ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಸೆ.30 ರಿಂದ ಯುವ ಸಂಭ್ರಮದ ಕಾರ್ಯಕ್ರಮಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಯಾವುದೇ ಪರೀಕ್ಷೆಗಳನ್ನು ನಡೆಸದಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಾ.ದಯಾನಂದ ಸೂಚನೆ ನೀಡಿದ್ದಾರೆ. ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಹಂತದ ಯಾವುದೇ ಪರೀಕ್ಷೆಗಳನ್ನು ನಡೆಸಬಾರದು ಎಂದು ಸೂಚನೆ ನೀಡಿರುವ ಉಪನಿರ್ದೇಶಕರು,…
ಹಳೆ ಪಿಂಚಣಿ ಪದ್ಧತಿ ಮುಂದುವರೆಸಲು ಎನ್‍ಪಿಎಸ್ ನೌಕರರಿಂದ ಅ.3ರಂದು ರಕ್ತದಾನ ಶಿಬಿರ
September 30, 2018ಮೈಸೂರು: ಈ ಹಿಂದೆ ಜಾರಿಯಲ್ಲಿದ್ದ ಪಿಂಚಣಿ ಪದ್ಧತಿಯನ್ನು ಮುಂದುವರೆಸುವಂತೆ ಆಗ್ರಹಿಸಿ `ರಕ್ತ ಕೊಟ್ಟೇವು, ಪಿಂಚಣಿ ಬಿಡೆವು’ ಘೋಷಣೆಯಡಿ ಅ.3ರಂದು ರಾಜ್ಯಾದ್ಯಂತ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಬಸವರಾಜು ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಮೈಸೂರಿನಲ್ಲಿ ಸುಬ್ಬರಾಯನ ಕೆರೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಗುತ್ತಿದೆ….
ನಾಳೆಯಿಂದ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ
September 30, 2018ಮೈಸೂರು ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ನಿರ್ಧಾರ ಮೈಸೂರು: ವಿಶ್ವಸ್ತನ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಅ.1ರಿಂದ ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ ಆಚರಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ಡಾ.ಮಂಜುನಾಥ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಯಾನ್ಸರ್ ಈಗ ಗುಣಪಡಿಸಬಹುದಾದ ಸಾಮಾನ್ಯ ಖಾಯಿಲೆಯಾಗಿದೆ. ಆದರೆ ಸಾರ್ವಜನಿಕರು ಹಾಗೂ ರೋಗಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ ತಿಂಗಳನ್ನು ಸ್ತನ ಕ್ಯಾನ್ಸರ್…
ಪರಿಶಿಷ್ಟರಿಗೆ ಮೀಸಲಾದ ಹಣ ಸಕಾಲದಲ್ಲಿ ಖರ್ಚು ಮಾಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ದಾವೆ
September 29, 2018ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ನಿಗದಿ ಪಡಿಸಿರುವ ಹಣವನ್ನು ಸಕಾಲದಲ್ಲಿ ವೆಚ್ಚ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ದಾವೆ ಹೂಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಎಚ್ಚರಿಸಿದ್ದಾರೆ. ರಾಜ್ಯ ಅನುಸೂಚಿತ ಜಾತಿಗಳು ಮತ್ತು ಪಂಗಡಗಳ ಅಭಿವೃದ್ಧಿ ಕುರಿತು ನಡೆದ ರಾಜ್ಯ ಪರಿಷತ್ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಗದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ 29,000 ಕೋಟಿ ರೂ. ಅನುದಾನ ಮೀಸಲಿರಿಸಿದೆ. ಕಳೆದ ವರ್ಷಕ್ಕಿಂತ ಇದು 2,000 ಕೋಟಿ ರೂ. ಹೆಚ್ಚಿದ್ದು, ನಿಗದಿಪಡಿಸಿರುವ ಹಣದ…
ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ
September 29, 2018ನವದೆಹಲಿ: 800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು, ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಮೂರ್ತಿಗಳು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ದೀಪಕ್ ಮಿಶ್ರಾ ಅವರು ತಮ್ಮ ತೀರ್ಪಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬಲರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು…
ಕಾಂಗ್ರೆಸ್‍ನ ಗಂಗಾಂಬಿಕೆ ಮೇಯರ್, ಜೆಡಿಎಸ್‍ನ ರಮೀಳಾ ಉಪ ಮೇಯರ್
September 29, 2018ಬೆಂಗಳೂರು: ಸರ್ಕಾರ ಪತನಗೊಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ಹೇಳಿದ್ದ ಬಿಜೆಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಮತ್ತೊಮ್ಮೆ ಭಾರೀ ಮುಖಭಂಗ ಅನುಭವಿಸಿದೆ. ಪಾಲುದಾರ ಪಕ್ಷ ಕಾಂಗ್ರೆಸ್‍ನ ಗಂಗಾಂಬಿಕೆ ಮಲ್ಲಿಕಾರ್ಜುನ್ ಮೇಯರ್ ಹಾಗೂ ಜೆಡಿಎಸ್‍ನ ರಮೀಳಾ ಉಮಾಶಂಕರ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸೋಲು ಖಚಿತ ಎಂಬ ಮಾಹಿತಿ ದೊರೆಯುತ್ತಿದ್ದಂತೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪದಚ್ಯುತಗೊಳಿಸಿ,…
ಆನ್‍ಲೈನ್ ಔಷಧ ವ್ಯಾಪಾರ ವಿರೋಧಿಸಿ ಮೈಸೂರಲ್ಲಿ ಔಷಧಿ ಅಂಗಡಿಗಳ ಬಂದ್
September 29, 2018ಮೈಸೂರು: ‘ಇ-ಫಾರ್ಮಸೀಸ್’ ಆನ್‍ಲೈನ್ ಮೂಲಕ ಔಷಧ ವ್ಯಾಪಾರ ವಹಿವಾಟು ಖಂಡಿಸಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಔಷಧಿ ಅಂಗಡಿಗಳನ್ನು ಬಂದ್ ಮಾಡಿ ವರ್ತಕರು ಇಂದು ಪ್ರತಿಭಟನೆ ನಡೆಸಿದರು. ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಹಾಗೂ ದಿ ಕರ್ನಾಟಕ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಸುಮಾರು 1000 ಮೆಡಿಕಲ್ ಸ್ಟೋರ್‍ಗಳು ಬಂದ್ ಆಗಿದ್ದವು. ಮೈಸೂರು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕುಮಾರ್…
ದಸರಾ ಗಾಳಿಪಟ ಉತ್ಸವ
September 29, 2018ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಗಾಳಿಪಟ ಉತ್ಸವ ಶನಿವಾರ(ಸೆ.29) ಸಂಜೆ ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್‍ನಲ್ಲಿ ಆರಂಭವಾಗಲಿದ್ದು, ಎರಡು ದಿನಗಳ ಕಾಲ ಈ ಉತ್ಸವ ಮನರಂಜಿಸಲಿದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರ ವಾರ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಳೆ ಸಂಜೆ 4 ಗಂಟೆಗೆ ಗಾಳಿಪಟ ಉತ್ಸವವನ್ನು ಪ್ರವಾಸೊಧ್ಯಮ ಸಚಿವ ಸಾ.ರಾ.ಮಹೇಶ್ ಅವರ ಗೈರು ಹಾಜರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾ ಟಿಸಲಿದ್ದಾರೆ. ವೃತ್ತಿನಿರತ ಪಟುಗಳೇ ಈ ಉತ್ಸವ ದಲ್ಲಿ ಪಾಲ್ಗೊಂಡು ಗಾಳಿಪಟಗಳನ್ನು ಹಾರಿಸಲಿದ್ದಾರೆ….
ಮೈಸೂರಲ್ಲಿ ಸೆ.30ರಿಂದ 2 ದಿನ ವಿಂಟೇಜ್ ಕಾರ್‍ಗಳ ಪ್ರದರ್ಶನ
September 29, 2018ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಸೆ.30 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಂಟೇಜ್ ಕಾರ್ ರ್ಯಾಲಿ ಏರ್ಪಡಿಸಿದ್ದು, ಅಂದು ಸಂಜೆ ಮೈಸೂರಿನ ವಿವಿಧ ರಸ್ತೆ ಗಳಲ್ಲಿ ಸಂಚರಿಸಿ, ನಂತರ ಮೈಸೂರು ಅರಮನೆ ಮುಂಭಾಗ ಸಾರ್ವಜನಿಕರು ಈ ಹಳೆ ಕಾರುಗಳನ್ನು ವೀಕ್ಷಿಸಬಹುದಾ ಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋಧ್ಯಮ ಇಲಾಖೆ ಹಾಗೂ ಫೆಡರೇಷನ್ ಆಫ್ ಹಿಸ್ಟಾರಿಕ್ ವೆಹಿಕಲ್ಸ್ ಆಫ್…
ಬೆಂಗಳೂರು ಮೂರನೇ ಶ್ರೀಮಂತರ ತವರು
September 29, 2018ಮುಂಬೈ: ಸಿಲಿಕಾನ್ ಸಿಟಿ ಬೆಂಗಳೂರು ಅತಿ ಹೆಚ್ಚು ಶ್ರೀಮಂತರು ವಾಸವಾಗಿರುವ ದೇಶದ ಮೂರನೇ ನಗರ ಎಂಬ ಗೌರವಕ್ಕೆ ಪಾತ್ರವಾಗಿದೆ. ಬಾರ್ಕ್ಲೇಸ್ ಹ್ಯುರುನ್ ಇಂಡಿಯಾ ರಿಚ್ ಲಿಸ್ಟ್ 2018 ಪ್ರಕಾರ ಅತಿ ಹೆಚ್ಚು ಶ್ರೀಮಂತರು ವಾಸವಾಗಿರುವ ಭಾರತದ ನಗರಗಳ ಪೈಕಿ ಮುಂಬೈ ಮೊದಲ ಸ್ಥಾನ ಪಡೆದಿದ್ದು, ದೆಹಲಿ ಎರಡನೇ ಸ್ಥಾನ ಪಡೆದಿದೆ. ಮೊದಲ ಸ್ಥಾನದಲ್ಲಿರುವ ಮುಂಬೈನಲ್ಲಿ 233 ಮಂದಿ ಸಾವಿರ ಕೋಟಿ ರೂಪಾಯಿ ಆಸ್ತಿಯ ಒಡೆಯರಿದ್ದು, ದೆಹಲಿಯಲ್ಲಿ 163 ಹಾಗೂ ಬೆಂಗಳೂರಿನ 70 ವ್ಯಕ್ತಿಗಳ ಆಸ್ತಿಯ ನಿವ್ವಳ ಮೌಲ್ಯ…