ಮೈಸೂರು, ಸೆ.30(ಪಿಎಂ)- ಮೈಸೂರಿನ ಜೆಕೆ ಮೈದಾನದಲ್ಲಿ ಏರ್ಪಡಿಸಿರುವ ಮಹಿಳಾ ದಸರಾ ರಾಜ್ಯ ಮಟ್ಟದ ವಸ್ತು ಪ್ರದರ್ಶನದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಹಾಗೂ ಮಹಿಳಾ ಉದ್ಯಮಿ ಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಒಟ್ಟು 48 ಮಳಿಗೆ ಗಳು ಆರಂಭಗೊಂಡಿವೆ. ಈ ಪೈಕಿ ಸಿಂಧೂ ಬಯಲಿನ ನಾಗರಿಕತೆಯ ಹರಪ್ಪ ಹಾಗೂ ಮೊಹೆಂಜೋದಾರೋ ಶೈಲಿಯಲ್ಲಿ ಮಣ್ಣಿನಿಂದ ತಯಾರಿಸಿದ ಕರಕುಶಲ ವಸ್ತುಗಳು ಹಾಗೂ ದೈನಂದಿನ ಬಳಕೆಯ ವಸ್ತುಗಳ ಮಾರಾಟ ಮಳಿಗೆ ಗಮನ ಸೆಳೆಯುತ್ತಿದೆ. ಮೈಸೂರಿನ ರಮಾಬಾಯಿನಗರದ ಶ್ರೀ ಬಸವೇಶ್ವರ ಮಣ್ಣಿನ…
ಪ್ರಜ್ವಲ್ ರೇವಣ್ಣ ಆಸ್ತಿ ವಿವಾದ: ಆಕ್ಷೇಪಣೆಗೆ 2 ವಾರ ಕಾಲಾವಕಾಶ ನೀಡಿದ ಕೋರ್ಟ್
October 1, 2019ಬೆಂಗಳೂರು,ಸೆ.30- ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ 2 ವಾರಗಳ ಗಡುವು ನೀಡಿದೆ. ಮಾಜಿ ಸಚಿವ ಎ.ಮಂಜು ಮತ್ತು ವಕೀಲರಾದ ಜಿ.ದೇವ ರಾಜೇಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವಿಚಾ ರಣೆಯನ್ನು ಮುಂದೂಡಿದರು. ಕಳೆದ ಲೋಕಸಭೆ ಚುನಾ ವಣೆಯ ವೇಳೆ ಹಾಸದ ಮೈತ್ರಿ ಅಭ್ಯರ್ಥಿಯಾಗಿದ್ದ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಮ್ಮ ನಾಮಪತ್ರದ ಜತೆ ಸಲ್ಲಿಸಿದ್ದ ದಾಖಲೆಗಳ…
ನಾಡಿನ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಂದ ದಸರಾ ಉತ್ಸವ ಉದ್ಘಾಟನೆ
September 30, 2019ಮೈಸೂರು, ಸೆ.29(ಆರ್‍ಕೆ)-ಹತ್ತು ದಿನಗಳ ಕಾಲ ನಡೆಯಲಿರುವ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವ ಇಂದಿನಿಂದ ಆರಂಭವಾಯಿತು. ಚಾಮುಂಡಿ ಬೆಟ್ಟದಲ್ಲಿ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ನೆರ ವೇರಿಸುವ ಮೂಲಕ ಇಂದು ಬೆಳಿಗ್ಗೆ 9.45 ಗಂಟೆಗೆ ಶುಭ ವೃಶ್ಚಿಕ ಲಗ್ನದಲ್ಲಿ ನಾಡಿನ ಹೆಸರಾಂತ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಪದ್ಮಶ್ರೀ ಡಾ. ಎಸ್.ಎಲ್. ಭೈರಪ್ಪ ಅವರು 2019ರ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಚಾಮುಂ ಡೇಶ್ವರಿ ಉತ್ಸವ ಮೂರ್ತಿಗೆ…
ಅರಮನೆಯಲ್ಲಿ ಯುವರಾಜ ಯದುವೀರ್ ಖಾಸಗಿ ದರ್ಬಾರ್
September 30, 2019ಮೈಸೂರು,ಸೆ.29(ಎಂಟಿವೈ)- ದಸರಾ ಮಹೋತ್ಸವದ ವೇಳೆ ಅರಮನೆಯಲ್ಲಿ ನಡೆ ಯಲಿರುವ ಖಾಸಗಿ ದರ್ಬಾರ್ ಭಾನುವಾರ ಆರಂಭವಾಯಿತು. ನವರಾತ್ರಿಯ ಮೊದಲ ದಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಿಧ ಧಾರ್ಮಿಕ ಕೈಂಕರ್ಯ ಗಳಲ್ಲಿ ಪಾಲ್ಗೊಂಡು, ರತ್ನಖಚಿತ ಸಿಂಹಾ ಸನರೂಢರಾಗಿ ಗಮನ ಸೆಳೆದರು. ಅರಮನೆಯ ದರ್ಬಾರ್ ಹಾಲ್‍ನಲ್ಲಿ ಇಂದು ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ನವರಾತ್ರಿಯ ಅಂಗವಾಗಿ ನಡೆದ ವಿವಿಧ ಪೂಜಾ ಕೈಂಕರ್ಯಗಳಲ್ಲಿ ರಾಜವಂಶಸ್ಥ ರಾದ ಪ್ರಮೋದಾದೇವಿ ಒಡೆಯರ್, ಯದು ವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಸಕ್ರಿಯವಾಗಿ ಪಾಲ್ಗೊಂಡು,…
ಮೈಸೂರು ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
September 30, 2019ಮೈಸೂರು,ಸೆ.29(ಎಸ್‍ಬಿಡಿ)-ಮೈಸೂರು ಅರಮನೆ ಆವ ರಣ ಸೇರಿದಂತೆ ಅಷ್ಟ(8) ವೇದಿಕೆಗಳಲ್ಲಿ ಆಯೋಜಿಸಿರುವ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ದೊರಕಿತು. ದೀಪಾಲಂಕಾರದ ಬೆಳಕಲ್ಲಿ ಕಂಗೊಳಿಸುತ್ತಿದ್ದ ಅಂಬಾವಿಲಾಸ ಅರಮನೆ ಅಂಗಳದಲ್ಲಿ ನಿರ್ಮಿಸಿರುವ ಅತ್ಯಾ ಕರ್ಷಕ ವೇದಿಕೆಯಲ್ಲಿ ಸಚಿವರಾದ ಆರ್.ಅಶೋಕ್ ಗಣ್ಯ ರೊಂದಿಗೆ ದೀಪ ಬೆಳಗಿಸುವ ಮೂಲಕ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭ ದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಮಾಡುವ `ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಯನ್ನು ಸಂಗೀತ ಸಾಧಕ ಪ್ರೊ.ಬಿ.ಎಸ್. ವಿಜಯರಾಘವನ್ ಅವರಿಗೆ ಕನ್ನಡ ಮತ್ತು…
ನಾಡಿನ ಜನತೆಗೆ ಸಿಎಂ ಸಂದೇಶ
September 30, 2019ಮೈಸೂರು,ಸೆ.29(ಆರ್‍ಕೆ)- ದಸರಾ ಮಹೋ ತ್ಸವವು ನಾಡಿನ ಜನತೆಗೆ ಸುಖ-ಶಾಂತಿ-ನೆಮ್ಮದಿ ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಸರಾ ಸಂದೇಶ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ ನಡೆದ 2019ರ ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ವಿಜಯನಗರ ಸಾಮ್ರಾಜ್ಯದಲ್ಲಿ ನಡೆಯುತ್ತಿದ್ದ ನವರಾತ್ರಿ ಉತ್ಸವವನ್ನು ಪ್ರಜಾ ಪ್ರಭುತ್ವ ಆಡಳಿತ ಬಂದ ಮೇಲೆ ಸರ್ಕಾರಗಳು ನಿರಂತರವಾಗಿ ದಸರಾವನ್ನು ನಾಡಹಬ್ಬವಾಗಿ ಆಚ ರಿಸಿಕೊಂಡು ಬಂದಿವೆ ಎಂದರು. ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಉಳಿದೆಡೆ ಬರದ ಛಾಯೆ ಇದೆಯಾದರೂ, ಪಾರಂಪರಿಕ ದಸರೆಗೆ ಯಾವುದೇ…
ದಸರಾ ಚಲನಚಿತ್ರೋತ್ಸವ ಪ್ರಾರಂಭ
September 30, 2019ಮೈಸೂರು,ಸೆ.29(ಆರ್‍ಕೆಬಿ)- ನಾಡ ಹಬ್ಬ ದಸರಾ ಮಹೋತ್ಸವದಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸಲಾಗುತ್ತಿದ್ದು, ಅದರೊಂದಿಗೆ ಸರ್ಕಾರ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಚಿತ್ರರಂಗದ ಕಲಾವಿದರನ್ನು ಪ್ರೋತ್ಸಾಹಿಸಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಭರವಸೆ ನೀಡಿದರು. ಮೈಸೂರಿನ ಕಲಾಮಂದಿರದಲ್ಲಿ ದಸರಾ ಮಹೋತ್ಸವದ ಒಂದು ಪ್ರಮುಖ ಭಾಗ ವಾದ ದಸರಾ ಚಲನಚಿತ್ರೋತ್ಸವಕ್ಕೆ ಭಾನು ವಾರ ಚಾಲನೆ ನೀಡಿ ಅವರು ಮಾತನಾಡಿ ದರು. ನಾನೂರು ವರ್ಷಗಳ ಇತಿಹಾಸ ಹೊಂದಿರುವ ದಸರಾ ಮಹೋತ್ಸವದಲ್ಲಿ ಚಲನಚಿತ್ರೋತ್ಸವವನ್ನು ಹಮ್ಮಿಕೊಳ್ಳುವ ಮೂಲಕ ಚಲನಚಿತ್ರರಂಗದ ಕಲಾವಿದ ರನ್ನು ಬೆಳೆಸಲು…
ಜಂಬೂಸವಾರಿಗೆ ಪ್ರಮೋದಾದೇವಿ ಒಡೆಯರ್ ಆಹ್ವಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
September 30, 2019ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ರಾಜಮಾತೆ ಪ್ರಮೋದಾ ದೇವಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಹೂಗುಚ್ಛ ನೀಡಿ, ದಸರಾ ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ ಜಂಬೂ ಸವಾರಿ ಕಾರ್ಯ ಕ್ರಮಕ್ಕೆ ರಾಜ ಮನೆತನದವರು ಬರುವಂತೆ ಇದೇ ವೇಳೆ ಆಹ್ವಾನ ನೀಡಿದರು. ರಾಜ ಮಾತೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು ದಸರಾ ಮಹೋತ್ಸವದಲ್ಲಿ ರಾಜಮನೆತನದ ಕೊಡುಗೆ ಅಪಾರವಾದದ್ದು, ರಾಜಮಾತೆ ಪ್ರಮೋದಾ ದೇವಿ ಅವರ ಜೊತೆ ಸಾಕಷ್ಟು ವಿಚಾರಗಳನ್ನು ಮಾತನಾಡಿದ್ದು,…
ಮುಂದಿನ 10 ವರ್ಷಗಳಲ್ಲಿ ರೈಲ್ವೆಗೆ 50 ಲಕ್ಷ ಕೋಟಿ ರೂ. ಹೂಡಿಕೆ: ಉದ್ಯೋಗದಲ್ಲೂ ಹೆಚ್ಚಳ
September 30, 2019ಮೈಸೂರು, ಸೆ.29(ಪಿಎಂ)- ಮುಂದಿನ 10 ವರ್ಷ ಗಳಲ್ಲಿ ರೈಲ್ವೆ ಇಲಾಖೆ ವಿವಿಧ ಯೋಜನೆಗಳಿಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದ್ದು, ಇದರಿಂದ ಇಲಾಖೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಯುವ ಜನತೆ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಮೈಸೂರಿಗೆ ವಿಸ್ತರಿಸಿರುವ ಕೊಚುವೇಲಿ-ಬೆಂಗ ಳೂರು ಎಕ್ಸ್‍ಪ್ರೆಸ್ ರೈಲು ಗಾಡಿ (16316) ಸೇವೆಗೆ ಮೈಸೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಭಾನು ವಾರ ಹಮ್ಮಿಕೊಂಡ ಚಾಲನೆ ಹಾಗೂ ಪ್ಲಾಟ್‍ಫಾರಂ 6ರಲ್ಲಿ…
ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ವಿವಿಧ ದಸರಾ ಸಾಂಸ್ಕøತಿಕ ಕಾರ್ಯಕ್ರಮ
September 30, 2019ಮೈಸೂರು, ಸೆ. 29- ಮೈಸೂರು ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ದಸರಾ ಅಂಗವಾಗಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮ, ಫುಡ್ ಕೋರ್ಟ್‍ನ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಳೆ (ಸೋಮವಾರ) ಸಂಜೆ 5ಕ್ಕೆ ನೆರವೇರಿಸಲಿದ್ದಾರೆ. ಶಾಸಕರಾದ ಜಿ.ಟಿ.ದೇವೇಗೌಡ, ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾ ಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ರಂಗನಾಥಯ್ಯ ಭಾಗವಹಿಸುವರು. ಕಲಾಪ್ರದರ್ಶನ, ಸಾಂಸ್ಕೃತಿಕ ಪ್ರದರ್ಶನ: ದಸರಾ ಮಹೋತ್ಸವದ ಅಂಗವಾಗಿ ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ಕರಕುಶಲ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಕಲಾ ವೈಭವ…










