ಮೈಸೂರು

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬೆಂಬಲಿಸಲು  ಸಂಸದ ಧ್ರುವನಾರಾಯಣ ಮನವಿ
ಮೈಸೂರು

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬೆಂಬಲಿಸಲು  ಸಂಸದ ಧ್ರುವನಾರಾಯಣ ಮನವಿ

June 5, 2018

ಮೈಸೂರು: ಈ ಹಿಂದೆ ರಾಜ್ಯದಲ್ಲಿ ಅಸ್ಥಿತ್ವದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಶಿಕ್ಷಕರಿಗೆ ಬಡ್ತಿ ಮೀಸಲಾತಿ ಸೇರಿದಂತೆ ಶಿಕ್ಷಕ ಸಮುದಾಯ ಎದುರಿಸುತ್ತಿದ್ದ ಹಲವಾರು ಸಮಸ್ಯೆಗಳಿಗೆ ಹೋರಾಟ ಮಾಡಿ ಪರಿಹಾರ ಒದಗಿಸಿಕೊಟ್ಟಿರುವ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಅವರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರು ಬೆಂಬಲ ನೀಡುವಂತೆ ಸಂಸದ ಆರ್.ಧ್ರುವನಾರಾಯಣ್ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ.ಲಕ್ಷ್ಮಣ್ ಅವರು ಕಳೆದ ಐದಾರು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳ…

ವಿಶ್ವ ಪರಿಸರ ದಿನಾಚರಣೆ 8 ಮಂದಿ ಪರಿಸರ ಪ್ರೇಮಿ ಪ್ರಶಸ್ತಿ ಪ್ರಧಾನ
ಮೈಸೂರು

ವಿಶ್ವ ಪರಿಸರ ದಿನಾಚರಣೆ 8 ಮಂದಿ ಪರಿಸರ ಪ್ರೇಮಿ ಪ್ರಶಸ್ತಿ ಪ್ರಧಾನ

June 5, 2018

ಮೈಸೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿವರ್ತನಂ ಟ್ರಸ್ಟ್ ವತಿಯಿಂದ 8 ಮಂದಿಗೆ `ಪರಿಸರ ಪ್ರೇಮಿ ಪ್ರಶಸ್ತಿ’ಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಹೆಚ್.ಎನ್.ಶ್ರೀಧರಮೂರ್ತಿ, ಸುರೇಶ್, ಕೆ.ಆರ್.ರಾಜೀವ್, ಎಂ.ಬಸವರಾಜು, ಹೆಚ್.ವಿ.ಭಾಸ್ಕರ್, ಎ.ಸಂತೋಷ್, ಪ್ರದೀಪ್‍ಗೌಡ, ರಾಜಶೇಖರ್ ಅವರಿಗೆ ಪರಿಸರ ಪ್ರೇಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ನಗರಪಾಲಿಕೆ ಸದಸ್ಯ ಮಾ.ವಿ.ರಾಮ್‍ಪ್ರಸಾದ್ ಮಾತನಾಡಿ, ಪ್ರಸ್ತುತ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ….

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರ ಸಂಸದ ಪ್ರತಾಪ್‍ಸಿಂಹ ಮತ ಯಾಚನೆ
ಮೈಸೂರು

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರ ಸಂಸದ ಪ್ರತಾಪ್‍ಸಿಂಹ ಮತ ಯಾಚನೆ

June 5, 2018

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಪರವಾಗಿ ಸಂಸದ ಪ್ರತಾಪ್‍ಸಿಂಹ ಸೋಮವಾರ ಪ್ರಚಾರ ಕೈಗೊಂಡರು. ಸಂಸದ ಪ್ರತಾಪ್‍ಸಿಂಹ, ಪ್ರಮುಖ ಬಿಜೆಪಿ ಮುಖಂಡರು ಹಾಗೂ ಮೈಸೂರು ನಗರ ಮತ್ತು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರೊಂದಿಗೆ ಮೈಸೂರಿನ ಹಲವು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು. ಸದ್ವಿದ್ಯಾ ಕಾಲೇಜಿಗೆ ತೆರಳಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ, ಸ್ವತಃ…

ನಾಲ್ವಡಿ ಪುತ್ಥಳಿಗೆ ರಾಜವಂಶಸ್ಥ ಯದುವೀರ್ ಪುಷ್ಪಾರ್ಚನೆ
ಮೈಸೂರು

ನಾಲ್ವಡಿ ಪುತ್ಥಳಿಗೆ ರಾಜವಂಶಸ್ಥ ಯದುವೀರ್ ಪುಷ್ಪಾರ್ಚನೆ

June 5, 2018

ಮೈಸೂರು:  ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಅರಮನೆ ಮಂಡಳಿ ಕಚೇರಿ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಲ್ವಡಿ ಅವರ ಜಯಂತಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಾದರಿ ಕರ್ನಾಟಕದ ರೂವಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ನಮಗೆ ಮಾರ್ಗದರ್ಶ ಕರು.ಯುವಕರು ಹಾಗೂ ಈಗಿನ ಆಡಳಿ ತಕ್ಕೆ ಆ ಕಾಲದ ಪ್ರಭಾವ ಹಾಗೂ ಅಭಿವೃದ್ಧಿ ಯನ್ನು ನಾವು ಗೌರವಿಸಬೇಕಾಗಿದೆ. ಕರ್ನಾಟಕ ಇತಿಹಾಸದಲ್ಲಿ ಇದು ಉಲ್ಲೇ…

ಮೈಸೂರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 134ನೇ ಜಯಂತಿ ಆಚರಣೆ
ಮೈಸೂರು

ಮೈಸೂರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 134ನೇ ಜಯಂತಿ ಆಚರಣೆ

June 5, 2018

ಮೈಸೂರು:  ಮೈಸೂರಿನ ನಿರ್ಮಾರ್ತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿಯನ್ನು ಸೋಮವಾರ ಮೈಸೂರಿನಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಜಿಲ್ಲಾಡ ಳಿತ ಸೇರಿದಂತೆ ಅಧಿಕಾರಿಗಳು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಸ್ಮರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಕೆ.ಆರ್.ವೃತ್ತದ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪಾ…

ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸಿದರೆ ಕೋರ್ಟ್‍ಗಳಲ್ಲಿ ದಾಖಲಾಗುವ ವ್ಯಾಜ್ಯಗಳಲ್ಲಿ ಇಳಿಮುಖ
ಮೈಸೂರು

ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸಿದರೆ ಕೋರ್ಟ್‍ಗಳಲ್ಲಿ ದಾಖಲಾಗುವ ವ್ಯಾಜ್ಯಗಳಲ್ಲಿ ಇಳಿಮುಖ

June 5, 2018

ಮೈಸೂರು: – ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವುದರಿಂದ ನ್ಯಾಯಾಲಯಗಳಲ್ಲಿ ದಾಖಲಾಗುವ ವ್ಯಾಜ್ಯಗಳ ಪ್ರಮಾಣ ಇಳಿಮುಖವಾಗಲಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ವಂಟಿಗೊಡಿ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮೈಸೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಶಾಲೆಯ ಕಾನೂನು ಸಾಕ್ಷರತಾ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನುಗಳ ಅರಿವು ಹೊಂದುವ ಮೂಲಕ…

ಸರ್ಕಾರ ಮಾಡಲಾಗದ ಅಭಿವೃದ್ಧಿ ನಾಲ್ವಡಿಯವರು ಮಾಡಿದ್ದಾರೆ
ಮೈಸೂರು

ಸರ್ಕಾರ ಮಾಡಲಾಗದ ಅಭಿವೃದ್ಧಿ ನಾಲ್ವಡಿಯವರು ಮಾಡಿದ್ದಾರೆ

June 5, 2018

ಮೈಸೂರು: ಮೈಸೂರಿನ ತ್ಯಾಗರಾಜ ರಸ್ತೆ ಅರಸು ಮಂಡಳಿ ಸಂಘದ ಸಭಾಂಗಣದಲ್ಲಿ ಸೋಮವಾರ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಅವರು ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಲ್ವಡಿಯವರ 134ನೇ ಜನ್ಮದಿನೋತ್ಸ ವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾದರಿ ರಾಜಕೀಯ ವ್ಯವಸ್ಥೆಗೆ ನಾಂದಿ ಹಾಡಿದ ಹೆಗ್ಗಳಿಕೆ ನಾಲ್ವಡಿಯ ವರಿಗೆ ಸಲ್ಲುತ್ತದೆ. ಶಿಕ್ಷಣ ಕ್ರಾಂತಿ, ರಸ್ತೆ, ಒಳಚರಂಡಿ ವ್ಯವಸ್ಥೆ, ಪಾರಂಪರಿಕ ಕಟ್ಟಡಗಳ ನಿರ್ಮಾಣ ಅವರು ಯಾವುದೇ ಒಂದು ಸರ್ಕಾರ ಮಾಡಲಾಗದಷ್ಟು…

ರೈತರ ಎಲ್ಲಾ ಸಾಲ ಮನ್ನಾಕ್ಕೆ ಕಬ್ಬು ಬೆಳೆಗಾರರ ಪ್ರತಿನಿಧಿ ಆಗ್ರಹ
ಮೈಸೂರು

ರೈತರ ಎಲ್ಲಾ ಸಾಲ ಮನ್ನಾಕ್ಕೆ ಕಬ್ಬು ಬೆಳೆಗಾರರ ಪ್ರತಿನಿಧಿ ಆಗ್ರಹ

June 5, 2018

ಮೈಸೂರು: ರಾಜ್ಯ ಸರ್ಕಾರ ಯಾವುದೇ ನಿರ್ಬಂಧ ವಿಧಿಸಿದೆ ರೈತರು ಮಾಡಿರುವ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮನ್ನಾ ಮಾಡಿ, ರೈತರ ಏಳಿಗೆಗೆ ಕ್ರಮ ಕೈಗೊಳ್ಳಬೇಕು ಎಂದು ಕಬ್ಬು ಬೆಳೆಗಾರರ ಹೋರಾಟ ಸಮಿತಿ ಹಿತ ರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಹಳೆ ಮಿರ್ಲೆ ಸುನಯ್ ಗೌಡ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಮಾಡುವ ವಿಷಯದಲ್ಲಿ ಹಲವಾರು ಷರತ್ತುಗಳನ್ನು ವಿಧಿಸಲು ಮುಂದಾಗಿದೆ. ನಿರ್ದಿಷ್ಟ…

ಇಂದು ಸೈಕಲ್ ಜಾಥಾ
ಮೈಸೂರು

ಇಂದು ಸೈಕಲ್ ಜಾಥಾ

June 5, 2018

ಮೈಸೂರು: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜನಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಇನ್ಫೊಪೆಸ್ಟ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2018 ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮ ಜೂ.5ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.

ಪ್ರವಾಸಿಗರಿಗೆ `ಮೈಸೂರು ಪಾಕ್’ ವಿತರಿಸಿ ನಾಲ್ವಡಿ ಜಯಂತಿ ಆಚರಣೆ
ಮೈಸೂರು

ಪ್ರವಾಸಿಗರಿಗೆ `ಮೈಸೂರು ಪಾಕ್’ ವಿತರಿಸಿ ನಾಲ್ವಡಿ ಜಯಂತಿ ಆಚರಣೆ

June 5, 2018

ಮೈಸೂರು:  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜನ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಸೇನಾ ಪಡೆಯಿಂದ ನಾಲ್ವಡಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ, ಮೈಸೂರು ಅರಮನೆಗೆ ಆಗಮಿಸಿದ್ದ ಪ್ರವಾಸಿಗರಿಗೆ ಮೈಸೂರು ಖ್ಯಾತಿಯ ಮೈಸೂರು ಪಾಕ್ ಹಂಚುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಮುಖಂಡ ಕೆ.ರಘುರಾಂ, ಮೈಸೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿದ ರಾಜರ್ಷಿ ನಾಲ್ವಡಿಯವರು ಮೈಸೂರಿನ ಆಧುನಿಕ ಶಿಲ್ಪಿ ಎಂದರು. ಸಾಹಿತಿ ಬನ್ನೂರು ಕೆ ರಾಜು ಮಾತನಾಡಿ, ನಾಲ್ವಡಿಯವರು ಆಗಲೇ ಪ್ರಜಾಪ್ರತಿನಿಧಿ ಸಭೆ ಮಾಡಿ…

1 1,569 1,570 1,571 1,572 1,573 1,611
Translate »