ಮೈಸೂರು: ಅಂತಾರಾಷ್ಟ್ರೀಯ ಸರೋದ್ ವಾದಕ ಪಂಡಿತ್ ಡಾ.ರಾಜೀವ್ ತಾರಾನಾಥ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾನಿಲ ಯವು ಸೋಮವಾರ ಮೈಸೂರಿನ ಅವರ ನಿವಾಸದಲ್ಲಿ `ನಾಡೋಜ’ ಪದವಿ ನೀಡಿ, ಗೌರವಿಸಿತು. ಮೈಸೂರಿನ ಸರಸ್ವತಿ ಪುರಂನಲ್ಲಿರುವ ಪಂಡಿತ್ ರಾಜೀವ್ ತಾರಾನಾಥ್ ಮನೆಯ ಮುಂದೆ ಇಂದು ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದ ಪ್ರಮುಖರ ಸಮ್ಮುಖದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾ ನಿಲಯದ ಕುಲಪತಿ ಡಾ.ಮಲ್ಲಿಕಾ ಎಸ್. ಘಂಟಿ ಅವರು ಪಂಡಿತ್ ಡಾ.ರಾಜೀವ್ ತಾರಾನಾಥ್ ಅವರಿಗೆ ನಾಡೋಜ ಪದವಿ ಪ್ರದಾನ ಮಾಡಿದರು….
ಮಾಲ್‍ಗಳಲ್ಲಿ ವಾಹನ ನಿಲುಗಡೆ ಶುಲ್ಕ ಸಂಗ್ರಹ
May 30, 2018ಮೈಸೂರು: ತನ್ನ ವ್ಯಾಪ್ತಿಯಲ್ಲಿ ಬರುವ ಮಾಲ್‍ಗಳು ಹಾಗೂ ಶಾಪಿಂಗ್ ಕಾಂಪ್ಲೆಕ್ಸ್‍ಗಳಲ್ಲಿ ಗ್ರಾಹಕರ ವಾಹನ ನಿಲುಗಡೆಗೆ ಶುಲ್ಕ ಪಾವತಿಸುವಂತಿಲ್ಲ ಎಂದು ನೀಡಿದ್ದ ಮೈಸೂರು ಮಹಾನಗರ ಪಾಲಿಕೆ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಬಿಎಂ ಹ್ಯಾಬಿಟೆಟ್ ಮಾಲ್ ಜಂಟಿ ಮಾಲೀಕ ದೀಪಕ್‍ಲುಲ್ಲಾ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಯಾವುದೇ ನೋಟಿಸ್ ನೀಡದೆ ಮೈಸೂರು ಮಹಾ ನಗರ ಪಾಲಿಕೆಯು ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಹಾಗೂ ಎಲ್ಲಾ ಬಗೆಯ…
ಇಂದು, ನಾಳೆ ಬ್ಯಾಂಕ್ ಬಂದ್ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಬ್ಯಾಂಕ್ ನೌಕರರ ಮುಷ್ಕರ
May 30, 2018ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಯಿಂದ ಎರಡು ದಿನಗಳ ಕಾಲ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ ಕರೆ ಕೊಟ್ಟಿದೆ. ವೇತನ ಪರಿಷ್ಕರಣೆ ಮಾಡಬೇಕೆಂದು ಈಗಾಗಲೇ ಸಾಕಷ್ಟು ಬಾರಿ ಇಂಡಿಯನ್ ಬ್ಯಾಂಕ್ ಅಸೋಸಿ ಯೇಷನ್ ಜೊತೆಗೆ ಮಾತುಕತೆ ನಡೆದಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ವೇತನ ಪರಿ ಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ. ಬ್ಯಾಂಕ್ ನೌಕರರು ಮುಷ್ಕರಕ್ಕೆ ಕರೆ ನೀಡಿರುವ…
ಕಾಂಗ್ರೆಸ್‍ನಿಂದ ಮೈತ್ರಿ ಮುಜುಗರ: ಜೆಡಿಎಸ್ ಶಾಸಕ ಬೇಸರ
May 30, 2018ಮಂಡ್ಯ: ಅಧಿಕಾರಕ್ಕೆ ಬರುವಾಗ ಬೇಷರತ್ ಬೆಂಬಲ ಘೋಷಿಸಿದ್ದ ಕಾಂಗ್ರೆಸ್ ಇದೀಗ ಕ್ಷಣ ಕ್ಷಣಕ್ಕೂ ಷರತ್ತು ವಿಧಿಸುತ್ತಿದೆ. ಕಾಂಗ್ರೆಸ್ ನಾಯಕರ ಈ ನಡೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಾತ್ರವಲ್ಲ ನಮಗೂ ಬೇಸರ ತಂದಿದೆ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಂತ್ರ ಫಲಿತಾಂಶದಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆರಂಭದಲ್ಲಿ ಬೇಷರತ್ ಬೆಂಬಲ ಎಂದಿದ್ದ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ನಂತರ ನಾನಾ ಷರತ್ತು ವಿಧಿಸುತ್ತಿದ್ದಾರೆ. ಸರ್ಕಾರ ರಚನೆಯಾಗಿ ವಾರವಾದರೂ…
ಸಿಎಂ ಕುಮಾರಸ್ವಾಮಿ ಚಿತ್ತ ಬಿಜೆಪಿಯತ್ತ?
May 30, 2018ಬೆಂಗಳೂರು: ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದು ಬೀಳುವ ಲಕ್ಷಣಗಳು ಕಂಡು ಬರುತ್ತಿವೆ. ಆರಂಭದಲ್ಲಿ ಬೇಷರತ್ ಬೆಂಬಲ ಎಂದು ಘೋಷಿಸಿದ್ದ ಕಾಂಗ್ರೆಸ್ ಮುಖಂಡರು ಖಾತೆ ಹಂಚಿಕೆ ವಿಚಾರದಲ್ಲಿ ಹಲವಾರು ಷರತ್ತುಗಳನ್ನು ವಿಧಿಸುತ್ತಿರುವುದರಿಂದ ಕುಮಾರಸ್ವಾಮಿ ಕಾಂಗ್ರೆಸ್ ಸಹವಾಸ ಸಾಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿಗಳು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದು ಔಪಚಾರಿಕ ಎಂದು ಹೇಳಲಾಗುತ್ತಿದೆಯಾದರೂ, ಈ ವೇಳೆ…
ಕೇರಳಕ್ಕೆ ಮುಂಗಾರು ಪ್ರವೇಶ ಮಂಗಳೂರು, ಉಡುಪಿಯ ಮಳೆಗೆ ಮೂವರು ಬಲಿ
May 30, 2018ನವದೆಹಲಿ: ಭಾರತದ ರೈತಾಪಿ ವರ್ಗ ಪ್ರಧಾನವಾಗಿ ಅವ ಲಂಬಿಸಿರುವ ನೈಋತ್ಯ ಮಾನ್ಸೂನ್ ಮಂಗಳವಾರ ಕೇರಳ ಮೂಲಕ ಭಾರತ ವನ್ನು ಪ್ರವೇಶಿಸಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುಂದಿನ 24 ಗಂಟೆಗಳಲ್ಲಿ ಕೇರಳಕ್ಕೆ ಮಾನ್ಸೂನ್ ಅಪ್ಪಳಿಸಲಿದೆ ಎಂದು ಹೇಳಿತ್ತಾದರೂ, ಮಂಗಳವಾರ ಮುಂಜಾ ನೆಯೇ ಮಾನ್ಸೂನ್ ಕೇರಳ ಮೂಲಕ ಭಾರತ ಪ್ರವೇಶಿಸಿತು. ಮೇ 10ರ ಬಳಿಕ, ಲಭ್ಯ ಇರುವ 14 ಮಳೆ ಮಾಪನ ಕೇಂದ್ರ ಗಳ ಪೈಕಿ ಶೇ.60ರಷ್ಟರಲ್ಲಿ 2.55 ಮಿ.ಮೀ. ಗಿಂತ ಹೆಚ್ಚು ಮಳೆ ದಾಖ ಲಾದರೆ ಮುಂಗಾರು…
ನಲಪಾಡ್ ಜಾಮೀನು ಭವಿಷ್ಯ ಇಂದು ನಿರ್ಧಾರ
May 30, 2018ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಗಂಭೀರ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮದ್ ನಲ ಪಾಡ್ ಪ್ರಕರಣದ ಜಾಮೀನು ಅರ್ಜಿಯ ತೀರ್ಪು ಪ್ರಕಟವನ್ನು ನ್ಯಾಯಾಲಯ ಬುಧವಾರಕ್ಕೆ ಕಾಯ್ದಿರಿಸಿದೆ. ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್‍ಗೆ ಜಾಮೀನು ಅರ್ಜಿಯ ಭವಿಷ್ಯ ನಾಳೆ ಪ್ರಕಟವಾಗ ಲಿದ್ದು, ಜಾಮೀನು ಅರ್ಜಿಯ ತೀರ್ಪನ್ನು 63ನೇ ಎಸಿಎಂಎಂ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್…
ಮೈಸೂರಲ್ಲಿ ಪುಷ್ಪಗುಚ್ಛ ನೀಡಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
May 30, 2018ಮೈಸೂರು: ಬೇಸಿಗೆ ರಜೆ ಮುಗಿಸಿ ಮಕ್ಕಳು ಇಂದು ಶಾಲೆಗಳಿಗೆ ಮರಳಿದ್ದಾರೆ. ತುಂಬು ಉತ್ಸಾಹ ದಿಂದ ಬ್ಯಾಗ್ ನೇತು ಹಾಕಿಕೊಂಡು ಶಾಲೆಗಳಿಗೆ ಮರಳಿದ ವಿದ್ಯಾರ್ಥಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೋಮವಾರ ಮೈಸೂರಿನ ಕನಕಗಿರಿಯ ಶಾರದಾ ವಿಲಾಸ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪುಷ್ಪಗುಚ್ಛ ನೀಡಿ ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ಪಠ್ಯ ಪುಸ್ತಕಗಳನ್ನು ವಿತರಿಸಿದರು. ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಪ್ರಥಮ…
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ
May 30, 2018ಮೈಸೂರು: ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸಲಾ ಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ವರ್ಷ ಸುಭದ್ರ ಆಡಳಿತ ನೀಡುವುದ ರೊಂದಿಗೆ ಒಂದು ವಾರದೊಳಗೆ ರೈತರ ಸಾಲ ಮನ್ನಾ ಮಾಡುವುದಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೈಶಿಷ್ಟ್ಯವಾದ ಚುನಾವಣೆಯಾಗಿತ್ತು. ಮೈಸೂರು ಜಿಲ್ಲೆ ಯಲ್ಲಿ ಜೆಡಿಎಸ್ ಐದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಮೂರು…
ಅರಣ್ಯ ಇಲಾಖೆ ಅಸಹಕಾರ: ಅಪಾಯಕಾರಿ ಮರಗಳ ತೆರವು ನೆನೆಗುದಿಗೆ
May 30, 2018ಮೈಸೂರು: ಮೈಸೂರಿನಲ್ಲಿ ಗಾಳಿ-ಮಳೆಯಿಂದ ನಿರಂತರವಾಗಿ ಹತ್ತಾರು ಮರಗಳು ಉರುಳಿಬಿದ್ದ ಹಿನ್ನೆಲೆಯಲ್ಲಿ ಒಣಗಿರುವ ಅಪಾಯಕಾರಿ ಮರಗಳು ಹಾಗೂ ಕೊಂಬೆ ಗಳ ತೆರವು ಕಾರ್ಯಾಚರಣೆಯನ್ನು ನಗರ ಪಾಲಿಕೆ ಮುಂದುವರಿಸಿದೆ. ಆದರೆ ಅರಣ್ಯ ಇಲಾಖೆ ಸಮನ್ವಯತೆ ಕೊರತೆ ಯಿಂದ ಕಾರ್ಯಾಚರಣೆ ವಿಳಂಬವಾಗು ತ್ತಿದೆ ಎಂದು ತಿಳಿದುಬಂದಿದೆ. ಮೈಸೂರಿನಲ್ಲಿ ಜೋರು ಗಾಳಿ-ಮಳೆಯಾದರೆ ಒಂದೆರಡು ಮರಗಳು ನೆಲಕ್ಕುರುಳುವುದು ಖಚಿತ. ಕೆಆರ್‍ಎಸ್ ರಸ್ತೆಯಲ್ಲಿ ಇಎಸ್‍ಐ ಆಸ್ಪತ್ರೆ ಸಮೀಪ ಮರವೊಂದು ಉರುಳಿ ಆಟೋ ಮೇಲೆ ಬಿದ್ದ ಪರಿಣಾಮ ತಮಿಳುನಾಡಿನ ಯುವತಿ ರೇವತಿ ಮೃತಪಟ್ಟ ಘಟನೆ ಮರೆಯು ವಂತಿಲ್ಲ….