ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೇರಿದ್ದು, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ ಎದುರಾದಂತಿದೆ. ವೀರಶೈವ ಹಾಗೂ ಉತ್ತರ ಕರ್ನಾಟಕ ಭಾಗದ ಅತೃಪ್ತ ಸುಮಾರು 15-20 ಶಾಸಕರ ನಾಯಕತ್ವ ವಹಿಸಿಕೊಂಡಿರುವ ಎಂ.ಬಿ. ಪಾಟೀಲ್, ಪಕ್ಷದ ವರಿಷ್ಠರ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಮೈತ್ರಿ ಸರ್ಕಾರದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ, ರಂಗ ಪ್ರವೇಶ ಮಾಡಿ ಅತೃಪ್ತರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿ ದರಲ್ಲದೆ, ಭಿನ್ನರು ಹಾಗೂ ವರಿಷ್ಠರ…
ಉಪ ಮುಖ್ಯಮಂತ್ರಿ ಸ್ಥಾನವೇ ಬೇಕು: ಎಂ.ಬಿ. ಪಾಟೀಲ್ ಪಟ್ಟು
June 9, 2018ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಬೇಡ, ನನಗೆ ಮಂತ್ರಿ ಸ್ಥಾನವೂ ಬೇಕಿಲ್ಲ, ಉಪಮುಖ್ಯಮಂತ್ರಿ ಸ್ಥಾನವೇ ಬೇಕು ಎಂದು ಬಂಡಾಯ ನಾಯಕ ಎಂ.ಬಿ.ಪಾಟೀಲ್ ಇಂದಿಲ್ಲಿ ಖಡಕ್ಕಾಗಿ ಪಕ್ಷದ ನಾಯಕ ರಿಗೆ ತಿಳಿಸಿದ್ದಾರೆ. ಮಂತ್ರಿಮಂಡಲ ರಚನೆ ಆಗುತ್ತಿದ್ದಂತೆ ಪಾಟೀಲ್ ನೇತೃತ್ವದಲ್ಲಿ ಎದ್ದಿರುವ ಬಂಡಾಯ ಶಮನಗೊಳಿ ಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಹಿರಿಯ ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ತಮ್ಮ ಸ್ಪಷ್ಟ…
ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶೇ.79.91ರಷ್ಟು ಮತದಾನ
June 9, 2018ಮೈಸೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇಂದು ನಡೆದ ಚುನಾವಣೆ ಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆ ಒಳಗೊಂಡು ಶೇ.79.91ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮೈಸೂರು ನಗರದ 10 ತಾಲೂಕು ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೆ ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ 9 ಗಂಟೆವರೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ 5.97ರಷ್ಟು, ಬೆಳಿಗ್ಗೆ 11 ಗಂಟೆವರೆಗೆ ಶೇ.22.69 ರಷ್ಟು ಮಧ್ಯಾಹ್ನ 1 ಗಂಟೆವರೆಗೆ ಶೇ.45.06ರಷ್ಟು,…
ಲಂಚ ಸ್ವೀಕಾರ ಎಸಿಬಿ ಬಲೆಗೆ ಬಿದ್ದ ವಾಲ್ಮೀಕಿ ನಿಗಮದ ಅಧಿಕಾರಿಗಳು
June 9, 2018ಚಾಮರಾಜನಗರ: ಫಲಾನುಭವಿಯೊಬ್ಬರಿಗೆ ಸಬ್ಸಿಡಿ ಹಣ ಬಿಡುಗಡೆಗೆ ಲಂಚ ಸ್ವೀಕರಿಸುವ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಗಳಿಬ್ಬರು ನಗರದ ಜಿಲ್ಲಾಡಳಿತ ಭವನ ದಲ್ಲಿ ಶುಕ್ರವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಕೆಂಪಯ್ಯ ಹಾಗೂ ಪ್ರಥಮ ದರ್ಜೆ ಸಹಾಯಕ ಪ್ರಕಾಶ ಎಸಿಬಿ ಬಲೆಗೆ ಬಿದ್ದವರು. ಘಟನೆ ವಿವರ: ಚಾಮರಾಜನಗರದ ಮಹೇಶ ಎಂಬುವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮಕ್ಕೆ ಕಾರು ಖರೀದಿಸಲು ಅರ್ಜಿ ಸಲ್ಲಿಸಿದ್ದರು. ಕಾರಿನ ಸಬ್ಸಿಡಿ…
ಉದ್ದೇಶಿತ ಮೈಸೂರು-ತಲಚೇರಿ ರೈಲ್ವೆ ಮಾರ್ಗ ಸರ್ವೇಗೆ ಬಾಡಗ-ಕಮಟೂರು ಗ್ರಾಮಸ್ಥರ ತಡೆ
June 9, 2018ತೀವ್ರ ವಿರೋಧದ ನಡುವೆಯೂ ಸದ್ದು-ಗದ್ದಲವಿಲ್ಲದೆ ನಡೆಯುತ್ತಿರುವ ಯೋಜನೆ ಜಾರಿ ಯತ್ನ ರೈಲ್ವೆ ಸಚಿವ ಪಿಯೂಷ್ ಗೋಯಲ್, ಸಂಸದ ಪ್ರತಾಪ್ ಸಿಂಹ ನೀಡಿದ್ದ ಭರವಸೆ ಸುಳ್ಳೆ!? ಪೊನ್ನಂಪೇಟೆ: ಕೊಡಗಿನ ಜನತೆಯ ಪ್ರತಿಭಟನೆಯನ್ನೂ ಲೆಕ್ಕಿಸದೆ ದಕ್ಷಿಣ ಕೊಡಗು ಮೂಲಕ ಕೇರಳಗೆ ಸಂಪರ್ಕ ಕಲ್ಪಿಸುವ ಹೈಟೆನ್ಷನ್ ವಿದ್ಯುತ್ ಮಾರ್ಗ ಯೋಜನೆಯನ್ನು ಅನುಷ್ಟಾನಗೊಳಿಸಿದ ಬೆನ್ನಲ್ಲೇ ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಮೈಸೂರು-ತಲಚೇರಿ ರೈಲ್ವೆ ಮಾರ್ಗ ಯೋಜನೆ ಅನುಷ್ಟಾನಕ್ಕೆ ಸದ್ದಿಲ್ಲದೆ ಚಾಲನೆ ನೀಡಿರುವ ಅಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‍ನ ಗುತ್ತಿಗೆ…
ಅಭ್ಯರ್ಥಿಗಳ ಹಣೆಬರಹ ಮತ ಪೆಟ್ಟಿಗೆಗಳಲ್ಲಿ ಭದ್ರ
June 9, 2018ಮೈಸೂರು: ಮತ ದಾನ ಶಾಂತಿಯುತವಾಗಿ ಮುಕ್ತಾಯ ಗೊಂಡಿದ್ದು, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಹಣೇಬರಹ ಈಗ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿವೆ. ಇಂದು ರಾತ್ರಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಎಲ್ಲಾ 42 ಮತಗಟ್ಟೆ ಗಳಿಂದ ಸೀಲು ಮಾಡಿದ ಮತ ಪತ್ರ ಗಳಿರುವ ಪೆಟ್ಟಿಗೆಗಳನ್ನು ಭಾರೀ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆಯ ಲ್ಲಿರುವ ಮಹಾರಾಣ ಸರ್ಕಾರಿ ಮಹಿಳಾ ಕಾಲೇಜು ಹೊಸ ಕಟ್ಟಡಕ್ಕೆ ತಂದು ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. ಜೂನ್ 12…
ವೇದ ಪರೀಕ್ಷೆಗಳ ಘಟಿಕೋತ್ಸವದಲ್ಲಿ 354 ಮಂದಿಗೆ ಪ್ರಮಾಣ ಪತ್ರ ವಿತರಣೆ
June 9, 2018ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಲ್ಲಿ ಶುಕ್ರವಾರ ನಡೆದ ವೇದ ಪರೀಕ್ಷೆಗಳ ಘಟಿಕೋತ್ಸವದಲ್ಲಿ 354 ಮಂದಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಆಶ್ರಮದ ಕಿರಿಯ ಸ್ವಾಮೀಜಿ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರ ವಿತರಿಸಿದರು. ಶ್ರೀ ಅವಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವೇದ ಪಾಠ ಶಾಲೆಯಲ್ಲಿ ಜೂ.4ರಂದು ನಡೆದ ರಾಷ್ಟ್ರಮಟ್ಟದ 25ನೇ ವೇದ ಪರೀಕ್ಷೆ(ಖುಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ) ಯಲ್ಲಿ 408 ಮಂದಿ ಭಾಗವಹಿಸಿದ್ದು,…
ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
June 9, 2018ಮೈಸೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಪುರಭವನದ ನೂತನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಸತೀಶ್ ಜಾರಕಿಹೊಳಿ ಅವರ ಭಾವಚಿತ್ರವಿರುವ ಪೋಸ್ಟರ್‍ಗಳನ್ನು ಹಿಡಿದು ಹಾಗೂ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ…
ಪಿಕ್‍ಪಾಕೆಟ್ ಮಾಡಲೆತ್ನಿಸಿದ್ದರಿಂದ ಹಲ್ಲೆ ಪೊಲೀಸರಿಗೆ ಬಂಧಿತ ಆರೋಪಿಗಳ ಹೇಳಿಕೆ
June 9, 2018ಮೈಸೂರು: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ರೋಗಿಗಳ ಕಡೆಯವರ ಜೇಬಿಗೆ ಕತ್ತರಿ ಹಾಕಲೆತ್ನಿಸಿದ್ದರಿಂದ ನಾವು ಆತನನ್ನು ಹಿಡಿದು ಹೊಡೆದೆವು ಎಂದು ಇರ್ಫಾನ್ ಸಾವಿಗೆ ಕಾರಣರೆಂದು ಬಂಧಿತರಾಗಿರುವ 6 ಮಂದಿ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ನಮ್ಮ ಸಂಬಂಧಿಕರನ್ನು ಚೆಲುವಾಂಬ, ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರಿಂದ ನಾವು ಆಸ್ಪತ್ರೆ ಆವರಣದಲ್ಲಿದ್ದೆವು. ಮೇ 10ರಂದು ರಾತ್ರಿ ಆ ವ್ಯಕ್ತಿ, ರೋಗಿಯ ಕಡೆಯವರ ಬಳಿ ಪಿಕ್‍ಪಾಕೆಟ್ ಮಾಡಿದ್ದನ್ನು ನೋಡಿದ ನಾವು, ತಕ್ಷಣ ಆತನನ್ನು ಹಿಡಿದು ಹೊಡೆದೆವು ಎಂದು ಮಹದೇವ, ರಾಘವೇಂದ್ರ, ಶಶಿಕುಮಾರ್, ಪ್ರೇಮ್‍ಕುಮಾರ್, ಮದನ್ ಗೋಪಾಲ್ ಹಾಗೂ…
ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
June 9, 2018ಮೈಸೂರು: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜೂ.12ರಂದು ಬೆಳಿಗ್ಗೆ 10 ಗಂಟೆಗೆ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್‍ನಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಕೆ. ವಂಟಿಗೊಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ನಗರ ಕಾನೂನು ಮತ್ತು ಸುವ್ಯಸ್ಥೆ ಉಪ ಪೊಲೀಸ್ ಆಯುಕ್ತ ಎನ್.ವಿಷ್ಣುವರ್ಧನ…