ನವದೆಹಲಿ: ಭದ್ರತೆ ವಿಚಾರದಲ್ಲಿ ರಾಜಿಯೇ ಇಲ್ಲ. ಭಯೋತ್ಪಾದಕರು ಎಲ್ಲೇ ಅಡಗಿದ್ದರೂ ಅವರನ್ನು ಸಂಹಾರ ಮಾಡಲು ಸಜ್ಜಾಗಿದ್ದೇವೆ ಎಂದು ಘೋಷಿಸಿದ ಭಾರತದ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರು, ಪಾಕ್‍ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕೆ ಸಾಕ್ಷ್ಯವನ್ನು ಪ್ರದರ್ಶಿಸಿದರು. ಭೂ ಸೇನೆಯ ಮೇಜರ್ ಜನರಲ್ ಸುರೇಂದ್ರ ಸಿಂಗ್, ವಾಯುಸೇನೆಯ ಏರ್ ವೈಸ್ ಮಾರ್ಷಲ್ ರವಿ ಕಪೂರ್ ಮತ್ತು ನೌಕಾಪಡೆಯ ಅಡ್ಮಿರಲ್ ಡಿ.ಎಸ್.ಗುಜ್ರಾಲ್ ಅವರುಗಳು ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನದ ಕ್ಷಿಪಣಿಯ ತುಣುಕನ್ನು ಪ್ರದರ್ಶಿಸುವ ಮೂಲಕ…
ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ
March 1, 2019ಬೆಂಗಳೂರು: ಶುಕ್ರವಾರದಿಂದ ಆರಂಭ ವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಪಿಯು ಮಂಡಳಿ ಎಲ್ಲಾ ಸಿದ್ಧತೆ, ಭದ್ರತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರದ ಸುತ್ತ ಇರುವ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವ ಮೂಲಕ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧ ಹೇರಲಾಗಿದೆ. ಹಿಂದಿನ ಸಾಲಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಕಂಡುಬಂದ ಹಿನ್ನೆಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿರುವ ವ್ಯಕ್ತಿಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ಗಳನ್ನು ನಿಷೇಧಿಸಲಾಗಿದೆ. ಗೃಹ ಇಲಾಖೆ…
ಕಾಚಿಗುಡ-ಬೆಂಗಳೂರು ಸಿಟಿ ಎಕ್ಸ್‍ಪ್ರೆಸ್ ಮೈಸೂರಿಗೆ ವಿಸ್ತರಣೆ
March 1, 2019ಮೈಸೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರಯ ತ್ನದ ಫಲವಾಗಿ ಮತ್ತೊಂದು ಅತೀ ವೇಗದ ರೈಲು ಮೈಸೂರಿಗೆ ದಕ್ಕಿದಂತಾಗಿದೆ. ಇದು ವರೆಗೂ ಕಾಚಿಗುಡ-ಬೆಂಗ ಳೂರು ಸಿಟಿ ರೈಲ್ವೆ ನಿಲ್ದಾಣ ದವರೆಗೂ ಸಂಚರಿಸುತ್ತಿದ್ದ ಡೈಲಿ ಎಕ್ಸ್‍ಪ್ರೆಸ್ ರೈಲು ಇನ್ನು ಮುಂದೆ ಮೈಸೂರಿನಿಂದ ಸಂಚರಿಸಲಿದೆ. ಪ್ರವಾಸಿ ತಾಣ ಹಾಗೂ ಸಾಂಸ್ಕೃತಿಕ ರಾಜಧಾನಿಯೂ ಆದ ಮೈಸೂರಿಗೆ ಪ್ರವಾಸಿಗರು, ಉದ್ಯೋಗಿಗಳು, ವಿದ್ಯಾರ್ಥಿಗಳು, ವಾಣಿಜ್ಯ ವಹಿವಾಟು ನಡೆಸುವವರು ಅಧಿಕ ಸಂಖ್ಯೆಯಲ್ಲಿ ಪ್ರತಿನಿತ್ಯ ಮೈಸೂರು ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಾರೆ. ಇವರಿಗೆ ಅನುಕೂಲ ಕಲ್ಪಿಸಲು ಸಮರ್ಪಕ…
ಬಂಡೀಪುರ `ಕಿಡಿ’ಗೇಡಿ ಬಂಧನ
March 1, 2019ಮೈಸೂರು: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಂಕಿ ಇಟ್ಟಿದ್ದ ಪ್ರಮುಖ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಳ್ಳೀಪುರ ನಿವಾಸಿ ನಾಗಲಿಂಗೇಗೌಡ ಅವರ ಪುತ್ರ ಅರುಣ್ ಕುಮಾರ್‍ನನ್ನು ಬಂಧಿಸಿ, ನ್ಯಾಯಾ ಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಫೆ.22ರಂದು ರಾತ್ರಿ ಬೆಂಕಿ ಇಟ್ಟು ತಲೆಮರೆಸಿಕೊಂಡಿದ್ದ ಈತ, ಸಮೀಪದ ಗ್ರಾಮವೊಂದರ ಸಂಬಂಧಿಕರ ಮನೆಯಲ್ಲಿದ್ದ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಬೆಳಿಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. ಈತ ಗೋಪಾಲಸ್ವಾಮಿ ಬೆಟ್ಟದ…
ಹೆಚ್.ಡಿ.ಕುಮಾರಸ್ವಾಮಿ ಕೇವಲ ಮೂರ್ನಾಲ್ಕು ಜಿಲ್ಲೆಗೆ ಮುಖ್ಯಮಂತ್ರಿ
March 1, 2019ಮೈಸೂರು: ರಾಜ್ಯ ದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು ಇಲ್ಲದಂ ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಕೇವಲ ಮೂರ್ನಾಲ್ಕು ಜಿಲ್ಲೆಗೆ ಮಾತ್ರ ಮುಖ್ಯ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಶಾಸಕ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಮೈಸೂರಿನ ಜೆ.ಕೆ.ಮೈದಾನದ ಮೈಸೂರು ಮೆಡಿಕಲ್ ಕಾಲೇಜು ಅಮೃತೋತ್ಸವ ಭವನದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂವಾದ `ಮೇರಾ ಬೂತ್ ಸಬ್ ಸೇ ಮಜಬೂತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರದಿಂದ ಅಭಿವೃದ್ಧಿ ಸಾಧÀ್ಯವಿಲ್ಲ. ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಜನತೆಗೆ ತಿಳಿಯದಾಗಿದೆ….
ಬಂಡೀಪುರಕ್ಕೆ ಭಾರೀ ಹಾನಿಯೇನೂ ಆಗಿಲ್ಲ
March 1, 2019ಮೈಸೂರು: ಕಿಡಿ ಗೇಡಿಗಳು ಹಚ್ಚಿದ ಕಿಡಿಗೆ ಹೊತ್ತಿ ಉರಿದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸ್ಥಿತಿ ಸುಧಾರಿಸುತ್ತಿದೆ. ಆದರೆ ವನ್ಯಜೀವಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಬಂಡೀಪುರ ಹುಲಿ ಯೋಜನೆ ನೂತನ ನಿರ್ದೇಶಕ ಟಿ.ಬಾಲಚಂದ್ರ ಸ್ಪಷ್ಟಪಡಿಸಿದ್ದಾರೆ. ಬೆಂಕಿ ದುರ್ಘಟನೆಯಿಂದಾಗಿ ಈ ಹಿಂದೆ ಪ್ರಭಾರ ನಿರ್ದೇಶಕರಾಗಿದ್ದ ಅಂಬಾಡಿ ಮಾದವ್ ಅವರ ಸ್ಥಾನಕ್ಕೆ ಬಂಡೀಪುರ ಹುಲಿ ಯೋಜನೆಗೆ ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ಸರ್ಕಾರ ಟಿ.ಬಾಲಚಂದ್ರ ಅವರನ್ನು ನಿಯೋಜಿಸಿದೆ. ಅಧಿಕಾರ ಸ್ವೀಕರಿಸಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ ಹೊಸ ನಿರ್ದೇಶಕರು, ಬೇಸಿಗೆ ಇನ್ನೂ 70 ದಿನ…
ಓಲಾ, ರ್ಯಾಪಿಡೋ ಬಾಡಿಗೆ ಬೈಕ್‍ಗಳಿಗೆ ಆರ್‍ಟಿಓ ಕಡಿವಾಣ
March 1, 2019ಮೈಸೂರು: ಸಾರಿಗೆ ಇಲಾಖೆ ಅಧಿಕಾರಿಗಳು ಓಲಾ ಮತ್ತು ರ್ಯಾಪಿಡೋ ಹೆಸರಿನಲ್ಲಿ ಬಾಡಿಗೆಗೆ ಓಡಿಸಲಾಗುತ್ತಿದ್ದ ಬಿಳಿ ಬಣ್ಣದ ಸಂಖ್ಯಾ ಫಲಕ ಹೊಂದಿದ್ದ ಬೈಕ್‍ಗಳ ವಿರುದ್ಧ ಕಾರ್ಯಾ ಚರಣೆ ನಡೆಸಿ, ವಶಪಡಿಸಿಕೊಂಡಿದ್ದಾರೆ. ಅವರಿಗೆ 2 ಸಾವಿರ ರೂ.ವರೆಗೂ ದಂಡ ವಿಧಿಸಿದ್ದಾರೆ. ರಾಜ್ಯ ಸಾರಿಗೆ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಇಂತಹ ಬೈಕ್ ಟ್ಯಾಕ್ಸಿಗಳ ವಿರುದ್ಧ ಮೈಸೂರು ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಉಪ ಸಾರಿಗೆ ಆಯುಕ್ತ (ಪಶ್ಚಿಮ)ರು ಪತ್ರಿಕಾ ಪ್ರಕಟಣೆ ನೀಡಿ, ಓಲಾ ಮತ್ತು ರ್ಯಾಪಿಡೋ ಕಂಪನಿಗಳು ನಡೆಸು…
ಅಭಿನಂದನ್ ವೀಡಿಯೋ ಅಳಿಸಿ ಹಾಕುವಂತೆ ಯೂ-ಟ್ಯೂಬ್‍ಗೆ ಕೇಂದ್ರ ಸೂಚನೆ
March 1, 2019ಮೈಸೂರು: ಭಾರತೀಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತ ಮಾನ್ ಅವರಿಗೆ ಸಂಬಂಧಪಟ್ಟಂತೆ ಪಾಕಿಸ್ತಾನದಿಂದ ವೈರಲ್ ಮಾಡ ಲ್ಪಟ್ಟ 11 ವೀಡಿಯೋ ತುಣುಕುಗಳನ್ನು ಅಳಿಸಿಹಾಕುವಂತೆ ಯೂ-ಟ್ಯೂಬ್‍ಗೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆ ಸೂಚಿಸಿದೆ. ವಶಕ್ಕೆ ಪಡೆದ ಸೇನಾ ಯೋಧನ ಮೇಲೆ ಹಲ್ಲೆ ನಡೆಸುವುದು ಹಾಗೂ ಅವರನ್ನು ವಿಚಾರಣೆ ನಡೆಸುವುದು ಜಿನೀವಾ ಒಪ್ಪಂದಕ್ಕೆ ವಿರುದ್ಧ ವಾಗಿರುವ ಕಾರಣ ವೀಡಿಯೋ ತುಣುಕುಗಳನ್ನು ಅಳಿಸಿಹಾಕಬೇ ಕೆಂದು ಸೂಚಿಸಲಾಗಿದೆ. ಬುಧವಾರ ಭಾರತದ ಮಿಗ್-21 ಜೆಟ್ ವಿಮಾನ ಪತನಗೊಂಡ ನಂತರ ಅದರ ಪೈಲಟ್…
ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ, ಕಟ್ಟಡಗಳ ಉದ್ಘಾಟನೆ
March 1, 2019ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೆಚ್.ಡಿ.ಕೋಟೆ ತಾಲೂಕು ಕೇಂದ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ ಹಾಗೂ ಹೆಚ್ಚುವರಿ ಕಟ್ಟಡಗಳÀ ಉದ್ಘಾಟನಾ ಸಮಾರಂಭ ಮಾ.2ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸುವರು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟಡಗಳ ಉದ್ಘಾಟನೆ ಮಾಡುವರು, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಘನ ಉಪಸ್ಥಿತಿಯಲ್ಲಿ ಶಾಸಕ ಸಿ.ಅನಿಲ್‍ಕುಮಾರ್ ಅಧ್ಯಕ್ಷತೆ…
ಅಲ್ಪ ಅವಧಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ದಾಖಲೆ ಅಭಿವೃದ್ಧಿ
March 1, 2019ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಕೇವಲ 9 ತಿಂಗಳಾ ಗಿದೆ. ಈ ಅಲ್ಪ ಅವಧಿಯಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾರೀ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತು ವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಾಳೆ ಸಂಜೆ ಮೈಸೂರು ಮಹಾ ರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸ ಲಾಗಿರುವ ನಾಗರಿಕ ಸನ್ಮಾನ ಸಮಾರಂಭಕ್ಕೆ ನಿರ್ಮಾಣ ಮಾಡಲಾಗುತ್ತಿರುವ ವೇದಿಕೆ ಹಾಗೂ ಆಸನ ವ್ಯವಸ್ಥೆಗಳ ಪರಿಶೀಲನೆ ನಡೆ ಸಿದ…










