ಬೆಂಗಳೂರು: ರೈತರ ಸಾಲಮನ್ನಾಕ್ಕೆ 15 ದಿವಸ ಕಾಲಾವಕಾಶ ಬೇಕೆಂದು ಸಿಎಂ ಕುಮಾರಸ್ವಾಮಿ ಉಲ್ಲೇಖಿಸುತ್ತಿರುವುದು ರೈತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಮಾಜಿ ಸಿಎಂ ಯಡಿಯೂರಪ್ಪ ಆರೋ ಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಘೋಷಣೆ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮೀನಾ-ಮೇಷ ಎಣ ಸುತ್ತಿದೆ. ರೈತ ಕಲ್ಯಾಣದ ಹೆಸರು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸರ್ಕಾರ ಇಂದು ರೈತರಿಗೆ ಮೋಸ ಮಾಡಲು ಹೊರಟಿದೆ ಎಂದು ಆಪಾದಿಸಿದರು.
ವಿದ್ವತ್ ಮೇಲಿನ ಹಲ್ಲೆ ಪ್ರಕರಣ
May 31, 2018ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರು ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲ ಪಾಡ್ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ಬುಧವಾರ ಎರಡನೇ ಬಾರಿ ವಜಾಗೊಳಿಸಿದೆ. ಇದೊಂದು ಕೊಲೆ ಯತ್ನ ಪ್ರಕರಣವಾಗಿದ್ದು, ಬೆಂಗಳೂರಿನ ಲ್ಲಿಯೇ ಭೀತಿ ಹುಟ್ಟಿಸುವ ಘಟನೆಯಾ ಗಿತ್ತು. ಆರೋಪಿ ಪ್ರಭಾವಿ ವ್ಯಕ್ತಿಯಾಗಿರು ವುದರಿಂದ ಹೊರಬಂದರೆ ಸಾಕ್ಷಿಗಳನ್ನು ನಾಶಪಡಿಸುವ, ಸಾಕ್ಷಿಗಳಿಗೆ ಬೆದರಿಕೆಯೊ ಡ್ಡುವ ಸಾಧ್ಯತೆ ಇರುವುದರಿಂದ ಮತ್ತು ವೈದ್ಯಕೀಯ ವರದಿಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ನಲಪಾಡ್‍ಗೆ ಜಾಮೀನು…
ಪರಿಸರ ದಿನಾಚರಣೆ ಪೂರ್ವಭಾವಿ ಸಭೆ: ಪ್ಲಾಸ್ಟಿಕ್ ಬಳಕೆ ನಿಷೇಧ, ಪರಿಸರ ಸಂರಕ್ಷಣೆ ಇಂದಿನ ತುರ್ತು ಅನಿವಾರ್ಯ
May 31, 2018ಮೈಸೂರು: ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಜನಜಾಗೃತಿ ಮೂಡಿಸುವುದು ಅಗತ್ಯವಿದ್ದು, ಈ ಬಗ್ಗೆ ಜೂನ್ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪರಿಸರ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಪರಿಸರ ಜಾಗೃತಿಗೆ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸೂಚನೆ ನೀಡಿದರು. ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆ ಬಗ್ಗೆ ವಿದ್ಯಾರ್ಥಿಗಳ ಮೂಲಕ…
ಕಾವೇರಿ ಸ್ವಚ್ಛತೆ ಜಾಗೃತಿಗಾಗಿ ಜೂ.5ರಂದು ಮೈಸೂರಿಂದ ಶ್ರೀರಂಗಪಟ್ಟಣದವರೆಗೆ ಜಾಥಾ
May 31, 2018ಮೈಸೂರು: ಕನ್ನಡನಾಡಿನ ಜೀವನದಿಯಾಗಿರುವ ಕಾವೇರಿ ನದಿಯ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಜೂ.5ರಂದು ಬೆಳಿಗ್ಗೆ 6.30ಕ್ಕೆ ಮೈಸೂರಿನಿಂದ ಶ್ರೀರಂಗಪಟ್ಟಣದವರೆಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.5ರಂದು ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಸುತ್ತೂರು ಕ್ಷೇತ್ರ ಶ್ರೀ ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿ ಅವರು ಕಾಲ್ನಡಿಗೆಗೆ…
ಕಂದಾಯ ವಸೂಲಾತಿ ಜಾಥಾ
May 31, 2018ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಕಂದಾಯ ವಸೂಲಾತಿಗಾಗಿ ಜಾಥಾ ಹಮ್ಮಿಕೊಳ್ಳಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಾಕಿ ಕಂದಾಯವನ್ನು ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ಕೋರಿದ್ದಾರೆ. ಯಾವುದೇ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳು ಇದ್ದಲ್ಲಿ ಶುಲ್ಕ ರಹಿತ ದೂರವಾಣ ಸಂಖ್ಯೆ 1912ಗೆ ಕರೆ ಮಾಡುವುದು. ಗಾಳಿ ಮಳೆ ಇರುವ ಸಂದರ್ಭದಲ್ಲಿ ವಿದ್ಯುತ್ ಅಡಚಣೆಗಳಾದಲ್ಲಿ ಗ್ರಾಹಕರು ಸಂಯಮದಿಂದ…
ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕ ಬಿಡುಗಡೆ
May 31, 2018ಮೈಸೂರು: ಸರಸ್ವತಿಪುರಂ ಜೆಎಸ್‍ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕವನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಮತ್ತು ವಿಆರ್‍ಎಲ್ ಮೀಡಿಯಾ ಲಿಮಿಟೆಡ್ ಸಹಯೋಗದಲ್ಲಿ ಹೊರತಂದಿರುವ ಕಾಯಕಯೋಗಿ 102 ಕಾಫಿ ಟೇಬಲ್ ಪುಸ್ತಕವನ್ನು ವಿಆರ್‍ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ವಿಜಯ ಸಂಕೇಶ್ವರ ಬಿಡುಗಡೆಗೊಳಿಸಿದರು. ನಂತರ ಅವರು ಮಾತನಾಡಿ, ವೀರಶೈವ ಮಠಾಧೀಶರ ವಿದ್ಯಾ ಸಂಸ್ಥೆಗಳಿಗಿಂತ ಸುತ್ತೂರು ಶ್ರೀಗಳು ಮತ್ತು ಸಿದ್ದಗಂಗಾ ಶ್ರೀಗಳು ನಡೆಸುತ್ತಿರುವ ವಿದ್ಯಾ ಸಂಸ್ಥೆಗಳು ಹೆಚ್ಚು ಮುಂಚೂಣ…
ಮಹಿಳೆಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಲು ಸಲಹೆ
May 31, 2018ಮೈಸೂರು: ಸರ್ಕಾರಿ ಉದ್ಯೋಗಗಳು ಮುಂದಿನ ದಿನಗಳಲ್ಲಿ ಸಿಗುವುದು ಕಷ್ಟಕರವಾಗಿ ಪರಿಣಮಿಸಲಿದ್ದು, ಮಹಿಳೆಯರು ಸರ್ಕಾರದ ಸವಲತ್ತು ಪಡೆದುಕೊಂಡು ಸ್ವಯಂ ಉದ್ಯೋಗ ಮಾಡುವುದಕ್ಕೆ ಮುಂದಾಗಬೇಕೆಂದು ಮೈಸೂರು ಜಿಲ್ಲಾ ಕೈಗಾರಿಕಾ ಸಂಸ್ಥೆಯ (ಡಿಐಸಿ) ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ ಸಲಹೆ ನೀಡಿದ್ದಾರೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಸಂಸ್ಥೆ ಆವರಣದಲ್ಲಿ ಬುಧವಾರ ಮಹಿಳಾ ವಾಣ ಜ್ಯ ಮತ್ತು ಕೈಗಾರಿಕೆಗಳ ಸಬಲೀಕರಣ(ವೆಬ್)ಸಂಸ್ಥೆ ಮಹಿಳಾ ಕೈಗಾರಿಕೋದ್ಯಮಿಗಳಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಮಹಿಳೆಯರು…
ಜನಸಾಮಾನ್ಯರು ತತ್ತರಿಸುವಂತೆ ಮಾಡಿರುವ ಪೆಟ್ರೋಲ್, ಡೀಸೆಲ್ ದರ ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರತಿಭಟನೆ
May 31, 2018ಮೈಸೂರು: ಜನಸಾಮಾನ್ಯರ ಅತೀ ಅಗತ್ಯವಾದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಸತತವಾಗಿ ಏರುತ್ತಲೇ ಇದ್ದು, ಇದರಿಂದ ಜನ ತತ್ತರಿಸುತ್ತಿದ್ದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಬುಧವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗ ಪ್ರತಿ 6 ರಿಂದ 9 ತಿಂಗಳಿಗೊಮ್ಮೆ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…
`ಮೈಸೂರು ಪತ್ರಿಕೆ’ ಸಂಪಾದಕ ಟಿ.ವೆಂಕಟರಾಮ್ ನಿಧನ
May 31, 2018ಮೈಸೂರು: ಮೈಸೂರಿನ ಹಿರಿಯ ಪತ್ರಕರ್ತ, `ಮೈಸೂರು ಪತ್ರಿಕೆ’ ಸಂಪಾದಕ ಟಿ.ವೆಂಕಟರಾಮ್ ಬುಧವಾರ ಮಧ್ಯಾಹ್ನ ವಿದ್ಯಾರಣ್ಯಪುರಂನ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ವೃತರು ಏಳು ಪುತ್ರಿಯರು ಹಾಗೂ ಓರ್ವ ಪುತ್ರ ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಮೇ 31ರ ಗುರುವಾರ ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮೈಸೂರಿನಲ್ಲಿ 75 ವರ್ಷಗಳಿಗೂ ಹೆಚ್ಚು ಕಾಲದಿಂದ ಸತತವಾಗಿ ಪ್ರಕಟವಾಗುತ್ತಿರುವ `ಮೈಸೂರು ಪತ್ರಿಕೆ’ಯ ಸಂಸ್ಥಾಪಕರಾದ ತಮ್ಮ ತಂದೆ ಟಿ.ನಾರಾಯಣ…
ಜೂನ್ ಪೂರ್ತಿ ಪರಿಸರ ಮಾಸಾಚರಣೆ
May 31, 2018ಮೈಸೂರು: ಪರಿಸರ ಸಂರಕ್ಷಣೆಯ ಹಿನ್ನೆಲೆಯಲ್ಲಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಮೈಸೂರು ಕೇಂದ್ರ, ಮೈಸೂರು ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಹಯೋಗದಿಂದ ಜೂನ್ ತಿಂಗಳನ್ನು `ಪರಿಸರ ಮಾಸಾಚರಣೆ’ಯನ್ನಾಗಿ ಆಚರಿಸಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಬಿಲ್ಡರ್ಸ್ ಅಸೋಸಿಯೇಷನ್ ಸಂಸ್ಥೆಯ ಮೈಸೂರು ಘಟಕದ ಅಧ್ಯಕ್ಷ ಕೆ.ಸುಬ್ರಹ್ಮಣ್ಯರಾವ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಪರಿಸರ ಮಾಸಾಚರಣೆಯನ್ನಾಗಿ ಆಚರಿಸಲು ನಮ್ಮ ಸಂಸ್ಥೆ ನಿರ್ಧರಿಸಿದೆ. ಇದರ ಅಂಗವಾಗಿ ಗಿಡ ನೆಡುವುದು, ಗ್ರೀನ್ ಟ್ರಸರ್ ಹಂಟ್,…