ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನವದೆಹಲಿಯಲ್ಲಿ ಸೋಮವಾರ ಭಾರತೀಯ ವಿಶ್ವವಿದ್ಯಾನಿಲಯಗಳ 2019ನೇ ಸಾಲಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಮೈಸೂರು ವಿಶ್ವವಿದ್ಯಾನಿಲಯ 54ನೇ ಸ್ಥಾನಕ್ಕೆ ಭಾಜನವಾಗಿದೆ. ಜೊತೆಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆ ಗುಣಮಟ್ಟ ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ನ್ಯಾಷನಲ್ ಇನ್‍ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‍ವರ್ಕ್ ಮೂಲಕ 2016ರಿಂದ ವಿವಿಧ ವಿಭಾಗಗಳಲ್ಲಿ ರ್ಯಾಂಕಿಂಗ್ ಪದ್ಧತಿಯನ್ನು ಜಾರಿಗೊಳಿಸಿದ್ದು, 2017ರಲ್ಲಿ ಮೈಸೂರು…
ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ
April 9, 2019ಮೈಸೂರು: ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಅನ್ನೇ ಬಿಜೆಪಿ ಬಂಡವಾಳ ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡು ತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಹೊಸ ಹುಂಡಿ, ಚಾಮುಂಡಿಬೆಟ್ಟ, ಆಲನಹಳ್ಳಿ, ಹಂಚ್ಯಾ, ಸಿದ್ದಲಿಂಗಪುರದ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‍ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ…
ಲೋಕಸಭಾ ಚುನಾವಣೆಯಲ್ಲಿ ರೈತರ ಹಿತಾಸಕ್ತಿ ಕಾಯುವವರಿಗೆ ಮತ ಚಲಾವಣೆಗೆ ಜಾಗೃತಿ ಅಭಿಯಾನ
April 9, 2019ಮೈಸೂರು: ಲೋಕಸಭಾ ಚುನಾವಣೆ ವೇಳೆ ರೈತರ ಆತ್ಮಹತ್ಯೆ ತಡೆ, ಬರ ಪೀಡಿತರ ಬವಣೆ ಸೇರಿದಂತೆ ರೈತರ ಸಮಸ್ಯೆಗಳ ಇತ್ಯರ್ಥಕ್ಕೆ ಇಚ್ಛಾಸಕ್ತಿ ಪ್ರದರ್ಶಿಸುವ ಪಕ್ಷಗಳ ಅಭ್ಯರ್ಥಿಗೆ ಮತ ನೀಡುವಂತೆ ರೈತರಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಂಡಿರುವುದಾಗಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ರೈತರ ಸಮಸ್ಯೆಗಳ ಪರಿಹಾರಕ್ಕೆ ಚರ್ಚಿಸದೆ ವ್ಯಕ್ತಿಗತ ಆರೋಪ- ಪ್ರತ್ಯಾರೋಪ ಹಾಗೂ ಭಾವನಾತ್ಮಕ ವಿಷಯಗಳನ್ನೇ ದೊಡ್ಡ…
ಮೊದಲ ಹಂತದ ಮತದಾನದಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ನಿರ್ಬಂಧಕ್ಕೆ ಆಗ್ರಹ
April 9, 2019ಮೈಸೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾ ವಣೆ ಮತದಾನ ನಡೆಯುವ ದಿನವಾದ ಏ.18ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂ ಘನೆ ಮಾಡಿದಂತಾಗಲಿದ್ದು, ಈ ಕುರಿತು ಚುನಾವಣಾ ಆಯೋ ಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹೆಚ್.ಎ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಅದೇ ದಿನ ರಾಜ್ಯದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ…
80 ತುಂಬಿದ ಸಾಹಿತಿ ಡಾ.ಸಿಪಿಕೆ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ
April 9, 2019ಮೈಸೂರು: ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ಅವರಿಗೆ 80 ತುಂಬಿದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಸೋಮವಾರ ಮೈಸೂ ರಿನ ಸರಸ್ವತಿಪುರಂನಲ್ಲಿರುವ ಅವರ ನಿವಾ ಸಕ್ಕೆ ತೆರಳಿ `ಕವಿ ಮನೆಯಲ್ಲಿ ಕವಿಗೆ ಸನ್ಮಾನ’ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕನ್ನಡ ಚಳವಳಿಗಾರರ ಕೇಂದ್ರ ಸಮಿತಿ, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್, ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಕಲಾಕೂಟ ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಿಪಿಕೆ ಅವರನ್ನು ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ….
ಇಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯಿಂದ ಸುಮಾರು 6 ಸಾವಿರ ಕಾರ್ಯಕರ್ತರು ಭಾಗಿ: ಮಲ್ಲಿಕಾರ್ಜುನಪ್ಪ
April 9, 2019ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ (ಏ.9) ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಿ ನಗರದ ಮಹಾ ರಾಜ ಕಾಲೇಜು ಮೈದಾನದಲ್ಲಿ ಆಯೋ ಜಿಸಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊ ಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸುಮಾರು 6 ಸಾವಿರ ಕಾರ್ಯಕರ್ತರು ತೆರಳುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ತಿಳಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.18ರಂದು ನಡೆಯುವ ಲೋಕ ಸಭಾ ಚುನಾವಣೆ ಪ್ರಚಾರಕ್ಕಾಗಿ ನರೇಂದ್ರ ಮೋದಿ ಅವರು ನಾಳೆ(ಏ.9) ಮೈಸೂರಿಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ…
ರಾಜಕೀಯ ಹಿನ್ನೆಲೆ ಇಲ್ಲದ ಸ್ವಯಂ ಸೇವಕರ ನೇಮಿಸಿ: ಡಿಸಿ
April 9, 2019ಹಾಸನ: ಲೋಕಸಭಾ ಚುನಾ ವಣೆ ಮತದಾನದ ದಿನದಂದು ತೀವ್ರ ದೈಹಿಕ ನ್ಯೂನ್ಯತೆಯಿಂದ ಬಳಲುತ್ತಿರು ವವರ ನೆರವಿಗೆ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಜಿಲ್ಲಾ ಚುನಾ ವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಯಲ್ಲಿ ಸೋಮವಾರ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲೆಯಲ್ಲಿ ವಿಕಲ ಚೇತನರಿಂದ ಶೇ. 100ರಷ್ಟು ಮತದಾನ ವಾಗಬೇಕಿದ್ದು, ಸ್ವಯಂ ಸೇವಕರನ್ನು ಆರಿಸಲಾಗಿದೆ. ಈ ಸ್ವಯಂ ಸೇವಕರು ಯಾವುದೇ ರೀತಿಯ ರಾಜಕೀಯದ ಹಿನ್ನೆಲೆ, ರಾಜಕೀಯ ವಿಷಯಕ್ಕೆ ಸಂಬಂಧ…
ಸಿದ್ದರಾಮಯ್ಯ ನಡೆಸಿದ ಅಸಮಾಧಾನಿತ ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆ ವಿಫಲ
April 8, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಪುತ್ರ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿದೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಇಂದು ಕರೆದಿದ್ದ ಮಂಡ್ಯ ಜಿಲ್ಲೆಯ ಅಸಮಾ ಧಾನಿತ ಮುಖಂಡರ ಸಂಧಾನ ಸಭೆ ವಿಫಲವಾಗಿದೆ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅಂಬರೀಶ್ ಪತ್ನಿ ಸುಮಲತಾ ಸ್ಪರ್ಧಿಸುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಕಾಂಗ್ರೆಸ್ ಮುಖಂ ಡರು ಹಾಗೂ…
ನಾಳೆ ಮೈಸೂರಿಗೆ ಪ್ರಧಾನಿ ಮೋದಿ
April 8, 2019ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಮೈಸೂರಿಗೆ ಆಗಮಿಸುವರು. ವಿಶೇಷ ವಿಮಾನದಲ್ಲಿ ಚಿತ್ರ ದುರ್ಗ ಜಿಲ್ಲೆಯಿಂದ ಮಂಗಳವಾರ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ಅಲ್ಲಿಂದ ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲಿರುವ ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರ ಗಳ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪ್ ಸಿಂಹ ಹಾಗೂ ವಿ. ಶ್ರೀನಿವಾಸಪ್ರಸಾದ್ ಅವರ ಪರ ಚುನಾವಣಾ ಪ್ರಚಾರದ ಸಭೆಯಲ್ಲಿ ಭಾಗವಹಿಸಿ ಸಂಜೆ 4.50 ಗಂಟೆಗೆ ಭಾಷಣ ಮಾಡುವರು….
ಏ.13ರಂದು ಕೆ.ಆರ್.ನಗರದಲ್ಲಿ ರಾಹುಲ್ ಪ್ರಚಾರ
April 8, 2019ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತ ಯಾಚಿಸಲು ಏ.13ರಂದು ಸಂಜೆ 5ಕ್ಕೆ ಕೆ.ಆರ್.ನಗರದ ರೇಡಿಯೋ ಮೈದಾನದಲ್ಲಿ ಬೃಹತ್ ಸಮಾವೇಶ ದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆಂದು ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೆ.ಆರ್. ನಗರದ ರೇಡಿಯೋ ಮೈದಾನದಲ್ಲಿ ಏ.13ರಂದು ಸಂಜೆ 5ಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಜಂಟಿ ಕಾರ್ಯಕರ್ತರ…










