ಮಡಿಕೇರಿ, ಏ.30- ಕೊರೊನಾ ಸೋಂಕು ಇಲ್ಲವಾಗಿದ್ದಲ್ಲಿ ನಗರ ಸಭೆಯ ಎಲ್ಲಾ 23 ವಾರ್ಡ್‍ಗಳನ್ನೂ ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿತ್ತು ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿ ಸಿದ್ದಾರೆ. ನಗರದ ಸಂತ ಜೋಸೆಫರ ಶಾಲಾ ಆವರಣದ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಗೆಲುವು ಸಾಧಿಸಿದ ಎಲ್ಲಾ ಬಿಜೆಪಿ ಅಭ್ಯರ್ಥಿಗಳಿಗೆ ಶುಭ ಕೋರಿದರು. ಪರಾಜಿತರಾದ ಅಭ್ಯರ್ಥಿ ಗಳಿಗೂ ಧೈರ್ಯ ತುಂಬಿದ ಮುಖಂಡರು ಧೃತಿ ಗೆಡದೆ ಪಕ್ಷ ಸಂಘಟನೆಯಲ್ಲಿ…
ಮಡಿಕೇರಿ ನಗರಸಭೆ ಬಿಜೆಪಿ ತೆಕ್ಕೆಗೆ ಕಾಂಗ್ರೆಸ್‍ಗೆ ತೀವ್ರ ಮುಖಭಂಗ
May 1, 2021ಮಡಿಕೇರಿ, ಏ.30-ಮಡಿಕೇರಿ ನಗರ ಸಭೆಗೆ ಏ.27ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, 23 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಿಜೆಪಿ ಭರ್ಜರಿ ಜಯ ಸಾಧಿಸಿ, ನಗರ ಸಭೆ ಆಡಳಿತದ ಚುಕ್ಕಾಣಿಯನ್ನು ಹಿಡಿದಿದೆ. ಕಳೆದ ಬಾರಿ 9 ಸ್ಥಾನ ಪಡೆದಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಕೇವಲ 1 ಸ್ಥಾನ ಪಡೆದು ತೀವ್ರ ಮುಖಭಂಗ ಅನು ಭವಿಸಿದೆ. ಜೆಡಿಎಸ್ ಕಳೆದ ಬಾರಿಯಂತೆ ಈ ಬಾರಿಯೂ ಒಂದೇ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಂಡರೆ, ಕಳೆದ ಬಾರಿ…
ವೃದ್ಧೆ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ, ನಗದು ಅಪಹರಣ
April 29, 2021ಸುಂಟಿಕೊಪ್ಪ, ಏ.28- ಮನೆಯಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದ ಕಾಫಿ ಬೆಳೆಗಾರ ವೃದ್ದೆಯೊಬ್ಬರ ಮನೆಗೆ ನುಗಿದ ಮೂವರು ಖದೀಮರು ವೃದ್ಧೆಯ ಕತ್ತು ಹಿಸುಕಿ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಘಟನೆ ಹಿನ್ನೆಲೆ: ಸುಂಟಿಕೊಪ್ಪ ಸಮೀಪದ ಹಾರ್‍ಬೈಲ್ ಗ್ರಾಮದ ದಿವಂಗತ ಕುಂಞಣ್ಣ ರೈ ಅವರ ಪತ್ನಿ ಸರೋಜಿನಿ ಅವರು ತನ್ನ 4 ಎಕರೆ ಕಾಫಿ ತೋಟ ನೋಡಿಕೊಂಡು ಏಕಾಂಗಿಯಾಗಿ ಜೀವನ…
ಸಿದ್ದಾಪುರ ಸುತ್ತಮುತ್ತಲ ಗ್ರಾಮಗಳು ಸಂಪೂರ್ಣ ಬಂದ್
April 29, 2021ಸಿದ್ದಾಪುರ, ಏ.28- ಕೊರೊನಾ ಮಹಾ ಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಫ್ರ್ಯೂ ಘೋಷಣೆಗೆ ಸಿದ್ದಾಪುರ, ನೆಲ್ಯಹುದಿ ಕೇರಿ, ಪಾಲಿಬೆಟ್ಟ, ಅಮ್ಮತ್ತಿ, ಚೆನ್ನಯ್ಯನ ಕೋಟೆ, ಮಾಲ್ದಾರೆ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲೂ ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟಗಳನ್ನು ಮುಚ್ಚಿ ಕಫ್ರ್ಯೂ ಬಂದ್‍ಗೆ ಸಾರ್ವಜನಿಕರು ಹಾಗೂ ವರ್ತಕರು ಸಹಕರಿಸಿದರು. ವೈದ್ಯಕೀಯ ಸೇವೆ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತುಪಡಿಸಿ ಎಲ್ಲವೂ ಸ್ಥಬ್ಧ ವಾಗಿತ್ತು. ಆಸ್ಪತ್ರೆ ಸೇರಿದಂತೆ ತುರ್ತು ಸಂದರ್ಭಕ್ಕೆ ಸೀಮಿತವಾದ ವಾಹನಗಳು ಮಾತ್ರ ಓಡಾಟವಿತ್ತು. ಸಿದ್ದಾಪುರ ಸೇರಿದಂತೆ ಹಲವೆಡೆ ಕೆಲವು ಬೈಕ್…
ಕೊರೊನಾ ಕಫ್ರ್ಯೂಗೆ ಕೊಡಗಲ್ಲಿ ಉತ್ತಮ ಸ್ಪಂದನೆ
April 29, 2021ಮಡಿಕೇರಿ, ಏ.23- ಕೋವಿಡ್ ಮಾರ್ಗಸೂಚಿ ಅನ್ವಯ ಜಾರಿಗೆ ತರಲಾಗಿರುವ ಕೊರೊನಾ ಕಫ್ರ್ಯೂಗೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬೆಳಗೆ 6 ರಿಂದ 10 ಗಂಟೆಯವರೆಗೆ ಆಹಾರ, ದಿನಸಿ, ಹಣ್ಣು ಹಂಪಲು, ತರಕಾರಿ, ಹಾಲಿನ ಉತ್ಪನ್ನಗಳು ಮಾರಾಟ ಮಳಿಗೆಯನ್ನು ತೆರೆಯಲು ಮತ್ತು ಸಾರ್ವಜನಿಕರಿಗೆ ಅದನ್ನು ಕೊಂಡುಕೊಳ್ಳಲು ಕಾಲಾವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗ್ತಯ ವಸ್ತುಗಳನ್ನು ಖರೀದಿಸುತ್ತಿದ್ದುದು ಕಂಡು ಬಂತು. 10 ಗಂಟೆಯ ಬಳಿಕ ಎಲ್ಲಾ ಅಂಗಡಿ ಮುಂಗಟ್ಟುಗಳು ಬಾಗಿಲು ಎಳೆದುಕೊಂಡು ಮಾರ್ಗಸೂಚಿ ಪಾಲಿಸಿದವು. ಮಡಿಕೇರಿ, ಕುಶಾಲನಗರ, ವಿರಾಜಪೇಟೆ,…
ಕೊರೊನಾ ಕೇರ್ ಸೆಂಟರ್ ಸ್ಥಾಪನೆಗೆ ವಿರೋಧಿಸಿ ಆದಿವಾಸಿಗಳ ಪ್ರತಿಭಟನೆ
April 28, 2021ಕುಶಾಲನಗರ, ಏ.27- ಸಮೀಪದ ಬಸವನಹಳ್ಳಿಯಲ್ಲಿ ಕೊರೊನಾ ಕೇರ್ ಸೆಂಟರ್ ತೆರೆಯುವುದನ್ನು ವಿರೋಧಿಸಿ ಸ್ಥಳೀಯ ಆದಿವಾಸಿ ಕೇಂದ್ರದ ನಿವಾಸಿಗಳು ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ದಿಡ್ಡಳ್ಳಿ ನಿರಾಶ್ರಿತರ ಪುನ ರ್ವಸತಿ ಕೇಂದ್ರದ ನಿವಾಸಿ ಸ್ವಾಮಿ ಮಾತನಾಡಿ, ಜಿಲ್ಲಾಡಳಿತ ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಕೋವಿಡ್ ಸೆಂಟರ್ ತೆರೆಯಲು ಚಿಂತನೆ ಹರಿಸಿದೆ. ಶಾಲೆಯ ಸುತ್ತಮುತ್ತ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೋವಿಡ್ ಸೆಂಟರ್ ಆರಂಭಿಸಿದರೆ ತೀವ್ರ ಅನಾನುಕೂಲ ಉಂಟಾ ಗಲಿದೆ. ಆದ್ದರಿಂದ ಯಾವುದೇ…
ಮಡಿಕೇರಿ ನಗರಸಭೆ ಚುನಾವಣೆ ಕೊರೊನಾ ಆತಂಕದ ನಡುವೆ ಉತ್ಸಾಹದ ಮತದಾನ
April 28, 2021ಶೇ. 59.01ರಷ್ಟು ಮತದಾನ ಏ.30ರಂದು 108 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಜನಪ್ರತಿನಿಧಿಗಳಿಂದ ಹಕ್ಕು ಚಲಾವಣೆ ಎಲ್ಲಾ ಮತಗಟ್ಟೆಗಳಲ್ಲಿ ಕೊರೊನಾ ಶಿಷ್ಟಾಚಾರ ಪಾಲನೆ, ಪೊಲೀಸರ ಬಿಗಿ ಬಂದೋಬಸ್ತ್ ಪಿಪಿಇ ಕಿಟ್ ಧರಿಸಿ ಹಕ್ಕು ಚಲಾಯಿಸಿದ ಕೊರೊನಾ ಸೋಂಕಿತರು ಮಡಿಕೇರಿ, ಏ.27- ಕೊರೊನಾ ಎರಡನೇ ಅಲೆಯ ಆತಂಕದ ನಡುವೆಯೇ ಮಡಿಕೇರಿ ನಗರಸಭೆಯ ಚುನಾವಣೆ ಕೋವಿಡ್ ಮಾರ್ಗಸೂಚಿ ಅನ್ವಯ ಶಾಂತಿಯುತವಾಗಿ ಮುಕ್ತಾಯ ಕಂಡಿದ್ದು, ಶೇ. 59.01ರಷ್ಟು ಮತದಾನವಾಗಿದೆ. ನಗರಸಭೆ ಚುನಾವಣೆಯಲ್ಲಿ 108 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು,…
ಕೊರೊನಾ ಸೋಂಕಿತರ ಆರೈಕೆಗೆ ನಿಗಾ ವಹಿಸಿ
April 27, 2021ಮಡಿಕೇರಿ ಏ.26-ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 5 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯ ಲಾಗಿದೆ. ನೋಡಲ್ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸೋಮವಾರ ಕೋವಿಡ್-19ರ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾ ಗ್ರತಾ ಕ್ರಮಗಳ ಕುರಿತು ನಡೆದ ವೈದ್ಯರು ಮತ್ತು ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಆರೈಕೆ…
ಕೊಡಗಿನ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸಾ ವ್ಯವಸ್ಥೆ
April 27, 2021ಮಡಿಕೇರಿ,ಏ.26-ಮಡಿಕೇರಿಯಲ್ಲಿರುವ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸಾ ವ್ಯವಸ್ಥೆ ಇದ್ದು, ಅಪಪ್ರಚಾರಗಳಿಗೆ ಕಿವಿಗೊಡದೆ ಕೊರೊನಾ ಲಕ್ಷಣಗಳಿದ್ದಲ್ಲಿ ಕೂಡಲೇ ಆಸ್ಪತ್ರೆಗೆ ಬನ್ನಿ ಎಂದು ಶಾಸಕ ಅಪ್ಪಚ್ಚು ರಂಜನ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸೋಮವಾರ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಎಲ್ಲಾ ವಾರ್ಡ್‍ಗಳನ್ನು ವೀಕ್ಷಿಸಿದರು. ಕೋವಿಡ್ ಸೋಂಕಿತರಿಗೆ ಚಿಕಿತ್ಸೆಗಾಗಿ ಮೀಸಲಿಟ್ಟಿರುವ ವಾರ್ಡ್‍ಗಳಲ್ಲಿ ಅಳವಡಿಸ ಲಾಗಿರುವ ಆಕ್ಸಿಜನ್ ಪೈಪ್‍ಲೈನ್, ವೆಂಟಿ ಲೇಟರ್‍ಗಳನ್ನೂ ಕೂಡ ಶಾಸಕರು ಪರಿ ಶೀಲಿಸಿದರು. ಸ್ಥಳದಲ್ಲಿದ್ದ ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ಮೋಹನ್, ವೈದ್ಯಾಧಿಕಾರಿಗಳಾದ ಡಾ.ಲೋಕೇಶ್,…
ದಿವ್ಯಾಂಗ ಯುವತಿಯಿಂದ ಲಂಚ ಕೊಡಗು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಎಸಿಬಿ ಬಲೆಗೆ
April 27, 2021ಮಡಿಕೇರಿ,ಏ.26-ದಿವ್ಯಾಂಗ ಯುವತಿಯೊಬ್ಬರಿಂದ 9 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸಂಪತ್‍ಕುಮಾರ್ ಬಂಧಿತ ಆರೋಪಿ. ಆತನ ಬಳಿಯಿಂದ 9 ಸಾವಿರ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿವರ: ಮಡಿಕೇರಿ ತಾಲೂಕು ಬೆಟ್ಟಗೇರಿ ಗ್ರಾಮದ ಅಪ್ಪಂಗಳ ನಿವಾಸಿ ಎಂ.ಎನ್.ವೀಣಾ(29) ಶೇ.75ರಷ್ಟು ದಿವ್ಯಾಂಗರಾಗಿದ್ದು, ಸ್ಥಳೀಯ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರದಿಂದ ಜಿಲ್ಲಾ ಅಂಗವಿಕಲ…