ಮೈಸೂರು

ಮೈಸೂರು-ಬೆಂಗಳೂರು ನಡುವೆ ರೈಲಿನ ವೇಗ ಹೆಚ್ಚಳ
ಮೈಸೂರು

ಮೈಸೂರು-ಬೆಂಗಳೂರು ನಡುವೆ ರೈಲಿನ ವೇಗ ಹೆಚ್ಚಳ

August 6, 2018

ಮೈಸೂರು: ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ರೈಲುಗಳು ಇನ್ನು ಮುಂದೆ ವೇಗ ಹೆಚ್ಚಿಸಿಕೊಳ್ಳುತ್ತವೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲುಗಳ ವೇಗ ಹೆಚ್ಚಿಸುವುದಕ್ಕೆ ಮುಂದಾಗಿರುವ ನೈರುತ್ಯ ರೈಲ್ವೆ ಇಲಾಖೆ, ಹಳಿಗಳನ್ನು ಬದಲಿಸುವ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸುತ್ತಿದ್ದು, ಶೀಘ್ರವೇ ಪ್ರಯಾಣದ ಅವಧಿಯಲ್ಲಿ 20 ನಿಮಿಷಗಳ ಕಡಿತಗೊಳ್ಳಲಿದೆ. ಸಾವಿರಾರು ಮಂದಿ ಸರ್ಕಾರಿ ನೌಕರರು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಪ್ರವಾಸಿಗರು ಹಾಗೂ ನಾಗರೀಕರು ಪ್ರತಿದಿನ ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ರೈಲುಗಳನ್ನೇ ಅವಲಂಭಿಸಿದ್ದಾರೆ. ಬಸ್‍ಗಳಲ್ಲಿ ಪ್ರಯಾಣಿಸಿದರೆ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿಯೇ ಇಳಿದು ಮತ್ತೊಂದು…

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ
ಮೈಸೂರು

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ

August 6, 2018

ಮೈಸೂರು: ರಾಜಕೀಯ ಲಾಭಕ್ಕಾಗಿ ನಮ್ಮ ಸಮಾಜವನ್ನು ವೀರಶೈವ ಮತ್ತು ಲಿಂಗಾಯತ ಎಂದು ಪ್ರತ್ಯೇಕಗೊಳಿಸಿ ಒಡೆಯುವ ಪ್ರಯತ್ನ ಸದ್ಯ ವಿಫಲವಾಗಿದ್ದು, ಇನ್ನಾದರೂ ನಮ್ಮ ಸಮುದಾಯ ಇಂತಹ ರಾಜಕೀಯ ಕುತಂತ್ರಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ…

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

August 6, 2018

ಬೆಂಗಳೂರು: ಹಿರಿಯ ರಾಜ ಕೀಯ ಮುತ್ಸದ್ಧಿ, ಮಾಜಿ ಸಂಸದ, ಹುಣಸೂರು ಶಾಸಕ ಅಡಗೂರು ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವನಾಥ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ನಂತರ ನಡೆದ ಸಮಾರಂಭದಲ್ಲಿ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

August 6, 2018

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ರಾಜ್ಯ ಮಟ್ಟದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಘೋಷಿಸಿದ್ದು, ಮಿನಿ ಸಮರದ ಮೈತ್ರಿ ವದಂತಿಗೆ ತೆರೆ ಎಳೆದಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಕೆಯಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್…

ಶೈಕ್ಷಣಿಕ ಅಭಿವೃದ್ಧಿಗೆ ವಿವಿಗಳಿಂದ ಕನಿಷ್ಠ ಐದು ಹಳ್ಳಿಗಳ ದತ್ತು ಕಾನೂನು ತರಲು ಚಿಂತನೆ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು

ಶೈಕ್ಷಣಿಕ ಅಭಿವೃದ್ಧಿಗೆ ವಿವಿಗಳಿಂದ ಕನಿಷ್ಠ ಐದು ಹಳ್ಳಿಗಳ ದತ್ತು ಕಾನೂನು ತರಲು ಚಿಂತನೆ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

August 6, 2018

ಮೈಸೂರು: ವಿಶ್ವ ವಿದ್ಯಾನಿಲಯಗಳ ಕುಲಪತಿಗಳು ಹಳ್ಳಿಗಳಿಗೆ ಹೋಗಿ ಉನ್ನತ ಶಿಕ್ಷಣ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಕನಿಷ್ಠ ಐದು ಹಳ್ಳಿಗಳನ್ನು ದತ್ತು ಪಡೆದು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು. ಈ ಸಂಬಂಧ ಕಾನೂನು ತರಲು ಚಿಂತಿಸಿರುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ತಿಳಿಸಿದರು. ಮೈಸೂರಿನ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ ಭಾನುವಾರ ಏರ್ಪಡಿಸಿದ್ದ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶೈಕ್ಷಣಿಕ…

ಚೆಲುವಾಂಬ ಪಾರ್ಕ್ ಬಳಿ ಹೂವಿನ ವ್ಯಾಪಾರಕ್ಕೆ ಸ್ಥಳೀಯರ ಆಕ್ಷೇಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ ವ್ಯಾಪಾರಿಗಳು
ಮೈಸೂರು

ಚೆಲುವಾಂಬ ಪಾರ್ಕ್ ಬಳಿ ಹೂವಿನ ವ್ಯಾಪಾರಕ್ಕೆ ಸ್ಥಳೀಯರ ಆಕ್ಷೇಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ ವ್ಯಾಪಾರಿಗಳು

August 6, 2018

ಮೈಸೂರು:  ಮೈಸೂರಿನ ವಾಲ್ಮೀಕಿ ರಸ್ತೆಯಿಂದ ಚೆಲುವಾಂಬ ಪಾರ್ಕ್ ಬಳಿ ಸ್ಥಳಾಂತರಗೊಂಡಿದ್ದ ಹೂವಿನ ವ್ಯಾಪಾರಿಗಳಿಗೆ ಮತ್ತೆ ಸಂಕಟ ಉಂಟಾಗಿದ್ದು, ಪಾರ್ಕ್‍ನ ಅಂದ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹೂವಿನ ವ್ಯಾಪಾರಿಗಳಿಗೆ ಒಂಟಿಕೊಪ್ಪಲು ನಿವಾಸಿಗಳು ಅವಕಾಶ ನಿರಾಕರಿಸಿರುವುದರಿಂದ ಮತ್ತೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ವಾಲ್ಮೀಕಿ ರಸ್ತೆಯಲ್ಲಿ ಮಹಾರಾಣಿ ವಾಣಿಜ್ಯ ಕಾಲೇಜು ಈ ಶೈಕ್ಷಣಿಕ ಸಾಲಿನಿಂದ ಆರಂಭವಾಗಿರುವುದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಲ್ಮೀಕಿ ರಸ್ತೆಯ ಬದಿಯಲ್ಲಿದ್ದ 8 ಹೂವಿನ ಮಳಿಗೆಗಳು, ಟೀ ಸ್ಟಾಲ್ ಅನ್ನು ಸ್ಥಳಾಂತರ ಮಾಡುವುದಕ್ಕೆ ಸೂಚನೆ ನೀಡಲಾಗಿತ್ತು….

ಶಾಸಕ ರಾಮದಾಸ್‍ರ ಮುಂದುವರಿದ ಪಾದಯಾತ್ರೆ: ಜನರ ಸಮಸ್ಯೆ ಆಲಿಕೆ, ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಮೈಸೂರು

ಶಾಸಕ ರಾಮದಾಸ್‍ರ ಮುಂದುವರಿದ ಪಾದಯಾತ್ರೆ: ಜನರ ಸಮಸ್ಯೆ ಆಲಿಕೆ, ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

August 6, 2018

ಮೈಸೂರು:  ಶಾಸಕ ಎಸ್.ಎ.ರಾಮದಾಸ್ ಅವರು ಭಾನುವಾರ ತಮ್ಮ ಕ್ಷೇತ್ರ ವ್ಯಾಪ್ತಿಯ 31ನೇ ವಾರ್ಡ್ (ಹಳೇ ವಾರ್ಡ್ ಸಂಖ್ಯೆ 9) ನೆಲ್ಲೂರು ಶೆಡ್ಡು ಕಾಲೋನಿ, ಅಂಬೇಡ್ಕರ್ ಕಾಲೋನಿಗಳಲ್ಲಿ ಪಾದಯಾತ್ರೆ ಕೈಗೊಂಡು ಜನರಿಂದ ಅಹವಾಲು ಆಲಿಸಿದರು. ನೆಲ್ಲೂರು ಶೆಡ್ಡು ಕಾಲೋನಿಯಿಂದ ಪಾದಯಾತ್ರೆ ಆರಂಭಿಸಿದ ವೇಳೆ ಅಲ್ಲಿ ಮನೆಗಳನ್ನು ಕಟ್ಟಿಸಿಕೊಡುವುದಾಗಿ ಇದ್ದ ಮನೆಗಳನ್ನು ಒಡೆದು ಹಾಕಿದ್ದು, ಇದುವರೆಗೂ ಮನೆಗಳನ್ನು ನಿರ್ಮಿಸಿಕೊಡದಿರುವ ಬಗ್ಗೆ ದೂರು ಆಲಿಸಿದ ಶಾಸಕರು ಈ ಸಂಬಂಧ ಸ್ಮಂ ಬೋರ್ಡ್ ವಿರುದ್ಧ ಎಸಿಬಿಗೆ ದೂರು ನೀಡಲು ನಿರ್ಧರಿಸಿದರು. ತಾವು ಸಚಿವರಾಗಿದ್ದ…

ತ್ಯಾಜ್ಯದಿಂದ ಶೀಘ್ರದಲ್ಲೇ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆ: ಶಾಸಕ ಎಸ್.ಎ.ರಾಮದಾಸ್
ಮೈಸೂರು

ತ್ಯಾಜ್ಯದಿಂದ ಶೀಘ್ರದಲ್ಲೇ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆ: ಶಾಸಕ ಎಸ್.ಎ.ರಾಮದಾಸ್

August 6, 2018

ಮೈಸೂರು:  ಮೈಸೂರಿನ ವಿದ್ಯಾರಣ್ಯಪುರಂ ಮತ್ತು ಸುತ್ತಮುತ್ತಲಿನ ನಾಗರಿಕರ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಸುಯೆಜ್‍ಫಾರಂ ತ್ಯಾಜ್ಯ ಘಟಕದಿಂದ ಹೊರಸೂಸುವ ದುರ್ವಾಸನೆಯನ್ನು ತಡೆಗಟ್ಟಲು ಶಾಸಕ ಎಸ್.ಎ.ರಾಮದಾಸ್ ಅವರು ಮುಂದಾಗಿದ್ದು, ಸುಯೆಜ್ ಫಾರಂ ಆವರಣದಲ್ಲಿಯೇ ಹಳೇ ಕಸದಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಘನ ತ್ಯಾಜ್ಯವನ್ನು ಸಂಸ್ಕರಿಸುವ ಹೊಸ ಕಾರ್ಯಕ್ಕೆ ಶಾಸಕ ಎಸ್.ಎ.ರಾಮದಾಸ್ ಭಾನುವಾರ ಬೆಳಿಗ್ಗೆ ಮೈಸೂರಿನ ಸಿವೇಜ್ ಫಾರಂ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿವೇಜ್ ಫಾರಂನಲ್ಲಿ ಸಂಗ್ರಹವಾಗುವ ಘನ…

ಗಾಣಿಗ ಸೇರಿದಂತೆ ಸಣ್ಣ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸಿಎಂ ಚಿಂತನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮೈಸೂರು

ಗಾಣಿಗ ಸೇರಿದಂತೆ ಸಣ್ಣ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸಿಎಂ ಚಿಂತನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

August 6, 2018

ಮೈಸೂರು: ಗಾಣಿಗ ಸಮುದಾಯ ಸೇರಿದಂತೆ ಪ್ರವರ್ಗ `2ಎ’ ವ್ಯಾಪ್ತಿಗೆ ಬರುವ ಸಣ್ಣಸಣ್ಣ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹೇಳಿದರು. ಮೈಸೂರಿನ ಪುರಭವನದಲ್ಲಿ ಮೈಸೂರು ಜಿಲ್ಲಾ ಗಾಣಿಗರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳಲ್ಲಿ ಬಹುತೇಕ ಸಣ್ಣ ಸಮುದಾಯಗಳು ತೀರ ಹಿಂದಿವೆ. ಇವುಗಳು ಬಲಾಢ್ಯ ಸಮುದಾಯಗಳ ನಡುವೆ…

ಬುದ್ಧಿ ಮಾಂದ್ಯ ಮಕ್ಕಳಿಗೆ ಪ್ರಬುದ್ಧ ಭಾರತ ಪ್ರಶಸ್ತಿ ಪ್ರದಾನ
ಮೈಸೂರು

ಬುದ್ಧಿ ಮಾಂದ್ಯ ಮಕ್ಕಳಿಗೆ ಪ್ರಬುದ್ಧ ಭಾರತ ಪ್ರಶಸ್ತಿ ಪ್ರದಾನ

August 6, 2018

ಮೈಸೂರು: ರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆ, ರಾಜ್ಯ ಯುವ ಬರಹಗಾರರ ಒಕ್ಕೂಟದ ಆಶ್ರಯದಲ್ಲಿ ಭಾನುವಾರ ಮೈಸೂರಿನ ತಿಲಕ್‍ನಗರ ಬಂಬೂಬಜಾರ್ ಅಂಧ ಮಕ್ಕಳ ಸರ್ಕಾರಿ ಶಾಲೆಯಲ್ಲಿ ಬುದ್ಧಿ ಮಾಂದ್ಯ ಮಕ್ಕಳಿಗೆ ಹಾಗೂ ಇತರೆ ಕ್ಷೇತ್ರದಲ್ಲಿ ಗುರ್ತಿಸಿಕೊಂಡಿರುವ ಸಾಧಕರಿಗೆ ಪ್ರಬುದ್ಧ ಭಾರತ ಪ್ರಶಸ್ತಿ ಪ್ರದಾನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆ ರಾಜ್ಯಾಧ್ಯಕ್ಷ ಲಕ್ಷ್ಮೀಕಾಂತ್ ಅವರು ಸಂಘಟಿಸಿದ ಕಾರ್ಯಕ್ರಮಕ್ಕೆ ನಿವೃತ್ತ ಡಿವೈಎಸ್‍ಪಿ ಅನುಪಮಾ ಶೆಣೈ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಸಮಾಜ ಸೇವಕಿ ಐಶ್ವರ್ಯ…

1 1,445 1,446 1,447 1,448 1,449 1,611
Translate »