ಮೈಸೂರು, ಡಿ.1(ಪಿಎಂ)- ಮೈಸೂರು ಜಿಲ್ಲೆಯಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ದಲ್ಲಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ 2002 ರಲ್ಲಿ ಸೋಂಕಿನ ಪರೀಕ್ಷೆ ಆರಂಭಿಸಲಾ ಯಿತು. ಅಂದು ಸಾಮಾನ್ಯ ವರ್ಗದಲ್ಲಿ ಸೋಂಕಿತರ ಪ್ರಮಾಣ ಶೇ.26ರಷ್ಟಿದ್ದರೆ, 2020-21ರ ಪ್ರಸಕ್ತ ಸಾಲಿನಲ್ಲಿ ಶೇ.0.63ಕ್ಕೆ ಇಳಿಕೆಯಾಗಿದೆ. ಅದೇ ರೀತಿ ಅಂದು ಗರ್ಭಿಣಿ ವರ್ಗದಲ್ಲಿ ಶೇ.0.68ರಷ್ಟಿದ್ದರೆ, ಪ್ರಸಕ್ತ ಸಾಲಿಗೆ ಈ ವರ್ಗದಲ್ಲಿ ಶೇ.0.04ಗೆ ಇಳಿಕೆ ಕಂಡಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮೊಹಮ್ಮದ್ ಶಿರಾಜ್ ಅಹಮದ್ ತಿಳಿಸಿದರು. ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ಆವ ರಣದ ರಾಜೇಂದ್ರ ಭವನದಲ್ಲಿ…
ಪತ್ರಕರ್ತರ ಭವನಕ್ಕೆ ಬಿಸಿ ನೀರಿನ ವಾಟರ್ ಡಿಸ್ಪೆನ್ಸರ್ ಯಂತ್ರ ಕೊಡುಗೆ
December 2, 2020ಮೈಸೂರು, ಡಿ.1(ಆರ್‍ಕೆಬಿ)- ಕೊರೊನಾ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಇನ್ನಿತರರ ಆರೋಗ್ಯ ಹಿತ ದೃಷ್ಟಿಯಿಂದ ಸಮಾಜ ಸೇವಕ ಮಹೇಂದ್ರ ಸಿಂಗ್ ಕಾಳಪ್ಪ ಅವರು ಮೈಸೂರು ಜಿಲ್ಲಾ ಪತ್ರಕರ್ತರ ಭವ ನಕ್ಕೆ ಬಿಸಿ ನೀರಿನ ವಾಟರ್ ಡಿಸ್ಪೆನ್ಸರ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಿಸಿ ನೀರಿನ ಯಂತ್ರವನ್ನು ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ನೇತೃತ್ವದಲ್ಲಿ ಪ್ರತಿಷ್ಠಾಪಿಸ ಲಾಯಿತು. ಈ ಯಂತ್ರವು ಅಗತ್ಯಾನುಸಾರ ಬಿಸಿ ನೀರು ಅಥವಾ ತಣ್ಣೀರು ಕಲ್ಪಿಸುತ್ತದೆ. ಕೊರೊನಾ ಸಂದರ್ಭದಲ್ಲಿ ಪತ್ರಕರ್ತರಿಗೆ ಈ…
ಸಕಾಲ ಸಪ್ತಾಹ ಉದ್ಘಾಟಿಸಿದ ಸುರೇಶ್‍ಕುಮಾರ್
December 2, 2020ಮೈಸೂರು,ಡಿ.1-ಸಕಾಲ ಯೋಜನೆ ಯಡಿ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿಉಳಿದಿರುವ ಅರ್ಜಿಗಳನ್ನು ಮತ್ತು ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಹಾಗೂ ಸಾರ್ವಜನಿಕರಿಗೆ ಸಕಾಲ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಸಕಾಲ ಸಪ್ತಾಹ ಕಾರ್ಯಕ್ರಮಕ್ಕೆ ಪ್ರಾಥ ಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್‍ಕುಮಾರ್ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಧಾನ ಸೌಧದಲ್ಲಿ ಚಾಲನೆ ಮಾಡಿದರು. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ನಡೆಸಬೇಕು ಮತ್ತು ಸಕಾಲದ ಅನುಷ್ಠಾನದ ಬಗ್ಗೆ ಪರಿಶೀಲನೆ ಮಾಡ ಬೇಕು ಎಂದು ಎಲ್ಲಾ…
ಡಿ.22, 27ರಂದು 2 ಹಂತದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ
December 1, 2020ಬೆಂಗಳೂರು,ನ.30(ಕೆಎಂಶಿ)-ಗ್ರಾಮ ಪಂಚಾಯ್ತಿ ಗಳಿಗೆ ಡಿ.22 ಮತ್ತು 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯುಕ್ತ ಡಾ.ಬಸವರಾಜು ಅವರು ಗ್ರಾಮ ಪಂಚಾಯ್ತಿ ಚುನಾವಣಾ ವೇಳಾಪಟ್ಟಿಯನ್ನು ಸುದ್ದಿಗೋಷ್ಠಿಯಲ್ಲಿಂದು ಪ್ರಕಟಿಸಿದರು. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ರಾಜ್ಯಾ ದ್ಯಂತ ಜಾರಿಗೊಳ್ಳಲಿದೆ. ಆದರೆ, ನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಎರಡು ಹಂತದ ಚುನಾವಣೆಯ ಮತ ಎಣಿಕೆಯು ಡಿ.30ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆ ಡಿ.7 ರಂದು, ಎರಡನೇ ಹಂತಕ್ಕೆ ಡಿ.11ರಂದು…
ಕಾಂಗ್ರೆಸ್‍ಗೆ ಮುಂದೆ ಒಳ್ಳೇ ಅವಕಾಶಗಳಿವೆ
December 1, 2020ಬೆಂಗಳೂರು,ನ.30(ಕೆಎಂಶಿ)- ಮುಂದಿನ ದಿನಗಳಲ್ಲಿ ಕಾಂಗ್ರೆಸ್‍ಗೆ ಉತ್ತಮ ಅವಕಾಶಗಳಿವೆ. ಸದ್ಯದ ಪರಿಸ್ಥಿತಿ ಯಲ್ಲಿ ಉಪಚುನಾವಣೆಯ ಸೋಲಿನಿಂದ ಎದೆಗುಂದಿ ರುವ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವನ್ನು ಹಿರಿಯ ನಾಯಕರು ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ದೇವನಹಳ್ಳಿಯ ಸಾದಹಳ್ಳಿ ಗೇಟ್‍ನಲ್ಲಿರುವ ಕ್ಲಾಕ್ರ್ಸ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಚರ್ಚಿಸ ಲಾಯಿತು. ಈ ಸಂದರ್ಭದಲ್ಲಿ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ…
ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಡಿಸ್ಚಾರ್ಜ್ ಡಿಕೆಶಿ ವಿರುದ್ಧ ವಾಗ್ದಾಳಿ
December 1, 2020ಬೆಂಗಳೂರು,ನ.30-ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್, ನನಗೆ ಆವತ್ತು ಅಜೀರ್ಣವಾಗಿತ್ತು, ಹೀಗಾಗಿ ಬೇರೆ ಮಾತ್ರೆ ಸೇವಿಸುವ ಬದಲು ನಿದ್ದೆ ಮಾತ್ರ ಸೇವಿಸಿದೆ ಎಂದು ಹೇಳಿದ್ದಾರೆ. ನನಗೆ ಯಾವುದೇ ಒತ್ತಡವಿರಲಿಲ್ಲ, ನನಗೆ ನಿದ್ದೆ ಬರದಿದ್ದಾಗ ನಿದ್ದೆ ಮಾತ್ರೆ ಸೇವಿಸುತ್ತೇನೆ. ಯಾವಾ ಗಲೂ ಅರ್ಧ ಸೇವಿಸುತ್ತಿದ್ದೆ. ಮೊನ್ನೆ ಇಡೀ ಒಂದು ಮಾತ್ರೆ ನುಂಗಿದ್ದೆ. ಹೀಗಾಗಿ ಈ ಅಚಾತುರ್ಯವಾಯಿತು. ನಾನು ವಿಲ್ ಪವರ್ ಇರುವ…
ಸಚಿವರಾಗಲು ವಿಶ್ವನಾಥ್ ಅನರ್ಹರು
December 1, 2020ಬೆಂಗಳೂರು, ನ.30- ಸಚಿವ ಸ್ಥಾನದ ಕನಸು ಕಾಣುತ್ತಿದ್ದ ವಿಧಾನ ಪರಿಷತ್ ಸದಸ್ಯ ಹಳ್ಳಿಹಕ್ಕಿ ಅಡಗೂರು ಹೆಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಆದೇಶ ಬಿಗ್ ಶಾಕ್ ನೀಡಿದೆ. ಚುನಾವಣೆಯಲ್ಲಿ ಸೋತು, ವಿಧಾನಪರಿಷತ್‍ಗೆ ನಾಮ ನಿರ್ದೇಶನಗೊಂಡು ಸಚಿವರಾಗಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೇ ವಿಧಾನ ಪರಿಷತ್ ಸದಸ್ಯರಾಗಿರುವ ಆರ್.ಶಂಕರ್, ಎಂಟಿಬಿ ನಾಗರಾಜ್ ಅವರು ಸಚಿವರಾಗಲು ಯಾವುದೇ ಅಡ್ಡಿ ಇಲ್ಲ. ಅವರಿಗೆ ಸಚಿವ ಸ್ಥಾನ ನೀಡಬಹುದು ಎಂದು ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಅಡಗೂರು ಹೆಚ್.ವಿಶ್ವನಾಥ, ಆರ್. ಶಂಕರ್ ಹಾಗೂ ಎಂಟಿಬಿ…
ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ನಿರ್ಮಾಣ
December 1, 2020ಹುಣಸೂರು, ನ.30(ಕೆಕೆ)- ಗ್ರಾಪಂ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮೊದಲ ಹಂತದ ಚುನಾವಣೆ ಡಿ.22ರಂದು ನಡೆಯಲಿದೆ. ಬಿಜೆಪಿ ಈ ಬಾರಿಯ ಗ್ರಾಪಂ ಚುನಾವಣೆ ಯಲ್ಲಿ ಇತಿಹಾಸ ಬರೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸೋಮವಾರ ಬಿಜೆಪಿಯಿಂದ ನಡೆದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಪಂ ಚುನಾ ವಣೆ ಅಧಿಸೂಚನೆ ಹೊರಬಿದ್ದ ಹಿನ್ನೆಲೆ ಯಲ್ಲಿ ಚುನಾವಣಾ ರಂಗದಲ್ಲಿ ಗುರುತಿಸಿ ಕೊಳ್ಳುತ್ತಿರುವ ಏಕೈಕ ಪಕ್ಷ ಭಾಜಪ. ಈ ಬಾರಿಯ ಗ್ರಾಪಂ…
ಇಂದಿಗೂ ಅಖಂಡ ಕರ್ನಾಟಕ ರೂಪುಗೊಂಡಿಲ್ಲ: ಸಿಪಿಕೆ ವಿಷಾದ
December 1, 2020ಮೈಸೂರು,ನ.30(ಎಂಟಿವೈ)- ಕರ್ನಾ ಟಕ ಏಕೀಕರಣಗೊಂಡು ಹಲವು ವರ್ಷಗಳೇ ಕಳೆದಿದ್ದರೂ ಗಡಿ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಇನ್ನೂ ಜೀವಂತವಾಗಿರುವು ದರಿಂದ ಅಖಂಡ ಕರ್ನಾಟಕ ಇನ್ನೂ ರೂಪು ಗೊಂಡಿಲ್ಲ ಎಂದು ಹಿರಿಯ ಸಾಹಿತಿ ಡಾ. ಸಿ.ಪಿ.ಕೃಷ್ಣಕುಮಾರ್(ಸಿಪಿಕೆ) ವಿಷಾದಿಸಿದ್ದಾರೆ. ಮೈಸೂರು ಜಿಲ್ಲಾ ಕನ್ನಡ ಚಳವಳಿ ಗಾರರ ಸಂಘದ ವತಿಯಿಂದ ಸೋಮ ವಾರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿ ಸಿದ್ದ ನಾಡು ನುಡಿಗೆ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತ ನಾಡಿದ ಅವರು, ಏಕೀಕರಣ ಆಶಯ…
ಬಿಜೆಪಿಯವರಿಗೆ ಸಂವಿಧಾನವೂ ಗೊತ್ತಿಲ್ಲ, ಅದರ ಬಗ್ಗೆ ಗೌರವವೂ ಇಲ್ಲ
December 1, 2020ಬೆಂಗಳೂರು,ನ.30(ಕೆಎಂಶಿ)-ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ನಾವು ಮುಸಲ್ಮಾನರಿಗೆ ಟಿಕೆಟ್ ನೀಡುವುದಿಲ್ಲ ಎಂದಿರುವ ಈಶ್ವರಪ್ಪನವರು, ಸಂವಿ ಧಾನ ಓದಬೇಕು. ಅದರಲ್ಲಿರುವ ಆಶಯ ಏನು ಎಂದು ತಿಳಿದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಿಜೆಪಿಯವರ ಸಿದ್ಧಾಂತವೇ ಅದು. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಗೌರವವೂ ಇಲ್ಲ. ಅವರು ಸಂವಿಧಾನ ಸುಡಬೇಕು ಅಂತಲೇ ಕಾಯುತ್ತಿದ್ದಾರೆ. ಈಶ್ವರಪ್ಪ ಅವ ರಿಂದ ಸಂವಿಧಾನವನ್ನು…










