ಮೈಸೂರು: ಸೇವಾ ಮನೋಭಾವ, ಅರ್ಪಣೆ, ಶ್ರದ್ಧೆ ಈ ಮೂರು ಅಂಶಗಳನ್ನೇ ಕೇಂದ್ರಬಿಂದುವಾಗಿಟ್ಟುಕೊಂಡು ನಿರಂತರವಾಗಿ ಬೆಳವಣಿಗೆ ಹೊಂದಿ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಲಯನ್ಸ್ ಎಂದು ಜಿಲ್ಲಾ 1ನೇ ಉಪ ರಾಜ್ಯಪಾಲ ಲಯನ್ ನಾಗರಾಜ್ ವಿ.ಬೈರಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ನಗರದ ನೇಗಿಲಯೋಗಿ ಮರಳೇಶ್ವರ ಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಅಂತರಾಷ್ಟ್ರೀಯ ಜಿಲ್ಲೆ 317 ಎ ಇದರ ಲಯನ್ಸ್ ಕ್ಲಬ್ ಆಫ್ ಮೈಸೂರು ಕಾವೇರಿ ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು ಕಾಮಧೇನು 2018-19ರ ನೂತನ ಕಾವೇರಿ ಅಧ್ಯಕ್ಷ…
ಗೂಡ್ಸ್ ವಾಹನ ಪಲ್ಟಿ: ಚಾಲಕ ಸಾವು
July 7, 2018ಹೆದ್ದಾರಿ ತಡೆದು, ಟೈರ್‍ಗೆ ಬೆಂಕಿ ಹಚ್ಚಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ ಕೆಲ ಕಾಲ ಸಂಚಾರ ಸ್ಥಗಿತ, ವೇಗಮಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಭರವಸೆ ತಗಡೂರು: ಗೂಡ್ಸ್ ವಾಹನವೊಂದು ಪಲ್ಟಿ ಹೊಡೆದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗ ಶುಕ್ರವಾರ ನಡೆದಿದೆ. ಚಾಮರಾಜನಗರ ಫೈರಾಜ್‍ವುಲ್ಲಾ ಖಾನ್(29) ಮೃತಪಟ್ಟ ವ್ಯಕ್ತಿ. ಫೈರಾಜ್ ವುಲ್ಲಾ ಖಾನ್ ಅವರು ಚಾಮರಾಜನಗರ ದಿಂದ ಮಹೇಂದ್ರ ಪಿಕಪ್ ವಾಹನದಲ್ಲಿ ತೆರಳುತ್ತಿದಾಗ ದೊಡ್ಡಕವಲಂದೆ ಗ್ರಾಮದ ಜೇವರ್ಗಿ…
ತಿ.ನರಸೀಪುರ ಪುರಸಭೆ ವಿಶೇಷ ಸಭೆ ರದ್ದು: ಸದಸ್ಯರ ಅಸಮಾಧಾನ
July 7, 2018ತಿ.ನರಸೀಪುರ: ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶೇಷ ಸಭೆಗೆ ಪುರಸಭೆ ಅಧ್ಯಕ್ಷರು ಸೇರಿದಂತೆ ಸ್ಥಾಯಿ ಸಮಿತಿ ಅಧ್ಯಕ್ಷರು ಗೈರು ಹಾಜರಾದ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಪಡಿಸಿ ಮುಂದೂಡಲಾಯಿತು. ಅಧ್ಯಕ್ಷ ಸಿ.ಉಮೇಶ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ವಿಶೇಷ ಸಭೆಗೆ ಪುರಸಭಾ ಸದಸ್ಯರೆಲ್ಲರೂ ಹಾಜರಾಗಿದ್ದರು. ಆದರೆ, ಅಧ್ಯಕ್ಷರು ಹಾಗೂ ಇಬ್ಬರು ಸ್ಥಾಯಿ ಸಮಿತಿ ಅಧ್ಯಕ್ಷರು ಗೈರು ಹಾಜರಾದಕ್ಕೆ ಸದಸ್ಯರೆಲ್ಲರು ಸೇರಿ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ ಅವರನ್ನು ತೀವ್ರ ತರಾಟೆ ತೆಗೆದುಕೊಂಡರು. ಸಭೆಗೆ ಸದಸ್ಯರೆಲ್ಲರನ್ನು ಆಹ್ವಾನಿಸಿ, ಅಧ್ಯಕ್ಷರೇ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದÀರು. ಈ…
ಇಂದು ಕುವೆಂಪು ಶಾಲೆಯಲ್ಲಿ ಪರಿಸರ ಜಾಗೃತಿ ವಿದ್ಯಾರ್ಥಿಗಳೊಂದಿಗೆ ಶಾಸಕ ರಾಮದಾಸ್ ಸಂವಾದ
July 7, 2018ಮೈಸೂರು: ಮೈಸೂರಿನ ಕುವೆಂಪುನಗರದ ಭಾನವಿ ಆಸ್ಪತ್ರೆ ಸಮೀಪವಿರುವ ಕುವೆಂಪು ಶಾಲೆಯಲ್ಲಿ ನಾಳೆ (ಜು.7) ಬೆಳಿಗ್ಗೆ 8.30ಕ್ಕೆ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಲಿದೆ. `ಬಲಿಷ್ಠ ಭಾರತ (ಸ್ಟ್ರಾಂಗ್ ಇಂಡಿಯಾ)’, `ಹಸಿರು ಭಾರತ (ಗ್ರೀನ್ ಇಂಡಿಯಾ)’ ಶೀರ್ಷಿಕೆಯಡಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಆಯುರ್ವೇದ ಗಿಡ ನೆಡಲಾಗುವುದು. ಶಾಸಕ ಎಸ್.ಎ.ರಾಮ ದಾಸ್ ಅವರು 8, 9 ಮತ್ತು 10ನೇ ತರಗತಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸುವರು. ಅಲ್ಲದೆ, 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೂರ್ವ ಸಿದ್ಧತೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಂ.ಎ, ಎಂ.ಫಿಲ್ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
July 7, 2018ಮೈಸೂರು: ಮದರಾಸು ವಿಶ್ವವಿದ್ಯಾಲಯವು 2018-19ನೇ ಸಾಲಿನ ಕನ್ನಡ ಸಾಹಿತ್ಯದ ಎಂ.ಎ, ಎಂ.ಫಿಲ್ ಪದವಿಗಳ ರೆಗ್ಯುಲರ್ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿ ಸಲಾಗಿದೆ. ಕನ್ನಡ ವಿಭಾಗದಲ್ಲಿ ಎಂ.ಎ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಾರ್ಷಿಕ 25000/- ರೂ ಶಿಷ್ಯ ವೇತನ ಜೊತೆಗೆ ಚೆನ್ನೈನ ಕರ್ನಾಟಕ ಸಂಘ ವರ್ಷಕ್ಕೆ 5000/- ರೂ. ಪ್ರೋತ್ಸಾಹ ಧನ ನೀಡುತ್ತದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ.89393 87354, 9840239321 ಅನ್ನು ಸಂಪರ್ಕಿಸಬಹುದು.
ಮೈತ್ರಿ ಸರ್ಕಾರ ಬಜೆಟ್‍ನಲ್ಲಿ ರೈತರಿಗೆ ಬಳುವಳಿ: 2 ಲಕ್ಷದವರೆಗಿನ ಕೃಷಿ ಸಾಲ ಮನ್ನಾ
July 6, 2018ಸಾರಿಗೆ, ವಿದ್ಯುತ್, ಪೆಟ್ರೋಲ್, ಡೀಸೆಲ್, ಮದ್ಯ ದುಬಾರಿ ಬೆಂಗಳೂರು: ಪ್ರತಿ ರೈತ ಕುಟುಂಬ ಮಾಡಿರುವ ಎರಡು ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿದ ಬೆಳೆ ಸಾಲ ಯೋಜನೆಯ ವ್ಯಾಪ್ತಿಗೆ ಒಳಪಡಲಿದೆ. ಸರ್ಕಾರಿ ಅಧಿಕಾರಿಗಳು, ಕಳೆದ ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರು ಹಾಗೂ ಇತರೆ ಕೃಷಿ ಸಾಲಗಾರರನ್ನು ಈ ಸಾಲ ಮನ್ನಾ ಯೋಜನೆಯಿಂದ ಹೊರಗಿಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ…
ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್ ಅಭಿವೃದ್ಧಿ
July 6, 2018ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ಭರವಸೆ ಮಂಡ್ಯಕ್ಕೆ 50 ಕೋಟಿ ವಿಶೇಷ ಪ್ಯಾಕೇಜ್ ಗಗನಚುಕ್ಕಿ ಭರಚುಕ್ಕಿಯಲ್ಲಿ ಮೂಲ ಸೌಕರ್ಯಕ್ಕೆ 5 ಕೋಟಿ ಮೈಸೂರಲ್ಲಿ ರೇಷ್ಮೆಗೂಡು ಮಾರುಕಟ್ಟೆ ಬೆಂಗಳೂರು: ಕೃಷ್ಣರಾಜಸಾಗರ ಅಣೆಕಟ್ಟೆಗೆ ಪರ್ಯಾಯವಾಗಿ ಮೇಕೆದಾಟು ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿಯವರು 2018-19ನೇ ಸಾಲಿನ ಚೊಚ್ಚಲ ಮುಂಗಡ ಪತ್ರ ಮಂಡಿಸಿ, ಪ್ರಸ್ತುತ ಮೇಕೆದಾಟು ಕುರಿತಂತೆ ಪೂರ್ವಕಾರ್ಯ ಸಾಧ್ಯತಾ ವರದಿ ಪ್ರಸ್ತಾವನೆಗೆ ಪ್ರಾಧಿಕಾರದ…
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ
July 6, 2018ಪ್ರಾಥಮಿಕ ಶಾಲಾ ಆವರಣಕ್ಕೆ ಅಂಗನವಾಡಿ ಕೇಂದ್ರ ಸ್ಥಳಾಂತರ ಹಂಪಿಯಲ್ಲಿ ಪ್ರವಾಸೋದ್ಯಮ, ಶಿವಮೊಗ್ಗದಲ್ಲಿ ತಾಯ್ನಾಡು ಭದ್ರತಾ ವಿವಿ ಸ್ಥಾಪನೆ ಬೆಂಗಳೂರು: ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಮಕ್ಕಳನ್ನು ನಮ್ಮ ಶಾಲೆಗಳಿಗೆ ಆಕರ್ಷಿಸುವ ಉದ್ದೇಶದಿಂದ ಇಂತಹ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆರಂಭಿಕವಾಗಿ ಒಂದು ಸಾವಿರ ಶಾಲೆಗಳಲ್ಲಿ ಇಂತಹ ಪ್ರಯೋಗ ಮಾಡಲಾಗುವುದು. ಇದಕ್ಕಾಗಿ ಅಗತ್ಯ ಸಿಬ್ಬಂದಿ ಮತ್ತು…
ಬಡ ರೋಗಿಗಳ ನೆರವಿಗೆ 30 ಕೋಟಿ ಮೀಸಲು
July 6, 2018ಬೆಂಗಳೂರು: ಬಡ ರೋಗಿಗಳಿಗೆ ಹೃದಯ, ಮೂತ್ರಪಿಂಡ, ಯಕೃತ್ ಇತ್ಯಾದಿ ಅಂಗಾಂಗ ಕಸಿಗಾಗಿ ಪ್ರತ್ಯೇಕ ಯೋಜನೆ ರೂಪಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಯೋಜನೆಗೆ 30 ಕೋಟಿ ರೂ. ಅನುದಾನ ನೀಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ. ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಮೀಸಲಿರಿಸಿದ್ದಾರೆ. ರಾಮನಗರ ದಿನದಿಂದ ದಿನಕ್ಕೆ ಶೀಘ್ರಗತಿಯಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು 40 ಕೋಟಿ…
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ
July 6, 2018ಮೈಸೂರು: ಸಮ್ಮಿಶ್ರ ಸರ್ಕಾರ ಚೊಚ್ಚಲ ಬಜೆಟ್‍ನಲ್ಲಿ ಕರ್ನಾ ಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಅದಕ್ಕೆ 25ಕೋಟಿ ಅನುದಾನ ಮೀಸಲಿಟ್ಟಿರುವುದು ಹಾಗೂ ಶಂಕರಾ ಚಾರ್ಯರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುವುದಕ್ಕೆ ನಿರ್ಧರಿಸಿರುವುದನ್ನು ಸ್ವಾಗತಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕ ರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗುರುವಾರ ಮಂಡಿಸಿದ ಬಜೆಟ್‍ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿ ಮಂಡಳಿಯನ್ನು…