ಮಡಿಕೇರಿ, ಮಾ.31- ಕೊಡಗು ಡಿಸಿಸಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ದೇಣಿಗೆ ಚೆಕ್‍ನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹಸ್ತಾಂತರಿಸಿದರು. ಜಿಲ್ಲಾಸ್ಪತ್ರೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಅಂದಾಜು 6.50ಲಕ್ಷ ರೂ. ವೆಚ್ಚದಲ್ಲಿ ಒಂದು ವೆಂಟಿಲೇಟರ್ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಬಾಂಡ್ ಗಣಪತಿ ಹೇಳಿದರು. ಈ ಸಂದರ್ಭ ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷ…
ಸೋಮವಾರಪೇಟೆ ಬಳಿ ವ್ಯಕ್ತಿಯ ಸಂಶಯಾಸ್ಪದ ಸಾವು
April 1, 2020ಸೋಮವಾರಪೇಟೆ, ಮಾ.31- ಮಂಗಳೂರಿನಿಂದ ಬಂದು ಹತ್ತು ದಿನಗಳ ನಂತರ ಮನೆಯಲ್ಲಿ ಸಂಶಯಾಸ್ಪದವಾಗಿ ವ್ಯಕ್ತಿಯೋ ರ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಸೋಮವಾರ ಉಂಜಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿ.ಸೋಮಯ್ಯ ಎಂಬುವರ ಪುತ್ರ ರೋಷನ್ ಸತ್ಯಸಾಯಿ(41) ಮೃತಪಟ್ಟವರು. ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗು ಎಂ.ಬಿ.ಎ. ಕಲಿತು ಮಂಗಳೂರಿನಲ್ಲಿ ನೌಕರಿಯಲ್ಲಿದ್ದ ರೋಷನ್ ಮಾ.20ರಂದು ಮನೆಗೆ ಬಂದಿದ್ದರು. ನಂತರ ಅನಾರೋಗ್ಯದಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಸೋಮವಾರ ಸಂಜೆ ಬಾತ್‍ರೂಂನಲ್ಲಿ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ. ಕೋವಿಡ್-19 ವೈರಸ್ ಶಂಕೆ ವ್ಯಕ್ತಪಡಿಸಿ, ಆರೋಗ್ಯ ಇಲಾಖೆಗೆ ಮಾಹಿತಿ…
ಕೊರೊನಾ; ಜಿಲ್ಲಾಡಳಿತದ ಕ್ರಮಕ್ಕೆ ಸಚಿವ ಸೋಮಣ್ಣ ಮೆಚ್ಚುಗೆ
April 1, 2020ಮಡಿಕೇರಿ, ಮಾ.31- ಕೊಡಗಿನಲ್ಲಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಇದಕ್ಕಾಗಿ ಹಗಲು ರಾತ್ರಿ ಶ್ರಮಿಸಿದ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಡಗು ಜಿಲ್ಲೆಯ ಈ ಕಾರ್ಯ ಎಲ್ಲರಿಗೂ ಮಾದರಿಯಾಗಿದ್ದು, ಮುಖ್ಯಮಂತ್ರಿಗಳ ಪರವಾಗಿ ತಾವು ಇದನ್ನು ಅಭಿನಂದಿಸುವುದಾಗಿ ತಿಳಿಸಿ ದರು. ಮಡಿಕೇರಿಯ ಜಿಪಂ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಚಿವ ವಿ. ಸೋಮಣ್ಣ, ಕೊಡಗು ಜಿಲ್ಲೆಯ ಆರೋಗ್ಯ…
ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ
March 27, 2020ಕೊಡಗು, ಮಾ.27: ಕೊಡಗು ಜಿಲ್ಲೆಯಲ್ಲಿ ದಿನಾಂಕ 22.03.2020ರ ಮಧ್ಯ ರಾತ್ರಿಯಿಂದ ದಿನಾಂಕ 14.04.2020ರ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸಾರ್ವಜನಿಕರು ಅತ್ಯವಶ್ಯಕ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 6:00 ರಿಂದ ಅಪರಾಹ್ನ 12:00 ಗಂಟೆಯವರೆಗೆ ಸಮಯವನ್ನು ಈ ಹಿಂದೆ ನಿಗಧಿಗೊಳಿಸಲಾಗಿತ್ತು. ಮುಂದುವರೆದು, ಜಿಲ್ಲೆಗೆ ಹೊಂದಿಕೊಂಡಂತೆ ಇರುವ ನೆರೆಯ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸಬೇಕಾದ ಕಾರಣ ದಿನಾಂಕ 27.03.2020ರಂದು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಾರ್ವಜನಿಕರು ಅತ್ಯವಶ್ಯಕ ವಸ್ತುಗಳನ್ನು ಖರೀದಿಸಲು…
ಲಾಕ್‍ಡೌನ್ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ
March 24, 2020ಮಡಿಕೇರಿ,ಮಾ.23-ಸರಕಾರದ ಆದೇಶದಂತೆ ಕೊಡಗು ಜಿಲ್ಲೆ ಕೂಡ ಮಾ.31ರ ವರೆಗೆ “ಲಾಕ್‍ಡೌನ್” ಆಗಬೇಕಿದ್ದು, ಈ ನಿಯಮ ಉಲ್ಲಂಘಿಸುತ್ತಿರುವ ಪ್ರಕರಣಗಳ ವಿರುದ್ದ ಕೊಡಗು ಜಿಲ್ಲಾಡಳಿತದ ನಿರ್ದೇಶನದಂತೆ ಪೊಲೀಸ್ ಇಲಾಖೆ ನಿರ್ದಾಕ್ಷ್ಯಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಎಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ “ಮೈಸೂರುಮಿತ್ರ”ನೊಂದಿಗೆ ಮಾತ ನಾಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ, ಸರಕಾರ ಮತ್ತು ಜಿಲ್ಲಾಡಳಿತದ ಸೂಚನೆಯಂತೆ ಅಂತರಾಜ್ಯ ಹಾಗೂ ಅಂತರ್ ಜಿಲ್ಲೆಗಳನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿ ಒಟ್ಟು 13 ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದೆ. ಈ ಚೆಕ್…
ಪ್ರತೀ ಗ್ರಾ.ಪಂ.ಗಳಲ್ಲಿ ಕೋವಿಡ್-19 ಕೇರ್ ಸೆಂಟರ್ ತೆರೆಯಲು ನಿರ್ಧಾರ
March 24, 2020ಮಡಿಕೇರಿ,ಮಾ.23-ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ಕೇರ್ ಸೆಂಟರ್‍ನ್ನು ತೆರೆಯಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಕೊರೊನಾ ವೈರಸ್ ಮುಂದಿನ ಹಂತದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಪ್ರತೀ ಹೋಬಳಿ ಕೇಂದ್ರಕ್ಕೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ಹಂತದಲ್ಲಿ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಡಿಸಿ ಸೂಚಿಸಿದರು. ಮನೆ…
ಲಾಕ್‍ಡೌನ್ ಇದ್ದರೂ ಸಂತೆ ಆರಂಭ
March 24, 2020ಸೋಮವಾರಪೇಟೆ,ಮಾ.23-ಕೊರೊನಾ ವೈರಸ್ ಹರಡುವುದನ್ನು ತಡೆಯಲು ಜಿಲ್ಲೆಯಲ್ಲಿ ಲಾಕ್‍ಡೌನ್ ಆದೇಶವಿದ್ದರೂ ಸಂತೆದಿನ ವಾದ ಸೋಮವಾರ ಪಟ್ಟಣದಲ್ಲಿ ಬೆಳಿಗ್ಗೆ ಯಿಂದಲೇ ಜನರು ಸೇರಲು ಪ್ರಾರಂಭಿ ಸಿದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಪರದಾಡುವಂತಾಯಿತು. ಮಾ.23 ಹಾಗೂ 30ರ ಸಂತೆಯನ್ನು ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದರೂ, ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ನಿಲ್ದಾಣದಲ್ಲಿ ಸಂತೆ ಪ್ರಾರಂಭ ವಾಗಿತ್ತು. ತರಕಾರಿ, ದಿನಸಿಗಳ ವ್ಯಾಪಾರ ಸಾಗಿತ್ತು. ಜನರು ಸಂದಣಿಯೂ ಜಾಸ್ತಿ ಯಾಗಿತ್ತು. ತರಕಾರಿ ಬೆಲೆಗಳು ಗಗನಕ್ಕೇ ರಿದವು. ಕಳೆದ ವಾರ 20 ರೂ.ಗಳಿದ್ದ ಟೊಮೆಟೋ 40….
ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮ: ಆತಂಕ ಬೇಡ
March 22, 2020ಮಡಿಕೇರಿ,ಮಾ.21-ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಂಡಿದ್ದು, ಯಾವುದೇ ಆತಂಕ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಭಯ ನೀಡಿದ್ದಾರೆ. ಮಡಿಕೇರಿ ಜಿಲ್ಲಾಡಳಿತ ಕೈಗೊಂಡಿರುವ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಶನಿವಾರ ಉನ್ನತಾಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು, ಸೋಂಕು ಹರಡದಂತೆ ತಡೆಯಲು ಸಿದ್ಧರಾಗಿರುವಂತೆ ಸೂಚಿಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊಡಗಿನಲ್ಲಿ ಕೊರೊನಾ ಸೋಂಕು ಪತ್ತೆಯಾದ ವ್ಯಕ್ತಿ ಸಂಪರ್ಕಿಸಿರಬಹುದಾದ ಇತರರನ್ನೂ ಸಂಪರ್ಕಿಸಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ….
ಮನೆಯಲ್ಲಿ ಸಂಪರ್ಕ ತಡೆಯಲ್ಲಿರುವವರ ಬಗ್ಗೆ ವಿಶೇಷ ಗಮನಹರಿಸಲು ಸೂಚನೆ
March 21, 2020ಮಡಿಕೇರಿ,ಮಾ.20-ವಿದೇಶದಿಂದ ಆಗಮಿಸಿ ಮನೆಗಳಲ್ಲಿಯೇ ಸಂಪರ್ಕ ತಡೆ ಯಲ್ಲಿರುವವರ (ಹೋಂ ಕ್ವೆರೆಂಟೈನ್) ಬಗ್ಗೆ ವಿಶೇಷ ಗಮನ ಹರಿ ಸುವಂತೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂ ಗಣದಲ್ಲಿ ವಿವಿಧ ಅಧಿ ಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವರು ಮನೆಗಳಲ್ಲಿಯೇ ಸಂಪರ್ಕ ತಡೆಯಲ್ಲಿದ್ದು, ಇವರ ಚಲನ ವಲನಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಗಮನ ಹರಿಸಬೇಕು ಎಂದರು. ತಹಶೀಲ್ದಾರರು, ತಾ.ಪಂ.ಇಒಗಳು ಮತ್ತು…
ಕೊರೊನಾ ನಡುವೆಯೇ ಕೊಡಗಿನಲ್ಲಿ ಹಕ್ಕಿಜ್ವರ ಭೀತಿ ಕೊಟ್ಟಮುಡಿಯಲ್ಲಿ ಕಾಗೆಗಳ ಅಸಹಜ ಸಾವು
March 20, 2020ನಾಪೋಕ್ಲು, ಮಾ.19- ಕೊಡಗಿನಲ್ಲಿ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಜನತೆ ಆತಂಕಕ್ಕೊಳಗಾಗಿದ್ದಾರೆ. ಮೈಸೂರಿನ ಕುಂಬಾರಕೊಪ್ಪಲು ವ್ಯಾಪ್ತಿಯಲ್ಲಿ ಹಕ್ಕಿಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಕೊಡಗಿನ ಹೊದ್ದೂರು ಗ್ರಾಮ ಪಂಚಾಯಿತಿ ಕೊಟ್ಟಮುಡಿಯಲ್ಲಿ ಅಂಗನವಾಡಿ ಕಟ್ಟಡದ ಹಿಂಭಾಗ ಕಾಗೆಗಳು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಪ್ರಕರಣ ನಡೆದಿದೆ. ಗುರುವಾರ ಬೆಳಿಗ್ಗೆ ಕೊಟ್ಟಮುಡಿಯಲ್ಲಿ 20ಕ್ಕೂ ಹೆಚ್ಚು ಕಾಗೆಗಳ ಮೃತದೇಹ ಪತ್ತೆಯಾಗಿದೆ. ಅಲ್ಲದೆ, ಇಲ್ಲಿನ ತೋಟಗಳಲ್ಲೂ ಕಾಗೆಗಳ ಮೃತದೇಹ ಪತ್ತೆಯಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿದರೆ, ಕಾಡು ಮತ್ತು ಕಾಫಿ ತೋಟಗಳಲ್ಲಿ ಇನ್ನಷ್ಟು…