20 ದಿನದಲ್ಲಿ ಆ್ಯಪ್ ಬಿಡುಗಡೆಗೆ ಕ್ರಮ: ಶಿಕ್ಷಣ ಸಚಿವ ಸುರೇಶ್‍ಕುಮಾರ್ ಮಂಡ್ಯ, ಡಿ.18(ನಾಗಯ್ಯ)- ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಮಸ್ಯೆ ನಿವಾರಣೆಗೆ ನೂತನವಾಗಿ ಆ್ಯಪ್ ಜಾರಿಗೆ ತರಲಾಗುತ್ತಿದ್ದು, ಇನ್ನು 20 ದಿನದಲ್ಲಿ ಈ ಆ್ಯಪ್ ಬಿಡುಗಡೆಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ತಾಲೂಕಿನ ಸಾತನೂರು ಗ್ರಾಮದ ಅಚೀ ವರ್ಸ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಬುಧವಾರ ರಾಜ್ಯಶಾಸ್ತ್ರ ಅಕಾಡೆಮಿ ಯಿಂದ ಆಯೋಜಿಸಲಾಗಿದ್ದ ಶೈಕ್ಷಣಿಕ…
ಡಿ.23ಕ್ಕೆ ರೈತರ ಬೃಹತ್ ಸಮಾವೇಶ, ಕಾಯಕ ಯೋಗಿ ಪ್ರಶಸ್ತಿ ಪ್ರದಾನ
December 19, 2019ಮಳವಳ್ಳಿ, ಡಿ.18- ತಾಲೂಕಿನ ಭಾರತೀನಗರದಲ್ಲಿ ಡಿ.23ರಂದು ರೈತರ ಬೃಹತ್ ಸಮಾವೇಶ ಹಾಗೂ ‘ಕಾಯಕ ಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳ ಲಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿ.23ರಂದು ರಾಷ್ಟ್ರದಾದ್ಯಂತ ಚೌದರಿ ಚರಣ್‍ಸಿಂಗ್ ಅವರ ಹುಟ್ಟುಹಬ್ಬವನ್ನು ವಿಶ್ವ ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಾಗಾಗಿ, ಭಾರತೀನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ…
ಉತ್ತಮ ಸಮಾಜಕ್ಕೆ ಪ್ರತಿಯೊಬ್ಬರಿಗೂ ಶಿಕ್ಷಣ ಅಗತ್ಯ
December 19, 2019ಭಾರತೀನಗರ, ಡಿ.18(ಅ.ಸತೀಶ್)- ವಿದ್ಯೆ ಇಲ್ಲದಿದ್ದರೆ ಬದುಕು ಅತಂತ್ರವಾಗು ತ್ತದೆ. ಹಾಗಾಗಿ, ಉತ್ತಮ ಸಮಾಜ ನಿರ್ಮಾ ಣಕ್ಕೆ ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು ಎಂದು ನಿವೃತ್ತ ಶಿಕ್ಷಕ ಮಡೇನಹಳ್ಳಿ ಎಂ.ಸಿ.ದಾಸಪ್ಪ ಸಲಹೆ ನೀಡಿದರು. ಇಲ್ಲಿಗೆ ಸಮೀಪದ ಮಡೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಪರಿಸರ ಜಾಗೃತಿ ವೇದಿಕೆಯಿಂದ ನಡೆದ ‘ಪರಿಸರ ಉಳಿಸಿ ಆಂದೋಲನ’ದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಗುಣ ಗಳನ್ನು ಮೈಗೂಡಿಸಿಕೊಂಡು ಶಿಕ್ಷಣ ಪಡೆ ಯುವ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರು ಕೈ ಜೋಡಿಸಬೇಕು. ಗುರು-ಹಿರಿಯರನ್ನು ಗೌರವದಿಂದ…
ಶ್ರೀರಂಗಪಟ್ಟಣದಲ್ಲಿ ಜ. 8ರಿಂದ ‘ಮಕ್ಕಳ ವಿಜ್ಞಾನ ಹಬ್ಬ’
December 19, 2019ಶ್ರೀರಂಗಪಟ್ಟಣ, ಡಿ.18(ವಿನಯ್ ಕಾರೇಕುರ)- ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 2020ರ ಜ. 8ರಿಂದ 11ರವರೆಗೆ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ ನೆರವೇರಲಿದ್ದು, ಕಾರ್ಯಕ್ರಮದ ರೂಪುರೇಷೆ ಕುರಿತು ಶಾಸಕ ರವೀಂದ್ರ ಶ್ರೀಕಂಠಯ್ಯ ವಿವಿಧ ಇಲಾಖೆಗಳ ಅಧಿಕಾರಿ ಗಳು ಹಾಗೂ ಮುಖಂಡರ ಸಭೆ ನಡೆಸಿದರು. ಪಟ್ಟಣದ ಜೂನಿಯರ್ ಕಾಲೇಜು ಆವರಣ ದಲ್ಲಿ ಸಭೆ ನಡೆಸಿದ ಶಾಸಕರು, ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಹಬ್ಬಕ್ಕೆ ವಿವಿಧ ರಾಜ್ಯಗಳ 400ಕ್ಕೂ ಅಧಿಕ ಹಾಗೂ ರಾಜ್ಯದ 350ಕ್ಕೂ ಅಧಿಕ ಯುವ…
ಹಿಂದೂಪರ ಸಂಘಟನೆಗಳಿಂದ ಬೃಹತ್ ಬೈಕ್ ಜಾಥಾ: ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ಆರೋಪ
December 19, 2019ಮದ್ದೂರು, ಡಿ.18- ಪಟ್ಟಣ ಹಾಗೂ ತಾಲೂಕಿನ ಹಲವು ಭಾಗ ಗಳಲ್ಲಿ ಹಿಂದೂಗಳನ್ನು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಆಸೆ, ಆಮಿಷಗಳನ್ನು ಒಡ್ಡುವ ಮೂಲಕ ಕ್ರಿಶ್ಚಿಯನ್ ಮತಕ್ಕೆ ಮತಾಂ ತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಬೃಹತ್ ಬೈಕ್ ಜಾಥಾ ನಡೆಯಿತು. ಶಿವಪುರ ಇತಿಹಾಸ ಪ್ರಸಿದ್ಧ ಧ್ವಜ ಸತ್ಯಾಗ್ರಹ ಸೌಧದಿಂದ ವಿವಿಧ ಹಿಂದೂ ಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೈಕ್ ಜಾಥದ ಮೂಲಕ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿ, ಪ್ರವಾಸಿ ಮಂದಿರದ ಬಳಿ…
ಉಪಚುನಾವಣೆ ಬಳಿಕವೂ ಆಪರೇಷನ್ ಕಮಲ: ಮಂಡ್ಯ ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ?
December 18, 2019ಮಂಡ್ಯ, ಡಿ.17- ಉಪಚುನಾವಣೆ ಬಳಿಕವೂ ಆಪರೇಷನ್ ಕಮಲ ಸದ್ದು ಮಾಡುತ್ತಿದ್ದು, ಜೆಡಿಎಸ್‍ನ ಮತ್ತೆರಡು ವಿಕೆಟ್ ಪತನ ವಾಗುವುದು ನಿಶ್ಚಿತವಾಗಿದೆ. ಈಗಾಗಲೇ ಆಪರೇಷನ್ ಕಮಲದ ಮೂಲಕ ಜೆಡಿಎಸ್‍ನ ಕೆ.ಸಿ.ನಾರಾಯಣಗೌಡರನ್ನು ಸೆಳೆದು ಕೆ.ಆರ್.ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ಜಿಲ್ಲೆಯಲ್ಲಿ ಖಾತೆ ತೆರೆ ದಿದೆ. ಅಂತೆಯೇ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಭದ್ರ ವಾಗಿ ನೆಲೆಯೂರುವ ಪ್ರಯತ್ನ ಮಾಡಿದ್ದು ಮತ್ತಷ್ಟು ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಜೆಡಿಎಸ್ ಭದ್ರಕೋಟೆಯನ್ನು ಉಪಚುನಾ ವಣೆಯಲ್ಲಿ ಛಿದ್ರ…
ಸಾಲಮನ್ನಾ ವಿಚಾರದಲ್ಲಿ ರೈತ ವಿರೋಧಿ ಧೋರಣೆ ಖಂಡಿಸಿ ರೈತರಿಂದ ಎಸ್‍ಬಿಐ ಬ್ಯಾಂಕ್‍ಗೆ ಮುತ್ತಿಗೆ
December 18, 2019ಶ್ರೀರಂಗಪಟ್ಟಣ, ಡಿ.17(ವಿನಯ್)- ಸಾಲಮನ್ನಾ ವಿಚಾರದಲ್ಲಿ ಬ್ಯಾಂಕ್ ಅಧಿಕಾರಿ ಗಳು ಅನುಸರಿಸುತ್ತಿರುವ ರೈತ ವಿರೋಧಿ ಧೋರಣೆ ಖಂಡಿಸಿ ರೈತರು ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆ ಪಟ್ಟಣದ ಎಸ್‍ಬಿಐ ಎದುರು ಸಮಾವೇಶಗೊಂಡ ರೈತಸಂಘ ಹಾಗೂ ದಲಿತ ಸಂಘಟನೆಯ ಕಾರ್ಯ ಕರ್ತರು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ರೈತರ ಸಾಲಮನ್ನಾ ವಿಚಾರದಲ್ಲಿ ಅನುಸರಿಸುತ್ತಿರುವ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಮಂಜೇಶ್‍ಗೌಡ ಮಾತನಾಡಿ,…
ಮಹಿಳಾ ಸ್ವಸಹಾಯ ಸಂಘಗಳು ಸಾವಲಂಬನೆ ಸಾಧಿಸಿ: ಶ್ರೀಗುರುಸಿದ್ದೇಶ್ವರ ಸ್ವಾಮೀಜಿ
December 18, 2019ಕೆ.ಆರ್.ಪೇಟೆ, ಡಿ.17- ಮಹಿಳಾ ಸ್ವಸಹಾಯ ಸಂಘಗಳು ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದು ಗೃಹ ಕೈಗಾರಿಕೆ ಸ್ಥಾಪಿಸುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಬೇಬಿಬೆಟ್ಟ ಶ್ರೀರಾಮೇಶ್ವರ ಮಠದ ಪೀಠಾಧ್ಯಕ್ಷ ಶ್ರೀಗುರುಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ತಾಲೂಕಿನ ಅಕ್ಕಿಹೆಬ್ಬಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಸದೆ ಜಯಶ್ರೀ ರಂಗಮಂಟಪದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀಸತ್ಯನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಪ್ರಸ್ತುತ ದೇವರು ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ…
ಚರಂಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ
December 18, 2019ನಾಗಮಂಗಲ, ಡಿ.17- ತಾಲೂಕಿನ ಕಾರಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಡಿ 4.05 ಕೋಟಿ ರೂ. ವೆಚ್ಚದ ಚರಂಡಿ, 5 ಕಿಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್‍ಗೌಡ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕÀರು, ಮೈಲಾರಪಟ್ಟಣ ರಸ್ತೆಯಿಂದ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಗೆ ಸೇರುವ ದೊಡ್ಡಜಟಕ ಗ್ರಾಮದ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಅತ್ಯವಶ್ಯಕವಾಗಿತ್ತು. ಅಲ್ಲದೇ ಸ್ಥಳೀಯರ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು ಗ್ರಾಮ ವ್ಯಾಪ್ತಿಯಲ್ಲಿ ಸುಸಜ್ಜಿತ ಒಳಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು….
ಡಿ.21ರಂದು ಉದ್ಯೋಗ ಮೇಳ: 2 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸುವ ಗುರಿ: ಡಿಸಿ
December 18, 2019ಮಂಡ್ಯ, ಡಿ.17- ಈ ಹಿಂದೆ ನಡೆದ 2 ಉದ್ಯೋಗ ಮೇಳ ಗಳು ಯಶಸ್ವಿಯಾಗಿ ನಡೆಯುವ ಮೂಲಕ 700 ಕುಟುಂಬ ಗಳಿಗೆ ದಾರಿ ದೀಪವಾಗಿದೆ. ಅದರಂತೆ ಈ ಬಾರಿ ಆಯೋ ಜಿಸಿರುವ ಉದ್ಯೋಗ ಮೇಳದಲ್ಲಿ ಕನಿಷ್ಠ 2 ಸಾವಿರ ಜನರಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಗರಸಭೆ ಮಂಡ್ಯ ಇವರ ವತಿಯಿಂದ ಡಿ.21 ರಂದು ನಗರದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಮಂಡ್ಯ ಇಲ್ಲಿ ಉದ್ಯೋಗ ಮೇಳ…