ಮೈಸೂರು: ಬಡವರು, ಮಧ್ಯಮ ವರ್ಗದವರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲು ಮಹಾರಾಜರು ಸ್ಥಾಪಿಸಿದ ಮೈಸೂರಿನ ದೊಡ್ಡಾಸ್ಪತ್ರೆಯ ಲ್ಲೀಗ ಉಚಿತ ಚಿಕಿತ್ಸೆ ಮರೀಚಿಕೆಯಾಗಿದೆ. ಶತಮಾನದಷ್ಟು ಹಳೆಯದಾದ ಮೈಸೂರಿನ ಹೃದಯ ಭಾಗದ ಕೃಷ್ಣ ರಾಜೇಂದ್ರ ಆಸ್ಪತ್ರೆಯ ಎಲ್ಲಾ ಬಗೆಯ ವೈದ್ಯಕೀಯ ಸೇವೆಗಳಿಗೂ ಶುಲ್ಕ ವಿಧಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗಳು ಲಿಖಿತ ಆದೇಶ ಹೊರಡಿಸಿರುವುದ ರಿಂದ ಮಾರ್ಚ್ 1ರಿಂದ ಕೆ.ಆರ್ ಆಸ್ಪತ್ರೆಯಲ್ಲಿ ಕಾಸು ಕೊಟ್ಟರೆ ಮಾತ್ರ ಚಿಕಿತ್ಸೆ. ಎಸ್ಸಿ, ಎಸ್ಟಿ, ಅನಾಥರು ಹಾಗೂ ಜೈಲು ವಾರ್ಡ್‍ಗಳ ರೋಗಿಗಳನ್ನು…
ಪರಿಸರ ಸ್ನೇಹಿ ವಾತಾವರಣವುಳ್ಳ ಶಾಲೆಗಳಿಗೆ ‘ಪರಿಸರ ಮಿತ್ರ ಶಾಲೆ’ ಪುರಸ್ಕಾರ ಪ್ರದಾನ
March 17, 2019ಮೈಸೂರು: ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿ ವಾತಾ ವರಣ ಹೊಂದಿರುವ ಶಾಲೆಗಳಿಗೆ ಕರ್ನಾ ಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜನಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನೀಡುವ ಜಿಲ್ಲಾ ಮಟ್ಟದ `ಪರಿಸರ ಮಿತ್ರ ಶಾಲೆ’ ಪುರಸ್ಕಾರ ಹುಣಸೂರು ತಾಲೂಕಿನ ದೇವಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಲಭಿಸಿದೆ. ಮೈಸೂರಿನ ಪುರಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಾಂಡುರಂಗ, ದೇವಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆರ್.ರಾಜೇಶ್,…
ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ
March 17, 2019ಮೈಸೂರು: ವಿದ್ಯಾರ್ಥಿಗಳು ಪರೀಕ್ಷೆ ಎಂಬುದನ್ನು ಭೂತಾಕಾರವಾಗಿ ತಲೆಯಲ್ಲಿ ತುಂಬಿಕೊಂಡು ಅಧೀರತೆಗೆ ಒಳಗಾಗದೆ ಭಯ, ಆತಂಕ, ಗೊಂದಲಗಳ ನ್ನೆಲ್ಲಾ ಮನಸ್ಸಿನಿಂದ ಹೊರಹಾಕಿ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕೆಂದು ಸಾಹಿತಿ ಬನ್ನೂರು ಕೆ. ರಾಜು ಹೇಳಿದರು. ನಗರದ ಕನಕಗಿರಿಯ ಶಾರದಾ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಪ್ರಸ್ತುತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯುತ್ತಿರುವ ಶಾಲಾ ವಿದ್ಯಾರ್ಥಿಗಳಿಗಾಗಿ ಶುಭ ಹಾರೈಕೆ ಹಾಗೂ ಶಾರದಾ ಪೂಜೆ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಸಾಮಾನ್ಯವಾಗಿ ಪರೀಕ್ಷೆ ಎಂದರೆ ಅದರಲ್ಲೂ ವಿಶೇಷವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎಂದರೆ ಚಳಿಜ್ವರಬಂದಂತೆ ವಿದ್ಯಾರ್ಥಿ…
ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ಗೆ ಸ್ಪರ್ಧಿ-ಪ್ರತಿಸ್ಪರ್ಧಿ ತಲೆನೋವು
March 16, 2019ಬೆಂಗಳೂರು: ಕಾಂಗ್ರೆಸ್‍ಗೆ ನಾಲ್ಕು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಕಾಡುತ್ತಿದ್ದರೆ, ಮಿತ್ರ ಪಕ್ಷ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಕುಟುಂಬ ವ್ಯಾಮೋಹಕ್ಕೆ ಒಳಗಾಗಿರುವ ಆರೋಪ ಎದುರಿಸುತ್ತಿದ್ದು, ಮೊದಲ ಬಾರಿಗೆ 28 ಕ್ಷೇತ್ರಗಳಲ್ಲೂ ನೇರ ಪೈಪೋಟಿ ಬಿಜೆಪಿಗೆ ತಲೆನೋವು ತಂದಿದೆ. ಕರ್ನಾಟಕದಲ್ಲಿ 20 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿ ಸಲು ನಿರ್ಧರಿಸಿರುವ ಕಾಂಗ್ರೆಸ್ ಕೊಪ್ಪಳ, ಬೆಂಗಳೂರು ದಕ್ಷಿಣ, ಬೆಳಗಾವಿ ಹಾಗೂ ಹಾವೇರಿ ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಡುತ್ತಿದೆ. ಇದೇ 16ಕ್ಕೆ ಪಟ್ಟಿ ಬಿಡುಗಡೆ ಮಾಡಲು ಪಕ್ಷ ನಿರ್ಧರಿಸಿದ್ದರೂ, ರಾಜ್ಯ ಘಟಕ ಈ…
ಮಾರ್ಚ್ 18ಕ್ಕೆ ನನ್ನ ನಿರ್ಧಾರ: ಸುಮಲತಾ
March 16, 2019ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಮುಗಿದ ಅಧ್ಯಾಯ. ನನ್ನ ನಿರ್ಧಾರ ಮಾರ್ಚ್ 18 ರಂದು ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ಕೇಂದ್ರ ವಿದೇಶಾಂಗ ಮಾಜಿ ಸಚಿವ ಬಿಜೆಪಿ ನಾಯಕ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯಬೇಕೆಂಬ ಇಚ್ಛೆ ಹೊಂದಿದ್ದೇನೆ. ನನ್ನ ಪತಿ ಅಂಬರೀಶ್‍ರ ಅಭಿಮಾನಿಗಳ ಒತ್ತಾಸೆ ಮೇರೆಗೆ ರಾಜಕೀಯ ಪ್ರವೇಶ ಮಾಡಿದ್ದೇನೆ. ಮೊದಲು ಕಾಂಗ್ರೆಸ್ ಯಾವುದೇ ರೀತಿಯ ಬೆಂಬಲ ನೀಡಲಿಲ್ಲ. ಇದೀಗ ಬಹಳ…
ಬೆಂಗಳೂರು ಉತ್ತರದಿಂದ ದೇವೇಗೌಡರ ಸ್ಪರ್ಧೆ ಖಚಿತ
March 16, 2019ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟು ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ದೇವೇಗೌಡರ ಸ್ಪರ್ಧೆ ಖಚಿತವಾಗುತ್ತಿದ್ದಂತೆಯೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಜೊತೆ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ರೇಸ್ ಕೋರ್ಸ್ ಸರ್ಕಾರಿ ನಿವಾಸದಲ್ಲಿಂದು ಸಭೆ ನಡೆಸಿದರು. ಇಂದಿನ ಸಭೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಜೆಡಿಎಸ್ ಶಾಸಕ ಗೋಪಾ ಲಯ್ಯ, ಯಶವಂತಪುರ…
ತುಮಕೂರು ಕ್ಷೇತ್ರ ಪಡೆಯಲು ಡಿಸಿಎಂ ಪರಮೇಶ್ವರ್ ಹರಸಾಹಸ
March 16, 2019ಬೆಂಗಳೂರು: ತುಮಕೂರಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೇ ಸ್ಪರ್ಧಿಸಿದರೆ ತಾವೂ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಸ್ಪರ್ಧಿಸದಿದ್ದರೆ ಕ್ಷೇತ್ರವನ್ನು ಕಾಂಗ್ರೆಸ್‍ಗೆ ವಾಪಸ್ ನೀಡುವಂತೆ ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, 10 ಹಾಲಿ ಸಂಸದರಿಗೆ ಟಿಕೆಟ್ ನೀಡುವಂತೆ ಪರಿಶೀಲನಾ ಸಮಿತಿ ರಾಹುಲ್ ಗಾಂಧಿ ಅವರಿಗೆ ಶಿಫಾರಸ್ಸು ಮಾಡಿತ್ತು. ಆದರೆ ದೇವೇಗೌಡ…
ಚಾಮರಾಜನಗರದಿಂದ ಸ್ಪರ್ಧೆಗೆ ಶ್ರೀನಿವಾಸಪ್ರಸಾದ್ ನಿರ್ಧಾರ
March 16, 2019ಬೆಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್, ತಮ್ಮ ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್‍ಜೀ ಅವರನ್ನು ಭೇಟಿ ಮಾಡಿದ ಶ್ರೀನಿವಾಸಪ್ರಸಾದ್, ಸುಮಾರು 15 ನಿಮಿಷ ಚರ್ಚೆ ಬಳಿಕ ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಗೆ ನೀಡಿದರು. ನಂತರ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ…
ಚಾಮರಾಜನಗರದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ
March 16, 2019ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಬೃಹತ್ ‘ಪರಿವರ್ತನಾ ಯಾತ್ರೆ’ಯಲ್ಲಿ ಭಾಗವಹಿಸಿದ್ದ ಪಕ್ಷದ ನಾಯಕರು, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಟೀಕಿಸುವ ಮೂಲಕ ಲೋಕಸಭಾ ಚುನಾವಣೆಯ ರÀಣಕಹಳೆ ಮೊಳಗಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಇಂದು ಕಾಂಗ್ರೆಸ್ ಪರಿ ವರ್ತನಾ ಯಾತ್ರೆ ಹಮ್ಮಿಕೊಂಡಿತ್ತು. ಈ ಯಾತ್ರೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು, ಕಾರ್ಯ ಕರ್ತರು, ಹಿತೈಷಿಗಳು ಪಾಲ್ಗೊಳ್ಳುವ ಮೂಲಕ ಯಾತ್ರೆಯ ಅಭೂತಪೂರ್ವ ಯಶಸ್ಸಿಗೆ…
ದೇಶದ ಭವಿಷ್ಯಕ್ಕೆ ವಿಜ್ಞಾನ, ತಂತ್ರಜ್ಞಾನದ ಮೇಲೆ ಹೂಡಿಕೆ ಅಗತ್ಯ
March 16, 2019ಮೈಸೂರು: ಭವಿ ಷ್ಯದ ಭವ್ಯ ಭಾರತದ ಬುನಾದಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಹೆಚ್ಚು ಹೂಡಿಕೆ ಮಾಡುವುದು ಅಗತ್ಯ ಎಂದು ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್‍ಡ್ ಸೈಂಟಿಫಿಕ್ ರೀಸರ್ಚ್ ಗೌರವಾಧ್ಯಕ್ಷರಾದ ವಿಶ್ವ ಖ್ಯಾತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆ ಲಿನಲ್ಲಿ ಇಂದು ಆರಂಭವಾದ `ಸಮರ್ಥ ಕೈಗಾರಿಕೆಗಾಗಿ ಶಿಕ್ಷಣದಲ್ಲಿ ಅನ್ವೇಷಣೆ’ ಕುರಿತಾದ ಎರಡು ದಿನಗಳ ಭಾರತ ಉನ್ನತ ಶಿಕ್ಷಣ ಶೃಂಗಸಭೆ-2019 ಅನ್ನು ಉದ್ದೇಶಿಸಿ ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ…










