ಮೈಸೂರು, ಫೆ.8(ಎಂಟಿವೈ)- ಮೈಸೂರಿನ ಕಲಾಮಂದಿರದ ಕಿರುರಂಗಮಂದಿರದಲ್ಲಿ ಮಂಗಳವಾರ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಪುಷ್ಪಾರ್ಚನೆ ಮಾಡುವ ಮೂಲಕ ಸವಿತಾ ಮಹರ್ಷಿಗಳ ತತ್ವ ಸಿದ್ದಾಂತವÀನ್ನು ಮೈಗೂಡಿಸಿ ಕೊಂಡು ಜೀವನ ನಡೆಸುವಂತೆ ಸಲಹೆ ನೀಡಿದರು. ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಸವಿತಾ ಮಹರ್ಷಿಗಳ ಜಯಂತಿ ಕಾರ್ಯಕ್ರಮ…
ಮಹಾರಾಜ ಸಲೂನ್ ಮೈಸೂರು ರೈಲ್ವೆ ಮ್ಯೂಸಿಯಂಗೆ ಹಿಂದಿರುಗಿಸಿ
February 9, 2022ಮೈಸೂರು, ಫೆ.8(ಆರ್‍ಕೆಬಿ)- ನವದೆಹಲಿಯ ರಾಷ್ಟ್ರೀಯ ರೈಲು ವಸ್ತು ಸಂಗ್ರಹಾಲಯದಲ್ಲಿರುವ ಮೈಸೂರು ಮಹಾರಾಜರ ಸಲೂನ್ ಅನ್ನು ಮೈಸೂರು ರೈಲ್ವೆ ಮ್ಯೂಸಿಯಂಗೆ ನೀಡುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‍ಸಿಂಹ ರೈಲ್ವೆ ಸಚಿವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಮೈಸೂರು ದೊರೆಗಳು ಸ್ಥಾಪಿಸಿದ ರೈಲ್ವೆ ವ್ಯವಸ್ಥೆ ಐತಿಹಾಸಿಕ ಹಿನ್ನೆಲೆಯ ದೃಷ್ಟಿಯಿಂದ ಮೈಸೂರಿನ ಈ ಮಹಾರಾಜ ಸಲೂನ್ ಅನ್ನು ಮೈಸೂರಿಗೆ ವಾಪಸ್ ನೀಡುವುದರಿಂದ ಮೈಸೂರಿನ ರೈಲ್ವೆ ವಸ್ತು ಸಂಗ್ರಹಾಲಯದ ಹಿರಿಮೆ…
ಜಮೀನು ಹದ್ದುಬಸ್ತು, ಭೂ ಸರ್ವೇ ದರ ಹೆಚ್ಚಳಕ್ಕೆ ಎಂಎಲ್‍ಸಿ ದಿನೇಶ್ ಗೂಳಿಗೌಡ ಆಕ್ಷೇಪ
February 9, 2022ಮೈಸೂರು,ಫೆ.8(ಪಿಎಂ)-ಜಮೀನು ಹದ್ದುಬಸ್ತು ಮತ್ತು ಭೂ ಸರ್ವೇ ಸಂಬಂಧ ಸುಮಾರು ಶೇ.150ರಷ್ಟು ದರ ಹೆಚ್ಚಳ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಮಂಡ್ಯ ಸ್ಥಳೀಯ ಸಂಸ್ಥೆ ಗಳ ಕ್ಷೇತ್ರದ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಹೆಚ್ಚಳದ ಆದೇಶ ಹಿಂಪಡೆದು, ಈ ಹಿಂದಿನ ದರವನ್ನೇ ಮುಂದುವರೆಸಬೇಕೆಂದು ಮುಖ್ಯಮಂತ್ರಿ ಗಳು ಮತ್ತು ಕಂದಾಯ ಸಚಿವರಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಮಂಗಳವಾರ ಪ್ರತ್ಯೇಕ ಪತ್ರ ಮುಖೇನ ದಿನೇಶ್ ಗೂಳಿಗೌಡ ಈ ಮನವಿ…
ಮೈಸೂರಲ್ಲಿ ಸಂವಿಧಾನ ರಕ್ಷಣಾ ಸಮಿತಿಯಿಂದ ಭಾರೀ ಆಕ್ರೋಶ
February 8, 2022ಮೈಸೂರು, ಫೆ.7(ಎಂಟಿವೈ)- ಗಣರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸಿ, ಅವರಿಗೆ ಅಗೌರವ ತೋರಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ನೀಡಿದ್ದ ಮೈಸೂರು ಬಂದ್ ಭಾಗಶಃ ಯಶಸ್ವಿಯಾಗಿದೆ. ಮೈಸೂರು ನಗರದ ಹೃದಯ ಭಾಗದಲ್ಲಿ ಅಂಗಡಿ-ಮುಂಗಟ್ಟು ಗಳು ಮುಚ್ಚಿದ್ದು, ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು. ಗ್ರಾಮಾಂ ತರ ಮತ್ತು ನಗರ ಬಸ್ ನಿಲ್ದಾಣಗಳ ಮುಂದೆ ಪ್ರತಿಭಟನಾಕಾರರು ಜಮಾಯಿಸಿದ್ದರಿಂದ ಸಂಜೆವರೆಗೂ ಬಸ್ ಸಂಚಾರದಲ್ಲಿ ವ್ಯತ್ಯಯವುಂಟಾ ಯಿತು. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಎರಡು…
ಇತಿಹಾಸದ ಪುಟ ಸೇರಿದ ಎನ್‍ಟಿಎಂ ಶಾಲೆ ಕಟ್ಟಡ
February 8, 2022ಮೈಸೂರು, ಫೆ.7- ನಗರದ ನಾರಾಯಣಶಾಸ್ತ್ರಿ ರಸ್ತೆಯ ಮಹಾರಾಣಿ ಮಾದರಿ (ಎನ್‍ಟಿಎಂ) ಶಾಲೆಯಿದ್ದ ಕಟ್ಟಡವನ್ನು ಪೊಲೀಸರ ಭಾರೀ ಭದ್ರತೆ ನಡುವೆ ಸೋಮ ವಾರ ರಾತ್ರಿ ಸಂಪೂರ್ಣ ನೆಲಸಮಗೊಳಿಸಲಾಗಿದೆ. ಪೊಲೀಸರು ನಾಕಾಬಂದಿ ವಿಧಿಸಿದ ಬಳಿಕ, ರಾತ್ರಿ 11.30ರ ನಂತರ 4 ಹಿಟಾಚಿ, 3 ಜೆಸಿಬಿಗಳ ಮೂಲಕ ಕಟ್ಟಡ ನೆಲಸಮ ಕಾರ್ಯಾಚರಣೆ ಆರಂಭಿಸಿ, ಕೆಲವೇ ಗಂಟೆಗಳಲ್ಲಿ ಸುಮಾರು ಶತಮಾನ ದಾಟಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಯಿತು. ಇದರೊಂದಿಗೆ ಮೈಸೂರು ಒಡೆಯರ ಕನಸಿನ ಕೂಸು, ರಾಜ್ಯದ ಮೊದಲ ಹೆಣ್ಣು ಮಕ್ಕಳ ಶಾಲಾ ಕಟ್ಟಡ ಇತಿಹಾಸದ ಪುಟ…
ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಗೆ ನೆರವಿನ ನೆಪದಲ್ಲಿ ವಂಚನೆ
February 8, 2022ಹುಣಸೂರು, ಫೆ. 7(ಕೆಕೆ)- ತಂದೆಯಿಂ ದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಗಿರಿಜನ ಅಪ್ರಾಪ್ತ ಬಾಲಕಿಗೆ ಸರ್ಕಾರದಿಂದ ಬಂದಿದ್ದ 5 ಲಕ್ಷ ರೂ. ಪರಿಹಾರ ಹಣವನ್ನು ಲಪಟಾ ಯಿಸಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂ ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಮಾಜಿ ಗ್ರಾಪಂ ಸದಸ್ಯ ದಿವಂಗತ ನಸರುಲ್ಲಾ ಷರೀಫ್ ಪುತ್ರ ಚಾಂದ್ ಪಾಷಾ, ಗಿರಿಜನ ಬಾಲಕಿಯ ಪರಿಹಾರದ ಹಣ ಲಪಟಾಯಿಸಿ ಬಂಧನಕ್ಕೊಳ ಗಾದವನಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಬಲ್ಲೇನಹಳ್ಳಿ ಗ್ರಾಮದ ಗಿರಿಜನ ಅಪ್ರಾಪ್ತ…
ಇಂದು ಮೈಸೂರು ಬಂದ್‍ಗೆ ಕರೆ
February 7, 2022ಮೈಸೂರು,ಫೆ.6(ಎಂಟಿವೈ)-ಗಣರಾಜ್ಯೋ ತ್ಸವ ದಿನದ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆರವುಗೊಳಿ ಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುವ ನಿಟ್ಟಿ ನಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ದಲಿತ ಪರ ಸಂಘಟನೆಗಳು ಕರೆ ನೀಡಿರುವ `ಮೈಸೂರು ಬಂದ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುವ ಸಾಧ್ಯತೆ ಇದ್ದು, ಕೆಲವು ಸಂಘಟನೆ ಗಳು ಕೇವಲ ನೈತಿಕ ಬೆಂಬಲವನ್ನಷ್ಟೇ ಘೋಷಿಸಿವೆ. ಹೋಟೆಲ್ ಮಾಲೀಕರ ಸಂಘ, ಸಂಘ-ಸಂಸ್ಥೆ ಗಳ ಒಕ್ಕೂಟ, ವ್ಯಾಪಾರಿಗಳ ಸಂಘ ಸೇರಿದಂತೆ ಕೆಲವು ಸಂಘಟನೆಗಳು…
ಮೈಸೂರು ವಿವಿ ನೌಕರರ ವೇದಿಕೆ ಕಾರ್ಯಕರ್ತರಿಂದ ಮೌನ ಪ್ರತಿಭಟನೆ, ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ
February 7, 2022ಮೈಸೂರು,ಫೆ.6(ಆರ್‍ಕೆಬಿ)-ಗಣ ರಾಜ್ಯೋತ್ಸವ ದಿನದಂದು ರಾಯಚೂರಿ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ತೋರಿದ ಅಲ್ಲಿನ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿ ಕಾರ್ಜುನಗೌಡ ಅವರ ಧೋರಣೆಯನ್ನು ಖಂಡಿಸಿ, ವಿಶ್ವಮಾನವ ವಿವಿ ನೌಕರರ ವೇದಿಕೆ ಆಶ್ರಯದಲ್ಲಿ ಭಾನುವಾರ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆ ಎದು ರಿನಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ಡಾ.ಅಂಬೇಡ್ಕರ್ ಫೋಟೋ ತೆಗೆದರೆ ಮಾತ್ರ ನಾನು ಧ್ವಜಾರೋಹಣ ನಡೆಸುವು ದಾಗಿ ಹೇಳಿ ಫೋಟೋ ತೆಗೆಸಿದರೆಂದು ಹೇಳಲಾದ ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಆ…
ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಜಾತಿಯ ವಿಷ ಬೀಜ ಬಿತ್ತುತ್ತಿವೆ
February 7, 2022ಮೈಸೂರು, ಫೆ.6-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ರಮಾಬಾಯಿನಗರದ ದೀನದಯಾಳ್ ಉಪಾಧ್ಯಾಯ ಬಡಾವಣೆಯ 4ನೇ ಬ್ಲಾಕ್‍ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಹಾಗೂ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರಿಗೌಡರು, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಜನ ಸಾಮಾನ್ಯರಿಗೆ ಉಪಯೋಗವಾಗುವಂತೆ ಯಾವುದೇ ಜನಪರ ಕಾರ್ಯಕ್ರಮಗಳನ್ನು ನೀಡದೆ ಜಾತಿ ಜಾತಿಗಳನ್ನು ಎತ್ತಿ ಕಟ್ಟುತ್ತಾ, ಹಿಂದೂ-ಮುಸ್ಲಿಂ ಎಂಬ…
ಮೈಸೂರಿನ ರಾಮಾನುಜ ರಸ್ತೆಯಲ್ಲಿ ರಾಮಾನುಜಾಚಾರ್ಯರ ಪ್ರತಿಮೆ ಸ್ಥಾಪನೆಗೆ ಬ್ರಾಹ್ಮಣ ಸಂಘ ಆಗ್ರಹ
February 7, 2022ಮೈಸೂರು,ಫೆ.6(ಎಸ್‍ಪಿಎನ್)-ಮೈಸೂರಿನ ರಾಮಾನುಜ ರಸ್ತೆಯಲ್ಲಿ ಶ್ರೀ ರಾಮಾ ನುಜಾಚಾರ್ಯರ ಪ್ರತಿಮೆ ಸ್ಥಾಪಿಸಬೇಕು ಎಂದು ಮೈಸೂರು ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 10ನೇ ಶತಮಾನದಲ್ಲಿ ಸಮಾನತೆ ಸಾರಿದ ಶ್ರೀ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಅವರು ಹೈದರಾಬಾದಿನಲ್ಲಿ ಲೋಕಾರ್ಪಣೆಗೊಳಿಸಿದ ಕಾರ್ಯಕ್ರಮವನ್ನು ಮೈಸೂರಿನ ಶ್ರೀ ವೈಷ್ಣವ ಸಭಾ ಭವನದಲ್ಲಿ ಅಳವಡಿಸಿದ್ದ ಬೃಹತ್ ಎಲ್‍ಇಡಿ ಪರದೆ ಮೇಲೆ ಸಾರ್ವಜನಿಕರ ಜೊತೆ ವೀಕ್ಷಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಶನಿವಾರ ಪ್ರಧಾನಿ…










