ಮೈಸೂರು: ಜೂನ್ 8ರಂದು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಮತದಾನ ಹಕ್ಕು ಮೊಟಕುಗೊಳಿಸಲಾಗಿದ್ದರೂ ಮತದಾರರ ಪಟ್ಟಿಯಿಂದ ಅತಿಥಿ ಉಪನ್ಯಾಸಕರ ಹೆಸರುಗಳನ್ನು ತೆಗೆದು ಹಾಕಿಲ್ಲ. ಕೂಡಲೇ ಮತದಾರರ ಪಟ್ಟಿಯನ್ನು ಪರಿಷ್ಕರಿಸದಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ಚುನಾವಣೆಗೆ ತಡೆಯಾಜ್ಞೆ ತರುವುದಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಶರತ್ ರಾಜಾ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿ ಅತಿಥಿ ಉಪನ್ಯಾಸಕರಿಗೆ…
ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ ಶಿಬಿರ
May 30, 2018ಮೈಸೂರು: ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ಸಲುವಾಗಿ ಎನ್‍ಐಇ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕೌಶಲ್ಯ ತರಬೇತಿ ಯೋಜನೆಯಡಿಯಲ್ಲಿ `ಅಲ್ಪಾವಧಿಯ ಉಚಿತ ಕೌಶಲ್ಯ ತರಬೇತಿ ಶಿಬಿರ’ ನಡೆಸಲು ಉದ್ದೇಶಿಸಲಾಗಿದೆ ಎಂದು ಎನ್‍ಐಇ ಸೊಸೈಟಿ ಅಧ್ಯಕ್ಷ ಶ್ರೀನಾಥ್ ಬಾಟ್ನಿ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕಲ್ಪಿಸಲು ಮೂರರಿಂದ ಆರು ತಿಂಗಳ ಅವಧಿಯ ನಾಲ್ಕು ವಿಷಯಗಳಲ್ಲಿ ಕೌಶಲ್ಯ ತರಬೇತಿ ಶಿಬಿರಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. 8ನೇ ತರಗತಿ ತೇರ್ಗಡೆ…
ತಾಯಿಯಿಂದಲೇ ಕಿರುಕುಳ: ಮಹಿಳೆ ಆರೋಪ
May 30, 2018ಮೈಸೂರು: ಗ್ರಾಮದ ಕೆಲವು ಮುಖಂಡರೊಂದಿಗೆ ತಾಯಿ ಸೇರಿಕೊಂಡು ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದು, ಸೂಕ್ತ ರಕ್ಷಣೆ ನೀಡುವಂತೆ ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಾಲೂಕಿನ ಅರಸಿನಕೆರೆ ಗ್ರಾಮದ ಪದ್ಮಾಮಣ ಆರೋಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಮುಖಂಡನೊಬ್ಬ ತನ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಳ್ಳುವಂತೆ ಪೀಡಿಸುತ್ತಿದ್ದ. ಇದನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆತ ತನ್ನ ತಾಯಿಗೆ ಬೆದರಿಸಿ, ಕೆಲವು ಗ್ರಾಮಸ್ಥರನ್ನು ಕರೆತಂದು ನನ್ನ ಮೇಲೆ ಹಲ್ಲೆ…
ನೇಣು ಬಿಗಿದುಕೊಂಡು ಗೃಹಿಣ ಸಾವು
May 30, 2018ಮೈಸೂರು: ನೇಣು ಬಿಗಿದುಕೊಂಡು ಗೃಹಿಣ ಯೊಬ್ಬರು ಸಾವನ್ನಪ್ಪಿದ್ದು, ಆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿರುವ ಘಟನೆ ಮೈಸೂರು ತಾಲೂಕು, ಬ್ಯಾತನಹಳ್ಳಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ಮಹೇಶ ಎಂಬುವರ ಪತ್ನಿ ಶ್ರೀಮತಿ ಕಾವ್ಯಾ ಸಾವನ್ನಪ್ಪಿದವರು. ಮೂಲತಃ ಮೈಸೂರು ತಾಲೂಕು, ಶೆಟ್ಟಿನಾಯಕನಹಳ್ಳಿಯವರಾದ ಕಾವ್ಯಾಳನ್ನು ಮೂರು ವರ್ಷಗಳ ಹಿಂದೆ ಬ್ಯಾತಹಳ್ಳಿಯ ಮಹೇಶ್‍ಗೆ ಕೊಟ್ಟು ಮದುವೆ ಮಾಡಲಾಗಿತ್ತು. ತವರಲ್ಲಿ ಬಾಣಂತನ ಮುಗಿಸಿಕೊಂಡು ಮೂರು ದಿನಗಳ ಹಿಂದಷ್ಟೇ ಗಂಡನ ಮನೆಗೆ ಹಿಂದಿರುಗಿದ್ದ ಕಾವ್ಯಾ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಸೋಮವಾರ ರಾತ್ರಿ…
ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
May 30, 2018ಮೈಸೂರು: ಕೆ.ಆರ್.ನಗರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕೆ.ಆರ್.ನಗರ ಟೌನ್ ಹೊಸ ಅಗ್ರಹಾರ, ಭೇರ್ಯ, ಹರದನಹಳ್ಳಿ, ಹನಸೋಗೆ, ಮಿರ್ಲೆ, ಮೇಲೂರು ಮತ್ತು ಕೆ.ಆರ್.ನಗರ ಟೌನ್ ಡಿ.ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಕೆ.ಆರ್.ನಗರ ಟೌನ್‍ನಲ್ಲಿರುವ ಬಾಲಕರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹಿಂದುಳಿದ ವರ್ಗ-1, 2ಎ, 2ಬಿ, 3ಎ,3ಬಿ, ಎಸ್.ಸಿ. ಹಾಗೂ ಎಸ್.ಟಿ. ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಲೇಖನ ಸಾಮಗ್ರಿ, ನೋಟ್ ಪುಸ್ತಕ,…
ಬಹಿರಂಗ ಹರಾಜು
May 30, 2018ಮೈಸೂರು: ಮೈಸೂರು ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರಿದ ಎರಡು ನಿರುಪಯುಕ್ತ ವಾಹನಗಳನ್ನು ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ಜ್ಯೋತಿನಗರದಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಿ.
ಮೈಸೂರಲ್ಲಿ ಸಾರಿಗೆ ಬಸ್ ತಡೆದ ಸಂಸದ, ಶಾಸಕರೂ ಸೇರಿದಂತೆ 75 ಮಂದಿ ಬಂಧನ
May 29, 2018ಮೈಸೂರು: ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಮೈಸೂರಿನಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ಬಸ್‍ಗಳ ಸಂಚಾರಕ್ಕೆ ಅಡ್ಡಿ ಪಡಿಸಲು ಮುಂದಾದ ಸಂಸದ ಪ್ರತಾಪ ಸಿಂಹ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಬಿಜೆಪಿಯ 75ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೋಮವಾರ ಬೆಳಿಗ್ಗೆ ಪೊಲೀಸರು ಬಂಧಿಸಿ, ಮಧ್ಯಾಹ್ನ ಬಿಡುಗಡೆ ಮಾಡಿದರು. ರಾಜ್ಯ ಬಿಜೆಪಿ ಕರೆ ನೀಡಿದ್ದ ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ ಮೈಸೂರಿನ ಬಸ್ ನಿಲ್ದಾಣ, ಬಸ್ ಡಿಪೋಗಳ…
ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ಗಳ ಪುನರ್‍ವಿಂಗಡಣೆ
May 29, 2018ಮೈಸೂರು: ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ಗಳ ಪುನರ್ ವಿಂಗಡಣೆ ಸಂಬಂಧ ಅಂತಿಮ ಅಧಿಸೂಚನೆ ಹೊರಬಿದ್ದಿದ್ದು, ವಾರ್ಡ್‍ಗಳ ನಕ್ಷೆಯ ದಾಖಲೀಕರಣ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಪ್ರಕ್ರಿಯೆಗಳಲ್ಲಿ ಪಾಲಿಕೆ ನಿರತವಾಗಿದೆ. 2011ರ ಜನಗಣತಿ ಆಧಾರದಲ್ಲಿ ಮೈಸೂರು ಮಹಾನಗರ ಪಾಲಿಕೆಯ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಕರಡನ್ನು ಇದೇ ಫೆ.8ರಂದು ಪ್ರಕಟಿಸಿ, ಅಧಿಸೂಚನೆ ಹೊರಡಿಸಿತ್ತು. ಈ ಸಂಬಂಧ ಅಧಿಸೂಚನೆ ಪ್ರಕಟಿಸಿದ ದಿನದಿಂದ 15 ದಿನಗಳ ಒಳಗೆ ಸಲಹೆ ಹಾಗೂ ಆಕ್ಷೇಪಣೆಗೆ ಆಹ್ವಾನಿಸಲಾಗಿತ್ತು. ಅದರಂತೆ ಆಕ್ಷೇಪಣೆಗಳ…
ಮೊದಲ ಪತ್ನಿ ಹತ್ಯೆ ಯತ್ನ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ
May 29, 2018ಮೈಸೂರು: ಮೊದಲ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದ ಸಂಬಂಧಿಕರೊಬ್ಬರ ಮೇಲೂ ಹಲ್ಲೆ ನಡೆಸಿದ್ದ ಆರೋಪಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ್ ಒಂಟಿಗೋಡಿ ಅವರು, 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಕೆ.ಆರ್.ನಗರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಮಹದೇವನಿಗೆ ಶಿಕ್ಷೆ ವಿಧಿಸ ಲಾಗಿದೆ. ಮುಳ್ಳೂರು ಗ್ರಾಮದ ಸಬಂಧಿ ಕರೊಬ್ಬರ ಮನೆಯ ಸಮಾರಂಭಕ್ಕೆ ತೆರಳಿದ್ದಾಗ, ತನ್ನ ಮೊದಲ ಪತ್ನಿ ಪುಟ್ಟ ಗೌರಿ ಹಾಗೂ ಸಂಬಂಧಿ ಸ್ವಾಮಿಗೌಡರ ಮೇಲೆ…
37 ಶಾಸಕರ ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಬೇಸರದ ನುಡಿ
May 29, 2018ಬೆಂಗಳೂರು: ನಾವು 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಮಾಡುವುದಾದರೂ ಹೇಗೆ? ಎಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಬೇಸರದ ಮಾತುಗಳನ್ನು ಆಡಿದ್ದಾರೆ. ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆಂದು ಕುಮಾರಸ್ವಾಮಿ ಹೇಳಿಕೆ ನೀಡಿದ ವಿಚಾರವಾಗಿ ಮಾತನಾಡಿದ ದೇವೇಗೌಡರು ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು, ಹೆಚ್ಡಿಕೆ ಹೇಳುತ್ತಿರುವುದು ನಿಜ. ನನಗೂ ಈ ವಿಚಾರವಾಗಿ ನೋವಿದೆ. ರಾಜ್ಯದ ಆರೂವರೆ ಕೋಟಿ ಜನ ಹೆಚ್ಡಿಕೆಗೆ ಬೆಂಬಲ ನೀಡಿಲ್ಲ. ಕೇವಲ 37 ಶಾಸಕರನ್ನು ಇಟ್ಟುಕೊಂಡು ಹೇಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ…