ಹಾಸನ, ಜು.2- ಇತ್ತೀಚಿನ ಲೋಕ ಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೈತ್ರಿ (ಜೆಡಿಎಸ್) ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶ್ರಮವೂ ಇದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಹೇಳಿದರು. ನಗರದಲ್ಲಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಯಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಯುವ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‍ನವರು ಶ್ರಮಿಸಿದ್ದರೂ ಜೆಡಿಎಸ್‍ನಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಮೇಲೆ ಆಗುತ್ತಿರುವ ದುಷ್ಪರಿಣಾಮ ಗಳ ಕುರಿತು ದೂರುಗಳು ಕೇಳಿ ಬಂದಿವೆ. ಈ…
ಜು.6ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ
July 3, 2019ಅರಸೀಕೆರೆಯಲ್ಲಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಅರಸೀಕೆರೆ, ಜು.2- ಕಾಂಗ್ರೆಸ್ ಎಂಬುದು ಸ್ವಾತಂತ್ರ್ಯ ಪೂರ್ವದಲ್ಲಿ ಒಂದು ವೇದಿಕೆಯಾಗಿತ್ತೇ ಹೊರತು ಅದೇನೂ ಪಕ್ಷವಾಗಿರಲಿಲ್ಲ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ದೇಶವನ್ನು ಕಾಂಗ್ರೆಸ್ ಮುಕ್ತವನ್ನಾಗಿಸಲಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗಾಗಿ ಜು.6ರಿಂದ ಸದಸ್ಯತ್ವ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿ ಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಹೇಳಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಅರಸೀಕೆರೆ ಗ್ರಾಮಾಂತರ ಮಂಡಲ ವ್ಯಾಪ್ತಿಯ ಸದಸ್ಯತ್ವ ಅಭಿಮಾನದ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಂಗಳವಾರ…
ಪರಿಸರ ನಾಶಗೊಳಿಸಿದ್ದಕ್ಕೆ ಪ್ರಾಯಶ್ಚಿತ್ತ ಅಗತ್ಯ
July 3, 2019ಅರಸೀಕೆರೆಯಲ್ಲಿ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಕೆಎಂಶಿ ಅರಸೀಕೆರೆ,ಜು.2- ಪರಿಸರಕ್ಕೆ ಪೂರಕ ವಾದ ಸಸ್ಯಗಳನ್ನು ನೆಡುವ ಮೂಲಕ ಮುಂದಿನ ತಲೆಮಾರಿಗೆ ಉತ್ತಮ ಪರಿಸರ ವನ್ನು ಕೊಡುಗೆಯಾಗಿ ನೀಡಬೇಕಿದೆ. ಈವರೆಗೆ ಪರಿಸರ ನಾಶ ಮಾಡಿರುವ ಎಲ್ಲರೂ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಾ ಗಿದೆ ಎಂದು ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ನಗರದ ಮಾರುತಿನಗರ ಬಡಾವಣೆ ಯಲ್ಲಿ ನಗರಸಭೆ ಸದಸ್ಯೆ ಕೆ.ಪಿ.ಸುಜಾತ ನೇತೃತ್ವದಲ್ಲಿ ವಿಷ್ಣು ಸೇನಾ ಸಮಿತಿ, ಭುವಿ ಸೇವಾ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ…
ಮಲ್ಲಿಪಟ್ಟಣದಲ್ಲಿ ನಂದಿನಿ ಕ್ಷೀರ ಕೇಂದ್ರ ಉದ್ಘಾಟಿಸಿದ ಎಟಿಆರ್
July 3, 2019ರಾಮನಾಥಪುರ, ಜು.2- ಅರಕಲಗೂಡು ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶ ಗಳಲ್ಲಿ ನಂದಿನ ಹಾಲಿನ ಕ್ಷೀರ ಕೇಂದ್ರವನ್ನು ತೆರೆದಿದ್ದೇವೆ ಎಂದು ಹಾಸನ ಹಾಲು ಒಕ್ಕೂಟದ ಎಂಡಿ ಗೋಪಾಲಯ್ಯ ತಿಳಿಸಿದರು. ಮಲ್ಲಿಪಟ್ಟಣ ವೃತ್ತದಲ್ಲಿ ಸೋಮವಾರ ನಂದಿನಿ ಕ್ಷೀರ ಕೇಂದ್ರ ಉದ್ಘಾಟನೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಈಗಾಗಲೇ ನಂದಿನಿ ಹಾಲು, ಮೊಸರು ಮತ್ತಿತರ ಡೈರಿ ಉತ್ಪನ್ನಗಳನ್ನು ಗ್ರಾಮೀಣ ಜನರಿಗೆ ತಲಪುವಂತೆ ಮಾಡ ಲಾಗಿದೆ. ಕೊಡಗಿನ ಕೂಡಿಗೆ ಡೈರಿಯಿಂದ ಬೆಳಿಗ್ಗೆ ಹಾಗೂ ಸಂಜೆ…
ಆನೆ ದಾಳಿ ನಿಯಂತ್ರಣ ಅಧ್ಯಯನಕ್ಕಾಗಿ ಶ್ರೀಲಂಕಾಗೆ ತಜ್ಞರ ತಂಡ
July 2, 2019ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಆನೆ ಟಾಸ್ಕ್‍ಫೋರ್ಸ್ ಜಿಲ್ಲಾಮಟ್ಟದ ಸಮಿತಿ ಸಭೆ ಹಾಸನ,ಜು.1- ಜಿಲ್ಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ಅಗತ್ಯವಾಗಿ ಕೈ ಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯ ಯನ ನಡೆಸಲು ಶೀಘ್ರದಲ್ಲೇ ತಜ್ಞರ ತಂಡ ವನ್ನು ಶ್ರೀಲಂಕಾಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವ ರಾದ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮ ವಾರ ಆನೆ ಟಾಸ್ಕ್‍ಫೋರ್ಸ್ ಸಮಿತಿಯ ಜಿಲ್ಲಾ ಮಟ್ಟದ ಸಭೆ ನಡೆಸಿದ ಸಚಿವರು, ವನ್ಯಜೀವಿಗಳ ಹಾವಳಿ ತಡೆಗಾಗಿ ಶಾಶ್ವತ…
ಹಾಸನದಲ್ಲಿ ಶೀಘ್ರವೇ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
July 2, 2019ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಡಿ.ರೇವಣ್ಣ ಘೋಷಣೆ ಹಾಸನ,ಜು.1- ನಗರದಲ್ಲಿ ಶೀಘ್ರದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾ ಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಪ್ರಕಟಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರದಂತೆ ವೈದ್ಯಕೀಯ ಕ್ಷೇತ್ರವೂ ಪ್ರಥಮ ಸ್ಥಾನಕ್ಕೇರಬೇಕು ಎಂಬುದು ನಮ್ಮ ನಿರೀಕ್ಷೆ. ಬೆಂಗಳೂರಿನ ವೈದ್ಯಕೀಯ ಕಾಲೇಜು ಮಾದರಿಯಲ್ಲಿ ಹೊಸ ವಿಷಯಗಳನ್ನು ಒಳಗೊಂಡ…
ಬೇಲೂರಿನಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ
July 2, 2019ಬೇಲೂರು, ಜು.1- ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸೋಮವಾರ ತಾಲೂಕು ಒಕ್ಕಲಿಗರ ಸಂಘ, ಒಕ್ಕಲಿಗರ ಯುವ ವೇದಿಕೆ, ಮಹಿಳಾ ಒಕ್ಕಲಿಗರ ಸಂಘದ ನೂರಾರು ಸದಸ್ಯರು ಪಟ್ಟಣದ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಸೇತುವೆ ಸಮೀಪ ಇರುವ ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಜನಪದ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಭಾರೀ ಮೆರವಣಿಗೆ ನಡೆಸಿದರು. ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ.ಎಸ್.ಲಿಂಗೇಶ್, ನಾಡಪ್ರಭು ಕೆಂಪೇಗೌಡರ ಕೆಲಸಗಳನ್ನು ಇತಿಹಾಸದ ಪುಟಗಳಲ್ಲಿ ಕಾಣಬಹುದಾಗಿದೆ. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗದೆ ಎಲ್ಲ ಸಮುದಾಯಕ್ಕೂ…
ನೀರು ನೆರಳಿಲ್ಲದ ಜಾಗಕ್ಕೆ ವರ್ಗಾವಣೆ: ಫಲಾನುಭವಿಗಳಿಗೆ ಸವಲತ್ತು ತಲುಪಿಸದ ಅಧಿಕಾರಿಗಳಿಗೆ ಕೆಎಂಶಿ ಎಚ್ಚರಿಕೆ
July 2, 2019ಅರಸೀಕೆರೆ, ಜು.1- ಸರ್ಕಾರಿ ಸವಲತ್ತು ಗಳನ್ನು ಅರ್ಹ ಫಲಾನುಭವಿಗಳಿಗೆ ತಲು ಪಿಸಲು ವಿಫಲರಾಗುವ ಅಧಿಕಾರಿಗಳನ್ನು ನೀರು ನೆರಳಿಲ್ಲದ ಜಾಗಕ್ಕೆ ವರ್ಗಾವಣೆ ಮಾಡಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಎಲ್ಲಾ ಅಧಿಕಾರಿಗಳೂ ಸಹಕಾರ ನೀಡ ಬೇಕು. ಒಂದು ವೇಳೆ ಅಭಿವೃದ್ಧಿ ವಿಚಾರ ದಲ್ಲಿ ರಾಜಕಾರಣ ಮಾಡಿದರೆ ತಕ್ಕ ಉತ್ತರ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಅಧಿ ಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ನಗರದ ತಾಲೂಕು ಕಚೇರಿಯಲ್ಲಿ ಸೋಮ ವಾರ ಆಯೋಜಿಸಿದ್ದ ಸಾರ್ವಜನಿಕ ಸಂಪರ್ಕ ಸಭೆಯ ಅಧ್ಯಕ್ಷತೆ…
ಸೇವಾನುಭವ ಕಡೆಗಣನೆ: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
June 30, 2019ಹಾಸನ, ಜೂ.29(ಸೋಮೇಶ್)- ವಿದ್ಯಾ ರ್ಹತೆ ಹಾಗೂ ಸೇವಾನುಭವ ಹೊಂದಿ ದ್ದರೂ ಕೂಡ ಅದನ್ನು ಪರಿಗಣಿಸದೇ ಕಡೆಗಣಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆಯಲ್ಲಿ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿ ಕೆಲಕಾಲ ಪ್ರತಿ ಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಒಂದರಿಂದ ಏಳನೇ ತರಗತಿಗೆ ನೇಮಕವಾಗಿ 2005 ರಿಂದ 8ನೇ ತರಗತಿ ಪ್ರಾರಂಭಿಸಿದಾಗಿನಿಂದಲೂ 6 ಮತ್ತು…
ಅನಕ್ಷರತೆ ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ: ಡಿಸಿ
June 30, 2019ಹಾಸನ, ಜೂ.29- ಅನಾಗರಿಕತೆ ಹಾಗೂ ಅನಕ್ಷರತೆ ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಹಾಗಾಗಿ ಗ್ರಾಮೀಣ ಜನರಲ್ಲಿಯೂ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು. ನಗರದ ಅಕ್ಷರ ಬುಕ್‍ಹೌಸ್‍ಗೆ ಇತ್ತೀಚೆಗೆ ಭೇಟಿ ನೀಡಿ ಪುಸ್ತಕ ಮಳಿಗೆ ವೀಕ್ಷಿಸಿ ಮಾತ ನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಅದರಲ್ಲೂ ಯುವಕರು ಪುಸ್ತಕ ಓದುವ ಕಡೆ ಹೆಚ್ಚು ಗಮನ ಹರಿಸುತ್ತಿಲ್ಲ. ಪಠ್ಯದ ಜೊತೆಗೆ ಮಕ್ಕಳು ನಿತ್ಯ ದಿನಪತ್ರಿಕೆ ಸೇರಿದಂತೆ ಕಥೆ, ಕಾದಂಬರಿ,…