ಅಧಿಕಾರಿಗಳ ವಿರುದ್ಧ ಸದಸ್ಯರ ಆಕ್ರೋಶ; ಗದ್ದಲದ ನಡುವೆ ಸಿಐಡಿ ತನಿಖೆಗೆ ಒಪ್ಪಿಸುವ ನಿರ್ಧಾರ ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ (ಎಂಸಿಡಿಸಿಸಿ) ಬ್ಯಾಂಕ್‍ನ ಹುಣಸೂರು ಶಾಖೆ ಹಾಗೂ ಬಿಳಿಕೆರೆ ಶಾಖೆಯಲ್ಲಿ ನಡೆದಿರುವ ಅವ್ಯವಹಾರ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಧ್ವನಿಸಿ, ಭಾರೀ ಗದ್ದಲ ಉಂಟಾಗಿತ್ತು. ಮೈಸೂರಿನ ಜೆಕೆ ಮೈದಾನದಲ್ಲಿನ ಮೈಸೂರು ಮೆಡಿಕಲ್ ಕಾಲೇಜು ಅಮೃತ ಮಹೋತ್ಸವ ಭವನದಲ್ಲಿ ಮಂಗಳವಾರ ನಡೆದ ಬ್ಯಾಂಕಿನ 64ನೇ ವಾರ್ಷಿಕ ಮಹಾಸಭೆಯಲ್ಲಿ ಹುಣಸೂರು ಹಾಗೂ ಬಿಳಿಕೆರೆ ಶಾಖೆಗಳಲ್ಲಿ ನಡೆದಿರುವ ಅವ್ಯವ ಹಾರದ ಬಗ್ಗೆ…
ಮೈಸೂರು ವಿವಿ ರಾಜ್ಯಪ್ರಶಸ್ತಿ ವಿಭಾಗದಲ್ಲಿ ಎನ್.ರಾಚಯ್ಯ ಅಧ್ಯಯನ ಪೀಠ ಉದ್ಘಾಟನೆ
September 26, 2018ಎಲ್ಲಾ ವರ್ಗಗಳಿಗೆ ಪ್ರೀತಿ ಪಾತ್ರರಾಗಿದ್ದರು: ಎನ್.ರಾಚಯ್ಯರ ಬಗ್ಗೆ ಮಾಜಿ ಸಚಿವ ಆಂಜನೇಯ ಗುಣಗಾನ ಮೈಸೂರು: ಹೆಮ್ಮೆಯ ರಾಜಕಾರಣಿಯಾಗಿ ಎಲ್ಲಾ ವರ್ಗಗಳ ಪ್ರೀತಿಗೆ ಪಾತ್ರರಾಗಿದ್ದ ಎನ್.ರಾಚಯ್ಯ ಅವರ ಸಾಮಾಜಿಕ ಬದ್ಧತೆ, ಸಾಧನೆ ಹಾಗೂ ಕೊಡುಗೆಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದೆ ಎಂದು ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅಭಿಪ್ರಾಯಪಟ್ಟರು. ಮೈಸೂರು ವಿವಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗಕ್ಕೆ ರಾಜ್ಯ ಸರ್ಕಾರ ಮಂಜೂರು ಮಾಡಿರುವ ಎನ್.ರಾಚಯ್ಯ…
ದಸರಾ ಗಜಪಡೆ ಮಾವುತರು, ಕಾವಾಡಿಗಳ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ
September 26, 2018ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬದವರಿಗೆ ಮೈಸೂರು ಕನ್ನಡ ವೇದಿಕೆ, ಅನಘ ಆಸ್ಪತ್ರೆ ಹಾಗೂ ನೆರವು ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅನಘ ಆಸ್ಪತ್ರೆ ವೈದ್ಯ ಡಾ.ಮಹೇಶ್ ನೇತೃತ್ವದಲ್ಲಿ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬದವರಿಗೆ ತಪಾಸಣೆ ನಡೆಸಲಾಯಿತು. ಬಿಪಿ, ಮಧುಮೇಹ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಕಾಯ್ದುಕೊಳ್ಳುವುದಕ್ಕೆ ಸಂಬಂಧಿಸಿದಂತೆ…
ಖಾಸಗಿ ವಾಹನ, ಟ್ಯಾಕ್ಸಿ ಚಾಲಕರ ಪ್ರತಿಭಟನೆ
September 26, 2018ಹಾಸನ: ವಾಹನವನ್ನು ನಿಲುಗಡೆ, ಡಿಎಲ್, ವಿಮೆ ಸಮಸ್ಯೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ವಾಹನ ಹಾಗೂ ಟ್ಯಾಕ್ಸಿ ಚಾಲಕರ ಸಂಘದಿಂದ ಪ್ರತಿಭಟಿಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿದರು. ಖಾಸಗಿ ವಾಹನ ಮತ್ತು ಟ್ಯಾಕ್ಸಿ ನಿಲುಗಡೆಗೆ ನಿಲ್ದಾಣದ ಕೊರತೆ ಇದ್ದು, ಚಾಲಕರ ಪರವಾನಗಿ ಪಡೆಯಲು ವಿವಿಧ ಸಮಸ್ಯೆಗಳನ್ನು ಎದುರಿಸಬೇಕಾಗಿದೆ ಎಂದು ಅಲವತ್ತು ಕೊಂಡ ಪ್ರತಿಭಟನಾಕಾರರು,…
ನಟ ದರ್ಶನ್ ಆರೋಗ್ಯ ವಿಚಾರಿಸಿದ ಜಿಟಿಡಿ
September 26, 2018ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಇಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯ ವಿಚಾರಿಸಿದರು. ಸುಮಾರು 15 ನಿಮಿಷಗಳ ಕಾಲ ಆಸ್ಪತ್ರೆ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ನಂತರ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಆರೋಗ್ಯವಾಗಿದ್ದಾರೆ. ಈಗಾಗಲೇ ಬಲಗೈಗೆ ಶಸ್ತ್ರ ಚಿಕಿತ್ಸೆ ಆಗಿದ್ದು, ಈಗ ಆರೋಗ್ಯವಾಗಿದ್ದಾರೆ. ಶೀಘ್ರ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗುವರು ಎಂದರು. ನಿನ್ನೆಯಷ್ಟೇ ಸಂಭವಿಸಿದ್ದ ಕಾರು ಅಪಘಾತದಲ್ಲಿ…
ನ.18, 19ರಂದು ಅಸಂಘಟಿತ ಕಾರ್ಮಿಕರ ದೆಹಲಿ ಚಲೋ
September 26, 2018ಮೈಸೂರು: ಕೇಂದ್ರ ಸರ್ಕಾರದ ತಪ್ಪು ನೀತಿಯಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿದ್ದು, ಇದು ಅಸಂಘಟಿತ ವಲಯದ ಕಾರ್ಮಿಕರಿಗೆ ದೊಡ್ಡ ಹೊಡೆತ ಬಿದ್ದಿದೆ. ಇದರ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ನ.18 ಮತ್ತು 19ರಂದು ರಾಜ್ಯದ ಅಸಂಘಟಿತ ಕಾರ್ಮಿಕರ ದೆಹಲಿ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಡಾ.ಶಾಂತವೀರ ನಾಯಕ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದರ…
ಮೈಸೂರಲ್ಲಿ ನಾಳೆಯಿಂದ ಅನ್ವಯಿಕ ಸೂಕ್ಷ್ಮಜೀವಿಶಾಸ್ತ್ರದ ರಾಷ್ಟ್ರೀಯ ವಿಚಾರ ಸಂಕಿರಣ
September 26, 2018ಮೈಸೂರು: ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ವತಿಯಿಂದ ಸೆ.27 ಮತ್ತು 28ರಂದು ಜೆಎಸ್‍ಎಸ್ ಫಾರ್ಮಸಿ ಕಾಲೇಜಿನ ರಾಜೇಂದ್ರ ಸಭಾಂಗಣದಲ್ಲಿ ಅನ್ವಯಿಕ ಸೂಕ್ಷ್ಮ ಜೀವಿಶಾಸ್ತ್ರ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಸಂಯೋಜಕ ಪ್ರೊ.ಜಿ.ಕೆ.ಚಂದ್ರಶೇಖರಪ್ಪ ಮಂಗಳವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ ವೈರಾಣುಗಳು ಎಲ್ಲಾ ರೀತಿಯ ಔಷಧಗಳಿಗೆ ಒಗ್ಗಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೇರೆ ಔಷಧಿ ತಯಾರಿಕೆಗೆ ಯಾವ ರೀತಿಯಲ್ಲಿ ಸೂಕ್ಷ್ಮ ಜೀವಿಶಾಸ್ತ್ರ ಬಳಸಿಕೊಳ್ಳಬಹುದು ಎಂಬ ಇನ್ನಿತರೆ ವಿಷಯಗಳ ಬಗ್ಗೆ ವಿಚಾರ…
ಕೇರಳ, ಕೊಡಗು ನೆರೆ ಸಂತ್ರಸ್ತರ ಪರ 2 ಸಾವಿರ ಬೌದ್ಧ ಭಿಕ್ಷುಗಳಿಂದ ವಿಶೇಷ ಪ್ರಾರ್ಥನೆ
September 26, 2018ಬೈಲಕುಪ್ಪೆ: ಕೇರಳ ಮತ್ತು ಕರ್ನಾಟಕದಲ್ಲಿ ಪಕೃತಿ ವಿಕೋಪಕ್ಕೆ ಗುರಿಯಾದ ನೊಂದ ಜೀವಗಳಿಗೆ ನಿರಾಶ್ರಿತ ಟಿಬೇಟಿಯನ್ ಹೃದಯಗಳು ಮಿಡಿಯುತ್ತಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ 7 ದಿನಗಳ ವಿಶೇಷ ಮಹಾ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕು ಬೈಲುಕುಪ್ಪೆಯ ಟಿಬೆಟಿಯನ್ ನಿರಾಶ್ರಿತರ ಶಿಬಿರದಲ್ಲಿ ಇರುವ ಸೇರಾಮೇ ಧರ್ಮಶಾಲೆ ಟಿಬೆಟ್‍ನಲ್ಲಿ 500 ವರ್ಷಗಳ ಹಿಂದೆ ಸ್ಥಾಪಿತವಾದ ಧರ್ಮಶಾಲೆಯಾಗಿದ್ದು, ಈ ಇತಿಹಾಸ ಹೊಂದಿರುವ ಸೆರಾಮೇ ಧರ್ಮಶಾಲೆಯಲ್ಲಿ ಈ ವಿಶೇಷ ಪ್ರಾರ್ಥನೆ ಕೈಗೊಳ್ಳಲಾಗುತ್ತಿದೆ. ಮೆಡಿಸಿನ್ ಬುದ್ಧನ ಪ್ರಾರ್ಥನೆ : ಬುದ್ಧನನ್ನು ದೇವರೆಂದು ಪರಿಗಣಿಸುವ ಟಿಬೆಟಿಯನ್ನರು…
ಬಸವಣ್ಣನವರ ಪರಿಕಲ್ಪನೆಯ ಸೇವಾ ಸಂಸ್ಥೆ “ಅನುರಾಗ್ ಮಕ್ಕಳ ಮನೆ” ಸೇವಾ ಪರಿ
September 26, 2018ನಂಜನಗೂಡು: ಗುರು ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಅನುರಾಗ್ ಸೇವಾ ಟ್ರಸ್ಟ್ ಸ್ಥಾಪಿಸಿ, ಇದರ ಮುಖಾಂತರ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯದ ವ್ಯವಸ್ಥೆ ಮತ್ತು ರಾಜ್ಯದ ಮೂಲೆ ಮೂಲೆಗಳಿಂದ ಬಂದ ಮಕ್ಕಳಿಗೆ ಆಶ್ರಯ ನೀಡಲಾಗುತ್ತಿದೆ. ಇದು ಬಸವಣ್ಣನವರ ಪರಿಕಲ್ಪನೆ ಬಿಂಬಿಸುವಂತಹ ಸಂಸ್ಥೆಯಾಗಿದೆ ಎಂದು ರಾಜ್ಯ ಪ್ರತಿಧ್ವನಿ ವೇದಿಕೆಯ ಅಧ್ಯಕ್ಷ ಪ್ರತಿಧ್ವನಿ ಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ನಂಜನಗೂಡು ಸಮೀಪದಲ್ಲಿರುವ ಅನುರಾಗ್ ಮಕ್ಕಳ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಇಂತಹ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಪ್ರತಿಯೊಬ್ಬರಿಗೂ ನಮ್ಮ ಧರ್ಮ, ಸಂಸ್ಕøತಿ,…
ಜಾನುವಾರುಗಳ ಉತ್ತಮ ಆರೋಗ್ಯ ನಿರ್ವಹಣೆಯಿಂದ ಮಾತ್ರ ಗುಣಮಟ್ಟದ ಹಾಲು ಪೂರೈಕೆ ಸಾಧ್ಯ
September 26, 2018ಬೆಟ್ಟದಪುರ: ಜಾನುವಾರುಗಳ ಉತ್ತಮ ಆರೋಗ್ಯ ನಿರ್ವಹಣೆಯಿಂದ ಮಾತ್ರ ನಿರೀಕ್ಷಿತ ಹಾಲು ಪೂರೈಕೆ ಸಾಧ್ಯವಾಗುತ್ತದೆ ಎಂದು ಮೈಮುಲ್ ನಿರ್ದೇಶಕ ಪಿ.ಎಂ.ಪ್ರಸನ್ನ ತಿಳಿಸಿದರು. ಬೆಟ್ಟದಪುರ ಸಮೀಪದ ಕೆ.ಬಸವನಹಳ್ಳಿ ಹಾಗೂ ಕೋಟೆಯ್ಯನಕೊಪ್ಪಲು ಗ್ರಾಮದಲ್ಲಿ ನಡೆದ ಹಾಲು ಉತ್ಪಾದಕ ಸಹಕಾರ ಸಂಘಗಳ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಗುಜರಾತಿನ ಅಮುಲ್ ಹಾಲು ಉತ್ಪನ್ನಗಳು ಇಂದು ವಿಶ್ವದಾದ್ಯಂತ ಹೆಚ್ಚು ಮಾರಾಟವಾಗುತ್ತಿದ್ದು, ಗುಜರಾತಿನಲ್ಲಿ ಕ್ಷೀರ ಕ್ರಾಂತಿಗೆ ಕಾರಣರಾದ ವರ್ಗೀಸ್ ಕುರಿಯನ್ ಅವರ ಪರಿಶ್ರಮದಿಂದ ಮಾತ್ರ ಇದು ಯಶಸ್ವಿಯಾಗಿದೆ. ಅದೇ ರೀತಿ ನಮ್ಮ ರಾಜ್ಯದ ನಂದಿನಿ ಹಾಲಿನ…