ಮೈಸೂರು: ನೆರೆ ಹಾಗೂ ಭೂ ಕುಸಿತದಿಂದಾಗಿ ತತ್ತರಿಸಿ ರುವ ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಜ.11ರಿಂದ 13ರವರೆಗೆ `ಕೊಡಗು ಪ್ರವಾಸಿ ಉತ್ಸವ-2019’ ಹಮ್ಮಿಕೊಂಡಿದೆ. ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಓಪನ್ ಸ್ಟ್ರೀಟ್ ಫೆಸ್ಟಿವಲ್, ಶ್ವಾನ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯ ಕ್ರಮಗಳ ಮೂಲಕ ಪ್ರವಾಸಿಗರನ್ನು ಕೊಡಗಿನತ್ತ ಸೆಳೆಯಲು ಅಣಿಯಾಗಿದೆ. ಕೊಡಗು ಜಿಲ್ಲಾಡಳಿತ, ಪ್ರವಾಸೋ ದ್ಯಮ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ಸಂಗೋಪನಾ ಇಲಾಖೆ, ಕೊಡಗು ಜಿಲ್ಲಾ ಹೋಟೆಲ್…
ತುಮಕೂರು ಸಿದ್ದಗಂಗಾ ಆಸ್ಪತ್ರೆಗೆ ಡಾ. ಶಿವಕುಮಾರ ಸ್ವಾಮೀಜಿ ಸ್ಥಳಾಂತರ
January 5, 2019ಬೆಂಗಳೂರು: ವೈದ್ಯ ಕೀಯ ಚಿಕಿತ್ಸೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ|| ಶಿವಕುಮಾರ ಸ್ವಾಮೀಜಿ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸ್ಥಳಾಂ ತರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ತುಮಕೂರಿಗೆ ತೆರಳಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು.
ಚುಂಚನಕಟ್ಟೆ ವೈಭವದ ಜಾತ್ರೆ ಆರಂಭ
January 5, 2019ಹೊಸೂರು: ಸುಗ್ಗಿಯ ನಂತರ ನಡೆ ಯುವ ದಕ್ಷಿಣ ಭಾರತದ ಮೊದಲ ಜಾತ್ರೆ… ರೈತರ ಅಭಿಮಾನ ಮತ್ತು ಪ್ರೀತಿಗೆ ಸಾಕ್ಷಿ ಯಾಗಿರುವ ಜೋಡೆತ್ತುಗಳು ಕಾರಿನ ಬೆಲೆ ಗಿಂತಲೂ ದುಬಾರಿ… ಇಲ್ಲಿ ಎಲ್ಲಿ ನೋಡಿ ದರೂ ದೇಶಿ ತಳಿಯ ಗೋಸಂಪತ್ತಿನ ದರ್ಬಾರ್ … ಶ್ರೀಮಂತ ರೈತರ ವೈಭೋಗಕ್ಕೆ ರಾಸು ಗಳಿಗೆ ಶೃಂಗಾರಗೊಂಡ ಚಪ್ಪರ…. ಜಾನುವಾರುಗಳನ್ನು ಕೊಳ್ಳುವ ಮಾರಾಟ ಮಾಡುವ ಭರಾಟೆ… ಜಾತ್ರೆ ನೋಡಲು ಹರಿದು ಬರುತ್ತಿರುವ ಜನಸಾಗರ… ಆದರೆ ಜಾತ್ರೆಯಲ್ಲಿ ಎಲ್ಲೆಲ್ಲೂ ಸಮಸ್ಯೆಗಳ ತೋರಣ. ಇವು ಮೈಸೂರು ಜಿಲ್ಲೆಯಲ್ಲಿ ಭತ್ತದ…
ವಿಶೇಷ ಮಾದರಿಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ
January 5, 2019ಮೈಸೂರು: ಮೈಸೂರಿನ ದಟ್ಟಗಳ್ಳಿಯ ಕನಕದಾಸನಗರದ ಕೌಟಿಲ್ಯ ವಿದ್ಯಾಲಯದಲ್ಲಿ ಶುಕ್ರವಾರ ನಡೆದ `ವಿಜ್ಞಾನ ವಿಹಾರ’ ಮೈಸೂರು ಜಿಲ್ಲಾ ಮಟ್ಟದ ವಿಜ್ಞಾನ ಮೇಳದಲ್ಲಿ ಜಿಲ್ಲೆಯ 24 ಪ್ರೌಢಶಾಲೆಗಳ ವಿದ್ಯಾರ್ಥಿಗಳು ತಾವು ತಯಾರಿಸಿ ತಂದಿದ್ದ ಸ್ವಚ್ಛತೆ, ಹಸಿರು ಮತ್ತು ಆರೋಗ್ಯಕರ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಕುರಿತು ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು. ಈ ಮೂಲಕ ತಮ್ಮ ವಿಜ್ಞಾನದ ಬಗೆಗಿನ ಪ್ರತಿಭೆಯನ್ನು ಪ್ರದರ್ಶಿಸಿದರು. ಕೌಟಿಲ್ಯ ವಿದ್ಯಾಲಯ, ಅಟಲ್ ಟಿಂಕರಿಂಗ್ ಲ್ಯಾಬ್, ಮೈಸೂರು ಸೈನ್ಸ್ ಫೌಂಡೇಷನ್ ಸಹಯೋಗದಲ್ಲಿ `ಚೆನ್ನಾ ಗಿರಲೆಂದು ಫ್ಯೂಚರ್’, ದೇವರು…
ಪ್ರೊ.ಕೆ.ಎಸ್.ಭಗವಾನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
January 5, 2019ಮೈಸೂರು: ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದಿರುವ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ನವಜೀವನ ಸಂಸ್ಥೆ ಕಾರ್ಯಕರ್ತರು ಶುಕ್ರವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಸಂಸ್ಥೆಯ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪ್ರೊ.ಭಗವಾನ್ ವಿರುದ್ಧ ಘೋಷಣೆ ಕೂಗಿದರು. ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಪ್ರೊ.ಭಗವಾನ್ ಹಿಂದೂ ಧಾರ್ಮಿಕ ಗ್ರಂಥ ರಾಮಾಯಣದ ರಾಮಚಂದ್ರ ಮತ್ತು ಸೀತೆಯ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದಾರೆ. ಹಿಂದು ಧಾರ್ಮಿಕ ವಿರೋಧಿ ಹೇಳಿಕೆಗಳ ಮೂಲಕ ಅನಗತ್ಯವಾಗಿ…
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‍ಆರ್‍ಐ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ
January 5, 2019ಮೈಸೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‍ಆರ್‍ಐ ಕೋಟಾ ಹಾಗೂ ಶುಲ್ಕ ಹೆಚ್ಚಳದ ಪ್ರಸ್ತಾಪವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾ ಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಓ) ಆಶ್ರಯದಲ್ಲಿ ಶುಕ್ರವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ವೈದ್ಯಕೀಯ ಕಾಲೇಜು ಗಳಲ್ಲಿ ಎನ್‍ಅರ್‍ಐ ಕೋಟಾ ಜಾರಿಗೆ ತರುವ ಪ್ರಸ್ತಾಪವನ್ನು ಹಿಂದಿನ ವೈದ್ಯಕೀಯ ಶಿಕ್ಷಣ ಸಚಿವರು ಇತ್ತೀಚೆಗೆ ಸದನದಲ್ಲಿ ಮಂಡಿಸಿದ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೆ.10ರಷ್ಟು ಎನ್‍ಆರ್‍ಐ ಕೋಟಾ ಜಾರಿಗೆ ತಂದಿದ್ದೇ ಆದರೆ ಇದು…
ಹುಣಸೂರು ನಗರಸಭೆ: 27.32 ಲಕ್ಷ ರೂ. ಉಳಿತಾಯ ಬಜೆಟ್
January 5, 2019ಹುಣಸೂರು: ಇಂದು ಮಧ್ಯಾಹ್ನ ಹುಣಸೂರು ನಗರಸಭೆಯ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ಅಧ್ಯಕ್ಷ ಹೆಚ್.ವೈ.ಮಹದೇವ್ 27.32 ಲಕ್ಷ ರೂ.ಗಳ ಉಳಿತಾಯ ಬಜೆಟ್ ಮಂಡಿಸಿದರು. ನಗರದ ಅಭಿವೃದ್ಧಿ ದೃಷ್ಟಿಯಿಂದ ಮೂಲ ಭೂತ ಸೌಕರ್ಯ, ಕುಡಿಯುವ ನೀರು ಹಾಗೂ ಸ್ಮಶಾನ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸುವ 27.32 ಲಕ್ಷ ರೂ.ಗಳ ಉಳಿತಾಯ ಬಜೆಟ್ ಮಂಡಿಸುತ್ತಿರುವುದಾಗಿ ಹೇಳಿದರು. 2019-20ನೇ ಸಾಲಿಗೆ ಎಲ್ಲ ಮೂಲಗಳಿಂದ 32,52,03,490 ರೂ. ಅದಾಯ ನಿರೀಕ್ಷಿಸಿದ್ದು, ಅದೇ ರೀತಿ 32, 24,71,700 ರೂ. ವೆಚ್ಚ ಪ್ರಸ್ತಾಪಿಸಲಾಗಿದೆ. ನಗರ ಸಭೆ…
ಸಿಗರೇಟ್ ಖರೀದಿ ನೆಪದಲ್ಲಿ ಮಹಿಳೆ ಸರ ಅಪಹರಣ
January 5, 2019ಮೈಸೂರು: ಸಿಗರೇಟ್ ಕೊಳ್ಳುವ ನೆಪದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಖದೀಮರು, ಅಂಗಡಿಯಲ್ಲಿದ್ದ ಮಹಿಳೆಯ ಕತ್ತಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಹಂಚ್ಯಾಸಾತಗಳ್ಳಿ ಬಿ.ವಲಯದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ಭಾರತಿ(28) ಸರ ಕಳೆದುಕೊಂಡವರು. ಹಂಚ್ಯಾಸಾತಗಳ್ಳಿ ಬಿ.ವಲಯದ 9ನೇ ಕ್ರಾಸ್‍ನಲ್ಲಿ ಭಾರತಿ ಎಂಬುವರಿಗೆ ಸೇರಿದ ಚಿಲ್ಲರೆ ಅಂಗಡಿಯಿದ್ದು, ಶುಕ್ರವಾರ ಸಂಜೆ 4.45ರ ವೇಳೆಗೆ ಆಕ್ಟೀವಾ ಸ್ಕೂಟರ್‍ನಲ್ಲಿ ಬಂದ ಇಬ್ಬರು ಖದೀಮರು, ಸಿಗರೇಟ್ ಕೊಳ್ಳಲು ಅಂಗಡಿಗೆ ತೆರಳಿ ಸಿಗರೇಟ್ ತೆಗೆದುಕೊಂಡು 50 ರೂ….
ಪ್ರತ್ಯೇಕ ಕಳವು ಪ್ರಕರಣ: ಆರೋಪಿಗಳು ಪೊಲೀಸರ ವಶಕ್ಕೆ
January 4, 2019ಮೈಸೂರು: ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೈಸೂರಿನ ದೇವರಾಜ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸಯ್ಯಾಜಿರಾವ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಪರ್ಸ್ ಕಳ್ಳತನ ಹಾಗೂ ಖಾಸಗಿ ಹೋಟೆಲ್‍ನಲ್ಲಿ ಗ್ರಾಹಕರೊಬ್ಬರ ಹಣ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿ ದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಯ್ಯಾಜಿರಾವ್ ರಸ್ತೆಯಲ್ಲಿ ಇಂದ್ರ ಕೆಫೆ ಹೋಟೆಲ್ ಬಳಿ ಗುರುವಾರ ಬೆಳಿಗ್ಗೆ ಅನುದೀಪ್ ಎಂಬುವರು ಕಾರು ನಿಲ್ಲಿಸಿ, ಕೆಳಗಿಳಿಯುವ ಸಂದರ್ಭದಲ್ಲಿ ಹೋಂಡಾ ಆಕ್ಟೀವಾ ಸ್ಕೂಟರ್‍ನಲ್ಲಿ ಬಂದ…
87 ತಹಶೀಲ್ದಾರ್ ವರ್ಗಾವಣೆ, 103 ಪರೀಕ್ಷಾರ್ಥ ತಹಶೀಲ್ದಾರ್‍ಗಳ ಸ್ಥಳ ನಿಯುಕ್ತಿ
January 4, 2019ಮೈಸೂರು: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಹಶೀಲ್ದಾರ್‍ಗಳ ವರ್ಗಾವರ್ಗಿಯ ಜೊತೆಗೆ ಪರೀಕ್ಷಾರ್ಥ ತಹಶೀಲ್ದಾರ್‍ಗಳಿಗೆ ಸ್ಥಳ ನಿಯುಕ್ತಿಗೊಳಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಶಿಷ್ಟಾಚಾರ ತಹಶೀಲ್ದಾರ್ ಎಸ್.ಎನ್.ನರಗುಂದ ಹುಣಸೂರು ತಾಲೂಕಿಗೆ ವರ್ಗಾವಣೆ ಯಾಗಿದ್ದು, ಅವರ ಸ್ಥಳಕ್ಕೆ ಹುಣಸೂರು ತಹಶೀಲ್ದಾರ್ ಮೋಹನ್ ಕುಮಾರ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಮೈಸೂರು ತಾಲೂಕಿನ ಹೆಚ್ಚುವರಿ ತಹಶೀಲ್ದಾರ್ ಹೆಚ್.ಆರ್.ಚಂದ್ರ ಕುಮಾರ್ ಮೈಸೂರು ನಗರಪಾಲಿಕೆ ತಹಶೀಲ್ದಾರ್ ಸ್ಥಾನಕ್ಕೆ, ತಿ.ನರಸೀಪುರ ತಹಶೀಲ್ದಾರ್ ಪರಮೇಶ್ ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ತಹಶೀಲ್ದಾರ್ ಸ್ಥಾನಕ್ಕೆ, ಪಿರಿಯಾಪಟ್ಟಣ ತಹಶೀಲ್ದಾರ್ ಜೆ.ಮಹೇಶ್…










