ಭೇರ್ಯ: ಬುಲೆಟ್ ಬೈಕ್‍ಗೆ ಸ್ವಿಪ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಇಂಜನಿಯರ್ ಓರ್ವ ಮೃತಪಟ್ಟಿರುವ ಘಟನೆ ಸಮೀಪದ ಬೊಮ್ಮೆನಹಳ್ಳಿ -ಚಿಕ್ಕವಡ್ಡರಗುಡಿ ಗ್ರಾಮಗಳ ಬಳಿಯ ಹಾಸನ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಕೆ.ಆರ್.ನಗರ ತಾಲೂಕಿನ ಬಟಿಗನಹಳ್ಳಿ ಗ್ರಾಮದ ಬಿ.ವಿ.ಶ್ರೀಧರ್ ಮೃತರು, ಇವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಕೆ.ಆರ್.ನಗರದ ಖಾಸಗಿ ಸಂಸ್ಥೆಯಲ್ಲಿ ಇಂಜಿನಿಯರ್ ಆಗಿದ್ದು, ಎಂದಿನಂತೆ ತನ್ನ ಕೆಲಸ ಮುಗಿಸಿಕೊಂಡು ಊರಿಗೆ ಬುಲೆಟ್‍ನಲ್ಲಿ ವಾಪಸ್ಸಾಗುತ್ತಿದ್ದಾಗ ಎದುರಿನಿಂದ ಬಂದ ಸ್ವಿಪ್ಟ್ ಕಾರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬುಲೇಟ್ ಸ್ವಲ್ಪ ದೂರದಲ್ಲಿ ಬಿದ್ದಿದ್ದು, ಬಿ.ವಿ.ಶ್ರೀಧರ್…
ಸಾಲ ಯೋಜನೆ ಜಾರಿ
January 26, 2019ಬೆಂಗಳೂರು: ಬಡತನ ರೇಖೆಗಿಂತ ಕೆಳಗಿನವರಲ್ಲದೆ ಎಲ್ಲಾ ಬಗೆಯ ಬೀದಿ ಬದಿ ವ್ಯಾಪಾರಿ ಗಳಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಕಲ್ಪಿಸುವ ಯೋಜನೆ ಜಾರಿಗೆ ಬಂದಿದೆ. ರೈತ ಮುಖಂಡರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್, ಇದುವರೆಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ಸಾಲ ಎಂಬುದೂ ಸೇರಿದಂತೆ ಕೆಲವು ಷರತ್ತುಗಳಲ್ಲಿ ಸಡಿಲಿಕೆ ಮಾಡಲಾಗಿದೆ ಎಂದರು. ನೋಂದಾಯಿತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳು ಆಧಾರ್ ಕಾರ್ಡ್, ತಾವು ವ್ಯಾಪಾರ ನಡೆಸುತ್ತಿರುವ ಸ್ಥಳದ ಫೋಟೋ…
ಆಪರೇಷನ್ ಕಮಲ ಮುಂದುವರೆದಿದೆ
January 26, 2019ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವನ್ನು ಉರುಳಿಸುವ ಸಲುವಾಗಿ ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಬಿಜೆಪಿ ಮುಂದು ವರೆಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರ ಜೊತೆ ಬಜೆಟ್ ಪೂರ್ವಭಾವಿ ಸಭೆ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೂಡ ಕಾಂಗ್ರೆಸ್‍ನ ಶಾಸಕರೊಬ್ಬರಿಗೆ ಗಿಫ್ಟ್ ಎಲ್ಲಿಗೆ ಕಳುಹಿಸಬೇಕು ಎಂದು ಕರೆ ಮಾಡಿದ್ದರು. ಇದು ಅಂತಿಂತಹ ಗಿಫ್ಟ್ ಅಲ್ಲ, ಕಳೆದ ಬಾರಿಗಿಂತ ದೊಡ್ಡ ಮೊತ್ತದ್ದಾ ಗಿದೆ. ಅದನ್ನು ನೀವು ಕೇಳಿದರೆ…
ರೆಸಾರ್ಟ್‍ನಲ್ಲಿ ಕೈ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕಾರಣ
January 26, 2019ಚಾಮರಾಜನಗರ: ರೆಸಾರ್ಟ್‍ನಲ್ಲಿ ಕಾಂಗ್ರೆಸ್ ಶಾಸಕರು ಬಡಿದಾಡಿ ಕೊಂಡಿರುವುದಕ್ಕೆ ಬಿಜೆಪಿ ಕಾರಣವೆಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ದೂರಿದರು. ಜಿಲ್ಲೆಯಲ್ಲಿ ಶುಕ್ರವಾರ ಸಚಿವ ಸಂಪುಟ ಉಪಸಮಿತಿಯು ಕೈಗೊಂಡಿರುವ ಬರ ಅಧ್ಯಯನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದು ಯಾರು? ಏಕೆ ಕರೆದುಕೊಂಡು ಹೋದರು? ಯಾವ ವಿಷಯಕ್ಕೆ ಹೊಡೆದಾಟ ನಡೆದಿದೆ? ಎಂದು ಪ್ರಶ್ನಿಸಿದ ಅವರು, ಇದೆಲ್ಲ ನಡೆಯಲು ಬಿಜೆಪಿಯೇ ಕಾರಣ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ ಹಾಗೂ ರಾಜ್ಯದ ನಾಯಕರು ಆಪರೇಷನ್…
ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್‍ಗೆ `ಭಾರತ ರತ್ನ’
January 26, 2019ನವದೆಹಲಿ: ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ `ಭಾರತ ರತ್ನ’ ನೀಡಿ ಗೌರವಿಸಿದೆ. 70ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ಸೇರಿದಂತೆ ಮೂವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿದ್ದು, ಕೃಷಿ, ಪತ್ರಿಕೋದ್ಯಮ ಮತ್ತು ಗ್ರಾಮ ವಿಕಾಸದಲ್ಲಿ ತೊಡಗಿಸಿಕೊಂಡಿದ್ದ ನಾನಾಜಿ ದೇಶಮುಖ್ ಹಾಗೂ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗಿದೆ….
112 ಸಾಧಕರಿಗೆ ಪದ್ಮ ಪುರಸ್ಕಾರ
January 26, 2019ನವದೆಹಲಿ: ದೇಶದ ಅತ್ಯುನ್ನತ್ತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪುರಸ್ಕಾರ ಪಟ್ಟಿ ಶುಕ್ರವಾರ ರಾತ್ರಿ ಘೋಷಣೆಯಾಗಿದ್ದು, ಕರ್ನಾಟಕದ ಐವರು ಸೇರಿದಂತೆ ಒಟ್ಟು 112 ಸಾಧಕರು ಪ್ರತಿಷ್ಠಿತ ನಾಗರಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ನಾಲ್ವರಿಗೆ ಪದ್ಮವಿಭೂಷಣ, 14 ಸಾಧಕರಿಗೆ ಪದ್ಮಭೂಷಣ, 94 ಗಣ್ಯರಿಗೆ ಪದ್ಮಶ್ರೀ ಪುರಸ್ಕಾರ ಘೋಷಣೆಯಾಗಿದೆ. ಕರ್ನಾಟಕದ ಸಾಧಕರು: ಪರಿಸರ ಪ್ರೀತಿಯ ಸಾಲು ಮರದ ತಿಮ್ಮಕ್ಕ, ಖ್ಯಾತ ಸರೋದ್ ವಾದಕರೂ ಆದ ಮೈಸೂರಿನ ರಾಜೀವ್ ತಾರಾನಾಥ್, ತಿ.ನರಸೀಪುರ ತಾಲೂಕಿನ ಮೂಗೂರು ಮೂಲದ ಚಿತ್ರ ನಿರ್ದೇಶಕ, ನಟ,…
ನಿರ್ದಿಷ್ಟ ಗುರಿಯೊಂದಿಗೆ ಮತ ಹಕ್ಕು ಚಲಾಯಿಸೋಣ
January 26, 2019ನವದೆಹಲಿ: ಹದಿನೇಳನೇ ಲೋಕಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಎಲ್ಲರೂ ನಿರ್ದಿಷ್ಟ ಗುರಿಯೊಂದಿಗೆ ಮತದಾನದ ಹಕ್ಕು ಚಲಾಯಿಸೋಣ. ನಮ್ಮ ಸರಿಯಾದ ನಿರ್ಧಾರ ದೇಶದ ದಿಕ್ಕನ್ನೇ ಬದ ಲಾಯಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ. 70ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶುಕ್ರವಾರ ಸಂಜೆ ಮಾಡಿದ ದೂರ ದರ್ಶನ ಭಾಷಣದಲ್ಲಿ ಅವರು, ದೇಶದ ಜನತೆಗೆ 70ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ಬಾರಿಯ ಗಣರಾಜ್ಯೋತ್ಸವ ಬಹಳ ವಿಶೇಷವಾಗಿದೆ. ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನದ ನಂತರ ಈ…
ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ಗಾಯಾಳು ಮಗುವಿಗೆ ಶಸ್ತ್ರ ಚಿಕಿತ್ಸೆ
January 26, 2019ಮೈಸೂರು: ಗುರುವಾರ ಮುಂಜಾನೆ ಕೊಪ್ಪ ಸಮೀಪ ಕಾರು ಕಂದಕಕ್ಕೆ ಉರುಳಿದ್ದ ದುರಂತದಲ್ಲಿ ಸಾವನ್ನಪ್ಪಿದ ಮೈಸೂರಿನ ಲೀಲಾವತಿ ಅವರ ಅಂತ್ಯಕ್ರಿಯೆ ಇಂದು ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ನೆರವೇರಿತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರ ಮೊಮ್ಮಗ ಹರ್ಷಿತನನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ಶಸ್ತ್ರ ಚಿಕಿತ್ಸೆಗೊಳ ಪಡಿಸ ಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಉಳಿದಂತೆ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಸೌಮ್ಯ(30) ಮತ್ತು ಪದ್ಮಾ(30) ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಲೀಲಾವತಿ ಅವರ ಮಗ…
ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ವಿಫಲ; ಕೊಚ್ಚಿ ಹೋಗಿರುವ ಮೋದಿ ಅಲೆ
January 26, 2019ಮೈಸೂರು: ಅಲ್ಲಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಸರ್ಕಾರ, ಇಲ್ಲಿ ವಿರೋಧ ಪಕ್ಷವಾಗಿ ಕೆಲಸ ಮಾಡುವಲ್ಲಿ ಬಿಜೆಪಿ ಪೂರ್ಣ ವಿಫಲವಾಗಿವೆ ಎಂದು ಜೆಡಿಎಸ್ ರಾಜ್ಯಾ ಧ್ಯಕ್ಷ ಅಡಗೂರು ಹೆಚ್.ವಿಶ್ವನಾಥ್ ಟೀಕಿಸಿದರು. ಮೈಸೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರದ ಬಗ್ಗೆ ಜನರಿಗೆ ಭ್ರಮನಿರಸನವಾಗಿದೆ. ಮೋದಿ ನೀಡಿದ್ದ ಭರವಸೆಗಳೆಲ್ಲಾ ಹುಸಿಯಾಗಿದ್ದು, ನರೇಂದ್ರ ಮೋದಿ ಸುಳ್ಳುಗಾರ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯದು ಅತಂತ್ರ ಸ್ಥಿತಿ ಎಂದು ಸಮೀಕ್ಷೆಗಳು ಹೇಳಿವೆ ಎಂದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿ ಜೊತೆಗೇ…
ತಿಲಕ್‍ನಗರದಲ್ಲಿ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ
January 26, 2019ಮೈಸೂರು: ಮೈಸೂರಿನ ತಿಲಕ್ ನಗರದ ಆರ್‍ಎಂಸಿ ಸರ್ಕಲ್‍ನಿಂದ ಉಮರ್ ಖಯಾಂ ರಸ್ತೆವರೆಗೆ ಡಾಂಬರೀಕರಣ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು. 80 ಲಕ್ಷ ರೂ. ವೆಚ್ಚದಲ್ಲಿ ತಿಲಕ್‍ನಗರ 2ನೇ ಮುಖ್ಯ ರಸ್ತೆಯ ಡಾಂಬರೀಕರಣ 20 ಲಕ್ಷ ರೂ. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಶಾಸಕರು ತಿಳಿಸಿದ್ದಾರೆ. ಬಿಎಂಶ್ರೀ ನಗರದಲ್ಲಿ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಸಮುದಾಯ ಭವನದ ಕಟ್ಟಡ ವನ್ನು…










