ಮೈಸೂರು,ಡಿ.2(ಆರ್‍ಕೆ)-ಇದೇ ಮೊದಲ ಬಾರಿ ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಕೆಆರ್‍ಎಸ್‍ನ ಬೃಂದಾವನ ಗಾರ್ಡನ್‍ನಲ್ಲಿ ಬ್ಯಾಟರಿ ಚಾಲಿತ ವಾಹನ ವ್ಯವಸ್ಥೆ ಮಾಡ ಲಾಗಿದೆ. ದೂರದ ಊರುಗಳಿಂದ ಬೃಂದಾ ವನ ನೋಡಲು ಬರುವ ಪ್ರವಾಸಿಗರಲ್ಲಿ ಹಿರಿಯ ನಾಗರಿಕರು, ನಡೆಯಲು ಸಾಧ್ಯ ವಾಗದವರ ಅನುಕೂಲಕ್ಕಾಗಿ ಬ್ಯಾಟರಿ ಚಾಲಿತ ವಾಹನವನ್ನು ಒದಗಿಸಬೇಕೆಂಬ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಕಾವೇರಿ ನೀರಾ ವರಿ ನಿಗಮ ನಿಯಮಿತದ ಅಧಿಕಾರಿಗಳು ಆ ಬೇಡಿಕೆಯನ್ನು ಈಡೇರಿಸಿದ್ದಾರೆ. ಬೃಂದಾವನದ ಪ್ರವೇಶ, ಪಾರ್ಕಿಂಗ್ ಲಾಟ್ ಮತ್ತು ಟೋಲ್ ಸಂಗ್ರಹದ ಗುತ್ತಿಗೆ ಪಡೆದಿರುವ ಸಂಸ್ಥೆಯು…
ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಡಿಹೆಚ್‍ಓ ಆರ್.ವೆಂಕಟೇಶ್ ಚಾಲನೆ
December 3, 2019ಮೈಸೂರು, ಡಿ.2(ಆರ್‍ಕೆಬಿ)- ಮೈಸೂರು ಜಿಲ್ಲೆ ಯಲ್ಲಿ ಗುರುತಿಸಲಾಗಿರುವ ಎರಡು ವರ್ಷದೊಳಗಿನ 1694 ಮಕ್ಕಳು ಹಾಗೂ 466 ಗರ್ಭಿಣಿಯರಿಗೆ ಲಸಿಕೆ ನೀಡುವ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಸೋಮ ವಾರ ಆರೋಗ್ಯ ಮತ್ತು ಕುಟುಂಬ ಸೇವೆಗಳ ವಿಭಾ ಗೀಯ ಜಂಟಿ ನಿರ್ದೇಶಕಿ ಡಾ.ಪುಷ್ಪಲತಾ, ಡಿಹೆಚ್‍ಓ ಡಾ.ಆರ್.ವೆಂಕಟೇಶ್ ಬನ್ನಿಮಂಟಪದ ಅಬ್ದುಲ್ ಕಲಾಂ ನಗರದ ಕಾಲೋನಿಯ ಟೆಂಟ್ ಶಾಲೆಯಲ್ಲಿ 7 ಮಕ್ಕಳಿಗೆ ಲಸಿಕೆ ನೀಡುವ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಕ್ಷಣಾ ಚುಚ್ಚು ಮದ್ದು ನೀಡಿಕೆ ಕಾರ್ಯಕ್ರಮದಿಂದ ಭಾಗಶಃ ಅಥವಾ ಪೂರ್ಣ…
ಸಿದ್ದಲಿಂಗಪುರದ ಷಷ್ಠಿ ದೇಗುಲದಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ
December 3, 2019ಮೈಸೂರು,ಡಿ.2(ಎಂಟಿವೈ)- ಮೈಸೂರು ತಾಲೂಕಿನ ಸಿದ್ದಲಿಂಗಪುರದ ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾ ಲಯದಲ್ಲಿ ಸೋಮವಾರ ವಿಜೃಂಭಣೆಯಿಂದ ನಡೆದ ಸ್ಕಂದ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಅಪಾರ ಸಂಖ್ಯೆ ಭಕ್ತರು ಪಾಲ್ಗೊಂಡು, ಹುತ್ತಕ್ಕೆ ಹಾಲೆರೆದು (ತನಿ) ಭಕ್ತಿಯಿಂದ ಪೂಜೆ ಸಲ್ಲಿಸಿದರು. ಮಾರ್ಗಶಿರ ಮಾಸದ ಶುದ್ಧ ಷಷ್ಠಿ ದಿನವಾದ ಇಂದು ಮುಂಜಾನೆಯಿಂದಲೇ ತುಂತುರು ಮಳೆಯ ನಡುವೆಯೂ ಸಿದ್ದಲಿಂಗಪುರದ ಶ್ರೀ ಷಷ್ಠಿ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲ ಯದಲ್ಲಿ ಭಕ್ತಸಾಗರವೇ ನೆರೆದು, ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ದೇವಾಲಯದ ಮುಖ್ಯ ಅರ್ಚಕ ಎಂ.ವಿ. ಸುಬ್ರಹ್ಮಣ್ಯ ನೇತೃತ್ವದಲ್ಲಿ ಮುಂಜಾನೆ…
ಮಹಾ ರಾಜಕೀಯ ಹೈಡ್ರಾಮ ಕುರಿತು ಹೇಳಿಕೆ: ಅನಂತ್‍ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ನಾಯಕತ್ವ ಗರಂ
December 3, 2019ನವದೆಹಲಿ, ಡಿ.2- ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕುರಿತಂತೆ ಮಾಜಿ ಕೇಂದ್ರ ಸಚಿವ, ಸಂಸದ ಅನಂತ್‍ಕುಮಾರ್ ಹೆಗಡೆ ಹೇಳಿಕೆ ಬಿಜೆಪಿಯ ಹಿರಿಯ ನಾಯಕರ ಅಸಮಾ ಧಾನಕ್ಕೆ ಕಾರಣವಾಗಿದೆ.ಬಹುಮತದ ಕೊರತೆಯ ಹೊರತಾ ಗಿಯೂ 40,000 ಕೋಟಿ ರೂ.ಗಳ ಕೇಂದ್ರ ನಿಧಿಯನ್ನು ‘ದುರುಪಯೋಗಪಡಿಸಿಕೊಳ್ಳದಂತೆ’ ರಕ್ಷಿಸಲು ಕಳೆದ ತಿಂಗಳು ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರದ ಮುಖ್ಯ ಮಂತ್ರಿಯನ್ನಾಗಿ ಮಾಡಲಾಗಿತ್ತು ಎಂಬ ಹೆಗಡೆ ಹೇಳಿಕೆಯ ಕುರಿತು ಬಿಜೆಪಿ ನಾಯಕತ್ವವು ಅಸಮಾಧಾನ ವ್ಯಕ್ತಪಡಿಸಿದೆ. ಸಂಸದರ ಹೇಳಿಕೆಯ ಬಗೆಗೆ ಅಸಮಾಧಾನವಿದ್ದು ಪಕ್ಷದ ಅಸಮಾಧಾನವನ್ನು ಅವರಿಗೆ…
ಮಹಿಳೆಯರು ಸಂಕಷ್ಟದಲ್ಲಿದ್ದರೆ 7 ಸೆಕೆಂಡ್‍ಗಳಲ್ಲಿ ‘ಸುರಕ್ಷಾ’ ಸಹಾಯ
December 3, 2019ಬೆಂಗಳೂರು, ಡಿ.2: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವರದಿಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ‘ಸುರಕ್ಷಾ ಆ್ಯಪ್’ ಅನ್ನು ಬೆಂಗಳೂರು ವ್ಯಾಪ್ತಿಯಲ್ಲಿರುವ ಮಹಿಳೆಯರು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕು ಎನ್ನುವ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ. 2017ನೇ ಸಾಲಿನ ಏಪ್ರಿಲ್ 10ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರ ಪೆÇಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರು ಸುರಕ್ಷಾ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದರು. ಇದೀಗ ಗೂಗಲ್ ಫ್ಲೇನಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಆ್ಯಪ್ ಕಾರ್ಯವೇನು?: ಮಕ್ಕಳು, ಯುವತಿಯರು, ಮಹಿಳೆಯರು…
ತಮಿಳುನಾಡಿನಲ್ಲಿ ಭಾರೀ ಮಳೆ: ಕುಸಿದು ಬಿದ್ದ ಮನೆಗಳು, 2 ಮಕ್ಕಳು ಸೇರಿ 15 ಸಾವು
December 3, 2019ಚೆನ್ನೈ,ಡಿ.2-ತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿ ಣಾಮ 10 ಮಹಿಳೆಯರು, 2 ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಭವಿಸಿದೆ. ಇನ್ನೆರಡು ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನ ಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಈಗಾಗಲೇ ಈ ಪ್ರದೇಶ ಗಳಲ್ಲಿ…
2023ಕ್ಕೆ ಏಡ್ಸ್ ಮುಕ್ತ ಮೈಸೂರು ಜಿಲ್ಲೆ ಗುರಿ
December 3, 2019ಮೈಸೂರು,ಡಿ.2(ಆರ್‍ಕೆಬಿ)- ಮೈಸೂರು ಜಿಲ್ಲೆಯಲ್ಲಿ 2019-20ರಲ್ಲಿ 548 ಹೆಚ್‍ಐವಿ /ಏಡ್ಸ್ ಪ್ರಕರಣಗಳು ಪತ್ತೆಯಾಗಿದ್ದು, 2023ರ ವೇಳೆಗೆ ಏಡ್ಸ್ ಮುಕ್ತ ಮೈಸೂರು ಜಿಲ್ಲೆ ಯಾಗಿಸಲು ಪಣ ತೊಟ್ಟಿರುವುದಾಗಿ ಮೈಸೂರು ಜಿಲ್ಲಾ ಏಡ್ಸ್ ನಿಯಂತ್ರಣಾ ಧಿಕಾರಿ ಡಾ.ಬಿ.ರವಿ ಇಂದಿಲ್ಲಿ ತಿಳಿಸಿದರು. ಮೈಸೂರಿನಲ್ಲಿ ಫಾರೂಖಿಯಾ ಫಾರ್ಮಸಿ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಐಎಂಎ ಮೈಸೂರು ಇನ್ನಿತರ…
ಶಾಸಕ ತನ್ವೀರ್‍ಸೇಠ್ ಮೇಲಿನ ಹಲ್ಲೆ ಪ್ರಕರಣ: ನ್ಯಾಯಾಂಗ ತನಿಖೆಗೆ ಎಸ್‍ಡಿಪಿಐ ಆಗ್ರಹ
December 3, 2019ಮೈಸೂರು,ಡಿ.2(ಪಿಎಂ)-ಶಾಸಕ ತನ್ವೀರ್‍ಸೇಠ್ ಮೇಲಿನ ಹಲ್ಲೆ ಪ್ರಕರಣವನ್ನು ಎಸ್‍ಡಿಪಿಐ ಪಕ್ಷದೊಂದಿಗೆ ತಳುಕು ಹಾಕುವ ಎಲ್ಲಾ ಪ್ರಯತ್ನಗಳು ಪೊಲೀಸ್ ಇಲಾಖೆಯಿಂದ ನಡೆಯುತ್ತಿದ್ದು, ಹೀಗಾಗಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಎಸ್‍ಡಿಪಿಐ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜಿದ್, ಪ್ರಕರಣವನ್ನು ಎಸ್‍ಡಿಪಿಐನೊಂದಿಗೆ ತಳುಕು ಹಾಕಿ ನಮ್ಮ ಪಕ್ಷವನ್ನು ದಮನ ಮಾಡುವ ಹುನ್ನಾರ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು. ಹಲ್ಲೆ…
ಡಿ.14, 15ರಂದು ಮೈಸೂರಿನಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಸಮ್ಮೇಳನ
December 3, 2019ಮೈಸೂರು, ಡಿ.2(ಪಿಎಂ)- ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಮೈಸೂರಿನಲ್ಲಿ ಡಿ.14 ಹಾಗೂ 15ರಂದು 8ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಹಿರಿಯ ವಕೀಲ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಸಿ.ಎಂ.ಜಗದೀಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆಯುತ್ತಿರುವ ಪ್ರಥಮ ಸಮ್ಮೇಳನ ಇದಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಡಿ.14ರಂದು ಬೆಳಿಗ್ಗೆ 10.30ಕ್ಕೆ ಸಮ್ಮೇಳನದ ಉದ್ಘಾಟನೆಯನ್ನು ಒಕ್ಕೂಟದ…
ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಹೈದರಾಬಾದ್ ಅತ್ಯಾಚಾರ ಪ್ರಕರಣ: ಕಠಿಣ ಕಾನೂನಿಗೆ ಸಿದ್ಧ ಎಂದ ಸರ್ಕಾರ
December 3, 2019ನವದೆಹಲಿ, ಡಿ.2-ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಅತ್ಯಾಚಾರ ಪ್ರಕರಣವನ್ನು ಹಿಡಿದು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ ಅವರು ಶೂನ್ಯ ಅವಧಿಯಲ್ಲಿ ಪ್ರಕರಣವನ್ನು ಚರ್ಚೆಗೆ ತೆಗೆದುಕೊಳ್ಳುವಂತೆ ಸಲಹೆ ನೀಡಿದರು. ಈ ನಡುವೆ ಮಾತನಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪಶುವೈದ್ಯೆ ಮೇಲೆ ನಡೆದ…










