ಮೈಸೂರು

ಬಂದ್ ಯಶಸ್ಸಿಗೆ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಮನವಿ
ಮೈಸೂರು

ಬಂದ್ ಯಶಸ್ಸಿಗೆ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಮನವಿ

September 10, 2018

ಮೈಸೂರು:  ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಸೋಮವಾರ ನೀಡಿರುವ ಭಾರತ್ ಬಂದ್ ಕರೆಗೆ ಮೈಸೂರಿನಲ್ಲಿಯೂ ಲಾರಿ, ಕಾರು ಇನ್ನಿತರ ವಾಹನಗಳ ಮಾಲೀಕರು, ವಿವಿಧ ಸಂಘಟನೆಗಳು ಬೆಂಬಲ ನೀಡಿವೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಕಾಂಗ್ರೆಸ್ ಉಸ್ತುವಾರಿ ಪಿ.ಸಿ.ವಿಷ್ಣುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಇಷ್ಟೊಂದು ಏರಿಕೆ ಕಂಡಿರಲಿಲ್ಲ. ಪ್ರಧಾನಿ ನರೇಂದ್ರ…

ಕೇಂದ್ರ ತನಿಖಾ ತಂಡ ದುರ್ಬಳಕೆ ಮಾಡಿಕೊಂಡು ನನ್ನ ಸರ್ಕಾರ ಅದ್ಹೇಗೆ ಬೀಳಿಸುತ್ತಾರೋ ನೋಡೆ ಬಿಡೋಣ
ಮೈಸೂರು

ಕೇಂದ್ರ ತನಿಖಾ ತಂಡ ದುರ್ಬಳಕೆ ಮಾಡಿಕೊಂಡು ನನ್ನ ಸರ್ಕಾರ ಅದ್ಹೇಗೆ ಬೀಳಿಸುತ್ತಾರೋ ನೋಡೆ ಬಿಡೋಣ

September 9, 2018

ಬೆಂಗಳೂರು: ಕೇಂದ್ರ ತನಿಖಾ ತಂಡಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅದು ಹೇಗೆ ಸರ್ಕಾರವನ್ನು ಬೀಳಿಸುತ್ತಾರೋ ನೋಡೇ ಬಿಡೋಣ ಎಂದು ಸವಾಲು ಹಾಕಿದ್ದಾರೆ. ದೆಹಲಿ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವುದೇ ಕ್ಷಣದಲ್ಲಿ ಪ್ರಮಾಣವಚನ ಸ್ವೀಕರಿಸುವ ಸಲುವಾಗಿ ಇಂದು ಬೆಳಿಗ್ಗೆಯೇ ಪಕ್ಷದ ಪ್ರಮುಖ ಸಭೆಗಳಿಂದಲೇ ಅರ್ಧಕ್ಕೆ ಎದ್ದು ಬಂದಿದ್ದಾರೆ. ಅವರ ಭ್ರಮೆ ಹೇಗೆ ಈಡೇರುತ್ತದೋ ನಾನೂ ನೋಡಿಯೇ ಬಿಡುತ್ತೇನೆ, ನಮಗೂ ರಾಜಕೀಯ…

ಡಿಕೆಶಿ ಕುಟುಂಬದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಇಡಿಗೆ ಬಿಎಸ್‍ವೈ ಪತ್ರ
ಮೈಸೂರು

ಡಿಕೆಶಿ ಕುಟುಂಬದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಇಡಿಗೆ ಬಿಎಸ್‍ವೈ ಪತ್ರ

September 9, 2018

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ನಡೆಸಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೆದಿದ್ದಾರೆ ಎನ್ನಲಾದ ಪತ್ರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಉಂಟು ಮಾಡಿದೆ. ಶಿವಕುಮಾರ್ ಅಷ್ಟೇ ಅಲ್ಲದೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಎಂ.ಬಿ. ಪಾಟೀಲ್ ಹಾಗೂ ಗೋವಿಂದರಾಜ್ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳು ತನಿಖೆ ನಡೆಸಿ ಮೈತ್ರಿ ಸರ್ಕಾರ ಉರುಳಿಸಲು…

ನಾಳಿನ ‘ಭಾರತ್ ಬಂದ್’ಗೆ ಜೆಡಿಎಸ್ ಬೆಂಬಲ
ಮೈಸೂರು

ನಾಳಿನ ‘ಭಾರತ್ ಬಂದ್’ಗೆ ಜೆಡಿಎಸ್ ಬೆಂಬಲ

September 9, 2018

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಸೆ. 10ರಂದು ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಬೆಂಬಲ ನೀಡಿದೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್, ಭಾರತ್ ಬಂದ್‍ಗೆ ಪೂರ್ಣ ಬೆಂಬಲ ನೀಡಲಾಗುವುದು. ದೆಹಲಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಡ್ಯಾನಿಶ್ ಆಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ…

ಬಡ ಹೃದ್ರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ
ಮೈಸೂರು

ಬಡ ಹೃದ್ರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ

September 9, 2018

ಬೆಂಗಳೂರು:  ಬಡವರು, ಶ್ರೀಮಂತರು ಎಂಬ ಭೇದವಿಲ್ಲದೆ ಹೃದ್ರೋಗಗಳು ಎಲ್ಲರಲ್ಲೂ ಕಾಣಿಸಿಕೊಳ್ಳುತ್ತವೆ. ಬಡರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಖಾಸಗಿ ಸಂಸ್ಥೆಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಕರೆ ನೀಡಿದರು. ನಗರದಲ್ಲಿ ಹೃದಯ ಮತ್ತು ಶ್ವಾಸಕೋಶ ಶಸ್ತ್ರ ಚಿಕಿತ್ಸಕರ ಸಂಸ್ಥೆಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, 1960ರಲ್ಲಿ ಹೃದಯಾಘಾತಗಳ ಪ್ರಮಾಣ ಶೇ.4ರಷ್ಟಿತ್ತು, ಈಗ ಶೇ.12ರಷ್ಟಾಗಿದೆ, 2020ರ ಒಳಗೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದರು. ಮಧುಮೇಹ, ರಕ್ತದೊತ್ತಡದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಅಧಿಕವಾಗಿವೆ, ಈ ಮೊದಲು…

ಬೆಂಗಳೂರಿನಲ್ಲೇ ಏರೋ ಇಂಡಿಯಾ 2019
ಮೈಸೂರು

ಬೆಂಗಳೂರಿನಲ್ಲೇ ಏರೋ ಇಂಡಿಯಾ 2019

September 9, 2018

ಬೆಂಗಳೂರು: ಕರ್ನಾಟಕ ರಾಜ್ಯದ ಪ್ರತಿಷ್ಠೆ ಎಂದೇ ಹೇಳಲಾಗುತ್ತಿರುವ ‘ಏರೋ ಇಂಡಿಯಾ 2019’ನ್ನು ಬೆಂಗಳೂರಿನಲ್ಲಿಯೇ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀವರ್ಷ ನಡೆಸಲಾಗುತ್ತಿದ್ದ ವೈಮಾನಿಕ ಪ್ರದರ್ಶನ ಏರೋ ಇಂಡಿಯಾವನ್ನು ಈ ಬಾರಿ ಉತ್ತರ ಪ್ರದೇಶದ ಲಖನೌಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದಕ್ಕೆ ಇಂಬು ನೀಡುವಂತೆ ಇತ್ತೀಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ ರಕ್ಷಣಾ ಸಚಿವೆ ಸೀತಾರಾಮನ್ ಅವರು ಕೂಡ ಹೇಳಿಕೆಯನ್ನು ನೀಡಿದ್ದರು….

ಉನ್ನತ ಶಿಕ್ಷಣ ಇಲಾಖೆಯ 5 ಸಾವಿರ ಹುದ್ದೆ 6 ತಿಂಗಳಲ್ಲಿ ಭರ್ತಿ
ಮೈಸೂರು

ಉನ್ನತ ಶಿಕ್ಷಣ ಇಲಾಖೆಯ 5 ಸಾವಿರ ಹುದ್ದೆ 6 ತಿಂಗಳಲ್ಲಿ ಭರ್ತಿ

September 9, 2018

ಮೈಸೂರು: 15 ವರ್ಷದಿಂದ ಒಬ್ಬ ಪ್ರಾಂಶುಪಾಲರ ನೇಮಕವಾಗಿಲ್ಲ. ಸುಮಾರು 5 ಸಾವಿರ ಹುದ್ದೆಗಳು ಖಾಲಿಯಿದ್ದು, ಮುಂದಿನ 6 ತಿಂಗಳಲ್ಲಿ ಪ್ರಾಂಶುಪಾಲರ ಹುದ್ದೆ ಸೇರಿದಂತೆ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಹೂಟಗಳ್ಳಿ ಸರಸ್ವತಿ ಕನ್ವೆನ್ಷನಲ್ ಹಾಲ್‍ನಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಶಿಕ್ಷಕರ ದಿನಾಚರಣೆ ಆಚರಣಾ ಸಮಿತಿ ಶನಿವಾರ ಆಯೋಜಿಸಿದ್ದ ಮೈಸೂರು ತಾಲೂಕು ಮಟ್ಟದ ಶಿಕ್ಷಕರ…

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು
ಮೈಸೂರು

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು

September 9, 2018

ಮೈಸೂರು: ಕಳೆದ ಒಂದು ತಿಂಗಳಿಂದ ಮೈಸೂರಿನಲ್ಲಿ ಚಾತುರ್ಮಾಸ ವ್ರತಾಚರಣೆಯಲ್ಲಿ ತೊಡಗಿರುವ ಪಾಂಡವಪುರದ ಅಪ್ಪಾಜಿ ಮಠ ಹಾಗೂ ಮಹಾಕಾಳಿ ಶ್ರೀ ಚಕ್ರೇಶ್ವರಿ ಪೀಠದ ಸ್ವಾಮೀಜಿ ಶ್ರೀ ವಿದ್ಯಾಹಂಸಭಾರತಿ ಮಹಾಸ್ವಾಮೀಜಿ ವಿರುದ್ಧ ಕುವೆಂಪುನಗರ ಠಾಣೆ ಪೊಲೀಸರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ಪ್ರಕರಣ ದಾಖಲು ಮಾಡಿದ್ದಾರೆ. ತನಗೆ ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ಪದ ಪ್ರಯೋಗ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ನೊಂದ ಮಹಿಳೆ ಸ್ವಾಮೀಜಿ ಹಾಗೂ ಅವರ ಕೃತ್ಯಕ್ಕೆ ತನ್ನ ಗಂಡನೇ ಕುಮ್ಮಕ್ಕು ನೀಡಿದ್ದಾರೆ ಎಂದು ಲಿಖಿತ…

ಪೂರ್ಣಚಂದ್ರ ತೇಜಸ್ವಿ ಸೂಕ್ಷ್ಮತೆಯುಳ್ಳ `ಜನವಿಜ್ಞಾನಿ’
ಮೈಸೂರು

ಪೂರ್ಣಚಂದ್ರ ತೇಜಸ್ವಿ ಸೂಕ್ಷ್ಮತೆಯುಳ್ಳ `ಜನವಿಜ್ಞಾನಿ’

September 9, 2018

 ಪರಿಸರವಾದಿ ನಾಗೇಶ್ ಹೆಗಡೆ ಅಭಿಮತ ಮೈಸೂರಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ-80’ ಸ್ಮರಣೆ ಮೈಸೂರು: ಮಣ್ಣಿನ ಸೊಗಡು, ಸಸ್ಯ ಸಂಪತ್ತು, ನದಿ-ತೊರೆಗಳ ಬಗೆಗೆ ಪ್ರತಿಸ್ಪಂದನೆ ಮೂಲಕ ಅಭಿವ್ಯಕ್ತಿಗೊಳಿಸಿದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಕನ್ನಡದ ಸತ್ವವನ್ನು ಜಗತ್ತಿಗೆ ಸಾರಿದ `ಜನವಿಜ್ಞಾನಿ’ ಎಂದು ಚಿಂತಕ ಹಾಗೂ ಪರಿಸರವಾದಿ ನಾಗೇಶ್ ಹೆಗಡೆ ಸ್ಮರಿಸಿದರು. ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಅಭಿರುಚಿ ಪ್ರಕಾಶನ, ಮೈಸೂರು ಫಿಲಂ ಸೊಸೈಟಿ, ನಿರಂತರ, ಮಾನವ ಮಂಟಪ, ಕರ್ನಾಟಕ ರಾಜ್ಯ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ 80ನೇ ಜನ್ಮದಿನ…

ಅರಮನೆ ಆವರಣದಲ್ಲಿ ದಸರಾ ಆನೆಗಳಿಗೆ ವಿಶೇಷ ತಯಾರಿ
ಮೈಸೂರು

ಅರಮನೆ ಆವರಣದಲ್ಲಿ ದಸರಾ ಆನೆಗಳಿಗೆ ವಿಶೇಷ ತಯಾರಿ

September 9, 2018

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ವಿವಿಧ ಆನೆ ಶಿಬಿರಗಳಿಂದ ಆಗಮಿಸಿ, ಅರಮನೆಯ ಅಂಗಳದಲ್ಲಿ ಬೀಡುಬಿಟ್ಟಿರುವ ಅರ್ಜುನ ನೇತೃತ್ವದ ಗಜಪಡೆಗೆ ಪ್ರತಿದಿನ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಜಂಬೂ ಸವಾರಿ ದೃಷ್ಟಿಯಿಂದ ಆನೆಗಳತ್ತ ವಿಶೇಷ ಗಮನ ನೀಡಲಾಗುತ್ತಿದ್ದು, ದಿನದಿಂದ ದಿನಕ್ಕೆ ಪೌಷ್ಟಿಕ ಆಹಾರದ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ. ಮೈಸೂರು ಅರಮನೆಯ ಆವರಣದಿಂದ ಬನ್ನಿಮಂಟಪದಲ್ಲಿರುವ ಪಂಜಿನ ಕವಾಯಿತು ಮೈದಾನದವರೆಗೆ ಸುಮಾರು 4 ಕಿ.ಮೀ. ಕ್ರಮಿಸಬೇಕಾದ ದಸರಾ ಆನೆಗಳಿಗೆ ರಾಜ ಭೋಜನ ನೀಡಿ, ಅವುಗಳ ಶಕ್ತಿ ವೃದ್ಧಿಸುವಂತೆ ಮಾಡಲಾಗುತ್ತಿದೆ. ಆ ಮೂಲಕ ಜಂಬೂ…

1 1,399 1,400 1,401 1,402 1,403 1,611
Translate »