ಮೈಸೂರು

ಹದಿನಾರಿನ ಮಿನಿ ಬೃಂದಾವನ ವೀಕ್ಷಿಸಿದ ಮಾಜಿ ಸಚಿವ ಹೆಚ್.ಸಿ.ಎಂ.
ಮೈಸೂರು

ಹದಿನಾರಿನ ಮಿನಿ ಬೃಂದಾವನ ವೀಕ್ಷಿಸಿದ ಮಾಜಿ ಸಚಿವ ಹೆಚ್.ಸಿ.ಎಂ.

September 19, 2018

ಸುತ್ತೂರು:ನಂಜನಗೂಡು ತಾಲೂಕು ಹದಿನಾರು ಗ್ರಾಮದಲ್ಲಿ ಕೆರೆ ಪಕ್ಕ ನಿಷ್ಪ್ರಯೋಜಕವಾಗಿದ್ದ ಜಾಗವನ್ನು ಈ ಹಿಂದಿನ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಡಾ.ಹೆಚ್.ಸಿ.ಮಹದೇವಪ್ಪರವರು ಅಭಿವೃದ್ಧಿಪಡಿಸಿ, ಮಿನಿ ಬೃಂದಾವನ ನಿರ್ಮಾಣಕ್ಕೆ ಮುಂದಾಗಿದ್ದರು. ಅದು ಈಗ ಪೂರ್ಣಗೊಂಡಿದೆ. ಇದನ್ನು ಇಂದು ವೀಕ್ಷಿಸಿದ ನಂತರ ಮಾತನಾಡಿದ ಡಾ.ಹೆಚ್.ಸಿ.ಮಹದೇವಪ್ಪ, ಹದಿನಾರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರಿಗೆ ಈ ಕೆರೆ ಮತ್ತು ಬೃಂದಾವನ ಒಂದು ಪ್ರೇಕ್ಷಣೀಯ ಸ್ಥಳವಾಗಲಿದೆ. ಈ ಹಿಂದೆ ಮೈಸೂರು ಮಹಾರಾಜರ ಕಾಲದಲ್ಲಿ ಅವರ ಕುಟುಂಬಸ್ಥರು ಇಲ್ಲಿಂದಲೇ ರಾಜ್ಯವನ್ನು ಸ್ಥಾಪನೆ ಮಾಡಿದ್ದು, ಇದನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಮಾಡಲಿಚ್ಛಿಸಿದ್ದರು….

ತ್ರೀವೇಣಿ ಸಂಗಮ ಸೌಂದರ್ಯೀಕರಣ: ನಿವೇಶನ ಕಳೆದುಕೊಂಡ ಕುಟುಂಬಕ್ಕೆ ಶಾಸಕರ ಭರವಸೆ
ಮೈಸೂರು

ತ್ರೀವೇಣಿ ಸಂಗಮ ಸೌಂದರ್ಯೀಕರಣ: ನಿವೇಶನ ಕಳೆದುಕೊಂಡ ಕುಟುಂಬಕ್ಕೆ ಶಾಸಕರ ಭರವಸೆ

September 19, 2018

ತಿ.ನರಸೀಪುರ: ತ್ರಿವೇಣಿ ಸಂಗಮ ಸೌಂದರ್ಯೀಕರಣ ಕಾಮಗಾರಿಗೆ ಒತ್ತುವರಿ ತೆರವು ಕಾರ್ಯಾಚರಣೆಯಿಂದಾಗಿ ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯದ ಬಳಿ ನಿವೇಶನ ಕಳೆದುಕೊಂಡ ಕುಟುಂಬಗಳನ್ನು ಭೇಟಿ ಮಾಡಿ, ಅಭಿವೃದ್ಧಿ ಕಾಮಗಾರಿಗೆ ಸಹಕರಿಸುವಂತೆ ಮನವೊಲಿಸಿದ ಶಾಸಕ ಎಂ.ಅಶ್ವಿನ್‍ಕುಮಾರ್ ಪರ್ಯಾಯ ನಿವೇಶನ ಕಲ್ಪಿಸುವ ಭರವಸೆಯನ್ನು ನೀಡಿದರು. ಪಟ್ಟಣದ ರಾಷ್ಟ್ರೀಯ ಹೆದ್ಧಾರಿ 212ರ ಬಳಿ ಹೆದ್ಧಾರಿ ಸೇತುವೆ ರಕ್ಷಣೆ ಹಾಗೂ ತ್ರಿವೇಣಿ ಸಂಗಮ ಸೌಂದರ್ಯೀಕರಣಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 100 ಕೋಟಿ ರೂ.ಗಳ ಯೋಜನೆ ರೂಪಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ…

ಲಕ್ಷ್ಮೀಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನೆ
ಮೈಸೂರು

ಲಕ್ಷ್ಮೀಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನೆ

September 19, 2018

ಬೈಲಕುಪ್ಪೆ: ಲಕ್ಷ್ಮೀಪುರ ಗ್ರಾಮದ ಸಮುದಾಯ ಭವನದ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿದ ಗಣಪತಿ ವಿಗ್ರಹವನ್ನು ಇಂದು ವಿಸರ್ಜಿಸಲಾಯಿತು. ಗ್ರಾಮದ ಯಜಮಾನರ ಸಮ್ಮುಖದಲ್ಲಿ ಎಲ್ಲಾ ಸಮುದಾಯದ ಯುವಕರು, ಮಹಿಳೆಯರು ಸೇರಿದಂತೆ ಹಲವರು ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಿರಿಯಾಪಟ್ಟಣ ತಾಲೂಕು ಲಕ್ಷ್ಮೀಪುರ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ 5.5 ಅಡಿ ಎತ್ತರದ ಗಣಪತಿಯನ್ನು ಟ್ರ್ಯಾಕ್ಟರ್‍ನಲ್ಲಿ ಕುಳ್ಳರಿಸಿ ವಿವಿಧ ಹೂಗಳಿಂದ ಶೃಂಗರಿಸಿ, ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಿ, ಅರ್ಚಕರಿಂದ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗ್ರಾಮದ ಯುವಕರು…

ಕೋಟೆಯಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ
ಮೈಸೂರು

ಕೋಟೆಯಲ್ಲಿ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ

September 19, 2018

ಹೆಚ್.ಡಿ.ಕೋಟೆ: ಸಾಹಸಸಿಂಹ ವಿಷ್ಣುವರ್ಧನ್ ತಮ್ಮ ಮನೋಜ್ಞ ಅಭಿನಯದ ಮೂಲಕ ಸದಾ ಕನ್ನಡಿಗರ ಮನಸ್ಸಿನಲ್ಲಿ ಹಸಿರಾಗಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಎನ್.ವಿಜಯಕುಮಾರ್ ತಿಳಿಸಿದರು. ಪಟ್ಟಣದ ಬಾಪೂಜಿ ವೃತ್ತದಲ್ಲಿ ಡಾ.ವಿಷ್ಣುವರ್ಧನ್ ಸೇವಾ ಸಮಿತಿಯಿಂದ ಏರ್ಪಡಿಸಿದ್ದ 69ನೇ ಹುಟ್ಟು ಹಬ್ಬವನ್ನು ವಿಷ್ಟು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಡಾ. ವಿಷ್ಣುವರ್ಧನ್ ಅಭಿನಯಿಸಿದ ನಾಗರಹಾವು, ಬಂಧನ, ಮುತ್ತಿನಹಾರ, ಸುಪ್ರಭಾತ ಸೇರಿದಂತೆ ನೂರಾರು ಉತ್ತಮ ಚಿತ್ರಗಳನ್ನು ಕನ್ನಡ ಚಿತ್ರ ರಸಿಕರಿಗೆ ನೀಡಿದ್ದಾರೆ. ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದರು, ಅಭಿಮಾನಿಗಳಾದ ತಾವು ಕೂಡ ಅವರ…

ಭೂ ಪರಿವರ್ತನೆ ಮತ್ತಷ್ಟು ಸರಳ ಆನ್‍ಲೈನ್ ಅರ್ಜಿ ಸಲ್ಲಿಸಿದ 10 ದಿನದಲ್ಲಿ ವಿಲೇವಾರಿ
ಮೈಸೂರು

ಭೂ ಪರಿವರ್ತನೆ ಮತ್ತಷ್ಟು ಸರಳ ಆನ್‍ಲೈನ್ ಅರ್ಜಿ ಸಲ್ಲಿಸಿದ 10 ದಿನದಲ್ಲಿ ವಿಲೇವಾರಿ

September 18, 2018

ಬೆಂಗಳೂರು:  ರಾಜ್ಯದ ನಗರ ಪ್ರದೇಶ ವ್ಯಾಪ್ತಿಯಲ್ಲಿನ ಭೂ ಪರಿವರ್ತನೆ ಪ್ರಕರಣಗಳನ್ನು ಇತ್ಯರ್ಥ ಗೊಳಿಸುವಲ್ಲಿ ನಿಯಮದಲ್ಲಿ ಸರಳ ಮತ್ತು ಪಾರದರ್ಶಕತೆ ತಂದಿದೆ. ಇನ್ನು ಮುಂದೆ ಆಸಕ್ತರು ನಗರ ಪ್ರದೇಶ ವ್ಯಾಪ್ತಿಯಲ್ಲಿ ತಮ್ಮ ಜಮೀನನ್ನು ಕೃಷಿಯಿಂದ ಬೇರೆ ಉದ್ದೇಶಕ್ಕೆ ಬಳಕೆ ಮಾಡಿ ಕೊಳ್ಳಲು ಆನ್‍ಲೈನ್ ಮೂಲಕ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ಅವರ ಮನವಿ ವಿಲೇವಾರಿಗೊಳ್ಳುತ್ತದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಆಸಕ್ತರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲೇ ಸ್ಥಳೀಯ ನಗರ ಯೋಜನಾ…

ತ್ರಿಕೋನ ಪ್ರೇಮ ಪ್ರಕರಣದಲ್ಲಿ ಹತ್ಯೆ
ಮೈಸೂರು

ತ್ರಿಕೋನ ಪ್ರೇಮ ಪ್ರಕರಣದಲ್ಲಿ ಹತ್ಯೆ

September 18, 2018

ಹುಣಸೂರು: ಯುವಕನೊಬ್ಬನ ನಿಗೂಢ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಹುಣಸೂರು ಪೊಲೀಸರು ಯಶಸ್ವಿಯಾಗಿದ್ದು, ಇದರೊಂದಿಗೆ ತ್ರಿಕೋನ ಪ್ರೇಮ ಪ್ರಕರಣವೇ ಹತ್ಯೆಗೆ ಕಾರಣ ವೆಂಬುದೂ ಬೆಳಕಿಗೆ ಬಂದಿದೆ. ತಾಲೂಕಿನ ಜಾಬಗೆರೆ ಗ್ರಾಮದ ನೀಲನಾಯ್ಕ ಅವರ ಪುತ್ರ ರಮೇಶ ನಾಯಕ(22)ನ ನಿಗೂಢ ಹತ್ಯೆ ಪ್ರಕರಣವನ್ನು ಭೇದಿಸಿದ್ದು, ಮೋದೂರು ಗ್ರಾಮದ ರಮೇಶ್ ಅವರ ಪುತ್ರ ಪುಟ್ಟನಾಯಕ ಹಾಗೂ 17 ವರ್ಷದ ಬಾಲಕನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಓರ್ವ ಯುವತಿಯನ್ನು, ಹತ್ಯೆಯಾದ ರಮೇಶ ನಾಯಕ ಹಾಗೂ ಕೊಲೆಗಾರ ಪುಟ್ಟನಾಯಕ ಇಬ್ಬರೂ ಪ್ರೇಮಿಸುತ್ತಿದ್ದರು ಎನ್ನಲಾಗಿದ್ದು,…

ಇಂದು 18 ಶಾಸಕರ ರಾಜೀನಾಮೆ?
ಮೈಸೂರು

ಇಂದು 18 ಶಾಸಕರ ರಾಜೀನಾಮೆ?

September 18, 2018

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕಾಂಗ್ರೆಸ್‍ನಲ್ಲಿನ ಭಿನ್ನಮತೀಯ ಚಟುವಟಿಕೆ ತಾರಕಕ್ಕೇರಿದ್ದು, ಅದು ನಾಳೆ ನಿರ್ಣಾಯಕ ಹಂತ ತಲುಪಲಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‍ನಲ್ಲಿ ತೀವ್ರ ಅಸಮಾಧಾನಗೊಂಡಿರುವ 18 ಶಾಸಕರು ರಾಜ್ಯಪಾಲರು ಇಲ್ಲವೇ ಸ್ಪೀಕರ್ ಭೇಟಿ ಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀ ನಾಮೆ ನೀಡಲಿದ್ದಾರೆ ಎಂದು ಹೇಳಲಾ ಗುತ್ತಿದೆ. ಈಗಾಗಲೇ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಸಂಬಂಧ ರೊಚ್ಚಿಗೆದ್ದಿ ರುವ ಸಚಿವ ರಮೇಶ್ ಜಾರಕಿಹೊಳಿ ಉತ್ತರ ಕರ್ನಾ ಟಕದ ತಮ್ಮ ಬೆಂಬಲಿತ ಶಾಸಕ ರೊಂದಿಗೆ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ…

ಬೇರೆಯವರಿಗೋಸ್ಕರವೇ ಬದುಕು ಮುಡಿಪಾಗಿಟ್ಟು ದುಡಿಯುವ ಶ್ರಮಜೀವಿ ಸಮುದಾಯ ವಿಶ್ವಕರ್ಮ
ಮೈಸೂರು

ಬೇರೆಯವರಿಗೋಸ್ಕರವೇ ಬದುಕು ಮುಡಿಪಾಗಿಟ್ಟು ದುಡಿಯುವ ಶ್ರಮಜೀವಿ ಸಮುದಾಯ ವಿಶ್ವಕರ್ಮ

September 18, 2018

ಮೈಸೂರು: ವಿಗ್ರಹಗಳ ಕೆತ್ತನೆ, ಮರಗೆಲಸ, ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ ಹೀಗೆ ಮನುಷ್ಯ ಜೀವನದಲ್ಲಿ ಅಗತ್ಯವಿರುವುದೆಲ್ಲವೂ ವಿಶ್ವಕರ್ಮ ಸಮುದಾಯದ ಕೊಡುಗೆ. ದೈಹಿಕ ಶ್ರಮ ವಹಿಸಿ ದುಡಿಯುವ ಸಮುದಾಯವೆಂದರೆ ಅದು ವಿಶ್ವಕರ್ಮರು ಮಾತ್ರ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಮೈಸೂರಿನ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಜಂಟಿಯಾಗಿ ಆಯೋಜಿ ಸಿದ್ದ ಜಿಲ್ಲಾ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ…

ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ
ಮೈಸೂರು

ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ

September 18, 2018

ಬೆಂಗಳೂರು: ಜನ ಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‍ಗೆ 2 ರೂ.ವರೆಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಇಳಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಂದ ವ್ಯಕ್ತವಾದ ವಿರೋಧಕ್ಕೆ ಮನ್ನಣೆ ನೀಡಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರ ದಿನನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡುತ್ತಲೇ ಇದೆ. ಇದು…

ಆಪರೇಷನ್ ಕಮಲ ಕಾರ್ಯಾಚರಣೆ ವಿವರಣೆ ಕೇಳಿದ ಅಮಿತ್ ಷಾ
ಮೈಸೂರು

ಆಪರೇಷನ್ ಕಮಲ ಕಾರ್ಯಾಚರಣೆ ವಿವರಣೆ ಕೇಳಿದ ಅಮಿತ್ ಷಾ

September 18, 2018

ಬೆಂಗಳೂರು:  ಕರ್ನಾಟಕದಲ್ಲಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಮೀಟರ್ ಬಡ್ಡಿ, ಮಟ್ಕಾ ಹಾಗೂ ಇಸ್ಪೀಟ್ ದಂಧೆಕೋರ ವ್ಯಕ್ತಿಗಳನ್ನು ಮುಂದಿಟ್ಟುಕೊಂಡು ಕಾರ್ಯಾಚರಣೆಗಿಳಿದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಂದ ಮಾಹಿತಿ ಕೇಳಿದ್ದಾರೆ. ಕುಮಾರಸ್ವಾಮಿ ಅವರೇ ಕಿಂಗ್ ಪಿನ್ಗಳ ಬಗ್ಗೆ ಸಾರ್ವಜನಿಕವಾಗಿ ಬಹಿರಂಗ ಹೇಳಿಕೆ ನೀಡಿದ ನಂತರವೂ ಅವರೇ ಸರ್ಕಾರ ಉರುಳಿಸಲು ಹೊರಟಿದ್ದಾರೆ ಎನ್ನುವುದನ್ನು ನೀವು ಮತ್ತೊಮ್ಮೆ ನಿಜ ಮಾಡಿದ್ದೀರಿ. ಮದುವೆ ಸಮಾರಂಭವೊಂದಕ್ಕೆ ನೀವು ಗಣ್ಯ ವ್ಯಕ್ತಿಗಳಾಗಿ ಹೋಗಿದ್ದೀರಿ, ಈ…

1 1,383 1,384 1,385 1,386 1,387 1,611
Translate »