ಮೈಸೂರು, ನ.14(ಪಿಎಂ)- ನೆರೆಯ ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಮಾದರಿಯಲ್ಲಿ ನಮ್ಮ ರಾಜ್ಯ ಸರ್ಕಾರವೂ ಹರಾಜು ಮಾರುಕಟ್ಟೆಯಲ್ಲಿ ತಂಬಾಕು ಖರೀದಿಸುವ ಮೂಲಕ ರೈತನ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಂಸದ ಆರ್.ಧ್ರುವ ನಾರಾಯಣ್ ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ ಸರ್ಕಾರ ಸುಮಾರು 300 ಕೋಟಿ ರೂ. ಅವರ್ತ ನಿಧಿ ಇಟ್ಟು ಆ ಮೂಲಕ ಕೆಜಿ ತಂಬಾಕಿಗೆ 170 ರೂ. ನೀಡಿ ಖರೀದಿಸುತ್ತಿದೆ. ಅದೇ ಮಾದರಿ ಯಲ್ಲಿ ನಮ್ಮ…
ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಲಾಕ್‍ಡೌನ್ ಅವಧಿ ಗೌರವಧನ ಬಿಡುಗಡೆಗೆ ಸಿಎಂ ಸಮ್ಮತಿ
November 15, 2020ಮೈಸೂರು,ನ.14(ಪಿಎಂ)-ಕಾಲೇಜು ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿ ರುವ ಅತಿಥಿ ಉಪನ್ಯಾಸಕರ ಲಾಕ್‍ಡೌನ್ ಅವಧಿ ಗೌರವ ಧನ ಬಿಡು ಗಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ. ಸದರಿ ಅತಿಥಿ ಉಪನ್ಯಾಸಕರ ಲಾಕ್‍ಡೌನ್ ಅವಧಿ ಗೌರವ ಧನ ಬಿಡುಗಡೆ ಸಂಬಂಧ ಆಡಳಿತ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇದನ್ನು ಪರಿಶೀಲಿಸಿ ಗೌರವಧನ ಬಿಡುಗಡೆಗೆ ಆರ್ಥಿಕ ಇಲಾಖೆ ಕ್ರಮ ಕೈಗೊಂಡಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ.ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಆರ್ಥಿಕ ಇಲಾಖೆ ಸರ್ಕಾರದ…
ನೆಹರು ಯುವ ಕೇಂದ್ರದ ಸ್ಥಾಪನಾ ದಿನ ಆಚರಣೆ
November 15, 2020ಮೈಸೂರು, ನ.14(ಪಿಎಂ)- ಮೈಸೂ ರಿನ ಸರಸ್ವತಿಪುರಂನ ಯೂತ್ ಹಾಸ್ಟೆಲ್ ಸಭಾಂಗಣದಲ್ಲಿ ಶನಿವಾರ ನೆಹರು ಯುವ ಕೇಂದ್ರದ ಸ್ಥಾಪನಾ ದಿನ ಆಚರಿಸಲಾಯಿತು. ನೆಹರು ಯುವ ಕೇಂದ್ರ ಮೈಸೂರು, ಯೂತ್ ಹಾಸ್ಟೆಲ್ ಹಾಗೂ ಶ್ರೀ ತಲ ಕಾವೇರಿ ಮಹಿಳಾ ವಿದ್ಯಾಸಂಸ್ಥೆ ಸಂಯುಕ್ತಾಶ್ರಯ ದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಉದ್ಘಾಟಿಸಿದರು. ಬಳಿಕ ಮಾತ ನಾಡಿದ ಅವರು, ಯುವ ಸಮುದಾಯ ನಮ್ಮ ದೇಶದ ಶಕ್ತಿ. ಇಂತಹ ಶಕ್ತಿಯನ್ನು ಇಮ್ಮಡಿ ಗೊಳಿಸುವ ನಿಟ್ಟಿನಲ್ಲಿ ನೆಹರು ಯುವ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಯುವ…
ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರದ ವಿಶೇಷ ಪೂಜೆ
November 15, 2020ಮೈಸೂರು, ನ.14(ಆರ್‍ಕೆಬಿ)- ಮೈಸೂರಿನ ಲಷ್ಕರ್ ಮೊಹಲ್ಲಾ ಗರಡಿಕೇರಿಯ 3ನೇ ಕ್ರಾಸ್‍ನಲ್ಲಿರುವ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ 43ನೇ ವರ್ಷದ ಕಾರ್ತಿಕ ಮಾಸದ ಪೂಜಾ ಮಹೋತ್ಸವದ ಅಂಗವಾಗಿ ಮೊದಲ ಕಾರ್ತಿಕ ಸೋಮವಾರವಾದ ನ.16ರಂದು ವಿಶೇಷ ಪೂಜೆ ಗಳು ನಡೆಯಲಿವೆ ಎಂದು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ರವಿಕುಮಾರ್ (ಗುಡ್ಡಪ್ಪ) ತಿಳಿಸಿದರು. ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 6 ಗಂಟೆಯಿಂದ ಸ್ವಾಮಿಗೆ ಮಹಾರುದ್ರಾಭಿಷೇಕ, ಹಾಲರವಿ, ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿದೆ. ಸಂಜೆ 6 ಗಂಟೆಗೆ ಸ್ವಾಮಿಗೆ…
ಸಾಧಕರೊಂದಿಗೆ ಸಂವಾದದಲ್ಲಿ ಯುವ ಪ್ರತಿಭೆಗಳಿಗೆ ಸನ್ಮಾನ
November 15, 2020ಮೈಸೂರು, ನ.14-ಮೈಸೂರು ಆರ್ಟ್ ಗ್ಯಾಲರಿ ಒಂದಲ್ಲ ಒಂದು ಕಾರ್ಯಕ್ರಮ ಗಳ ಮೂಲಕ ಪ್ರತಿಯೊಬ್ಬರಿಗೂ ಉಚಿತ ವೇದಿಕೆಯನ್ನು ಒದಗಿಸುತ್ತಿದೆ. ಸಾಧಕ ರೊಂದಿಗೆ ಸಂವಾದ ಕಾರ್ಯಕ್ರಮ ಹೆಸ ರಿಗೆ ತಕ್ಕಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕ ರನ್ನು ಗುರುತಿಸಿ, ಅವರನ್ನು ಸನ್ಮಾನಿಸಿ ಅವ ರೊಂದಿಗಿನ ಮುಕ್ತ ಸಂವಾದ ಕಾರ್ಯ ಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಆರ್ಟ್ ಗ್ಯಾಲರಿಯಲ್ಲಿ 53ನೇ ಸಾಧಕ ರೊಂದಿಗೆ ಸಂವಾದ ಕಾರ್ಯಕ್ರಮ ವಿಶೇಷ ವಾಗಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮೂವರು ಯುವಪ್ರತಿಭೆಗಳನ್ನು ಗುರುತಿಸಿ ಅವರೊಂದಿಗಿನ ಮಾತುಕತೆ, ಅವರ ಅನಿ ಸಿಕೆ,…
ನ.18, ಕೆ.ಬಸವಯ್ಯ ಅವರಿಗೆ ಅಭಿನಂದನೆ
November 15, 2020ಮೈಸೂರು, ನ.14- ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿಯ ರಸಾಯಶಾಸ್ತ್ರ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಪೆÇ್ರ.ಕೆ.ಬಸವಯ್ಯ ಅವರಿಗೆ ಸ್ಟ್ಯಾನ್‍ಪೆÇೀರ್ಡ್ ವಿಶ್ವವಿದ್ಯಾನಿಲಯ, ಯುಎಸ್‍ಎ ಅವರು ಪ್ರಕಟಿಸಿರುವ ವಿಶ್ವದ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಇವರಿಗೆ ಅಭಿನಂದನಾ ಸಮಾರಂಭವನ್ನು ಕುಲಪತಿಗಳಾದ ಪೆÇ್ರ. ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನ.18ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ. ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪೆÇ್ರ.ಕೆ.ಎಂ.ಮಹದೇವನ್, ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಪೆÇ್ರ. ನಾಗರಾಜ ನಾಯಕ್, ಸಿಬ್ಬಂದಿ ವರ್ಗ, ಸಂಶೋಧನಾ…
ನ.17ರಿಂದ ಕಾಲೇಜು ಆರಂಭ ಹಿನ್ನೆಲೆ: ಮೈಸೂರು ವಿವಿ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿಗೆ ಕೋವಿಡ್ ಪರೀಕ್ಷೆಗೆ ಸೂಚನೆ
November 15, 2020ಮೈಸೂರು, ನ.14(ಆರ್‍ಕೆಬಿ)- ಪದವಿ ಕಾಲೇಜುಗಳನ್ನು ನ.17ರಿಂದ ಪ್ರಾರಂಭಿಸುವ ಕುರಿತು ವೈದ್ಯಕೀಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡುತ್ತಿದ್ದಂತೆಯೇ ಮೈಸೂರು ವಿಶ್ವವಿದ್ಯಾನಿಲಯ ಸರ್ಕಾರದ ಮಾರ್ಗಸೂಚಿ ಆಧರಿಸಿ ತರಗತಿಗಳನ್ನು ಆರಂಭಿಸಲು ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡಿದೆ. ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿಯನ್ನು ಕಡ್ಡಾಯವಾಗಿ ಕೋವಿಡ್-10 ಪರೀಕ್ಷೆಗೆ ಒಳಪಡಿಸಲು ಸೂಚಿಸ ಲಾಗಿದೆ. ಕೋವಿಡ್ ನೆಗೆಟಿವ್ ವರದಿ ಬಂದವರಿಗೆ ಮಾತ್ರ ತರಗತಿಗಳಿಗೆ ಹಾಜ ರಾಗಲು ಅನುಮತಿಸಲು ನಿರ್ಧರಿಸಿರುವುದಾಗಿ ವಿವಿ ಮೂಲಗಳು ತಿಳಿಸಿವೆ.
`ಹೂಟಗಳ್ಳಿ ನಗರಸಭೆ’ ರಚನೆ
November 13, 2020ಬೆಂಗಳೂರು,ನ.12(ಕೆಎಂಶಿ)-ಮೈಸೂರಿನ ಕೂರ್ಗಳ್ಳಿ, ಹೂಟಗಳ್ಳಿ, ಬೆಳವಾಡಿ ಹಾಗೂ ಹಿನಕಲ್ ಗ್ರಾಮ ಪಂಚಾಯಿತಿಯನ್ನು ಸೇರಿಸಿ ಹೂಟಗಳ್ಳಿ ನಗರಸಭೆ ರೂಪಿಸಲು ಸಂಪುಟ ಸಮ್ಮತಿಸಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮೈಸೂರು ಜಿಲ್ಲೆಯ ಶ್ರೀರಾಮಪುರ, ಬೋಗಾದಿ, ಕಡಕೊಳ, ರಮ್ಮನಹಳ್ಳಿ ಗಳನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯನ್ನು ಸಹ ನಗರಸಭೆಯಾಗಿ ಪರಿವರ್ತಿಸಿದ್ದು, ಇದರ ವ್ಯಾಪ್ತಿಗೆ ಲಕ್ಷ್ಮೀಪುರ, ಚಿಕ್ಕಬಿದರಕಲ್ಲು, ಮತ್ತು ಶ್ರೀಕಂಠಪುರ ಗ್ರಾಮ ಪಂಚಾ ಯಿತಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಮೈಸೂರು ವರದಿ: ಮೈಸೂರಿನಲ್ಲಿ 4…
ಬರೀ 18 ತಿಂಗಳಲ್ಲೇ ಬಡಾವಣೆ ನಿರ್ಮಾಣ
November 13, 2020ಮೈಸೂರು, ನ.12 (ಆರ್‍ಕೆಬಿ)- ಮೈಸೂರು ನಗರಾ ಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ಭೂ ಮಾಲೀ ಕರ ಜಂಟಿ ಸಹಭಾಗಿತ್ವದಲ್ಲಿ ಬಡಾವಣೆ ಅಭಿವೃದ್ಧಿ ಯೋಜನೆ ಕಾರ್ಯಗತಗೊಳಿಸಲು ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದರು. ಮುಡಾ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಂಟಿ ಸಹಭಾಗಿತ್ವ ದಲ್ಲಿ ಬಡಾವಣೆ ಅಭಿವೃದ್ಧಿ ಯೋಜನೆಯ ವಿವರ ಗಳನ್ನು ನೀಡಿದರು. ಜಂಟಿ ಸಹಭಾಗಿತ್ವದಡಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ಯೋಜನೆಗಳನ್ನು ಸಂಬಂಧ ಪಟ್ಟ ಎಲ್ಲಾ ಭೂ ಮಾಲೀಕರೊಂದಿಗೆ ಒಡಂಬಡಿಕೆ…
ಕೊರೊನಾ ನೆಪದಲ್ಲಿ ಅಭಿವೃದ್ಧಿ ಸ್ಥಗಿತ: ಈಗ ಸರ್ಕಾರದಿಂದ ಬರೀ ಲೂಟಿ… ಲೂಟಿ…
November 13, 2020ಹುಣಸೂರು,ನ.12(ಹೆಚ್‍ಎಸ್‍ಎಂ)-ರಾಜ್ಯ ಸರ್ಕಾರ ಕೊರೊನಾ ನೆಪ ದಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತ ಗೊಳಿಸಿ, ಬರೀ ಲೂಟಿ ಯಲ್ಲಿ ನಿರತವಾಗಿದೆ. ಇದರ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದರೆ, ದಪ್ಪ ಚರ್ಮದ ಈ ಕಿವುಡು ಸರ್ಕಾರ ಸತ್ತಂತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮಕ್ಕಾಗಿ ಗುರುವಾರ ಹುಣಸೂರಿಗೆ ಆಗಮಿಸಿದ್ದ ಅವರು, ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಅಧಿವೇಶನ ಕರೆಯುವ ಬಗ್ಗೆ ಸಾಕಷ್ಟು ಬಾರಿ ಪತ್ರ ಬರೆದರೂ, ಬಹಿರಂಗ ಹೇಳಿಕೆ…










