ಮೈಸೂರು,ಫೆ.29(ವೈಡಿಎಸ್)-ವೇಶ್ಯಾವಾಟಿಕೆ ನಡೆಯುತ್ತಿದ್ದ ವಿಜಯನಗರದ 4ನೇ ಹಂತದ ಮನೆಯೊಂದರ ಮೇಲೆ ಶನಿವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ, ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ. ರಾಮಕೃಷ್ಣನಗರ ನಿವಾಸಿ ರಾಮಣ್ಣ(51), ಮೈಸೂರು ತಾಲೂಕು ಜಯಪುರ ಹೋಬಳಿ ಮಾವಿನಹಳ್ಳಿ ನಿವಾಸಿ ಗೀತಾ(38) ಮೇಟಗಳ್ಳಿ ನಿವಾಸಿ ರಾಧಾ(40) ಹಾಗೂ ಕ್ಯಾತಮಾರನಹಳ್ಳಿಯ ವೆಂಕಟೇಶ್(24) ಬಂಧಿತರು. ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಹಿಂದೆಯೂ ಇದೇ ದಂಧೆಯಲ್ಲಿ ತೊಡಗಿದ್ದ ಗೀತಾ ವಿರುದ್ಧ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರದ ದಾಳಿ ಬಳಿಕ…
ಆರ್ಥಿಕ ಪ್ರಗತಿಯಲ್ಲಿ ಸಾಮಾಜಿಕ ಸಹಿಷ್ಣುತೆ ಪಾತ್ರ ಪ್ರಮುಖ
March 1, 2020ಜ್ಞಾನಪೀಠ ಪುರಸ್ಕೃತರ 8 ಸಮಗ್ರ ವಿಮರ್ಶಾ ಕೃತಿಗಳ ಬಿಡುಗಡೆಯಲ್ಲಿ ಮಾಜಿ ಸಿಎಂ ವೀರಪ್ಪಮೊಯಿಲಿ ಅಭಿಮತ ಮೈಸೂರು, ಫೆ.29(ಎಸ್‍ಬಿಡಿ)- ಆರ್ಥಿಕ ಬೆಳವಣಿಗೆಯಲ್ಲಿ ಸಾಮಾಜಿಕ ಸಹಿಷ್ಣುತೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪಮೊಯಿಲಿ ಅಭಿಪ್ರಾಯಪಟ್ಟರು. ತನು ಮನು ಪ್ರಕಾಶನ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಜಂಟಿಯಾಗಿ ಮೈಸೂರಿನ ಇಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪುರಸ್ಕೃತರ 8 ಸಮಗ್ರ ವಿಮರ್ಶಾ ಕೃತಿಗಳನ್ನು ಬಿಡು ಗಡೆ ಮಾಡಿದ ಅವರು, ಕನ್ನಡ ಸಂಸ್ಕೃತಿಯ ಒಡಲಲ್ಲಿ ಸಹಿಷ್ಣುತೆ,…
ಪೇಪರ್ ಮಿಲ್‍ಗೆ ಹುಸಿ ಬಾಂಬ್ ಕರೆ: ಕಾರ್ಖಾನೆಯ ಮಾಜಿ ನೌಕರನ ಬಂಧನ
March 1, 2020ನಂಜನಗೂಡು, ಫೆ. 29(ರವಿ)- ತಾಲೂಕು ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ರಾಜಾಶೀಲ್ ಪೇಪರ್ ಮಿಲ್‍ಗೆ ಶನಿವಾರ ಬೆಳಿಗ್ಗೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಆತಂಕದಿಂದ ಕಾರ್ಖಾ ನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಿದ ಘಟನೆ ನಡೆದಿದ್ದು, ಸಂಜೆ ವೇಳೆಗೆ ಹುಸಿಬಾಂಬ್ ಕರೆ ಮಾಡಿದ್ದ ಇದೇ ಕಾರ್ಖಾ ನೆಯ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಮಾಜಿ ನೌಕರ ತಮಿಳುನಾಡು ಮೂಲದವ ನಾಗಿದ್ದು, ಹಾಲಿ ಮೈಸೂರಿನ ಆಲನಹಳ್ಳಿ ಗಿರಿದರ್ಶಿನಿ ಬಡಾವಣೆ ನಿವಾಸಿ ಶಿಬು(38) ಬಂಧಿತ ಆರೋಪಿಯಾಗಿದ್ದಾನೆ. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ಮೊಬೈಲ್‍ಗೆ…
ಇ-ಆಡಳಿತದ ಬಗ್ಗೆ ಜ್ಞಾನ ವೃದ್ಧಿಸಿಕೊಳ್ಳಿ ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್‍ಕುಮಾರ್ ಸಲಹೆ
March 1, 2020ಮೈಸೂರು, ಫೆ.29(ಆರ್‍ಕೆ)- ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಪ್ರತಿ ಯೊಬ್ಬರೂ ಇ-ಆಡಳಿತದ ಬಗ್ಗೆ ತಿಳಿದು ಕೊಳ್ಳುವುದು ಅವಶ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್‍ಕುಮಾರ್ ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕಾಲೇಜು ಅಭಿವೃದ್ಧಿ ಮಂಡಳಿ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಕರ್ನಾಟಕ ಸರ್ಕಾರದ ಸೇವಾ ಸಿಂಧು ಹಾಗೂ ಸ್ನಾತ ಕೋತ್ತರ ಅಧ್ಯಯನ ವಿಭಾಗಗಳ ಅಧ್ಯಕ್ಷರು, ನಿರ್ದೇಶಕರು, ಸಂಯೋಜಿತ ಕಾಲೇಜು ಗಳ ಪ್ರಾಂಶುಪಾಲರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಒಂದು ದಿನದ ಸ್ಟಾರ್ಟ್ ಅಪ್ ಟ್ರೈನಿಂಗ್…
ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಡಬೇಕು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಿವಿಮಾತು
March 1, 2020ಮೈಸೂರು, ಫೆ.29- ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯ, ಖಾಸಗಿ ಶಾಲೆಗಳಲ್ಲಿ ಸಿಗದಿದ್ದರೂ ಕೂಡ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದು, ಈ ವ್ಯಾಮೋಹ ಬಿಡಬೇಕು ಎಂದು ವರುಣಾ ಕ್ಷೇತ್ರದ ಶಾಸಕ ಡಾ|| ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ತಾಲೂಕು ಡಿ. ಸಾಲುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು ಬಿಸಿಯೂಟ, ಸಮವಸ್ತ್ರ, ಶೂ, ಸೈಕಲ್, ಹಾಲು ಎಲ್ಲವನ್ನು ನೀಡುತ್ತಿದ್ದು, ಮಕ್ಕಳು…
‘ಗ್ರೇಟರ್ ಮೈಸೂರು’ ಶೀಘ್ರ ಘೋಷಣೆ
February 29, 2020ಮೈಸೂರು, ಫೆ. 28 (ಆರ್‍ಕೆ)- ಬಹು ನಿರೀಕ್ಷಿತ `ಗ್ರೇಟರ್ ಮೈಸೂರು’ ಯೋಜನೆಯನ್ನು ಮುಂಬರುವ ರಾಜ್ಯ ಬಜೆಟ್‍ನಲ್ಲಿ ಸೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಪ್ರಗತಿ ಹಂತ ದಲ್ಲಿರುವ ಅಂಗಡಿ ಮಳಿಗೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮೈಸೂರು ನಗರವನ್ನು ಮತ್ತಷ್ಟು ವಿಸ್ತರಿಸಿ ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಸುತ್ತಲಿನ ಇನ್ನಷ್ಟು ಗ್ರಾಮಗಳನ್ನು ಸೇರ್ಪಡಿಸಬೇಕೆಂದು ಜಿಲ್ಲಾಧಿ ಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದರು. ಅಲ್ಲದೆ, ಸಂಸದರು, ಈ…
ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ
February 29, 2020ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ದೆಹಲಿ ಆರೋಗ್ಯ ಇಲಾಖೆ ಶುಕ್ರ ವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯ ಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿ ದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ. ಪ್ರಸ್ತುತ ದೆಹಲಿ ಶಾಂತಿಯುತ ವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ…
ಇಂದು, ನಾಳೆ ಎಂಆರ್‍ಸಿಯಲ್ಲಿ ಪ್ರತಿಷ್ಠಿತ `ಇಂಡಿಯನ್ ಟರ್ಫ್ ಇನ್ವಿಟೇಷನ್ ಕಪ್’ ರೇಸ್
February 29, 2020ಮೈಸೂರು, ಫೆ.28-ಇದೇ ಪ್ರಥಮ ಬಾರಿಗೆ ಮೈಸೂರು ರೇಸ್ ಕ್ಲಬ್ ವತಿಯಿಂದ ಪ್ರತಿಷ್ಠಿತ `ದಿ ಇಂಡಿಯನ್ ಟರ್ಫ್ ಇನ್ವಿಟೇಷನ್ ಕಪ್-2020’ ರೇಸ್ ಫೆ.29 ಮತ್ತು ಮಾ.1ರಂದು ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಈ ಪ್ರತಿಷ್ಠಿತ ರೇಸ್‍ನಲ್ಲಿ 1 ಕೋಟಿ ರೂ. ಬಹುಮಾನ ಹಾಗೂ 6 ಲಕ್ಷ ರೂ. ಮೌಲ್ಯದ ಆಕರ್ಷಕ ಟ್ರೋಫಿಗಳಿದ್ದು, ಇನ್ವಿಟೇಷನ್ ಕಪ್ ಸೇರಿ 8 ರೇಸ್‍ಗಳು ನಡೆಯಲಿವೆ. ಎರಡೂ ದಿನಗಳಲ್ಲೂ ತಲಾ 8 ರೇಸ್‍ಗಳನ್ನು ನಡೆಸಲಾಗುತ್ತಿದ್ದು, 120 ಕುದುರೆ ಗಳು ರೇಸ್‍ನಲ್ಲಿ ಭಾಗಿಯಾಗಲಿವೆ. ಮೊದಲ…
ಸೂಕ್ತ ದಾಖಲೆ ಒದಗಿಸುವ ಎಲ್ಲಾ ರೈತರ ಸಾಲ ಮನ್ನಾ
February 29, 2020ಬೆಂಗಳೂರು,ಫೆ.28-ಸೂಕ್ತ ದಾಖಲೆ ಗಳನ್ನು ಒದಗಿಸುವ ಎಲ್ಲಾ ರೈತರ ಸಾಲ ಮನ್ನಾ ಆಗಲಿದ್ದು, ಯಾರೂ ಆತಂಕಕ್ಕೆ ಒಳಗಾಗ ಬಾರದು ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ರೈತರ ಸಾಲ ಮನ್ನಾ ಯೋಜನೆಯಲ್ಲಿ ರಾಜ್ಯ ಸರ್ಕಾರವು ಸುಮಾರು 1.10 ಲಕ್ಷ ರೈತರನ್ನು ಕೈಬಿಡು ತ್ತಿದೆ ಎಂದು ಆರ್ಥಿಕ ಇಲಾಖಾಧಿಕಾರಿ ಗಳು ತಿಳಿಸಿದ್ದಾರೆ ಎಂಬ ವರದಿಗಳು ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ಹಿನ್ನೆಲೆ ಶುಕ್ರವಾರ ರಾತ್ರಿ ಮುಖ್ಯಮಂತ್ರಿಗಳು ಈ ಸಂಬಂಧ ಟ್ವೀಟ್ ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೂ ಅನುದಾನಕ್ಕಾಗಿ ಸಿಎಂಗೆ ಮನವಿ
February 29, 2020ಮೈಸೂರು, ಫೆ.28(ಎಸ್‍ಬಿಡಿ)- ಮೈಸೂರು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಒತ್ತಾಯಿ ಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೈಸೂರು ನಗರ ಪಾಲಿಕೆಗೆ ವಿಶೇಷ ಅನು ದಾನಕ್ಕೆ ಮನವಿ ಮಾಡಿದ್ದು, 100 ಕೋಟಿ ರೂ.ಗಳನ್ನಾದರೂ ಬಿಡುಗಡೆ ಮಾಡಿ ಸುತ್ತೇನೆ. ತಕ್ಷಣಕ್ಕೆ 50 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಜಿಲ್ಲಾ ಪಂಚಾಯ್ತಿ, ತಾಲೂಕು…










