ನವದೆಹಲಿ,ಅ.24- ವೈದ್ಯಕೀಯ ಕೋರ್ಸ್‍ಗಳ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶದಿಂದಾದ ಯಡವಟ್ಟೊಂದು ಪ್ರತಿಭಾನ್ವಿತ ವಿದ್ಯಾರ್ಥಿನಿಯ ಜೀವ ಕಳೆದುಕೊಳ್ಳುವಂತೆ ಮಾಡಿದೆ. ತಾನು ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದ ಮಧ್ಯಪ್ರದೇಶದ ವಿಧಿ ಸೂರ್ಯವಂಶಿ ನೀಟ್ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾದು ಕುಳಿತಿ ದ್ದಳು. ಅ.16ರಂದು ಫಲಿತಾಂಶ ಪ್ರಕಟಗೊಂಡಿದ್ದು, ತನ್ನ ಹೆಸರಿನ ಮುಂದೆ ಕೇವಲ 6 ಸಂಖ್ಯೆ ಇರುವುದು ಕಂಡು ವಿಧಿ ಆಘಾತಕ್ಕೊಳಗಾಗಿದ್ದಾಳೆ. ಇಷ್ಟು ಕಡಿಮೆ ಅಂಕ ಬಂದಿರುವುದನ್ನು ವಿಧಿಯ ಪೆÇೀಷಕರು ಕೂಡ ನಂಬಲಾಗಿಲ್ಲ. ಇದರಿಂದ ಮಾನಸಿಕವಾಗಿ ಆಘಾತಕ್ಕೊಳ ಗಾದ ವಿಧಿ…
ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರ ಆಯೋಗಕ್ಕೆ ಬಿಟ್ಟದ್ದು: ಹೈಕೋರ್ಟ್
October 25, 2020ಬೆಂಗಳೂರು,ಅ.24- ಕಾನೂನಿನ ಪ್ರಕಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ತೆಗೆದುಕೊಳ್ಳಬಹುದು ಎಂದು ಹೈಕೋರ್ಟ್ ಹೇಳಿದೆ. ಆದಾಗ್ಯೂ, ತೀರ್ಪನ್ನು ಕಾಯ್ದಿರಿಸಿದ್ದು, ಕಾನೂನಿನ ಪ್ರಕಾರ ರಾಜ್ಯ ಚುನಾವಣಾ ಆಯೋಗ ಯಾವಾಗ ಬೇಕಾದರೂ ನಿರ್ಧಾರ ಕೈಗೊಳ್ಳಬಹುದೆಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿ ವಾಸ ಓಕಾ ಮತ್ತು ನ್ಯಾಯಾಧೀಶ ಅಶೋಕ್ ಕೆ. ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್‍ನ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಮತ್ತಿತರರು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ,…
ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಕೆಗೆ ಡಿಸೆಂಬರ್ 31 ಕಡೇ ದಿನ
October 25, 2020ನವದೆಹಲಿ,ಅ.24- 2019-20ನೇ ಸಾಲಿಗೆ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಡಿ.31ರವರೆಗೂ ಕೇಂದ್ರ ಸರ್ಕಾರ ವಿಸ್ತರಿಸಿದೆ. ಖಾತೆಗಳನ್ನು ಲೆಕ್ಕಪರಿಶೋಧಿಸಬೇಕಾದ ತೆರಿಗೆದಾರರಿಗೆ, ಆದಾಯ -ತೆರಿಗೆ ರಿಟರ್ನ್ ಫೈಲಿಂಗ್ ಗಡುವನ್ನು 2021 ಜನವರಿ 31ರವರೆಗೆ 2 ತಿಂಗಳು ವಿಸ್ತರಣೆ ಮಾಡಲಾಗಿದೆ. 2019-20ನೇ ಸಾಲಿನ ಆದಾಯ ತೆರಿಗೆ ರಿಟನ್ರ್ಸ್ ಸಲ್ಲಿಕೆ ಕಡೇ ದಿನವನ್ನು ಜು.31ರಿಂದ ನ.30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಮೇ ತಿಂಗಳಲ್ಲಿ ಪ್ರಕಟಿಸಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು…
ನಟ ಧನ್ವೀರ್ ಸೇರಿ 6 ಮಂದಿ ವಿರುದ್ಧ FIR
October 25, 2020ಮೈಸೂರು,ಅ.24-ಅರಣ್ಯ ಇಲಾಖೆ ಅನುಮತಿ ಪಡೆಯದೇ ಮತ್ತಿ ಗೋಡು ಆನೆ ಶಿಬಿರಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದ ಆರೋಪದಡಿ ಚಿತ್ರನಟ ಧನ್ವೀರ್ ಸೇರಿ ಆರು ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅರಣ್ಯ ಇಲಾಖೆ ಅನುಮತಿ ಪಡೆಯದೆ ಆನೇಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಆನೆ ಶಿಬಿರಕ್ಕೆ ನಟ ಧನ್ವೀರ್ ಹಾಗೂ ಸ್ನೇಹಿತರು ಅ.23ರಂದು ಅತಿಕ್ರಮವಾಗಿ ಪ್ರವೇಶಿಸಿದ್ದು, ಈ ಸಂದರ್ಭದಲ್ಲಿ ಮಹೇಂದ್ರ ಎಂಬ ಸಾಕಾನೆ ಮೇಲೆ ಸವಾರಿ ಮಾಡಿದ್ದಾರೆ. ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿರುವುದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ…
ನ.17ರಿಂದ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಕಾಲೇಜು ಪುನಾರಂಭ
October 24, 2020ಬೆಂಗಳೂರು, ಅ.23(ಕೆಎಂಶಿ)- ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಕಾಲೇಜುಗಳು ಪುನರಾರಂಭಗೊಳ್ಳಲಿವೆ ಎಂದು ಉನ್ನತ ಶಿಕ್ಷಣ ಇಲಾಖೆ ಹೊಣೆ ಹೊತ್ತಿರುವ ಡಾ.ಅಶ್ವತ್ಥ್‍ನಾರಾಯಣ್ ಇಂದಿಲ್ಲಿ ಪ್ರಕಟಿಸಿದ್ದಾರೆ. ಕಾಲೇಜುಗಳನ್ನು ಪ್ರಾರಂಭ ಮಾಡುವ ಸಂಬಂಧ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಗಳ ಜೊತೆ ಡಿಪ್ಲೊಮಾ ತರಗತಿಗಳು ಆರಂಭಗೊಳ್ಳಲಿದ್ದು, ಪ್ರಾಕ್ಟಿಕಲ್ ತರಗತಿ ಅಂದಿನಿಂದಲೇ ಆರಂಭಗೊಳ್ಳಲಿದೆ ಎಂದರು. ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಪಾಠ ಕೇಳಬಹುದು. ಇಲ್ಲವೆ…
ರಂಗನತಿಟ್ಟು ಬಳಿ ರೌಡಿಶೀಟರ್ ಬರ್ಬರ ಹತ್ಯೆ
October 24, 2020ಮಂಡ್ಯ, ಅ.23-ದುಷ್ಕರ್ಮಿಗಳ ಗುಂಪೊಂದು ಕಾರಿನಲ್ಲಿ ತೆರಳುತ್ತಿದ್ದ ರೌಡಿ ಶೀಟರ್ ಅನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ತಲೆಗೆ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಶ್ರೀರಂಗಪಟ್ಟಣ ತಾಲೂಕು ರಂಗನತಿಟ್ಟು ಕ್ರಾಸ್‍ನಲ್ಲಿ ಗುರುವಾರ ರಾತ್ರಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ಪಾಲಹಳ್ಳಿ ಗ್ರಾಮದ ನಿವಾಸಿ ರೌಡಿ ಶೀಟರ್ ಹರೀಶ್ ಅಲಿಯಾಸ್ ಕಳ್ಳಪಚ್ಚಿ(30) ಹತ್ಯೆಗೀಡಾದವನಾಗಿದ್ದು, ಗುರುವಾರ ರಾತ್ರಿ ಈತ ಶ್ರೀರಂಗಪಟ್ಟಣದಿಂದ ತನ್ನ ಸ್ವಗ್ರಾಮ ಪಾಲ ಹಳ್ಳಿಗೆ ಇಯಾನ್ ಕಾರಿನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಂಗನತಿಟ್ಟು ಕ್ರಾಸ್ ಬಳಿ ಈತನ ಕಾರಿಗೆ…
ಸೋಂಕಿತರ ಸುಲಿಗೆ ಮಾಡಿದರೆ ಕಠಿಣ ಕ್ರಮ
October 24, 2020ಮೈಸೂರು, ಅ.23(ಎಂಟಿವೈ)- ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕ ಪಡೆಯುವ ಖಾಸಗಿ ಆಸ್ಪತ್ರೆಗಳ ಮೇಲೆ ಹದ್ದಿನ ಕಣ್ಣಿಡಲು ತಂಡವೊಂದನ್ನು ರಚಿಸಲಾಗಿದೆ. ರೋಗಿ ಕಡೆಯವರು ದೂರು ನೀಡಿದರೆ ಹೆಚ್ಚುವರಿ ಹಣ ವಾಪಸ್ ಕೊಡಿಸುವ ಜವಾಬ್ದಾರಿ ಜಿಲ್ಲಾಡಳಿತದ್ದಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭರವಸೆ ನೀಡಿದ್ದಾರೆ. ಮೈಸೂರು ಡಿಸಿ ಕಚೇರಿ ಸಭಾಂಗಣದಿಂದ ಆನ್‍ಲೈನ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ಮೈಸೂರನ್ನು ಕೊರೊನಾ ಮುಕ್ತ ಜಿಲ್ಲೆಯಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಡುವೆ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು…
ಸರ್ಕಾರ ಕೊಡುವ ದುಡ್ಡು ದಾನವಲ್ಲ-ಪರಿಷತ್ತು, ಸಮ್ಮೇಳನ ಸಮಿತಿ ಕೃತಜ್ಞರಾಗಿರಬೇಕಾಗಿಲ್ಲ: ಪ್ರೊ.ಎಂ.ಕೃಷ್ಣೇಗೌಡ
October 24, 2020ಮೈಸೂರು, ಅ.23(ಆರ್‍ಕೆಬಿ)- ಕನ್ನಡ ಸಾಹಿತ್ಯ ಪರಿಷತ್ತಿಗೆ, ಸಾಹಿತ್ಯ ಸಮ್ಮೇಳನಗಳಿಗೆ ಸರ್ಕಾರ ದುಡ್ಡು ಕೊಟ್ಟರೆ ಅದು ದಾನ ಅಲ್ಲ. ದುಡ್ಡು ಕೊಟ್ಟಾಕ್ಷಣ ಪರಿಷತ್ತಾಗಲೀ, ಸಮ್ಮೇಳನ ಸಮಿತಿಗಳಾಗಲೀ ಸರ್ಕಾರಕ್ಕೆ ಕೃತಜ್ಞರಾಗಿರಬೇಕಾದ ಅಗತ್ಯವೂ ಇಲ್ಲ. ಕವಿಗಳು ಹಂಗು ಮತ್ತು ದಾಕ್ಷಿಣ್ಯಗಳಿಗೆ ಒಳಗಾಗಬೇಕಾಗಿಲ್ಲ ಎಂದು ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಅಭಿಪ್ರಾಯಪಟ್ಟರು. ಮೈಸೂರಿನ ವಿಜಯನಗರದ 1ನೇ ಹಂತ ದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಕಸಾಪ ಜಿಲ್ಲಾ ಘಟಕ ಶುಕ್ರವಾರ ಆಯೋಜಿಸಿದ್ದ ದಸರಾ ಕವಿಗೋಷ್ಠಿಯ 2ನೇ ದಿನ ಪ್ರಧಾನ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು ವಿಧಾನ ಪರಿಷತ್ ಸದಸ್ಯ…
ರಸ್ತೆಗಳಲ್ಲಿ ಗುಂಡಿ, ಭಾರೀ ವೆಚ್ಚದಲ್ಲಿ ದೀಪಾಲಂಕಾರ: ಟೀಕೆ
October 24, 2020ಮೈಸೂರು, ಅ.23(ಪಿಎಂ)- ಕೊರೊನಾ ಹಾವಳಿ ಹಾಗೂ ಉತ್ತರ ಕರ್ನಾಟಕದ ಪ್ರವಾಹದಿಂದ ರಾಜ್ಯದಲ್ಲಿ ಸೂತಕದ ವಾತಾ ವರಣ ನಿರ್ಮಾಣವಾಗಿದೆ. ಇಂಥ ಪರಿಸ್ಥಿತಿ ಯಲ್ಲಿ 15 ಕೋಟಿ ರೂ.ಗಳಷ್ಟು ದುಬಾರಿ ವೆಚ್ಚದಲ್ಲಿ ದಸರಾ ಆಚರಿಸುತ್ತಿರುವುದು ಎಷ್ಟು ಸರಿ? ರಾಜ್ಯ ಸರ್ಕಾರ, ದಸರಾ ವೆಚ್ಚದ ಶ್ವೇತ ಪತ್ರ ಹೊರಡಿಸಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಕೊರೊನಾ ದಿಂದ ಸಾವಿರಾರು ಮಂದಿ ರಾಜ್ಯದಲ್ಲಿ…
ಕರ್ನಾಟಕದಲ್ಲೂ ಉಚಿತವಾಗಿ ಲಸಿಕೆ ನೀಡಲು ಧಮ್ ಇದೆಯೇ…!?
October 24, 2020ಬೆಂಗಳೂರು, ಅ.23(ಕೆಎಂಶಿ)- ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿಗೆ ಒಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸಲು ಧಮ್ ಇದೆಯೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಪತ್ರಿಕಾಗೋಷ್ಠಿಯಲ್ಲಿ ಉಚಿತವಾಗಿ ಲಸಿಕೆಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಅದೇ ರೀತಿ ಕೋವಿಡ್-19 ಸೋಂಕಿಗೂ ಸರ್ಕಾರದ ವತಿಯಿಂದಲೇ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಸಮಾಜದ ರಕ್ಷಣೆ ಮಾಡುವುದು ಯಾವುದೇ ಸರ್ಕಾರದ ಕರ್ತವ್ಯ. ಇದುವರೆಗೂ ಆ ಕರ್ತವ್ಯವನ್ನು ಮಾಡಿಕೊಂಡು ಬಂದಿದೆ. ಎಲ್ಲಾ ರೀತಿಯ ಸಾಂಕ್ರಾಮಿಕ…










