ಮೈಸೂರು: ರಾಜ್ಯದ ಕೆಪಿಸಿಸಿ ನೊಗ ಹೊತ್ತಿರುವ ದಿನೇಶ್ ಗುಂಡೂರಾವ್ ಮತ್ತು ತಮ್ಮ ಮೇಲೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿಯವರು ಹೆಚ್ಚಿನ ಜವಾಬ್ದಾರಿ ನೀಡಿದ್ದು, ನಮ್ಮ ಮುಂದಿ ರುವ ಸವಾಲುಗಳನ್ನು ಸಮರ್ಥವಾಗಿ ನಿಭಾ ಯಿಸಿ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಿಷ್ಠಗೊಳಿಸಲು ಸಂಕಲ್ಪ ಮಾಡಿ ದ್ಧೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದಿಲ್ಲಿ ತಿಳಿಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಭೇಟಿ ನೀಡಿದ್ದ ಅವರು, ನಗರ-ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿ ಗಳು, ಮುಖಂಡರ ಸಭೆಯಲ್ಲಿ ಪಾಲ್ಗೊಂಡು…
ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
July 18, 2018ಮೈಸೂರು: ದಿ ಮೈಸೂರು ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಗರದ ಹೋಟೆಲ್ ಪೈ ವಿಸ್ಟಾದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ರಿಸರ್ವ್ ಬ್ಯಾಂಕಿನ ಸಹಕಾರ ಬ್ಯಾಂಕುಗಳ ಮೇಲ್ವಿಚಾರಣಾ ವಿಭಾಗದ ಪ್ರಧಾನ ವ್ಯವಸ್ಥಾಪಕ ತೊಟಂಗಂ ಜಮಂಗ್ ಹಾಗೂ ಜೆ.ಎಸ್.ಎಸ್.ವಿಜ್ಞಾನ ಮತ್ತು ತಂತ್ರ ಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಬಿ.ಜಿ.ಸಂಗಮೇಶ್ವರ ಆಗಮಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕೇವಲ ಓದಿನ ಕಡೆಗೆ ಮಾತ್ರ ಗಮನ ಕೊಡು ವುದಲ್ಲದೆ ತಂದೆ-ತಾಯಿಗಳ, ಕಲಿತ ಶಾಲಾ-…
ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ
July 17, 2018ಇದರ ಜೊತೆಗೆ ಬೇಳೆ ನೀಡಲು ತೀರ್ಮಾನ ರಾಹುಲ್ ಗಾಂಧಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ದೆಹಲಿಗೆ ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಯೂನಿಟ್ ಅಕ್ಕಿ ಪ್ರಮಾಣ ಹೆಚ್ಚು ಮಾಡದಿರಲು ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಅದನ್ನೇ ಮುಂದುವರೆಸಿ, ಬಡ ಕುಟುಂಬಕ್ಕೆ ಪೌಷ್ಟಿಕತೆಗೆ ಅಗತ್ಯ ವಾದ ಬೇಳೆಕಾಳು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರ ಕಾಂಗ್ರೆಸ್ ಎನ್ನುವುದಕ್ಕಿಂತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ…
ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು
July 17, 2018ಬೆಂಗಳೂರು: ಅಗತ್ಯವಿರುವ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಿಕೊಡಲು ಇನ್ಫೋಸಿಸ್ ಸಂಸ್ಥೆ ಮುಂದಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ, ಗೃಹ ಇಲಾಖೆ ಹೊಣೆ ಹೊತ್ತ ಡಾ. ಜಿ. ಪರಮೇಶ್ವರ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ತಮ್ಮ ಪ್ರತಿಷ್ಠಾನದಿಂದ ಕೊಡುಗೆ ನೀಡಲು ಸಮ್ಮತಿಸಿದ್ದಾರೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ರಾಜ್ಯಾದ್ಯಂತ 11,000 ಪೊಲೀಸ್ ವಸತಿ ಗೃಹ ನಿರ್ಮಿಸಲಾಗುತ್ತಿದ್ದು, ಇದರಲ್ಲಿ ಈಗಾಗಲೇ 7,000 ವಸತಿ ಗೃಹಗಳು ನಿರ್ಮಾಣದ ಅಂತಿಮ ಹಂತದಲ್ಲಿವೆ….
ಉಕ್ಕಿ ಹರಿಯುತ್ತಿರುವ ಕಾವೇರಿ ದಡದಲ್ಲಿ ಜನಜಾತ್ರೆ
July 17, 2018ಶ್ರೀರಂಗಪಟ್ಟಣ: ಕೆಆರ್‌ಎಸ್ ಜಲಾಶಯ ದಿಂದ ಭಾರೀ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಉಕ್ಕಿ ಹರಿಯುತ್ತಿರುವ ನಾಡಿನ ಜೀವನದಿ ಕಾವೇರಿಯನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಶ್ರೀರಂಗಪಟ್ಟಣ ಹಾಗೂ ತಿ.ನರಸೀಪುರದತ್ತ ಜನಜಂಗುಳಿಯೇ ಹರಿದು ಬರುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕವಲೊಡೆದು ವಿಶಾಲವಾಗಿ ಹರಿಯುತ್ತಿರುವ ಕಾವೇರಿ ನದಿಯ ಸೊಬಗನ್ನು ಸವಿಯಲು ಸೋಮವಾರ ಬೆಳಗಿನಿಂದ ಸಂಜೆಯವರೆಗೂ ಮೈಸೂರು, ಬೆಂಗಳೂರು, ಮಂಡ್ಯ ಸೇರಿದಂತೆ ಇನ್ನಿತರೆಡೆಗಳಿಂದ ಜನರು ಭಾರೀ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಸ್ಥಳಗಳಲ್ಲಿ ನಿಂತು ನದಿಯ ರಭಸವನ್ನು ನೋಡಿ ಸಂಭ್ರಮಿಸಿದರು. ರಂಗನತಿಟ್ಟು ಪಕ್ಷಿಧಾಮಕ್ಕೆ ಹೋಗುವ ರಸ್ತೆಯಲ್ಲಿ…
ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ
July 17, 2018ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿ ಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇ ನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿ ಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವು ದಿಲ್ಲ. ಪರಿಸ್ಥಿತಿಗಳು…
ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!
July 17, 2018ನವದೆಹಲಿ: “ಮುಖ್ಯಮಂತ್ರಿಯಾದರೂ ಸಂತೋಷ ವಾಗಿಲ್ಲ” ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಕಣ್ಣೀರಿಟ್ಟಿರುವುದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್, ಚರಣ್ ಸಿಂಗ್, ಚಂದ್ರಶೇಖರ್ ಅವರಿಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ಕುಮಾರ ಸ್ವಾಮಿ ಅವರನ್ನು ಖಿನ್ನತೆಗೆ ದೂಡಿದೆ ಎಂದು ಆರೋಪಿಸಿರುವ ಅರುಣ್ ಜೇಟ್ಲಿ, ಕೇವಲ ಮೋದಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಸೈದ್ಧಾಂತಿಕ ವಿರೋಧಿಗಳೊಂದಿಗೆ ಕಾಂಗ್ರೆಸ್ ಅವಕಾಶವಾದಿತನದ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಜೇಟ್ಲಿ ಫೇಸ್ ಬುಕ್ ಪೋಸ್ಟ್…
ಫಾ. ನರೋನ್ಹ ಇನ್ನಿಲ್ಲ
July 17, 2018ಇಂದು ಸೆಂಟ್ ಜೋಸೆಫ್ ಕ್ಯಾಥಡ್ರಲ್‍ನಲ್ಲಿ ಅಂತ್ಯಕ್ರಿಯೆ ಬನ್ನಿಮಂಟಪದ ಸೆಂಟ್ ಮೆರೀಸ್ ಸಭಾಂಗಣದಲ್ಲಿ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮೈಸೂರು: ಮೈಸೂರು ಡಯಾಸಿಸ್‍ನ ಹೆಸರಾಂತ ಕ್ಯಾಥೋಲಿಕ್ ಧರ್ಮಗುರು ರೆವರೆಂಡ್ ಫಾದರ್ ಡೆನಿಸ್ ವಿ.ನರೋನ್ಹ(86) ಅವರು ಇಂದು ಬೆಳಿಗ್ಗೆ ಮೈಸೂರಿನ ಬನ್ನಿಮಂಟಪದ ಸೇಂಟ್ ಜೋಸೆಫ್ ಆಸ್ಪತ್ರೆಯಲ್ಲಿ ನಿಧನರಾದರು. ಬನ್ನಿಮಂಟಪದ ಧರ್ಮಗುರುಗಳ ರಿಟೈರ್‍ಮೆಂಟ್ ಹೋಂ ‘ಪ್ರಶಾಂತ ನಿಲಯ’ ದಲ್ಲಿ ಪ್ರಸ್ತುತ ಫಾದರ್ ನರೋನ್ಹ ಅವರು ವಾಸವಾಗಿದ್ದರು. ಮೈಸೂರು ಡಯಾಸಿಸ್ ಎಜುಕೇಷನ್ ಸೊಸೈಟಿ (MDES) ಮಾಜಿ ಕಾರ್ಯದರ್ಶಿ ಹಾಗೂ ಸೇಂಟ್ ಫಿಲೋಮಿನಾ ಚರ್ಚ್…
ಪ್ರತ್ಯೇಕ ಲಿಂಗಾಯಿತ ಧರ್ಮ ಹೋರಾಟ ಪುನರಾರಂಭ
July 17, 2018ವಿಜಯಪುರ: ಸ್ವಲ್ಪ ದಿನಗಳಿಂದ ತಣ್ಣಗಾಗಿದ್ದ ಪ್ರತ್ಯೇಕ ಲಿಂಗಾಯಿತ ಧರ್ಮ ಹೋರಾಟ ಪುನರ್ ಆರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ಚುನಾವಣೆ ನಂತರ ಇದೇ ಮೊದಲ ಬಾರಿಗೆ ಲಿಂಗಾಯಿತ ಹೋರಾಟ ಕುರಿತು ಮಾತ ನಾಡಿದ ಅವರು, ಅನೇಕ ಲಿಂಗಾಯತ ನಾಯಕರು ಚುನಾವಣಾ ಪ್ರಕ್ರಿಯೆ ಹಾಗೂ ಹೊಸ ಸರ್ಕಾರ ರಚನೆಯಲ್ಲಿ ನಿರತರಾಗಿದ್ದರಿಂದ ಹೋರಾಟಕ್ಕೆ ವಿರಾಮ ನೀಡಲಾಗಿದೆ. ಈ ತಿಂಗಳ ನಂತರ ಮತ್ತೆ ಹೋರಾಟ ಆರಂಭಿಸು ವುದಾಗಿ ಹೇಳಿದರು. ಜೆಡಿಎಸ್ ಪಕ್ಷದ ಬಸವರಾಜ್ ಹೊರಟ್ಟಿ ಕೂಡಾ ಈ…
ರಾಜ್ಯದ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ
July 17, 2018ಇಲವಾಲ ಹೋಬಳಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಚಾಲನೆ ನೀಡಿದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಪ್ರತಿಕ್ರಿಯೆ ಮೈಸೂರು: ರಾಜ್ಯದಲ್ಲಿರುವ ಎಲ್ಲಾ ಕೆರೆಗಳನ್ನು ಅಭಿ ವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಮೈಸೂರು ತಾಲೂಕು ಇಲವಾಲ ಕೆರೆ ಅಭಿವೃದ್ಧಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲವಾಲ ಕೆರೆ ಹೂಳು ತೆಗೆಯು ವುದು,…