ಮಡಿಕೇರಿ, ಮೇ 4- ಪೊಲೀಸ್ ಇಲಾಖೆ ಯಿಂದ ಕೊಡಗು ಜಿಲ್ಲಾ ಪೊಲೀಸ್ ಘಟಕಕ್ಕೆ ನೀಡಲಾಗಿರುವ 7 ‘ತುರ್ತು ಸ್ಪಂದನಾ ವಾಹನ’ ಸಂಚಾರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮಂಗಳವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ತುರ್ತು ಸ್ಪಂದನ ಸಹಾಯ ವ್ಯವಸ್ಥೆಯನ್ನು ಸಾರ್ವಜನಿಕರ ಅನುಕೂಲಕ್ಕೆ ತರಲಾಗಿದೆ. ಆ ದಿಸೆಯಲ್ಲಿ ‘ದೇಶಾದ್ಯಂತ ಒಂದೇ ತುರ್ತು ಕರೆ 112’ ಸಂಖ್ಯೆಗೆ ಕರೆ ಮಾಡಿ ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ಪರಿಹರಿಸಿಕೊಳ್ಳ ಬಹುದಾಗಿದೆ ಎಂದು…
ಕಾರ್ಮಿಕರ ಕುಂದುಕೊರತೆ ಆಲಿಸಿದ ಹಿರಿಯ ಕಾರ್ಮಿಕ ನಿರೀಕ್ಷಕ
May 5, 2021ಮಡಿಕೇರಿ, ಮೇ 4- ಕೋವಿಡ್-19 ರ ಎರಡನೇ ಅಲೆ ಹಿನ್ನೆಲೆ ನಗರ ಮತ್ತು ಗಾಳಿಬೀಡು ಹತ್ತಿರವಿರುವ ಕಾರ್ಮಿಕರ ಶೆಡ್‍ಗಳಿಗೆ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ ಮಂಗಳವಾರ ಭೇಟಿ ನೀಡಿ ಮುನ್ನೆಚ್ಚರಿಕೆ ವಹಿಸುವ ಕುರಿತು ಮಾಹಿತಿ ನೀಡಿದರು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಕೆಲಸ ಮಾಡುವಂತೆ ಹಿರಿಯ ಕಾರ್ಮಿಕ ನಿರೀಕ್ಷಕರು ತಿಳಿಸಿದರು. ವಲಸೆ ಕಾರ್ಮಿಕರ ಮಾಹಿತಿಯನ್ನು ನಮೂನೆ-ಬಿ ಯಲ್ಲಿ ತಯಾರಿಸಿ ಸಲ್ಲಿಸಲು ಗುತ್ತಿಗೆದಾರರಿಗೆ ತಿಳಿಸಲಾಯಿತು. ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಂಡು ಕೇಂದ್ರ…
ಕೊರೊನಾ ತಡೆಗೆ ನಿಯಮ ಪಾಲಿಸಲು ಸಲಹೆ
May 5, 2021ವಿರಾಜಪೇಟೆ, ಮೇ 4- ಕೊರೊನಾ ವೈರಸ್ ದಿನೆ ದಿನೇ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸುವ ಮೂಲಕ ಸರ್ಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು ಕೋವಿಡ್-19 ಪ್ರಕರಣಗಳು ಲಾಕ್‍ಡೌನ್ ಸಂದರ್ಭದಲ್ಲಿಯೂ ಹೆಚ್ಚಾಗು ತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬೋಪಯ್ಯ, ಇನ್ನು ಮುಂದೆ ವಿರಾಜಪೇಟೆ ಸಾರ್ವ ಜನಿಕ ಆಸ್ಪತ್ರೆಯನ್ನು 50 ಹಾಸಿಗೆವುಳ್ಳ ಕೋವಿಡ್ ಸೆಂಟರ್ ಆಗಿ ಪರಿವರ್ತಿಸ ಲಾಗುವುದು….
ಕಳೆದ ವರ್ಷ ಗಜಗಿರಿ ಬೆಟ್ಟ ಕುಸಿದ ಹಿನ್ನೆಲೆ ಇಂಗುಗುಂಡಿಗಳನ್ನು ಮುಚ್ಚಿದ ಅರಣ್ಯ ಇಲಾಖೆ
May 5, 2021ಮಡಿಕೇರಿ, ಮೇ 4- ಕಳೆದ ವರ್ಷ ಮಳೆಗಾಲದ ವೇಳೆ ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದು ಅನಾಹುತ ಸಂಭ ವಿಸಲು ಕಾರಣವಾಗಿದ್ದ ಇಂಗು ಗುಂಡಿ ಗಳನ್ನು ಅರಣ್ಯ ಇಲಾಖೆ ಇದೀಗ ಮುಚ್ಚಿದೆ. ಸುಮಾರು 650 ಇಂಗು ಗುಂಡಿಗಳನ್ನು ಸ್ಥಳೀಯರ ಸಹಕಾರದಿಂದ 26 ದಿನಗಳ ಕಾಲ ಕಾರ್ಯಾಚರಣೆ ನಡೆಸುವ ಮೂಲಕ ಅರಣ್ಯ ಇಲಾಖಾ ಸಿಬ್ಬಂದಿ ಮುಚ್ಚುವಲ್ಲಿ ಸಫಲರಾಗಿದ್ದಾರೆ. ಇಂಗು ಗುಂಡಿಗಳಿಂದ ತೊಂದರೆಯಾಗಿಲ್ಲ ಎಂದೇ ಪ್ರತಿಪಾದಿಸುತ್ತಿದ್ದ ಅರಣ್ಯ ಇಲಾಖೆ ಜಿಯೋ ಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳು ಸಲ್ಲಿಸಿದ್ದ ವರದಿ…
ಲಾಕ್‍ಡೌನ್ ಘೋಷಣೆಯ ಮೊದಲ ದಿನ ಕೊಡಗು ಸಂಪೂರ್ಣ ಸ್ತಬ್ಧ
May 5, 2021ಮಡಿಕೇರಿ, ಮೇ 4- ಲಾಕ್‍ಡೌನ್ ಘೋಷಣೆಯ ಮೊದಲ ದಿನವಾದ ಮಂಗಳವಾರ ಮಧ್ಯಾಹ್ನ 1 ಗಂಟೆಯ ಬಳಿಕ ಮಡಿಕೇರಿ ನಗರ ಸೇರಿದಂತೆ ಕೊಡಗು ಜಿಲ್ಲೆ ಸಂಪೂರ್ಣ ಲಾಕ್‍ಡೌನ್ ತೆರೆ ಎಳೆದುಕೊಂಡಿದೆ. ಜಿಲ್ಲಾಡಳಿತದ ಆದೇಶಕ್ಕೆ ಸಾರ್ವಜನಿಕರು ಕೂಡ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸಿದ್ದಾರೆ. ಮಂಗಳವಾರ ಜಿಲ್ಲಾ ಕೇಂದ್ರ ಮಡಿ ಕೇರಿಯಲ್ಲಿ ಬೆಳಗೆ 6 ಗಂಟೆಯಿಂದ 12 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಅಂಗಡಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತಿದ್ದು ಕಂಡು ಬಂತು. ವಾರದ 5 ದಿನ…
ಸಿದ್ದಾಪುರದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಮುಗಿಬಿದ್ದ ಜನರು
May 3, 2021ಸಿದ್ದಾಪುರ, ಮೇ 2- ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿ ನಲ್ಲಿ ಸರ್ಕಾರ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯಾದರೂ ಜನರು ನಿಯಮಗಳನ್ನು ಗಾಳಿಗೆ ತೂರಿ ನೂಕು ನುಗ್ಗಲಿನಲ್ಲಿ ಅಗತ್ಯ ವಸ್ತು ಗಳನ್ನು ಖರೀದಿಸಲು ಮುಗಿ ಬೀಳು ತ್ತಿದ್ದ ದೃಶ್ಯ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಕಂಡು ಬಂತು. ಭಾನುವಾರದ ಸಂತೆ ಮಾರುಕಟ್ಟೆಯನ್ನು ಬಂದು ಮಾಡಲಾಗಿ ತ್ತಾದರೂ ಬಸ್ ನಿಲ್ದಾಣದಲ್ಲಿ ರಸ್ತೆ ಬದಿ ವ್ಯಾಪಾರ ಸೇರಿದಂತೆ ಅಂಗಡಿ ಮುಂಗಟ್ಟು ಗಳ ವ್ಯಾಪಾರ ವಹಿವಾಟು ಜೋರಾಗಿತ್ತು. ಸುತ್ತಮುತ್ತಲ…
ಅಕ್ರಮ ಮರಳುಗಾರಿಕೆ 3 ಲಾರಿ, ಯಾಂತ್ರಿಕ ದೋಣಿ ವಶ
May 3, 2021ಮಡಿಕೇರಿ, ಮೇ 2- ಸೋಮವಾರಪೇಟೆ ತಾಲೂಕಿನ ಹಂಪಾಪುರದಲ್ಲಿ ಹೇಮಾವತಿ ಹಿನ್ನೀರಿನಲ್ಲಿ ಅಕ್ರಮವಾಗಿ ಮರಳು ತೆಗೆ ಯುತ್ತಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಜಂಟಿ ದಾಳಿ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 1 ಯಾಂತ್ರಿಕ ದೋಣಿ ಮತ್ತು 2 ಲಾರಿ ಹಾಗೂ ಪರ ವಾನಗಿ ಇಲ್ಲದೇ ಜಲ್ಲಿಕಲ್ಲು ಸಾಗಿಸುತ್ತಿದ್ದ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕೊಡ್ಲಿಪೇಟೆ ಉಪ ಠಾಣೆ ಮತ್ತು ಶನಿವಾರಸಂತೆ ಪೊಲೀಸ್ ಠಾಣೆ ಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಹಂಪಾಪುರ…
ಕೊಡಗಲ್ಲಿ ಕೊರೊನಾ ಸೋಂಕು ಏರಿಕೆ; ಕೈ ಚೆಲ್ಲಿ ಕುಳಿತಿರುವ ಸರ್ಕಾರ
May 3, 2021ಮಡಿಕೇರಿ, ಮೇ 2- ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನ ದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲೂ ಪರಿಸ್ಥಿತಿ ಕೈಮೀರುತ್ತಿದೆ. ಒಂದೇ ದಿನದಲ್ಲಿ 7-8 ಸೋಂಕಿತರು ಸಾವ ನ್ನಪ್ಪುತ್ತಿದ್ದು, ಸರ್ಕಾರ ಕೈಚೆಲ್ಲಿ ಕುಳಿತಂತೆ ಕಂಡು ಬರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಕೇವಲ 5 ರಿಂದ 6 ಲಕ್ಷ ಜನ ಸಂಖ್ಯೆ ಹೊಂದಿರುವ ಜಿಲ್ಲೆಯಾಗಿದೆ. ಆದರೆ ಇಂದಿಗೂ 4042 ಸಕ್ರಿಯ ಕೋವಿಡ್…
ಕೊಡಗಿಗೆ ಇನ್ನೂ 15 ದಿನ ಕೊರೊನಾ ಕಂಟಕ
May 3, 2021ಮಡಿಕೇರಿ, ಮೇ 2-ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಮೋಹನ್ ಕುಮಾರ್ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮೋಹನ್, ಮುಂದಿನ 15 ದಿನ ಕೊಡಗಿಗೆ ಕಂಟಕ ಎದುರಾಗುತ್ತದೆ ಎಂದು ಎಚ್ಚರಿಸಿದರು. ಕೊಡಗು ಜಿಲ್ಲೆಯಲ್ಲಿ ಅಂದಾಜು ಆರೂವರೆ ಲಕ್ಷ ಜನಸಂಖ್ಯೆ ಇದೆ. ಆದರೆ, ಬೆಂಗಳೂರಿನಿಂದ ಬಂದಿ ರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ…
ಮಡಿಕೇರಿ ಸಂತೆ ರದ್ದಾದರೂ ವ್ಯಾಪಾರ ಜೋರು
May 1, 2021ಮಡಿಕೇರಿ, ಏ.30- ಕೊಡಗು ಜಿಲ್ಲೆಯಲ್ಲಿ ಕೋವಿಡ್ ವೈರಸ್ ಹರಡುವುದನ್ನು ತಡೆಯಲು ಎಲ್ಲಾ ರೀತಿಯ ಸಂತೆಗಳನ್ನು ರದ್ದು ಮಾಡಲಾಗಿದೆ. ಆದರೆ ಶುಕ್ರವಾರ ದಿನ ಮಡಿಕೇರಿಯ ನೂತನ ಮಾರುಕಟ್ಟೆಯಲ್ಲಿ ಸಂತೆ ವ್ಯಾಪಾರ ಎಂದಿನಂತೆ ನಡೆಯುತ್ತಿದ್ದ ಸಂದರ್ಭ ಪೊಲೀಸರು ಸ್ಥಳಕ್ಕಾಗಮಿಸಿ ವರ್ತಕರು ಮತ್ತು ಗ್ರಾಹಕ ರನ್ನು ಚದುರಿಸುವ ಮೂಲಕ ಮಾರುಕಟ್ಟೆಯನ್ನು ಬಂದ್ ಮಾಡಿ ಸಿದರು. ಸಾರ್ವಜನಿಕರು ಕೂಡ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಾಮಾಜಿಕ ಅಂತರವನ್ನು ಮರೆತು ಮುಗಿ ಬಿದ್ದು ತರಕಾರಿಗಳನ್ನು ಖರೀದಿಸುತ್ತಿದ್ದುದು ಕಂಡು ಬಂತು. ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ…