ಹಾಸನ: ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರವನ್ನು ತಕ್ಷಣ ಸಂಪೂರ್ಣವಾಗಿ ವಿತರಿಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಂಟಿ ಕೃಷಿ ನಿರ್ದೇಶಕರ ಉಳಿತಾಯ ಖಾತೆಯಲ್ಲಿ ಲಭ್ಯವಿರುವ ಹಣದಲ್ಲಿ ಬಾಕಿ ಇರುವ 10 ರೈತರ ಆತ್ಮಹತ್ಯೆ ಪ್ರಕರಣದ ಪರಿಹಾರ ವಿತರಿಸಿ, ನಂತರ ಅದನ್ನು ಸರ್ಕಾರದಿಂದ ಪುನರ್ ಭರಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಜಂಟಿ ಕೃಷಿ…
ಅರಸೀಕೆರೆ ತಾಪಂ ಉಪಾಧ್ಯಕ್ಷರಾಗಿ ಎಸ್.ಬಿ.ಲಿಂಗರಾಜು ಆಯ್ಕೆ
July 29, 2018ಅರಸೀಕೆರೆ: ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್.ಬಿ.ಲಿಂಗರಾಜು(ಶ್ಯಾನೆಗೆರೆ ಬಾಬು) ಅವಿ ರೋಧವಾಗಿ ಆಯ್ಕೆಯಾದರು. ಹಿಂದಿನ ಉಪಾಧ್ಯಕ್ಷರಾಗಿದ್ದ ಬಸವಲಿಂಗಪ್ಪ ರಾಜೀ ನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ಇಂದು ನಿಗದಿಯಾಗಿತ್ತು. ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಸ್ಥಾನಕ್ಕೆ ಕೇವಲ ಎಸ್.ಬಿ.ಲಿಂಗರಾಜು ನಾಮಪತ್ರ ಸಲ್ಲಿಸಿದ್ದು, ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ಹಾಸನ ಉಪವಿಭಾಗಾಧಿಕಾರಿ ಹೆಚ್.ಎಲ್.ನಾಗರಾಜು ನಿಗದಿತ ಸಮಯಕ್ಕೆ ಚುನಾವಣಾ ಪ್ರಕ್ರಿಯೆ ಆರಂಭಿಸಿದರು. ಲಿಂಗರಾಜು ಹೊರತು ಪಡಿಸಿ ಬೇರ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಎಸ್.ಬಿ. ಲಿಂಗರಾಜು ಅವರನ್ನು ಉಪಾಧ್ಯಕ್ಷರಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್…
ಎನ್‍ಎಂಸಿ ಮಸೂದೆ ವಿರೋಧಿಸಿ ಖಾಸಗಿ ವೈದ್ಯರಿಂದ ಆಸ್ಪತ್ರೆ ಬಂದ್, ಧಿಕ್ಕಾರ ದಿವಸ್ ಆಚರಣೆ
July 29, 2018ಹಾಸನ: ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಧಿಕ್ಕಾರ ದಿವಸ್ ಆಚರಿಸಿದರು. ರಾಷ್ಟ್ರೀಯ ವೈದ್ಯಕೀಯ ಆಯೋಗದ ರಚನೆ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಮುಷ್ಕರದ ಅಂಗವಾಗಿ ಖಾಸಗಿ ಆಸ್ಪತ್ರೆಗಳು ಓಪಿಡಿ ಬಂದ್ ಮಾಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದವು. ಖಾಸಗಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಬೀದಿಗಿಳಿದು ಹೋರಾಟ ಮಾಡುವುದರ…
ನಿರಂತರ ಅಭ್ಯಾಸದಿಂದ ಗುರಿ ಸಾಧನೆ ಸುಲಭ ತಾಯಂದಿರ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಮತ
July 27, 2018ಹಾಸನ: ‘ವಿದ್ಯಾರ್ಥಿ ಜೀವನದಲ್ಲಿ 10ನೇ ತರಗತಿಯಿಂದ ಅಂತಿಮ ಪದವಿ ಪೂರ್ಣಗೊಳಿಸುವ ಹಂತವು ಮುಖ್ಯವಾದ ಕಾಲಘಟ್ಟವಾಗಿದೆ. ಈ ಸಮಯವನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ನಿಗದಿತ ಗುರಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ತಾಲೂಕಿನ ಕಟ್ಟಾಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಏರ್ಪಡಿಸಿದ್ದ ತಾಯಂ ದಿರ ಸಭೆಯನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಳ್ಳಬೇಕು. ಪ್ರತಿದಿನ ವೇಳಾಪಟ್ಟಿ ತಯಾರಿಸಿಕೊಂಡು ಪ್ರತಿನಿತ್ಯ…
ವಿವಿಧ ಸಂಘಟನೆಯಿಂದ ಪ್ರತಿಭಟನೆ
July 27, 2018ಹಾಸನ: ಬಿಹಾರದ ಪುನರ್ ವಸತಿ ಬಾಲಕಿಯರ ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ನಗರದಲ್ಲಿ ಗುರುವಾರ ಸೇವಾ ಸಂಗಮ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಸ್ಪಂದನ ಸಿರಿ ವೇದಿಕೆ ಸೇರಿದಂತೆ ವಿವಿಧ ಸಂಸ್ಥೆಗಳಿಂದ ಪ್ರತಿಭಟನೆ ನಡೆಯಿತು. ನಗರದ ಹೇಮಾವತಿ ಪ್ರತಿಮೆ ಬಳಿ ಯಿಂದ ಮೆರವಣಿಗೆ ಆರಂಭಿಸಿದ ಪ್ರತಿ ಭಟನಾಕಾರರು ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಘೋಷಣೆ ಕೂಗಿದರು. ಬಿಹಾರ ಸೇವಾ ಸಂಕಲ್ಪ ವಿಕಾಸ ಸಮಿತಿಯಲ್ಲಿ ಎನ್.ಜಿ.ಒ. ಎಂಬ ಸಂಸ್ಥೆ ಸರ್ಕಾರದ ಅನುದಾನದ ಮುಜಪ್ಫರ್…
ಯುವಜನರು ಸೈನ್ಯ ಸೇರಲು ಸಲಹೆ
July 27, 2018ಅರಸೀಕೆರೆ: ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಪ್ರತಿಯೊಬ್ಬರು ಋಣಿಯಾಗಿದ್ದಾರೆ. ದೇಶ ಸೇವೆಗಾಗಿ ಹೋರಾಡುವ ಸೈನಿಕ ಹುದ್ದೆಗೆ ಯುವಜನರು ಸೇರುವ ಮೂಲಕ ದೇಶ ಸೇವೆಗೆ ಮುಂದಾಗಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಡಿ.ಜಿ. ಸುರೇಶ್ ಹೇಳಿದರು. ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ಗುರುವಾರ ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ವೀರ ನಿವೃತ್ತಿ ಯೋಧರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಗಿಲ್ ಯುದ್ದದಲ್ಲಿ ಸೈನಿಕರು ವಿಜಯ ಸಾಧಿಸಿ ಇಂದಿಗೆ 19 ವರ್ಷಗಳು ಕಳೆದಿವೆ. ಈ ಸಾಧನೆಯ ಹಿಂದೆ ಸೈನಿಕರ…
ಜಗತ್ತಿನ ಶ್ರೇಷ್ಠ ವಿಜ್ಞಾನಿ ಎ.ಪಿ.ಜೆ.ಅಬ್ದುಲ್ ಕಲಾಂ: ಪ್ರೀತಮ್ ಜೆ.ಗೌಡ
July 27, 2018ಹಾಸನ: ‘ರಾಷ್ಟ್ರಪತಿಯಾಗಿ ಸಂಶೋಧನೆ ಮಾಡಿ ದಂತಹ ಜಗತ್ತಿನ ಶ್ರೇಷ್ಠ ವಿಜ್ಞಾನಿ ಎ.ಪಿ.ಜೆ.ಅಬ್ದುಲ್ ಕಲಾಂ’ ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ.ಗೌಡ ಹೇಳಿದರು. ನಗರದ ಸಾಲಗಾಮೆ ರಸ್ತೆಯಲ್ಲಿರುವ ಎಂ.ಕೃಷ್ಣ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಮಾನವ ಹಕ್ಕುಗಳ ವೇದಿಕೆಯಿಂದ ಗುರು ವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಲಾಂ ಅವರು ಮಕ್ಕಳಿಗೆ ಪ್ರೇರಣೆ ಯಾಗಿದ್ದರು. ಸಾಮಾನ್ಯ ಕುಟುಂಬದಿಂದ ಬಂದಂತಹ ಅವರು ಪರಮಾಣು ಶಕ್ತಿಯಲ್ಲಿ ಸಂಶೋಧನೆ ನಡೆಸಿ ಯಶಸ್ವಿಯಾಗಿ…
ವ್ಯರ್ಥವಾದ ಸಭೆ ಸಮಯ: ಅಧ್ಯಕ್ಷರ ಕಚೇರಿ, ಲಿಫ್ಟ್ ಅಳವಡಿಕೆಯದ್ದೇ ಚರ್ಚೆ
July 26, 2018ಹಾಸನ: ಜಿಪಂ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಕೊಠಡಿ ನಿರ್ಮಾಣ, ಹೊಸ ಲಿಫ್ಟ್ ಅಳವಡಿಕೆ ವಿಚಾರ ಚರ್ಚೆಗೆ ಗ್ರಾಸವಾಗಿ ಅಭಿವೃದ್ಧಿ ಬಗ್ಗೆ ಚರ್ಚೆಯಾಗದೇ ಹೆಚ್ಚಿನ ಸಮಯ ವ್ಯರ್ಥವಾಯಿತು. ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಯಲ್ಲಿ ಮೊದಲು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜು ಅವರ ಕಚೇರಿ ನಿರ್ಮಾಣಕ್ಕೆ 10 ಲಕ್ಷ ರೂ.ಗಳನ್ನು ಸಭೆಯಲ್ಲಿ ಯಾವ ಸದಸ್ಯರ ಅನುಮೋದನೆ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಈ ಬಗ್ಗೆ ಹಲವು ಸದಸ್ಯರೊಂದಿಗೆ ಧ್ವನಿಗೂಡಿಸಿದ ಮಾಜಿ ಉಪಾಧ್ಯಕ್ಷ ಶ್ರೀನಿವಾಸ್…
ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಬಗ್ಗೆ ಚರ್ಚೆ: ಸಚಿವ ಎನ್.ಮಹೇಶ್
July 26, 2018ಹಾಸನ: ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವಂತೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವವರಿಗೆ ವಿಸ್ತರಿಸುವ ಬಗ್ಗೆ ಚರ್ಚಿಸಲಾಗುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಅವರು ವರದಿಯನ್ನು ಕೇಳಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಶಾಲಾ ಕಾಲೇಜು ಮಕ್ಕಳಿಗೆ ಉಚಿತವಾಗಿ ಬಸ್‍ಪಾಸ್ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಕುರಿತು ಮುಖ್ಯಮಂತ್ರಿಗಳು ವರದಿ ಕೇಳಿದ್ದಾರೆ….
ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತ
July 26, 2018ಬೇಲೂರು: ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಅಗ್ಗಡಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೋಮೇಗೌಡ(62) ಮೃತರು. ಇಂದು ಸಂಜೆ ಮೃತರು ತಮ್ಮ ತೋಟ ದಲ್ಲಿ ಮರಗಳನ್ನು ತೆರವುಗೊಳಿಸುತ್ತಿದ್ದ ಸಮಯದಲ್ಲಿ ಕಬ್ಬಿಣದ ಏಣಿಯು ವಿದ್ಯುತ್ ತಂತಿಗಳಿಗೆ ತಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾ ಗಮಿಸಿದ ಪರಿಶೀಲಿಸಿದ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.