ಮೈಸೂರು: ಕೊಡಗು ಭಾಗದ ಅರಣ್ಯ ನಾಶವಾಗುವ ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಮುಂದಾಗಿರುವ ಕೇರಳ ರಾಜ್ಯದ ಕ್ರಮ ಅಸಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಯೋಜನೆಗೆ ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಇಲ್ಲದಿದ್ದರೂ, ಕೊಡಗು ಭಾಗದ ನಾಗರಿಕರು, ಪರಿಸರ ಪ್ರೇಮಿಗಳು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರೂ ಡಿಪಿಆರ್ ತಯಾರಿಕೆಗೆ ಬಿಡ್ ಕರೆದಿರುವುದು ಜನವಿರೋಧಿ ನೀತಿಯಾಗಿದೆ ಎಂದು ದೂರಿದ್ದಾರೆ. ಮೈಸೂರು-ತಲಚೇರಿ ರೈಲ್ವೇ ಮಾರ್ಗದಿಂದ ಕೇವಲ ಕೇರಳ…
ರೇಸ್‍ಕೋರ್ಸ್ ಸ್ಥಳಾಂತರಕ್ಕೆ ಬದ್ಧ
June 30, 2018ಮೈಸೂರು : ಮೈಸೂರು ರೇಸ್ ಕೋರ್ಸ್ ಸ್ಥಳಾಂತ ರಕ್ಕೆ ಬದ್ಧವಾಗಿದ್ದು, ಅನಧಿಕೃತವಾಗಿ ನಿರ್ಮಿಸಿರುವ ಶೆಡ್‍ಗಳ ತೆರವು ಕಾರ್ಯಾ ಚರಣೆಯನ್ನು ರೇಸ್ ಕೋರ್ಸ್ ಆಡಳಿತ ಮಂಡಳಿಯೇ ಇಂದಿನಿಂದ ಆರಂಭಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಸ್ಪಷ್ಟಪಡಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿ ಸರ್ಕಾರದ 139 ಎಕರೆ ಜಾಗದಲ್ಲಿ ನಡೆಯುತ್ತಿರುವ ರೇಸ್ ಕೋರ್ಸ್‍ನಿಂದ ಹಲವಾರು ತೊಂದರೆ ಉಂಟಾಗುತ್ತಿದೆ. ಮರಳು ಲಾರಿ ನಿಲು ಗಡೆಯ ರಸ್ತೆಯುದ್ದಕ್ಕೂ ಕುದುರೆ ಲದ್ದಿಯ ರಾಶಿಹಾಕಲಾಗಿದೆ. ಇದರಿಂದ ಸ್ಥಳೀಯರು ಹಾಗೂ ಮೃಗಾಲಯದ ಪ್ರಾಣಿಗಳ ಮೇಲೆ…
ಕಾಡಾನೆ ದಾಳಿಯಿಂದ ಸಂತ್ರಸ್ಥ ರೈತರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳ ವಿಳಂಬ ನೀತಿ ಸಂಸದ ಆರ್.ಧ್ರುವನಾರಾಯಣ್ ಅಸಮಾಧಾನ
June 30, 2018ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ನೊಂದ ರೈತರಿಗೆ ಪರಿಹಾರ ನೀಡುವಲ್ಲಿ ಸಂಬಂಧಿಸಿದ ಅಧಿಕಾರಿಗಳು (ಅರಣ್ಯ, ಕೃಷಿ ಮತ್ತು ತೋಟಗಾರಿಕೆ ಇತ್ಯಾದಿ) ನಿರ್ಲಕ್ಷ್ಯ ಮನೋಭಾವ ತೋರುತ್ತಿರುವುದರ ಬಗ್ಗೆ ಸಂಸದ ಆರ್.ಧ್ರುವನಾರಾಯಣ್ ಇಂದಿಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಲು ವಿಳಂಬವಾಗಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೈಸೂರು…
ಕಾಮಾಕ್ಷಿ ಆಸ್ಪತ್ರೆ ಸಂಸ್ಥಾಪಕರ ದಿನಾಚರಣೆ
June 30, 2018ಸಾರ್ಥಕ ಸೇವೆ ಸಲ್ಲಿಸಿದ ಸಿಬ್ಬಂದಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮೈಸೂರು: ಕಾಮಾಕ್ಷಿ ಆಸ್ಪತ್ರೆ ಸಂಸ್ಥಾಪನಾ ದಿನ ಮತ್ತು 45ನೇ ವಾರ್ಷಿಕೋತ್ಸವ ಅಂಗವಾಗಿ ಎಸ್‍ಎಸ್‍ಎಲ್‍ಸಿ-ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಿಬ್ಬಂದಿ ಮಕ್ಕಳಿಗೆ ನಗದು ಬಹುಮಾನ ಮತ್ತು 25 ವರ್ಷದಿಂದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಕುವೆಂಪುನಗರದ ಕಾಮಾಕ್ಷಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ 25 ವರ್ಷದಿಂದ ಸೇವೆ ಸಲ್ಲಿಸಿದ ವೈದ್ಯರಾದ ಡಾ.ಪ್ರಕಾಶ್ ಕೆ.ಪ್ರಭು, ಡಾ.ಆರ್.ಜಿ.ಶ್ರೀನಿವಾಸ್, ಸಿಬ್ಬಂದಿಗಳಾದ ರೂಪ, ಈರಭದ್ರ ಅವರನ್ನು ಸನ್ಮಾನಿಸಲಾಯಿತು….
ಕೈ ಕೊಟ್ಟಿದ್ದ ಸರ್ವರ್ ಸರಿಯಾಯ್ತು: ಅರ್ಜಿ ವಿಲೇವಾರಿ ಆರಂಭವಾಯ್ತು
June 30, 2018‘ಮೈಸೂರು ಮಿತ್ರ’ ವರದಿ ಫಲಶೃತಿ ಮೈಸೂರು: ಮೈಸೂರಿನ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ 20 ದಿನಗಳಿಂದ ಕೈಕೊಟ್ಟಿದ್ದ ಸರ್ವರ್ ಸರಿಯಾಯ್ತು. ಸೇವೆ ಆರಂಭವಾಯ್ತು. ಜೂ.28ರ `ಮೈಸೂರು ಮಿತ್ರ’ ‘ಸರ್ವರ್ ವೈಫಲ್ಯ: ವಿವಿಧ ಫಲಾನುಭವಿಗಳ ಪರದಾಟ’ ವರದಿ ಮಾಡಿತ್ತು. ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶುಕ್ರವಾರ ಸರ್ವರ್ ಸರಿಪಡಿಸಿ ಸ್ಥಗಿತಗೊಂಡಿದ್ದ ಸೇವೆ ಪುನರಾರಂಭಿಸಿದ್ದಾರೆ. ಮಿನಿ ವಿಧಾನಸೌಧದ ಕಚೇರಿಯಲ್ಲಿರುವ ನಾಡಕಚೇರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ನಾಡಕಚೇರಿಯಲ್ಲಿ ಜೂ.8ರಿಂದ ಸರ್ವರ್ ಕೈಕೊಟ್ಟಿತ್ತು. ಇದರಿಂದ ವಂಶವೃಕ್ಷ, ಗೇಣಿ ಪತ್ರ, ಜಾತಿ ಪ್ರಮಾಣ ಪತ್ರ,…
ಸಭೆಯಲ್ಲಿ ಚೆಲುವಾಂಬ ಆಸ್ಪತ್ರೆ ಬೆಡ್ ಕೊರತೆ ಪ್ರಸ್ತಾಪ – ಪ್ರಸ್ತಾವನೆ ಸಲ್ಲಿಸಿದರೆ ಸಮಸ್ಯೆಗೆ ಶೀಘ್ರ ಪರಿಹಾರ: ಸಂಸದ
June 30, 2018ಮೈಸೂರು: ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಬೆಡ್‍ಗಳ ಕೊರತೆ ಇರುವ ವಿಚಾರ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು. ಗರ್ಭಿಣಿಯರು, ಮಕ್ಕಳು ಮತ್ತು ಬಾಣಂತಿಯರನ್ನು ನೆಲದ ಮೇಲೆ ಹಾಸಿಗೆ ಹಾಕಿ ಮಲಗಿಸಲಾಗುತ್ತಿರುವ ಬಗ್ಗೆ ಸಂಸದ ಆರ್.ಧ್ರುವನಾರಾಯಣ್ ಕೆ.ಆರ್.ಆಸ್ಪತ್ರೆ ಅಧೀಕ್ಷಕರನ್ನು ಪ್ರಶ್ನಿಸಿದರು. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ಈ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಅವರಿಗೆ ನಿರ್ದೇಶನ ನೀಡಿದರು. ಅಲ್ಲದೆ ಕೆ.ಆರ್.ಆಸ್ಪತ್ರೆಯಲ್ಲಿ…
ಶಾಸಕ ವಿಶ್ವನಾಥರ ಮೇಲೆ ಮಹಿಳಾ ಜನಪ್ರತಿನಿಧಿಗಳ ಆರೋಪ
June 30, 2018ಮೈಸೂರು: ಶಾಸಕ ಅಡಗೂರು ಹೆಚ್.ವಿಶ್ವನಾಥ್ ಅವರು ಇತ್ತೀಚೆಗೆ ನಡೆಸಿದ ಹುಣಸೂರು ತಾಲೂಕು ಕೆಡಿಪಿ ಸಭೆಯಲ್ಲಿ ಏರು ಧ್ವನಿಯಲ್ಲಿ ಗದರಿಸುವ ಮೂಲಕ ಅವಮಾನಿಸಿದ್ದಾರೆ ಎಂದು ತಾ.ಪಂ ಅಧ್ಯಕ್ಷೆ ಪದ್ಮಮ್ಮ ಆರೋಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ಶಾಸಕ ಎ.ಹೆಚ್.ವಿಶ್ವನಾಥ್ ಅವರು ಸಭೆ ನಡೆಸಿದರು. ಕೆಡಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲವು ಮಹಿಳಾ ಸದಸ್ಯರ ಪತಿಯಂದಿರು ಸೋಮನಹಳ್ಳಿ ಕೆರೆಗೆ ನೀರು ತುಂಬಿಸಿರುವ ಸಂಬಂಧÉ ತಪ್ಪು ಮಾಹಿತಿ ನೀಡುತ್ತಿದ್ದರು. ಇದಕ್ಕೆ ಸರಿಯಾದ…
ಮೈಸೂರು ರೇಸ್ ಕೋರ್ಸ್‍ನ ಅನಧಿಕೃತ ಶೆಡ್‍ಗಳ ತೆರವು
June 30, 2018ಮೈಸೂರು: ಮೈಸೂರಿನ ರೇಸ್‍ಕೋರ್ಸ್ ಆವರಣದಲ್ಲಿದ್ದ ಅನಧಿಕೃತ ಶೆಡ್‍ಗಳನ್ನು ತೆರವುಗೊಳಿಸಲಾಗುತ್ತಿದೆ. ಇತ್ತೀಚೆಗೆ ರೇಸ್‍ಕೋರ್ಸ್‍ಗೆ ಭೇಟಿ ನೀಡಿದ್ದ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ಕುದುರೆಗಳು ಹಾಗೂ ಪಾಲಕರ ವಾಸಕ್ಕಾಗಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಶೆಡ್‍ಗಳನ್ನು ತೆರವುಗೊಳಿಸಬೇಕೆಂದು ಖಡಕ್ ಎಚ್ಚರಿಕೆ ನೀಡಿದ್ದರು. ಅಲ್ಲದೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲೂ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶೆಡ್‍ಗಳನ್ನು ನೆಲಸಮಗೊಳಿಸಲಾಗಿದೆ. ಈ ಸಂಬಂಧ ಶಾಸಗಿ ವಾಹಿನಿಯೊಂದಿಗೆ ಮಾತನಾಡಿದ ಸಚಿವ ಸಾ.ರಾ.ಮಹೇಶ್, ರೇಸ್‍ಕೋರ್ಸ್‍ನ…
ಸೇವೆ ವಿಸ್ತರಣೆಗೆ ಒತ್ತಾಯಿಸಿ ಸಂಗೀತ ವಿವಿ ಬೋಧಕ, ಬೋಧಕೇತರ ಸಿಬ್ಬಂದಿ ಪ್ರತಿಭಟನೆ
June 30, 2018ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ತಾತ್ಕಾಲಿಕ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ತಮ್ಮ ಸೇವೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿ, ಪ್ರತಿಭಟನೆ ನಡೆಸಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಸಂಗೀತ ವಿವಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದ ತಾತ್ಕಾಲಿಕ ಬೋಧಕರು ಹಾಗೂ ಸಾಥಿದಾರರು, ಕಳೆದ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಯಾವುದೇ ಮುನ್ಸೂಚನೆ ನೀಡದೆ, 2018-19ನೇ ಸಾಲಿಗೆ ಎಲ್ಲಾ ವಿಭಾಗಗಳ ಅಧ್ಯಾಪಕರು ಹಾಗೂ ಸಾಥಿದಾರರ ನೇಮಕಕ್ಕೆ ಪ್ರಕ್ರಿಯೆ ಆರಂಭಿಸುವ ಮೂಲಕ ನಮಗೆಲ್ಲಾ…
ವಿಜ್ಞಾನ-ತಂತ್ರಜ್ಞಾನದಲ್ಲಿ ಸಾಧನೆ ಆಗಿದ್ದರೂ ಉನ್ನತ ಶಿಕ್ಷಣ ಪಡೆಯುವರ ಸಂಖ್ಯೆ ಕಡಿಮೆ ಉನ್ನತ ಶಿಕ್ಷಣ ಸಚಿವ ಜಿಟಿಡಿ ವಿಷಾದ
June 30, 2018ಬೆಳಗಾವಿ ವಿಟಿಯು ಸಂಸ್ಥಾಪನಾ ದಿನಾಚರಣೆ ಬೆಳಗಾವಿ: ದೇಶದಲ್ಲಿ ವಿಜ್ಞಾನ-ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದರೂ ಶೇ.25ರಷ್ಟು ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು, ಆಸಕ್ತ ಪ್ರತಿಯೊಬ್ಬ ವಿದ್ಯಾರ್ಥಿಗೂ ಉನ್ನತ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದಕ್ಕೆ ಪ್ರಾಂಶುಪಾಲರು, ಪ್ರಾಧ್ಯಾಪಕರ ಸಹಕಾರವೂ ಬಹಳ ಮುಖ್ಯ ಎಂದು ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು)ದ 20ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವನಾಗಿ ಜವಾಬ್ದಾರಿ…