ಮೈಸೂರು

ಈ ದಸರೆಗೆ ಮೈಸೂರು-ಬೆಂಗಳೂರು ನಡುವೆ ಏರ್ ಇಂಡಿಯಾ ವಿಮಾನ ಹಾರಾಟ
ಮೈಸೂರು

ಈ ದಸರೆಗೆ ಮೈಸೂರು-ಬೆಂಗಳೂರು ನಡುವೆ ಏರ್ ಇಂಡಿಯಾ ವಿಮಾನ ಹಾರಾಟ

October 5, 2018

ಮೈಸೂರು: ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ನ್ಯಾಷನಲ್ ಕ್ಯಾರಿಯರ್ ಏರ್ ಇಂಡಿಯಾವು ಅಕ್ಟೋಬರ್ 10ರಿಂದ 20ರವರೆಗೆ ಈ ಬಾರಿಯ ದಸರಾ ವೇಳೆ ಮೈಸೂರು-ಬೆಂಗಳೂರು ನಡುವೆ ವಿಶೇಷ ವಿಮಾನ ಹಾರಾಟ ನಡೆಸಲಿದೆ. ಒಂದು ವೇಳೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಲ್ಲಿ ದಸರಾ ನಂತರವೂ ಸೇವೆಯನ್ನು ಮುಂದು ವರಿಸಲು ಏರ್ ಇಂಡಿಯಾ ಆಸಕ್ತಿ ವಹಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(KSTDC) ಮತ್ತು ಪ್ರವಾಸೋದ್ಯಮ ಇಲಾಖೆಯ ಸಂಸ್ಥೆ ಅಧಿಕಾರಿಗಳು ಏರ್ ಇಂಡಿಯಾದೊಂದಿಗೆ ಚರ್ಚಿಸಿ, ದಸರೆಗೆ ಈ ಸೌಲಭ್ಯ…

ಖಾಸಗಿ ದರ್ಬಾರ್‌ಗೆ ಭಾರೀ ಭದ್ರತೆ ನಡುವೆ ಶಾಸ್ತ್ರೋಕ್ತ ಸಿಂಹಾಸನ ಜೋಡಣೆ
ಮೈಸೂರು

ಖಾಸಗಿ ದರ್ಬಾರ್‌ಗೆ ಭಾರೀ ಭದ್ರತೆ ನಡುವೆ ಶಾಸ್ತ್ರೋಕ್ತ ಸಿಂಹಾಸನ ಜೋಡಣೆ

October 5, 2018

ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವದ ಪ್ರಮುಖ ಆಚರಣೆ ಖಾಸಗಿ ದರ್ಬಾರ್ ಅ.10ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಬಿಗಿ ಭದ್ರತೆಯಲ್ಲಿ ಅರಮನೆ ನೆಲಮಾಳಿಗೆಯ ಭದ್ರತಾ ಕೊಠಡಿಯಿಂದ ರತ್ನ ಖಚಿತ ಸಿಂಹಾಸನವನ್ನು ದರ್ಬಾರ್ ಹಾಲ್‍ಗೆ ತಂದು ಜೋಡಿಸಲಾಯಿತು. ಯದುವಂಶ ಪರಂಪರೆಗಳಲ್ಲಿ ಖಾಸಗಿ ದರ್ಬಾರ್ ಒಂದಾಗಿದ್ದು, ನವರಾತ್ರಿಯ ವೇಳೆ ಹಲವು ಕಟ್ಟುಪಾಡುಗಳೊಂದಿಗೆ ಒಂಭತ್ತು ದಿನವೂ ದಿನಕ್ಕೆ ಎರಡು ಬಾರಿ ಖಾಸಗಿ ದರ್ಬಾರ್ ನಡೆಯಲಿದೆ. ಶತಮಾನದ ಇತಿಹಾಸವಿರುವ ಚಿನ್ನದ ಸಿಂಹಾಸನದ ಮೇಲೆ ರಾಜರು ಆಸೀನರಾಗಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸ ಲಿದ್ದಾರೆ….

ತೆಂಗಿಗೆ ಪರಿಹಾರ, ವನ್ಯಜೀವಿ ದಾಳಿಗೆ ಬಲಿಯಾದವರ ಕುಟುಂಬಕ್ಕೆ 2000 ಮಾಸಾಶನ
ಮೈಸೂರು

ತೆಂಗಿಗೆ ಪರಿಹಾರ, ವನ್ಯಜೀವಿ ದಾಳಿಗೆ ಬಲಿಯಾದವರ ಕುಟುಂಬಕ್ಕೆ 2000 ಮಾಸಾಶನ

October 5, 2018

ಬೆಂಗಳೂರು: ಸತತ ಬರಗಾಲದಿಂದ ನೀರಿಲ್ಲದೆ ಫಲ ನೀಡದ ತೆಂಗು ಬೆಳೆಗಾರರಿಗೆ ಪರಿಹಾರ, ವನ್ಯ ಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಇನ್ನು ಮುಂದೆ 2000 ರೂ. ಮಾಸಾಶನ ನೀಡುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಇಂದು ಕೈಗೊಂಡಿದೆ. ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ದಸರಾ-ಸಿಎಂ ಕಪ್ ಕ್ರೀಡಾಕೂಟ ಆಯೋಜನೆಗೆ 7 ಕೋಟಿ ರೂ. ಅನುದಾನಕ್ಕೆ ಸಭೆ ಸಮ್ಮತಿಸಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ತಲೆದೋರಿದ ತೀವ್ರ ಬರಗಾಲದಿಂದ ನೀರಿಲ್ಲದೆ ಲಕ್ಷಾಂತರ ತೆಂಗಿನ ಮರಗಳು ಒಣಗಿ, ರೈತರು ಬೀದಿಪಾಲಾಗಿದ್ದಾರೆ….

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ
ಮೈಸೂರು

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ

October 5, 2018

ಬೆಂಗಳೂರು:  ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕಿಳಿಯುವ ತೀರ್ಮಾನಕ್ಕೆ ಕಾಂಗ್ರೆಸ್ ಮಂತ್ರಿಗಳ ಸಭೆ ಸಮ್ಮತಿಸಿದೆ. ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಪಕ್ಷದ ಸಚಿವರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ನಡೆದ ಚರ್ಚೆ ಸಂದರ್ಭದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಕೆಲವು ನಾಯಕರ ಹೇಳಿಕೆಗಳು ಏನೇ ಇರಲಿ, ನಾವು ಒಗ್ಗಟ್ಟಿನಿಂದ ಪಕ್ಷದ ಆಣತಿಯಂತೆ…

ಮೈಸೂರು ಮುಕ್ತ ವಿವಿಯಲ್ಲಿ ಒಟ್ಟಾರೆ 31 ಕೋರ್ಸ್‍ಗಳಿಗೆ ಯುಜಿಸಿ ಮಾನ್ಯತೆ
ಮೈಸೂರು

ಮೈಸೂರು ಮುಕ್ತ ವಿವಿಯಲ್ಲಿ ಒಟ್ಟಾರೆ 31 ಕೋರ್ಸ್‍ಗಳಿಗೆ ಯುಜಿಸಿ ಮಾನ್ಯತೆ

October 5, 2018

ಮೈಸೂರು: ಎಲ್‍ಎಲ್‍ಎಂ ಹೊರತುಪಡಿಸಿ ಒಟ್ಟಾರೆ 31 ಕೋರ್ಸ್ ಗಳಿಗೆ ಯುಜಿಸಿ ಮಾನ್ಯತೆ ನೀಡಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಡಿ. ಶಿವಲಿಂಗಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾನಿಲಯದ ಆಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಎಂಬಿಎ, ಎಂಎ ಸಂಸ್ಕೃತ, ಎಂಎಸ್ಸಿ ಜೀವ ರಸಾಯನಶಾಸ್ತ್ರ, ಜೈವಿಕ ತಂತ್ರಜ್ಞಾನ, ರಸಾಯನಶಾಸ್ತ್ರ, ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯಬಿಟಿಕ್ಸ್, ಗಣಕವಿಜ್ಞಾನ, ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಭೌತಶಾಸ್ತ್ರ ಹಾಗೂ ಮನೋ ವಿಜ್ಞಾನ ಕೋರ್ಸುಗಳಿಗೆ…

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ
ಮೈಸೂರು

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ

October 5, 2018

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿ ರುವ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಭಾರತೀಯರಿಗೆ ಕೇಂದ್ರ ಸರ್ಕಾರ ತುಸು ನೆಮ್ಮದಿ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ರೂ.2.50 ಇಳಿಕೆ ಮಾಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ವನ್ನು ರೂ.1.50 ಇಳಿಕೆ ಮಾಡಿರುವುದಾಗಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಹೇಳಿದ್ದಾರೆ. ಕೇಂದ್ರ ಸರ್ಕಾರ ರೂ.1.50 ಅಬಕಾರಿ ಸುಂಕ ವನ್ನು ಇಳಿಕೆ ಮಾಡಲಿದೆ. ತೈಲ ಕಂಪನಿ ಗಳು ರೂ.1 ಇಳಿಕೆ ಮಾಡಲಿವೆ.

ಕೇರಳ, ಕರ್ನಾಟಕದಲ್ಲಿ ಸುರಿಯಲಿದೆ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ…
ಮೈಸೂರು

ಕೇರಳ, ಕರ್ನಾಟಕದಲ್ಲಿ ಸುರಿಯಲಿದೆ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ…

October 5, 2018

ನವದೆಹಲಿ:  ಕೇರಳ, ಕರ್ನಾ ಟದಲ್ಲಿ ಹಲವು ಅನಾಹುತಗಳನ್ನು ಉಂಟುಮಾಡಿ, ನರಬಲಿ ಪಡೆದ ವರುಣ ಈಗ ಮತ್ತೆ ದಾಂಗುಡಿ ಇಡ ಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೆರಿ ಹಾಗೂ ಕೇರಳ ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗ, ಲಕ್ಷದ್ವೀಪ ಹಾಗೂ ಅಂಡಮಾನ್ ಮತ್ತು ನಿಕೋ ಬಾರ್‍ಗಳಲ್ಲಿ ಅಕ್ಟೋಬರ್ 4ರಿಂದ 8ರ ನಡುವೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಆಗ್ನೇಯ ಅರಬ್ಬಿ ಸಮುದ್ರ ದಲ್ಲಿ ವಾಯುಭಾರ ಕುಸಿತ ಉಂಟಾಗಿ, ಮುಂದಿನ 48 ಗಂಟೆಗಳಲ್ಲಿ…

ಕೇಂದ್ರದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಸಿ ವೋಟರ್ ಸಮೀಕ್ಷೆ
ಮೈಸೂರು

ಕೇಂದ್ರದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಸಿ ವೋಟರ್ ಸಮೀಕ್ಷೆ

October 5, 2018

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇದೆ. ಕೇಂದ್ರ ಹಾಗೂ ವಿಪಕ್ಷಗಳ ನಡುವೆ ಈಗಾಗಲೇ ಜಿದ್ದಾಜಿದ್ದಿ ತಾರಕಕ್ಕೇರುತ್ತಿದೆ. ಜನರಿಗೆ ಕೊಟ್ಟ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ ಎಂದು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಹರಿ ಹಾಯುತ್ತಿವೆ. ಹಿಂದಿನ ಸರಕಾರ ಮಾಡಿದ ಪಾಪ ಕರ್ಮಗಳನ್ನು ತೊಳೆದು, ಹೊಸ ಮನ್ವಂತರ ಶುರು ಮಾಡಿದ್ದೇವೆಂದು ಮೋದಿ ಸರಕಾರ ಹೇಳಿಕೊಳ್ಳುತ್ತಿದೆ. ಈ ನಡುವೆ ಮುಂದಿನ ಬಾರಿ ಜನರು ಯಾರಿಗೆ ಗದ್ದುಗೆ ಕೊಡುತ್ತಾರೆ ಎಂಬ ಲೆಕ್ಕಾಚಾರ ದಿನನಿತ್ಯ ನಡೆಯುತ್ತಲೇ ಇದೆ. ದೇಶದ ಅಗ್ರಗಣ್ಯ ಸಮೀಕ್ಷೆ ಸಂಸ್ಥೆಗಳ…

ದೆಹಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 3 ದಿನ ಬಿಡಾರ
ಮೈಸೂರು

ದೆಹಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 3 ದಿನ ಬಿಡಾರ

October 5, 2018

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳಿಗೆ ನೇಮಕಾತಿ, ಮೈತ್ರಿ ಸರ್ಕಾರದ ಮಿತ್ರ ಪಕ್ಷಗಳಲ್ಲಿನ ರಾಜಕೀಯ ವಿದ್ಯಮಾನ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಲು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೆಹಲಿಗೆ ಮೂರು ದಿನಗಳ ಭೇಟಿ ನೀಡಿದ್ದಾರೆ. ಅಕ್ಟೋಬರ್ 4, 5 ಮತ್ತು 6ರ ದೆಹಲಿ ಭೇಟಿ ಸಂದರ್ಭದಲ್ಲಿ ರಾಜ್ಯದ ಬಾಕಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೂ ಕುಮಾರಸ್ವಾಮಿ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದ ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾ ವಣೆಯಲ್ಲಿ…

ಮೈಸೂರಲ್ಲಿ ಪೌರಕಾರ್ಮಿಕರ ಮುಷ್ಕರ ಮುಂದುವರಿಕೆ
ಮೈಸೂರು

ಮೈಸೂರಲ್ಲಿ ಪೌರಕಾರ್ಮಿಕರ ಮುಷ್ಕರ ಮುಂದುವರಿಕೆ

October 5, 2018

ಮೈಸೂರು: ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕೆಂಬ ಪ್ರಮುಖ ಬೇಡಿಕೆಯೊಂದಿಗೆ ಇನ್ನಿತರ ಸೌಲಭ್ಯಕ್ಕಾಗಿ ಪಾಲಿಕೆಯ ಖಾಯಂ ಹಾಗೂ ಗುತ್ತಿಗೆ ಪೌರಕಾರ್ಮಿಕರು ಒಕ್ಕೊರಲಿನಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋ ರಾತ್ರಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರ ಸಭೆಗಳ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ ನೇತೃತ್ವದಲ್ಲಿ ಬುಧವಾರ ನಗರದಾದ್ಯಂತ ಕೆಲಸ ಸ್ಥಗಿತಗೊಳಿಸಿ, ಮಹಾನಗರ ಪಾಲಿಕೆಯ ಮುಖ್ಯದ್ವಾರದ ಬಳಿ ಪಾಲಿಕೆ ಪೌರಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದರು. ಬೇಡಿಕೆಗಳು ಈಡೇರುವವರೆಗೂ ಸ್ಥಳದಿಂದ ಕದಲುವುದಿಲ್ಲ…

1 1,344 1,345 1,346 1,347 1,348 1,611
Translate »