ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಕ್ತಾಯ ಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ. ಬಹುತೇಕ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ದೆಹಲಿ ವರಿಷ್ಠರನ್ನು ಭೇಟಿಯಾಗಿ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚರ್ಚಿಸ ಲಿದ್ದಾರೆ. ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಗಿ ನೇಮಕಗೊಂಡಿರುವ ಸಚಿವ ಸಿ.ಟಿ.ರವಿ ಸೇರಿದಂತೆ ನಾಲ್ಕೈದು ಸಚಿವರನ್ನು ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ…
ರೋಹಿಣಿ ಸಿಂಧೂರಿ ಈಗ ಮೈಸೂರು ಜಿಲ್ಲಾಧಿಕಾರಿ
September 29, 2020ಮೈಸೂರು, ಸೆ.28(ಆರ್‍ಕೆ)- ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮೈಸೂರು ಜಿಲ್ಲಾಧಿಕಾರಿ ಯಾಗಿ ವರ್ಗಾವಣೆ ಮಾಡಿ ಸರ್ಕಾರ ಸೋಮ ವಾರ ಆದೇಶ ಹೊರ ಡಿಸಿದೆ. ಆಗಸ್ಟ್28ರಂದು ಮೈಸೂರು ಡಿಸಿಯಾಗಿ ನಿಯೋಜನೆ ಗೊಂಡಿದ್ದ ಬಿ.ಶರತ್ ಅವರನ್ನು ತಿಂಗಳು ಮುಗಿಯುವುದರೊಳಗಾಗಿಯೇ ವರ್ಗಾ ವಣೆ ಮಾಡಲಾಗಿದ್ದು, ಅವರಿಗೆ ಸ್ಥಳ ನಿಯೋಜನೆ ಮಾಡಿಲ್ಲ. ಧಾರ್ಮಿಕ ಮತ್ತು ಚಾರಿ ಟಬಲ್ ಎಂಡೋ ಮೆಂಟ್ಸ್ ಆಯುಕ್ತ (ಬೆಂಗಳೂರು)ರಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮೈಸೂರಿನ ಜಿಲ್ಲಾಧಿಕಾರಿ ಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಅವರು ನಾಳೆ…
ಅ.2, ಅರಮನೆ ಅಂಗಳಕ್ಕೆ ಅಭಿಮನ್ಯು ಪಡೆ
September 29, 2020ಮೈಸೂರು, ಸೆ.28(ಎಂಟಿವೈ)- ನಾಡ ಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊ ಳ್ಳಲು ಆಯ್ಕೆ ಮಾಡಲಾಗಿರುವ ಅಭಿಮನ್ಯು ನೇತೃತ್ವದ ಗಜಪಡೆ ಅ.1ರಂದು ಮೈಸೂರಿನ ಅರಣ್ಯ ಭವನಕ್ಕೆ ಆಗಮಿಸಲಿದ್ದು, ಅ.2ರಂದು ಮಧ್ಯಾಹ್ನ 12.18ರಿಂದ 12.40ರೊಳಗೆ ಸಲ್ಲುವ ಧನುರ್ ಲಗ್ನದಲ್ಲಿ ಅರಮನೆ ಆವರಣಕ್ಕೆ ಬರಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ದಸರಾ ಮಹೋತ್ಸವ ಸಾಂಪ್ರದಾಯಿಕ ಆಚರಣೆಗಷ್ಟೇ ಸೀಮಿತಗೊಳಿಸಲಾಗಿದ್ದು, ಜಂಬೂಸವಾರಿ ಮೆರವಣಿಗೆ ಅರಮನೆ ಅಂಗಳದಲ್ಲಿ ಮಾತ್ರ ನೆರವೇರಲಿದೆ. ಈ ಬಾರಿ ಅಂಬಾರಿ ಹೊರುವ ಜವಾಬ್ದಾರಿ ಕೂಂಬಿಂಗ್ ಸ್ಪೆಷಲಿಸ್ಟ್ ಅಭಿಮನ್ಯು ಹೆಗಲಿಗೆ ವರ್ಗಾವಣೆಯಾಗಿದೆ. ಕೊರೊನಾ…
ಜನ ವಿರೋಧಿ ಕಾಯ್ದೆಗಳ ತಿರಸ್ಕರಿಸಿ
September 29, 2020ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸ ದಾಗಿ ಜಾರಿಗೆ ತರುತ್ತಿರುವ ಜನ ವಿರೋಧಿ ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಿರಸ್ಕರಿಸ ಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನೂತನ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವ ವಿಚಾರ ವಾಗಿ ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ.ಶಿವ ಕುಮಾರ್, ನಾವು ರಾಜ್ಯಪಾಲರಿಗೆ ಎರಡು ಮನವಿ ಸಲ್ಲಿಸಿದ್ದೇವೆ. ಭೂ ಸುಧಾರಣಾ, ಎಪಿಎಂಸಿ, ಕೈಗಾರಿಕಾ…
ರಾಗಿಣಿ, ಸಂಜನಾಗೆ ಸದ್ಯ ಜೈಲೇ ಗತಿ
September 29, 2020ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ಡಿಪಿಎಸ್ ವಿಶೇಷ ನ್ಯಾಯಾ ಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾ ಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ.ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆ ಹೋಗುವ ನಿರೀಕ್ಷೆಯಿದೆ. ಮುಂದಿನ 2 ದಿನಗಳಲ್ಲಿ ನಟಿಯರ ಪರ ವಕೀಲರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುವ ಸಾಧ್ಯತೆ…
ಜೆಎಸ್‍ಎಸ್ ಆಸ್ಪತ್ರೆಯಲ್ಲಿ 3ನೇ ಹಂತದ ಕೋವಿಶೀಲ್ಡ್ ಲಸಿಕೆ ಪ್ರಯೋಗ ಆರಂಭ
September 29, 2020ಮೈಸೂರು, ಸೆ.28(ಆರ್‍ಕೆ)- ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ಮತ್ತು ಆರೈಕೆ ಜೊತೆಗೆ ಈ ವೈರಾಣು ವನ್ನು ಸಂಪೂರ್ಣವಾಗಿ ತೊಲಗಿಸಲು ಸಂಶೋಧಿಸಿರುವ ಔಷಧಿಗಳ ಪರೀಕ್ಷೆ ನಡೆಸುತ್ತಿರುವ ಮೈಸೂರಿನ ಜೆಎಸ್‍ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಇದೀಗ 3ನೇ ಹಂತದ ಕೋವಿಶೀಲ್ಡ್ ಲಸಿಕೆ ಪ್ರಯೋಗ ಪ್ರಕ್ರಿಯೆ ಆರಂಭಿಸಿದೆ. ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿರುವ ಹಾಗೂ ಪುಣೆ ಮೂಲದ ಸೆರಂ ಇನ್ಸ್‍ಟಿಟ್ಯೂಟ್ ಆಫ್ ಇಂಡಿಯಾ (ಎಸ್‍ಐಐ)ಯಿಂದ ತಯಾರಾದ ಲಸಿಕೆಯ ಮೊದಲ ಹಂತದ ಮಾನವ ಪ್ರಯೋಗವನ್ನು ಪೂರ್ಣ ಗೊಳಿಸಿರುವ ಜೆಎಸ್‍ಎಸ್ ಆಸ್ಪತ್ರೆಯು 2ನೇ ಹಂತದ…
ಮೈಸೂರಲ್ಲಿ ಮಾಜಿ ಮೇಯರ್‍ಗಳ ಪ್ರತಿಭಟನೆ
September 29, 2020ಮೈಸೂರು,ಸೆ.28(ಆರ್‍ಕೆ)-ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿರುವ ರೈತವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಮೇಯರ್‍ಗಳು ಮೈಸೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಕರ್ನಾಟಕ ಬಂದ್‍ಗೆ ರೈತಪರ, ಕನ್ನಡಪರ ಸಂಘಟನೆಗಳು ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೈಸೂರು ಮಹಾ ನಗರ ಪಾಲಿಕೆ ಮಾಜಿ ಮೇಯರ್‍ಗಳ ಪರಿಷತ್ ವತಿಯಿಂದ ಮೈಸೂರಿನ ಪುರಭವನ ಆವರಣದಲ್ಲಿ ಜಮಾಯಿಸಿದ ಮಾಜಿ ಮೇಯರ್‍ಗಳು ಪ್ರತಿಭಟನೆ ನಡೆಸಿ ಮೆರವಣಿಗೆಗೆ ಮುಂದಾದರಾ ದರೂ ಸ್ಥಳದಲ್ಲಿದ್ದ ಪೊಲೀಸರು ಪೂರ್ವಾನುಮತಿಯಿಲ್ಲದೆ ಮೆರವಣಿಗೆಯಲ್ಲಿ ಹೋಗುವಂತಿಲ್ಲ ಎಂದು ತಡೆದ ಹಿನ್ನೆಲೆಯಲ್ಲಿ ಅವರು ನೇರವಾಗಿ ಡಿಸಿ ಕಚೇರಿಗೆ ತೆರಳಿ…
ಯೂರಿಯಾ ರಸಗೊಬ್ಬರ ಲಭ್ಯ
September 29, 2020ಮೈಸೂರು,ಸೆ.28-2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿ ರುವ ಬೆಳೆಗಳಿಗೆ ಅವಶ್ಯವಿರುವ ಯೂರಿಯಾ ರಸಗೊಬ್ಬರದ ದಾಸ್ತಾನು ಜಿಲ್ಲೆಯಲ್ಲಿ ಲಭ್ಯವಿದ್ದು ಯಾವುದೇ ಕೊರತೆ ಇರುವುದಿಲ್ಲ, ಆದರೆ ಜಿಲ್ಲೆಯ ಯಾವುದೇ ರಸಗೊಬ್ಬರ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಗೆ ಕಳೆದ 3 ದಿನಗಳಲ್ಲಿ ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್ ಕಂಪನಿಯ 340 ಮೆ. ಟನ್, ಇಂಡಿಯನ್ ಪೆÇಟ್ಯಾಷ್ ಲಿಮಿಟೆಡ್ ಕಂಪನಿಯ…
ಎನ್‍ಆರ್ ಕ್ಷೇತ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಸಚಿವ ಎಸ್‍ಟಿಎಸ್ ಭರವಸೆ
September 29, 2020ಮೈಸೂರು, ಸೆ.28(ವೈಡಿಎಸ್)- ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಎನ್‍ಆರ್ ಕ್ಷೇತ್ರದ ಪ್ರಮುಖ ಮುಖಂಡರೊಂದಿಗೆ ಭಾನುವಾರ ಸಮಾಲೋಚನಾ ಸಭೆ ನಡೆಸಿ, ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಿದರು. ಈ ವೇಳೆ ಮಾಜಿ ಮೇಯರ್ ಸಂದೇಶ್ ಸ್ವಾಮಿ ಮಾತನಾಡಿ, ಕೃಷ್ಣರಾಜ, ಚಾಮರಾಜ ಕ್ಷೇತ್ರದಲ್ಲಿ ನೂರಾರು ಕೋಟಿ ರೂ. ಅಭಿವೃದ್ಧಿ ಕೆಲಸ ನಡೆಯುತ್ತ್ತಿವೆ. ಆದರೆ, ಎನ್‍ಆರ್ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳೇ ನಡೆಯುತ್ತಿಲ್ಲ. 2-3 ದಿನಗಳಿಗೊಮ್ಮೆ ಕುಡಿಯುವ ನೀರನ್ನು ಬಿಡುತ್ತಾರೆ. ಯುಜಿಡಿ ಲೈನ್ ಸರಿಯಿಲ್ಲ. ಹೆಣ್ಣುಮಕ್ಕಳ ಕಾಲೇಜು ಇಲ್ಲ….
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆ
September 29, 2020ಮೈಸೂರು,ಸೆ.28-ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಭೆ ಪ್ರಾರಂಭದಲ್ಲಿ ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯರಾದ ಅಶೋಕ್ ಗಸ್ತಿ, ಶಾಸಕ ಬಿ.ನಾರಾಯಣ್ ಮತ್ತು ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರಿಗೆ ಸಂತಾಪ ಸೂಚಿಸಲಾಯಿತು. ಸಭೆಯಲ್ಲಿ ಕಾಮನಕೆರೆಹುಂಡಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದವರಿಗೆ ಸ್ಮಶಾನ ಮಂಜೂರು ಮಾಡುವ ಬಗ್ಗೆ, ಏಕಲವ್ಯ ನಗರದ ಸ್ಲಂ ಬೋರ್ಡ್…










