ಮೈಸೂರು: ನಗರ ಸ್ಥಳೀಯ ಸಂಸ್ಥೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯ ಸರ್ಕಾರ ಮಾತ್ರ ವರ್ಗಾವಣೆ ದಂಧೆ ನಡೆಸುತ್ತಿದೆ. ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಮೈಸೂರಿನ ಖಾಸಗಿ ಹೊಟೇಲ್‍ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ 52 ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆಯ ಸಿ ಗ್ರೂಪ್ ನೌಕರರು ಹಾಗೂ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ವರ್ಗಾವಣೆ ಮಾಡಬಾರದೆಂಬ ತಿಳಿವಳಿಕೆ ಮುಖ್ಯಮಂತ್ರಿ…
ಮೈಸೂರು ಪಾಲಿಕೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯರ ಮೊರೆ ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು
August 12, 2018ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಹೊರಬೀಳುತ್ತಿದ್ದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಟಿಕೆಟ್ ಗಿಟ್ಟಿಸಿಕೊಳ್ಳಲು ಲಾಭಿ ಆರಂಭಿಸಿದ್ದಾರೆ. ಶನಿವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್‍ನ ಅನೇಕ ಹಾಲಿ, ಮಾಜಿ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಸ್ಥಳೀಯ ಮುಖಂಡರು ಭೇಟಿ ನೀಡಿದ್ದರು. ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಟಿಕೆಟ್ ಗಿಟ್ಟಿಸಲು ಹೀಗೆ ಪಕ್ಷದ ಹಿರಿಯ ನಾಯಕರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಸ್ಥಳೀಯ ಮುಖಂಡರು ದೌಡಾಯಿಸಿದ್ದರು. ಆಕಾಂಕ್ಷಿಗಳು ಟಿಕೆಟ್‍ಗಾಗಿ ಶಿಫಾರಸ್ಸು ಮಾಡುವಂತೆ ಸಿದ್ದರಾಮಯ್ಯ…
ನಂಜನಗೂಡಿಗೆ ನುಗ್ಗಿದ ಕಪಿಲೆ!ಮೈಸೂರು-ಊಟಿ, ಸುತ್ತೂರು ರಸ್ತೆ ಸಂಪರ್ಕ ಕಡಿತ
August 11, 2018ನಂಜನಗೂಡು: ಕೇರಳದ ವೈನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗಿ ಅಲ್ಲಿಂದ 80 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಿದ ಪರಿಣಾಮ ಉಂಟಾದ ಪ್ರವಾಹದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ನಲುಗಿ ಹೋಗಿದೆ. ಅಪಾಯದ ಮಟ್ಟ ಮೀರಿ ಕಪಿಲೆ ಹರಿಯುತ್ತಿರುವುದರಿಂದ ಮೈಸೂರು-ನಂಜನಗೂಡು ಹಾಗೂ ಮೈಸೂರು-ಸುತ್ತೂರು ರಸ್ತೆ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ನಂಜನಗೂಡಿನ ಮಲ್ಲನಮೂಲೆ ಮಠದ ಬಳಿ ಹೆದ್ದಾರಿ, ಪ್ರವಾಹದ ನೀರಿನಲ್ಲಿ ಮುಳುಗಿದೆ. ರಸ್ತೆ ಮೇಲೆ 2ರಿಂದ 3 ಅಡಿ ನೀರು ಹರಿಯು ತ್ತಿರುವ…
ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸಅರ್ವೆ ನಂ.41ರ ನಿವಾಸಿಗಳಿಂದ ಇಂದು ಮುಖ್ಯಮಂತ್ರಿ ಭೇಟಿ
August 11, 2018ಮೈಸೂರು: ಕಳೆದ ಆರು ವರ್ಷಗಳ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಮೈಸೂರಿನ ಕುರುಬಾರಹಳ್ಳಿ ಸರ್ವೆ ನಂ.4 ಹಾಗೂ ಆಲನಹಳ್ಳಿ ಸರ್ವೆ ನಂ.41ರಲ್ಲಿ ವಾಸವಿರುವ ಸಾವಿರಾರು ನಿವಾಸಿಗಳು ನಾಳೆ (ಆ.11) ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ತಮ್ಮ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಲಿದ್ದಾರೆ. ಮೈಸೂರಿನ ಇನ್ಫೋಸಿಸ್ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿಗಳು ನಾಳೆ ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನ ಪಿಂಜರಾಪೋಲ್‍ಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ಕುರುಬಾರಹಳ್ಳಿ ಸರ್ವೆ ನಂ.4ರ ನಿವಾಸಿಗಳ ಹಿತ…
ಕರ್ನಾಟಕ ಮುಕ್ತ ವಿವಿ ಸಿಬ್ಬಂದಿ ಸಂಭ್ರಮಾಚರಣೆ
August 11, 2018ಮೈಸೂರು: ಮಾನ್ಯತೆ ರದ್ದುಗೊಳಿಸಿದ್ದರಿಂದ ಕಳೆದ ಮೂರು ವರ್ಷಗಳಿಂದ ಚಟುವಟಿಕೆ ಸ್ಥಗಿತಗೊಂಡು, ಸದಾ ಬಿಕೋ ಎನ್ನುತ್ತಿದ್ದ ಮೈಸೂರಿನ ಮಾನಸಗಂಗೋತ್ರಿ ಆವರಣದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲೀಗ ಸಂತಸ ಮನೆ ಮಾಡಿದೆ. ವಿಜ್ಞಾನ ವಿಷಯಗಳನ್ನೊರತುಪಡಿಸಿ ಇತರ 17 ಕೋರ್ಸುಗಳಿಗೆ ಯುಜಿಸಿ ಮಾನ್ಯತೆ ನೀಡಿ ಗುರುವಾರ ಅಧಿಸೂಚನೆ ಪ್ರಕಟಿಸುತ್ತಿದ್ದಂತೆಯೇ ಮುಕ್ತ ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮೊಗದಲ್ಲಿ ನಗೆ ಬೀರಿದೆ. ಕಳೆದ ಮೂರು ವರ್ಷಗಳಿಂದ ಪಾಠ ಪ್ರವಚನಗಳು, ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತವಾಗಿದ್ದ ಕಾರಣ ಸಿಬ್ಬಂದಿ ಹಾಗೂ ಪ್ರಾಧ್ಯಾಪಕರು ಚಿಂತೆಗೀಡಾಗಿದ್ದರು. ಹೊಸ…
ಮೈಸೂರು ಮಹಾನಗರ ಪಾಲಿಕೆ ಚುನಾವಣೆ: 65 ವಾರ್ಡ್‍ಗಳಲ್ಲಿ 725 ಮತಗಟ್ಟೆ ಸ್ಥಾಪನೆ
August 11, 2018ಮೈಸೂರು: ಆಗಸ್ಟ್ 31ರಂದು ನಡೆಯಲಿರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ 65 ವಾರ್ಡ್‍ಗಳ ಚುನಾವಣೆಗೆ ಒಟ್ಟು 725 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅಡಿಷನಲ್ ಡಿಸಿ ಟಿ.ಯೋಗೇಶ್ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 3,97,692 ಮಹಿಳೆಯರೂ ಸೇರಿದಂತೆ ಒಟ್ಟು 7,99,422 ಮತದಾರರು ಹಕ್ಕು ಚಲಾಯಿಸಲಿದ್ದು, ವಿಧಾನಸಭಾ ಚುನಾವಣೆ ವೇಳೆ ಪರಿಷ್ಕರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಹೆಸರಿರುವವರೆಲ್ಲರೂ ಪಾಲಿಕೆ ಚುನಾವಣೆಯಲ್ಲಿ ಮತ ಹಾಕಲು ಹಕ್ಕುಳ್ಳವರಾಗಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತೀ ಮತಗಟ್ಟೆಗೆ ಓರ್ವ ಅಧ್ಯಕ್ಷಾಧಿಕಾರಿ (Returning…
ಯುಜಿಸಿಗೆ 9000 ಪುಟಗಳ ವರದಿ ಸಲ್ಲಿಸಿದ್ದೇವೆ: ಮುಕ್ತ ವಿವಿ ಕುಲಪತಿ ಪ್ರೊ. ಡಿ.ಶಿವಲಿಂಗಯ್ಯ
August 11, 2018ಮೈಸೂರು: 9000 ಪುಟಗಳ ವರದಿಯೊಂದಿಗೆ 32 ಕೋರ್ಸುಗಳಿಗೆ ಮಾನ್ಯತೆ ಕೋರಿ ಯುಜಿಸಿಗೆ ಪ್ರಸ್ತಾವನೆ ಸಲ್ಲಿಸಿದ್ದೆವು. ಈಗ 17 ಕೋರ್ಸುಗಳನ್ನು ನಡೆಸಲು ಯುಜಿಸಿ ಮಾನ್ಯತೆ ನೀಡಿದೆ. ಉಳಿದ ಕಾರ್ಯಕ್ರಮಗಳಿಗೂ ಅನುಮತಿ ನೀಡುವಂತೆ ಕೋರಿ ನಾವು ಯುಜಿಸಿಗೆ ಮತ್ತೆ ಮನವಿ ಮಾಡು ತ್ತೇವೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಡಿ.ಶಿವಲಿಂಗಯ್ಯ ಸ್ಪಷ್ಟಪಡಿಸಿದ್ದಾರೆ. ನಮ್ಮ ಅವಿರತ ಪ್ರಯತ್ನ ಫಲ ನೀಡಿದೆ. ಈ ಹಿಂದೆ ಮಾಡಿದ ತಪ್ಪನ್ನು ಮುಂದೆಂದೂ ಮಾಡುವುದಿಲ್ಲ. ಯುಜಿಸಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮುಕ್ತ…
ವಿಜಯನಗರದಲ್ಲಿ ಭಾನುವಾರದ ರೈತ ಸಂತೆ ನಾಳೆಯಿಂದ ಪುನಾರಂಭ
August 11, 2018ಮೈಸೂರು: ಮುಡಾ ವತಿಯಿಂದ ಮೈಸೂರು ವಿಜಯನಗರ 2ನೇ ಹಂತದಲ್ಲಿ ನಿರ್ಮಿಸಿರುವ ಸಂತೆ ಕಟ್ಟಡದಲ್ಲಿ ಆ.12ರಂದು ಭಾನುವಾರದ ರೈತ ಸಂತೆ ಪುನಾರಂಭವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎನ್.ಎಸ್.ಶರ್ಮಾ ಇಂದಿಲ್ಲಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಆ ದಿನ ಬೆಳಿಗ್ಗೆ 7 ಗಂಟೆಗೆ ಶಾಸಕ ಎಲ್.ನಾಗೇಂದ್ರ ಸಂತೆಗೆ ಚಾಲನೆ ನೀಡಲಿದ್ದು, ಎಪಿಎಂಸಿ ಕಾರ್ಯದರ್ಶಿ ಮಹೇಶ್ ಮತ್ತು ಮುಡಾ ಅಧಿಕಾರಿಗಳು ಭಾಗವಹಿಸು ವರು. ಭಾನುವಾರದ ರೈತ ಸಂತೆಯಲ್ಲಿ…
ನಾಳೆ ನಂದನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ
August 11, 2018ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿ ನೂತನ ನಂದನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯನ್ನು ಆ.12ರಂದು ಬೆಳಿಗ್ಗೆ 10 ಗಂಟೆಗೆ ಸುತ್ತೂರು ಶ್ತೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟನೆ ನೆರವೇರಿಸ ಲಿದ್ದಾರೆ ಎಂದು ಡಾ.ಕೆ.ವಿ.ರಾಜೇಶ್ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಂಸದ ಪ್ರತಾಪ್‍ಸಿಂಹ, ಶಾಸಕ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಉಪ ಪೊಲೀಸ್ ಆಯುಕ್ತ ಎನ್. ವಿಷ್ಣುವರ್ಧನ್, ಪಾಲಿಕೆ ಸದಸ್ಯ ಶಿವಕುಮಾರ್ ಭಾಗವಹಿಸುವರು ಎಂದರು. ಸ್ವಾತಂತ್ರೋ ತ್ಸವದ ಅಂಗವಾಗಿ ಆ.13ರಿಂದ ಸೆ.30ರವರೆಗೆ ಸ್ವಾತಂತ್ರ್ಯ ಹೋರಾಟಗಾರರು, ಹಿರಿಯ…
ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ
August 11, 2018ಮೈಸೂರು: ಕೃಷ್ಣರಾಜ ಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಮುಂಜಾಗ್ರತೆಯಾಗಿ ಉತ್ತರ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾರಂಗಿ ಅಣೆಕಟ್ಟೆಯಿಂದ 20,000 ಕ್ಯೂಸೆಕ್ಸ್ ನೀರನ್ನು ಬಿಡುತ್ತಿರುವ ಕಾರಣ ಕೆಆರ್‌ಎಸ್ ಅಣೆಕಟ್ಟೆಯಿಂದ 70 ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ಮುಂಜಾನೆ ಯಿಂದ ಕಾವೇರಿ ನದಿಗೆ ಬಿಡಲಾಗುತ್ತಿದೆ. 40,000 ಕ್ಯೂಸೆಕ್ಸ್‍ಗಿಂತ ಹೆಚ್ಚು ನೀರನ್ನು ಹೊರ ಬಿಟ್ಟಲ್ಲಿ ಬೃಂದಾವನದ ಉತ್ತರ ಭಾಗದ ಎಡಮುರಿಗೆ ನೀರು ತುಂಬುವುದರಿಂದ ಅಪಾಯ ತಪ್ಪಿಸುವ ಸಲುವಾಗಿ ಬೋಟಿಂಗ್ ಪಾಯಿಂಟ್‍ನಿಂದ ಉತ್ತರ ಬೃಂದಾವನಕ್ಕೆ ಪ್ರವಾಸಿಗರು ಪ್ರವೇಶಿಸದಂತೆ…