ಮೈಸೂರು: ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಸರ್ಕಾರಿ ಪ್ರೌಢಶಾಲೆಗಳ 52 ಮಕ್ಕಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಐದು ದಿನಗಳ `ಕರ್ನಾಟಕ ದರ್ಶನ’ ಪ್ರವಾಸಕ್ಕೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಮಂಗಳವಾರ ಹಸಿರು ನಿಶಾನೆ ತೋರಿಸಿ, ಚಾಲನೆ ನೀಡಿದರು. ಮೇಲುಕೋಟೆ, ಯಡಿಯೂರು, ಚಿತ್ರದುರ್ಗ, ಟಿ.ಬಿ.ಡ್ಯಾಂ, ಕೂಡಲ ಸಂಗಮ, ಆಲಮಟ್ಟಿ, ವಿಜಯಪುರ, ಬಾದಾಮಿ, ಪಟ್ಟದಕಲ್ಲು, ಹಂಪೆ ಇನ್ನಿತರ ಪ್ರವಾಸಿ ಸ್ಥಳಗಳಿಗೆ ಈ ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಪ್ರವಾಸ ಸಂದರ್ಭದಲ್ಲಿ…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮೈಸೂರಲ್ಲಿ ಮುಕ್ತ ಮ್ಯಾರಥಾನ್ ಓಟದ ಸ್ಪರ್ಧೆ
February 6, 2019ಮೈಸೂರು: 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗ ವಾಗಿ ಮೈಸೂರಲ್ಲಿ ಮುಕ್ತ ಮ್ಯಾರಥಾನ್ ಓಟದ ಸ್ಪರ್ಧೆ ಇಂದು ನಡೆಯಿತು. ಮೈಸೂರು ನಗರ ಪೊಲೀಸ್ ವತಿಯಿಂದ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಅಪರಾಧ ಮತ್ತು ಸಂಚಾರ ಡಿಸಿಪಿ ಡಾ.ವಿಕ್ರಂ ಪಿ.ಅಮಟೆ ಅವರು ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್‍ಗೆ ಇಂದು ಮುಂಜಾನೆ 6.40ಕ್ಕೆ ಚಾಲನೆ ನೀಡಿದರು. ಸಂಚಾರ ವಿಭಾಗದ ಎಸಿಪಿ ಜಿ.ಎನ್. ಮೋಹನ್ ನೇತೃತ್ವದಲ್ಲಿ ನಡೆದ ಮ್ಯಾರ ಥಾನ್‍ನಲ್ಲಿ ಭಾಗವಹಿಸಿದ್ದ 150ಕ್ಕೂ…
ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!
February 5, 2019ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಾಯಕರಿಗೆ ಛಾನ್ಸೇ ಇಲ್ಲ: ಸಿಎಂ ಕುಮಾರಸ್ವಾಮಿ ನಿಶ್ಚಿಂತೆ ಮಾತು ಬೆಂಗಳೂರು: ಭಾರತೀಯ ಜನತಾ ಪಕ್ಷ ಏನೇ ಪ್ರಯತ್ನ ಮಾಡಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಈಗಾಗಲೇ ಅವರ `ಫ್ಯೂಸ್’ ಕಿತ್ತು ಹಾಕಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪತ್ರಿಕಾ ಸಂಪಾದಕರ ಜೊತೆ ಅನೌಪಚಾರಿಕವಾಗಿ ಮಾತನಾಡುವ ಸಂದರ್ಭದಲ್ಲಿ ಪ್ರತಿ ಬಾರಿ ಸರ್ಕಾರ ಉರುಳಿಸುವ ಪ್ರಯತ್ನದಲ್ಲಿದ್ದಾಗ ಬಿಜೆಪಿ ಮುಖಂಡರು ಮತ್ತು ಶಾಸಕರೇ ನನ್ನ ನೆರವಿಗೆ ನಿಂತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ…
ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
February 5, 2019ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹತಾಶರಾಗಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ.ಇದರಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪಾತ್ರವೇನೂ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಂದ ನಂತರ ಯಡಿಯೂ ರಪ್ಪ ಅವರು ಕೇವಲ ಮೂರು ದಿನಗಳ ಮುಖ್ಯಮಂತ್ರಿಯಾಗಿದ್ದಾರೆ. ಸಹಜವಾಗಿಯೇ ಇದು ಅವರಿಗೆ ನೋವು ತಂದಿದೆ ಎಂದರು. ಹೀಗಾಗಿ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿ ಸುತ್ತಿದ್ದಾರೆ. ಆದರೆ ಅದು ವಿಫಲ ಯತ್ನವಾಗಲಿದೆ.ಹಾಗೆಯೇ…
ಮಾರ್ಚ್ 5ರೊಳಗೆ ಮೈತ್ರಿ ಸರ್ಕಾರ ಪತನ: ಜ್ಯೋತಿಷಿ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ
February 5, 2019ಹುಬ್ಬಳ್ಳಿ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ವಿದೆ. ಮೈತ್ರಿ ಸರ್ಕಾರದ ಮಿತ್ರರು ಶತ್ರುಗಳಾಗಿ ಸರ್ಕಾರಕ್ಕೆ ಗಂಡಾಂತರ ತರುವ ಸಾಧ್ಯತೆ ಇದೆ. 2019ರ ಮಾರ್ಚ್ 5ರ ಒಳಗಾಗಿ ಸರ್ಕಾರ ಪತನವಾಗಲಿದೆ ಎಂದು ಅಖಿಲ ಕರ್ನಾಟಕ ಜೋತಿರ್ವಿಜ್ಞಾನ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜಾತಕದಲ್ಲಿ ರಾಶಾಧಿಪತಿ ಬುಧ ಅಷ್ಟಮದಲ್ಲಿ ಬಂದಿದ್ದು, ಸಪ್ತಮದಲ್ಲಿ ಶನಿ ಇರುವುದರಿಂದ ಮಿತ್ರರೇ ಶತ್ರುಗಳಾಗಿ ಮೈತ್ರಿ ಸರ್ಕಾರಕ್ಕೆ ಕಂಟಕ ತರಲಿದ್ದಾರೆ ಎಂದರು. ಸಿದ್ದರಾಮಯ್ಯ ನವರ…
ಬಡಾವಣೆಗಳ ನಿವಾಸಿಗಳಿಂದ ಫೆ.11ಕ್ಕೆ ‘ಬೆಂಗಳೂರು ಚಲೋ’
February 5, 2019ಮೈಸೂರು: ಐಟಿಬಿ ಮತ್ತು ಮುಡಾದಿಂದ ಅಭಿವೃದ್ಧಿಪಡಿಸಿರುವ ಕುರುಬಾರಹಳ್ಳಿ ಸರ್ವೆ ನಂಬರ್ 4 ಮತ್ತು ಆಲನಹಳ್ಳಿ ಸರ್ವೆ ನಂಬರ್ 41ರ ಬಡಾವಣೆಗಳನ್ನು ‘ಬಿ’ ಖರಾಬು ವರ್ಗದಿಂದ ಕೈಬಿಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ನಿವಾಸಿಗಳು ಫೆಬ್ರವರಿ 11ರಂದು ‘ಬೆಂಗಳೂರು ಚಲೋ’ ಚಳವಳಿ ನಡೆಸಲು ನಿರ್ಧರಿಸಿದ್ದಾರೆ. ಅಂದು ಬಸ್ಸುಗಳಲ್ಲಿ ಬೆಂಗಳೂರಿಗೆ ತೆರಳಲಿರುವ ಸುಮಾರು ಒಂದು ಸಾವಿರ ಮಂದಿ ನಿವಾಸಿಗಳು ಅಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ತ.ಮ.ವಿಜಯಭಾಸ್ಕರ್, ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಕಂದಾಯ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ…
ಸಿಬಿಐ V/s ಕೋಲ್ಕತಾ ಪೊಲೀಸ್: ಕೇಂದ್ರದ ವಿರುದ್ಧ ಸಿಎಂ ಮಮತಾ ಧರಣಿ, ವಿಪಕ್ಷಗಳಿಂದ ದೀದಿಗೆ ಬೆಂಬಲ
February 5, 2019ನವದೆಹಲಿ: ಸಿಬಿಐ ವಿರುದ್ಧ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅತ್ತ ಕೋಲ್ಕತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ಆರಂಭಿಸುತ್ತಿದ್ದಂತೆಯೇ ಇತ್ತ ಟ್ವಿಟರ್‍ನಲ್ಲಿ ಪ್ರತಿಪಕ್ಷ ನಾಯಕರು ಸರಣಿ ಟ್ವೀಟ್‍ಗಳನ್ನು ಮಾಡುವ ಮೂಲಕ ದೀದಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಅಲ್ಲದೆ ಹಲವು ರಾಜಕೀಯ ನಾಯಕರು ತಾವೂ ಕೂಡ ಕೋಲ್ಕತಾಗೆ ತೆರಳಿ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,…
‘ಸುಪ್ರೀಂ’ ಎಚ್ಚರಿಕೆ
February 5, 2019ನವದೆಹಲಿ: ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್‍ಕುಮಾರ್ ಸಾಕ್ಷ್ಯಾಧಾರಗಳ ನಾಶಕ್ಕೆ ಯತ್ನಿ ಸಿದರೆ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಈ ಬಗ್ಗೆ ಇಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಾಕ್ಷ್ಯಾಧಾರಗಳ ನಾಶ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಪ್ರಸ್ತುತ ಪ್ರಕರಣ ವಿಚಾರಣೆ ಸುಪ್ರೀಂ ಕೋರ್ಟ್‍ನಲ್ಲಿದ್ದು,…
ಮಂಡ್ಯದಿಂದ ಪುತ್ರ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಸಿಎಂ
February 5, 2019ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವುದನ್ನು ಸಿಎಂ ಕುಮಾರಸ್ವಾಮಿ ಇಂದಿಲ್ಲಿ ಪರೋಕ್ಷವಾಗಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಅಭ್ಯರ್ಥಿಯೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂದಿದ್ದಾರೆ. ಸಂಪಾದಕರೊಟ್ಟಿಗೆ ಅನೌಪಚಾರಿಕ ವಾಗಿ ಮಾತನಾಡುವ ಸಂದರ್ಭದಲ್ಲಿ ಅವರಿಗೆ ಕೇಳಿ ಬಂದ ಪ್ರಶ್ನೆಗೆ ತಮ್ಮ ಪುತ್ರನ ಬಗ್ಗೆ ವ್ಯಾಖ್ಯಾನ ಮಾಡುವ ಮೂಲಕ ಆತನೇ ಅಭ್ಯರ್ಥಿ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರ ದಿಂದ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಡಾಕ್ಟರ್…
ಶ್ರೀ ಶ್ರೀಕಂಠೇಶ್ವರಸ್ವಾಮಿಯವರ ಪಂಚ ಮಹಾ ರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪೂರ್ವ ಸಿದ್ದತಾ ಸಭೆ
February 5, 2019ನಂಜನಗೂಡು: ಮಾರ್ಚ 19ರಂದು ನಡೆಯಲಿರುವ ಪಂಚ ಮಹಾ ರಥೋತ್ಸವ (ದೊಡ್ಡ ಜಾತ್ರೆ) ಹಿನ್ನಲೆಯಲ್ಲಿ ಸೋಮವಾರ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದಲ್ಲಿ ಉನ್ನತ ಶಿಕ್ಷಣಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ,ದೇವೇಗೌಡರವರ ಅಧ್ಯಕ್ಷತೆ ಸಭೆ ಪೂರ್ವ ಸಿದ್ದತಾ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವರು ಸುಗುಮವಾಗಿ ರಥೋತ್ಸವ ನಡೆಯಲು ಕೈಗೊಳ್ಳಬೇಕಾದ ಅಗತ್ಯ ಕ್ರಮ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮುಕ್ತವಾಗಿ ಚೆರ್ಚಿಸಿದರು. ನಂತರ ಸಚಿವ ಜಿ,ಟಿ ದೇವೆಗೌಡರು ಮಾತನಾಡಿ ಪಂಚಮಹಾರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲರು ಶ್ರಮಿಸಬೇಕು ರಾಜ್ಯದ ವಿವಿಧ…










