೂ ಸಾರಿಗೆ ಉದ್ಯಮ ರಕ್ಷಣೆ, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜರಿಗೊಳಿಸುವಂತೆ ಒತ್ತಾಯಿಸಿ ರಸ್ತೆ ಸಾರಿಗೆ ರಂಗದಲ್ಲಿರುವ ಕಾರ್ಮಿಕರು ಮತ್ತು ಮಾಲೀಕರ ಸಂಘಟನೆಗಳ ವೇದಿಕೆ ವತಿಯಿಂದ ರಾಷ್ಟ್ರವ್ಯಾಪಿ ಆ. 7ರಂದು ಸಾರಿಗೆ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕೆಎಸ್‍ಆರ್‍ಟಿಸಿ ನೌಕರರ ಫೆಡರೇಷನ್‍ನ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಮಂಜುನಾಥ್ ಹೇಳಿದರು. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಸ್ತೆ ಸಾರಿಗೆ ಉದ್ದಿಮೆಯಲ್ಲಿರುವ ಆಟೋರಿಕ್ಷಾ, ಟ್ಯಾಕ್ಸಿ, ಖಾಸಗಿ…
ಕ್ರೀಡೆಯಿಂದ ಮಾನಸಿಕ, ದೈಹಿಕ ಒತ್ತಡ ನಿವಾರಣೆ
August 3, 2018ಬೇಲೂರು: ಮನುಷ್ಯನ ದೈಹಿಕ ಹಾಗೂ ಮಾನಸಿಕ ಒತ್ತಡಗಳ ನಿವಾರಣೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುವುದರಿಂದ, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗುವ ಮೂಲಕ ಆರೋಗ್ಯವನ್ನು ಕಾಪಾಡಿ ಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್ ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ನಡೆದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಮಕ್ಕಳಿಗೆ ಚಿಕ್ಕಂದಿನಿಂದಲೇ ಕ್ರೀಡೆ ಬಗ್ಗೆ ಆಸಕ್ತಿ ಬರು ವಂತೆ…
ಹುಚ್ಚನಕೊಪ್ಪಲು ಏತ ನೀರಾವರಿ ಯೋಜನೆ ಪರಿಶೀಲಿಸಿದ ಹೆಚ್.ಡಿ. ರೇವಣ್ಣ: ಅಭಿವೃದ್ಧಿಗೆ ಉತ್ತರ-ದಕ್ಷಿಣ ತಾರತಮ್ಯವಿಲ್ಲ
August 3, 2018ಹಾಸನ: ‘ಅಭಿವೃದ್ಧಿ ಕುರಿತು ರಾಜ್ಯ ಸರ್ಕಾರಕ್ಕೆ ಉತ್ತರ, ದಕ್ಷಿಣವೆಂಬ ಯಾವುದೇ ತಾರತಮ್ಯವಿಲ್ಲ. ಜಿಲ್ಲಾ ಅಭಿವೃದ್ಧಿ ನಮ್ಮ ಗುರಿ’ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಹೊಳೆನರಸೀಪುರ ತಾಲೂಕು ಹುಚ್ಚನ ಕೊಪ್ಪಲು ಏತ ನೀರಾವರಿ ಮೊದಲ ಹಂತದ ಯೋಜನೆ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಸರ್ವಾಂಗೀಣ ಪ್ರಗತಿಯನ್ನು ದೃಷ್ಟಿಯಿಲ್ಲಿಟ್ಟುಕೊಂಡು ಶ್ರಮಿಸುತ್ತಿದ್ದಾರೆ ಎಂದರು. ಉತ್ತರ ಕರ್ನಾಟಕದ ನೀರಾವರಿ ಯೋಜನೆಗೆ ಅನುದಾನ ನೀಡಿದ್ದು ಹಾಗೂ ಬೆಳಗಾವಿಯಲ್ಲಿ ಸುವರ್ಣಸೌಧಕ್ಕೆ ಕುಮಾರಸ್ವಾಮಿ, ದೇವೇಗೌಡರ ಕೊಡುಗೆ ಅಪಾರವಾಗಿದೆ….
ಸಮಗ್ರ ಕರ್ನಾಟಕ ಉಳಿಸಿ, ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ
August 3, 2018ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಜಾರಿ ಮಾಡಿ, ಅಖಂಡ ರಾಜ್ಯವನ್ನು ಉಳಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು. ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಘೋಷಣೆ ಕೂಗಿದರು. ಭಾಷವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತದಲ್ಲಿ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ…
ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ: ಅರ್ಹರಿಗೆ ಭೂಮಿ ನೀಡಲು ಶಾಸಕರ ಸೂಚನೆ
August 3, 2018ಹಾಸನ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ವೇಳೆ ಹೇಮಾವತಿ ಯಗಚಿ ವಾಟೆವಳೆ ಜಲಾಶಯ ಯೋಜನೆಗಳ ನಿರಾಶ್ರಿತರ ಸಮಸ್ಯೆಗಳು, ಪುನರ್‍ವಸತಿಗೆ ಮೀಸಲಿರಿಸಿರುವ ಜಾಗದಲ್ಲಿ ಹಲವು ದಶಕಗಳಿಂದ ಮನೆ ನಿರ್ಮಿಸಿಕೊಂಡಿರುವ ದಲಿತ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಕುರಿತು ಪ್ರಸ್ತಾಪಿಸಲಾಯಿತು. ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕೆ.ಎಸ್.ಲಿಂಗೇಶ್ ಮಾತನಾಡಿ, ಹೆಚ್‌ಆರ್‌ಪಿ ಯೋಜನೆ ಜಾರಿಗೆ ಬಂದು ದಶಕಗಳೇ ಆದರೂ,…










