ಪಾಂಡವಪುರ: ಲಾರಿ ತಡೆದು ಜಖಂಗೊಳಿಸಿ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮೂವರು ವ್ಯಕ್ತಿಗಳಿಗೆ ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾ ಲಯವು 5 ವರ್ಷ ಜೈಲುವಾಸ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ. ಪಾಂಡವಪುರ ತಾಲೂಕಿನ ಬಿಂಡಹಳ್ಳಿ ಚಂದ್ರು, ಶಿವು ಮತ್ತು ಗುರು ಶಿಕ್ಷೆಗೊಳಗಾದವರು. 2015ರ ಆ.9ರಂದು ಬಿಂಡಹಳ್ಳಿಯ ಸಮಾಧಿ ಹಳ್ಳದ ಬಳಿ ನಾಗೇಶ್ ಎಂಬವರು ಲಾರಿ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ಬೈಕ್‍ಗೆ ಡಿಕ್ಕಿ ಯಾಗಿದೆ. ಇದರಿಂದ ಸಿಟ್ಟಿಗೆದ್ದ ಚಂದ್ರು, ಶಿವು, ಗುರು ಲಾರಿ…
ಅಂಬಿ ಸಮಾಧಿ ಮೇಲೆ ನಿಮ್ಮ ಮಗನ ರಾಜಕೀಯದ ಬುನಾದಿಯೇ?
April 17, 2019ಮುಖ್ಯಮಂತ್ರಿ ಹೆಚ್‍ಡಿಕೆಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ತರಾಟೆ ಮಂಡ್ಯ: ಅಂಬರೀಶ್ ಅವರ ಸಮಾಧಿ ಮೇಲೆ ನಿಮ್ಮ ಮಗನ ರಾಜಕೀಯ ಭವಿಷ್ಯದ ಬುನಾದಿ ನಿರ್ಮಿಸಲು ಹೊರಟಿದ್ದೀರಾ? ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಎದುರಾಳಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಮಂಗಳವಾರ ಸ್ವಾಭಿಮಾನ ಸಮಾವೇಶ ದಲ್ಲಿ ಮಾತನಾಡಿದ ಅವರು, ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದಿದ್ದು ನಾನು ಎಂದು ಹೇಳುತ್ತಲೇ ಇದ್ದಾರೆ. ಈ ವಿಚಾರವನ್ನು ಪದೇ ಪದೆ ಹೇಳುತ್ತಾ ನನ್ನಲ್ಲಿ ನೋವು…
ಕೈ ಬಂಡಾಯ ನಾಯಕರಿಗೆ ಡಿಸಿಎಂ ಪರಮೇಶ್ವರ್ ಖಡಕ್ ವಾರ್ನಿಂಗ್
April 15, 2019ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡದಿದ್ದರೆ ಶಿಸ್ತು ಕ್ರಮ ನರೇಂದ್ರಸ್ವಾಮಿ, ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇಗೌಡರ ಉಚ್ಚಾಟನೆಗೆ ಆಗ್ರಹ ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕೆಲಸ ಮಾಡದಿದ್ದರೆ ಕಾಂಗ್ರೆಸ್ ಬಂಡಾಯ ನಾಯಕರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗು ವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದರು. ನಗರದ ಎ.ಸಿ.ಮಾದೇಗೌಡ ಸಮುದಾಯ ಭವನದಲ್ಲಿಂದು ದೋಸ್ತಿ ಪಕ್ಷಗಳು ಜಂಟಿ ಯಾಗಿ ಆಯೋಜಿಸಿದ್ದ ದಲಿತ ರಾಜ ಕೀಯ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಕೋಮುವಾದಿ ಬಿಜೆಪಿಯನ್ನು ಅಧಿಕಾರ…
ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಕಲ್ಪಿಸಿಕೊಟ್ಟವರು ಡಾ. ಅಂಬೇಡ್ಕರ್
April 15, 2019ಸುಮಲತಾ ಅಂಬರೀಶ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಚರ್ಚ್‍ಗೆ ಭೇಟಿ ನೀಡಿ ಮತಯಾಚನೆ ಮಂಡ್ಯ: ಮತ ದಾನ ಹಕ್ಕು ಕಲ್ಪಿಸಿಕೊಟ್ಟವರೇ ಬಾಬಾ ಸಾಹೇಬ್ ಅಂಬೇಡ್ಕರ್‍ರವರು, ಅದರಲ್ಲೂ ಮಹಿಳೆಯರಿಗೆ ಮತದಾನದ ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಕಲ್ಪಿಸಿಕೊಟ್ಟವರು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತಿಳಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆ ಯಲ್ಲಿ ನಗರದ ಡಿಸಿ ಕಚೇರಿ ಎದುರಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರ ರೊಂದಿಗೆ ಮಾತನಾಡಿದರು. ಅಂಬೇಡ್ಕರ್ ಅವರು…
ಸುಮಲತಾ ಅಂಬರೀಶ್ ಪರ ದರ್ಶನ್ ಪ್ರಚಾರ
April 15, 2019ಅಂಧಾಭಿಮಾನ ಪಕ್ಕಕ್ಕಿಟ್ಟು ಸ್ವಾಭಿಮಾನ ಎತ್ತಿ ಹಿಡಿಯಿರಿ ಕೈ ಕೊಟ್ಟ ಮೈಕ್, ಗಂಟಲು, ಕೈ ಬೇನೆಯಿಂದ ಪ್ರಚಾರ ಮೊಟಕು ಮಂಡ್ಯ,: ಈ ಬಾರಿಯ ಚುನಾವಣೆಯಲ್ಲಿ ಅಂಧಾಭಿಮಾನವನ್ನು ಪಕ್ಕಕ್ಕಿಟ್ಟು ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು,ಆ ಮೂಲಕ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಕೈ ಹಿಡಿಯಬೇಕು ಎಂದು ಚಿತ್ರನಟ ದರ್ಶನ್ ಮನವಿ ಮಾಡಿದರು. ಕೊಪ್ಪದಲ್ಲಿ ಪಕ್ಷೇತರ ಅಭ್ಯರ್ಥಿ ಸುಮ ಲತಾ ಅಂಬರೀಶ್ ಪರವಾಗಿ ಪ್ರಚಾರದ ವೇಳೆ ಮಾತನಾಡಿದ ಅವರು, ಮಂಡ್ಯದತ್ತ ಇಡೀ ದೇಶ ನೋಡುತ್ತಿದೆ. ಮಂಡ್ಯದ ಜನ ಸ್ವಾಭಿಮಾನಕ್ಕೆ ಹೆಸರಾದವರು….
ನಿಖಿಲ್ ಪರ ಡಾ. ಯತೀಂದ್ರ, ಹರೀಶ್‍ಗೌಡ ಜಂಟಿ ಪ್ರಚಾರ
April 15, 2019ಮಂಡ್ಯ: ಕಾಂಗ್ರೆಸ್ ಕಾರ್ಯಕರ್ತರು ಗೊಂದಲ ಮಾಡಿ ಕೊಳ್ಳದೇ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯರವರ ಮಾತಿನಂತೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು. ಮಳವಳ್ಳಿ ತಾಲ್ಲೂಕಿನ ಚನ್ನಪಿಳ್ಳೇ ಕೊಪ್ಪಲು ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ನಡೆಸಿದ ಸಂದರ್ಭ ದಲ್ಲಿ ಮಾತನಾಡಿದ ಅವರು, ಕೋಮು ವಾದಿ ಪಕ್ಷ ಬಿಜೆಪಿಯನ್ನು ಸೋಲಿಸಬೇ ಕೆಂದು ಮೈತ್ರಿಯನ್ನು ಮಾಡಿಕೊಂಡಿದ್ದು, ಕರ್ನಾಟಕದಲ್ಲಿ ಮೈತ್ರಿ ಅಭ್ಯರ್ಥಿಗಳು 20ಕ್ಕಿಂತಲ್ಲೂ ಹೆಚ್ಚು ಸ್ಥಾನವನ್ನು…
ನಿಖಿಲ್ ಕುಮಾರಸ್ವಾಮಿ ಪರ ಮುಸ್ಲಿಂ ಮುಖಂಡರ ಸಭೆ
April 15, 2019ಮಂಡ್ಯ: ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಮಂಡ್ಯದ ಮುಸ್ಲಿಂ ಮುಖಂಡರು ಸಭೆ ನಡೆಸಿದರು. ಜಿಲ್ಲಾ ಮಸೀದಿ ಸಮಿತಿಗಳ ಸಭೆಯಲ್ಲಿ ಅಲ್ಪ ಸಂಖ್ಯಾತರ ಸಮುದಾಯದ ವತಿ ಯಿಂದ ನಗರದ ಕೆ.ವಿ.ಶಂಕರಗೌಡ ಶತಮಾ ನೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಾಫ್ರುಲ್ಲಾಖಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿಖಿಲ್ ಬೆಂಬಲಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ದೇಶದಲ್ಲಿ ಮೋದಿ 56 ಇಂಚಿನ ಎದೆಯನ್ನು ತೋರಿ ಸುತ್ತಾರೆ. ಆದರೆ ಅದರಲ್ಲಿ…
ಮಂಡ್ಯದಲ್ಲಿ ಮಾತಿನ ಸಮರ: ಸುಮಲತಾ ಗೆಲ್ಲಲು ಕುತಂತ್ರ ರೂಪಿಸಿದ್ದಾರೆ
April 12, 2019ಮಂಡ್ಯ: ಮತದಾನಕ್ಕೆ ಒಂದೆರಡು ದಿನ ಬಾಕಿ ಇರುವಾಗ ಸುಮಲತಾ ಅವರೇ ಪ್ರಚಾರ ಸಭೆಯಲ್ಲಿ ಕಲ್ಲೆಸೆದುಕೊಂಡು, ತಲೆಗೆ ಪೆಟ್ಟು ಮಾಡಿಕೊಂಡು ನಾಟಕ ಮಾಡಲು ಯೋಜನೆ ರೂಪಿಸಿದ್ದಾರೆ. ಆದರೆ ಪಕ್ಷೇತರ ಅಭ್ಯರ್ಥಿ ರೀತಿ ತಾವು ಯಾವುದೇ ಕುತಂತ್ರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ಮದ್ದೂರು ಬಳಿಯ ಗೆಜ್ಜಲಗೆರೆ ಬಳಿ ರೋಡ್ ಶೋ ವೇಳೆ ಮಾತನಾಡಿದ ಅವರು, ಚುನಾವಣೆ ಗೆಲ್ಲಲು ಸುಮಲತಾ ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್ ವಿರುದ್ಧ…
ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್
April 12, 2019ಮಂಡ್ಯ: ರೈತರ ಆತ್ಮಹತ್ಯೆ ತಡೆಯುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಏಕೆ? 50 ವರ್ಷಗಳಿಂದ ಅಧಿಕಾರದಲ್ಲಿರುವ ನಿಮಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಾಂತ್ವನ ಹೇಳಿದರೆ ನಿಮ್ಮ ಜವಾಬ್ದಾರಿ ಮುಗಿಯಿತೆ? ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಖಾರವಾಗಿ ಪ್ರಶ್ನಿಸಿದ್ದಾರೆ. ಇಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದರೆ…
ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ವರ್ಗಾವಣೆ
April 10, 2019ಮಂಡ್ಯ: ಬಿಸಿಲ ತಾಪಕ್ಕಿಂತಲೂ ತುಸು ಹೆಚ್ಚೇ ಕಾವೇರಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ಹೊಸ ತಿರುವು, ಅಚ್ಚರಿಯ ಬೆಳವಣಿಗೆ ವರದಿಯಾಗುತ್ತಲೇ ಇವೆ. `ಏಕಪಕ್ಷೀಯ’ ನಡೆಯ ಆರೋಪಕ್ಕೆ ಒಳಗಾಗಿದ್ದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಡಾ.ಪಿ.ಸಿ.ಜಾಫರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಿಂಧುತ್ವದ ವಿಚಾರವಾಗಿ ವಿವಾದ ಉಂಟಾಗಿದ್ದ ಹಿನ್ನೆಲೆಯಲ್ಲಿ ಹಲವು ದೂರುಗಳು ದಾಖಲಾಗಿದ್ದ ರಿಂದ ಮಂಜುಶ್ರೀ ಅವರನ್ನು ಚುನಾವಣಾ ಆಯೋ ಗದ ನಿರ್ದೇಶನದ ಮೇರೆಗೆ…