ಬೆಂಗಳೂರು, ಆ.10(ಕೆಎಂಶಿ)- ರಾಜ್ಯ ದಲ್ಲಿ ತಲೆದೋರಿರುವ ಮಳೆ ಮತ್ತು ನೆರೆ ಪರಿಹಾರಕ್ಕಾಗಿ ತಕ್ಷಣ ಮೂರು ಸಾವಿರ ಕೋಟಿ ರೂ. ನೆರವು ಕೋರಿ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ನೆರೆಯಿಂದ ಸಾವಿರಾರು ಕೋಟಿ ರೂ. ಆಸ್ತಿಪಾಸ್ತಿ ನಷ್ಟವುಂಟಾಗಿದೆ. ಪ್ರಾಥಮಿಕ ಅಂದಾಜಿನಲ್ಲಿ ಆರು ಸಾವಿರ ಕೋಟಿ ರೂ. ಎಂದು ಪರಿಗಣಿಸಿ, ಈ ಪ್ರಮಾಣದ ಹಣ ವನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರುತ್ತೇನೆ. ಕಳೆದ ಮೂರು ದಿನಗಳಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬಿಡಾರ ಹೂಡಿದ್ದ ಮುಖ್ಯಮಂತ್ರಿಯವರು…
ಹೊಗೇನಕಲ್ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ
August 11, 2019ಹನೂರು, ಆ.10 (ಸೋಮ)- ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಂದ ನದಿಗೆ ಲಕ್ಷಾಂತರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಕರ್ನಾಟಕ ಗಡಿಯಂಚಿನ ಹೊಗೇನಕಲ್ ಜಲಪಾತದ ಬಳಿ ಕಾವೇರಿ ನದಿ ಭೋರ್ಗರೆಯುತ್ತಿರುವ ಸೊಬಗನ್ನು ಕಣ್ತುಂಬಿಕೊಳ್ಳಲು ಆಗಮಿಸುವ ಪ್ರವಾಸಿಗರ ಪ್ರವೇಶವನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ನಿಷೇಧಿಸಿದೆ. ಕೇರಳದ ವೈನಾಡು ಹಾಗೂ ಮಡಿಕೇರಿ ಸೇರಿದಂತೆ ಕಾವೇರಿ ನದಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ, ಕೆಆರ್‍ಎಸ್ ಜಲಾಶಯಗಳಿಗೆ ಲಕ್ಷಾಂತರ ಕ್ಯೂಸೆಕ್ ನೀರು ಹರಿದು ಬರುತ್ತಿ ರುವ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಗೋಪಿನಾಥಂ ಬಳಿಯ ಗಡಿಯಂಚಿನ ಹೊಗೇನಕಲ್…
ಮೈಸೂರು ಪಾರಂಪರಿಕ ಕಟ್ಟಡಗಳ ಬಗ್ಗೆ15 ದಿನದೊಳಗೆ ನಿರ್ಧಾರ ಕೈಗೊಳ್ಳಿ
August 11, 2019ಮೈಸೂರು, ಆ.10(ಎಂಟಿವೈ)- ಮೈಸೂ ರಿನಲ್ಲಿ 132 ಪಾರಂಪರಿಕ ಕಟ್ಟಡಗಳ ಸ್ಥಿತಿ ಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪಾರಂಪರಿಕ ಸಮಿತಿ ತುರ್ತು ಸಭೆ ನಡೆಸಿ 15 ದಿನದೊಳಗೆ ಸ್ಪಷ್ಟ ನಿರ್ಧಾರ ತಳೆಯು ವಂತೆ ಶಾಸಕ ಎಲ್.ನಾಗೇಂದ್ರ ಸೂಚಿಸಿದ್ದಾರೆ. ಎಡಬಿಡದೆ ಸುರಿದ ಮಳೆಯಿಂದ ಸರ ಸ್ವತಿಪುರಂನಲ್ಲಿರುವ ಅಗ್ನಿಶಾಮಕ ಠಾಣಾ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಎಲ್.ನಾಗೇಂದ್ರ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡುವುದಕ್ಕೆ…
ಶಿಥಿಲ ಪಾರಂಪರಿಕ ಕಟ್ಟಡಗಳ ಬಗ್ಗೆಸಿಎಂ ಜತೆ ಚರ್ಚೆ: ವಿಜಯೇಂದ್ರ
August 11, 2019ಮೈಸೂರು, ಆ. 10(ಆರ್‍ಕೆ)- ಅಪಾಯದಲ್ಲಿರುವ ಮೈಸೂರಿನ ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತು ತಜ್ಞರು, ಅಧಿಕಾರಿಗಳಿಂದ ವರದಿ ತರಿಸಿಕೊಂಡು ಶೀಘ್ರ ಪರಿಹಾರ ಕಂಡುಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಹೇಳಿದರು. ಧಾರಾಕಾರ ಮಳೆಯಿಂದಾಗಿ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದು ಭಾರೀ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿರುವ, ಜತೆಗೆ ಜನರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸ್ಥಳೀಯ ಶಾಸಕರೊಂದಿಗೆ ಸ್ಥಳ ಪರಿ ಶೀಲಿಸಿ ಹಾನಿಯ…
ಮೈಸೂರು ಅಗ್ನಿಶಾಮಕ ದಳದಿಂದ ಕೊಡಗಿಗೆ ರಕ್ಷಣಾ ಸಾಮಗ್ರಿ
August 11, 2019ಮೈಸೂರು,ಆ.10(ಆರ್‍ಕೆ)-ಭಾರೀ ಮಳೆಯಿಂದ ಪ್ರವಾಹಕ್ಕೆ ಸಿಲುಕಿರುವ ಕೊಡಗಿನ ಸಂತ್ರಸ್ತರನ್ನು ರಕ್ಷಿಸಲು ಮೈಸೂರಿನ ಅಗ್ನಿಶಾಮಕ ಠಾಣೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಉಪಕರಣ ಗಳೊಂದಿಗೆ ಧಾವಿಸಿದ್ದಾರೆ. ಕಾವೇರಿ, ಲಕ್ಷ್ಮಣತೀರ್ಥ, ಕೀರೆ ಪೋಲ್ ಮತ್ತು ಹಲವು ನದಿಗಳು ತುಂಬಿ ಹರಿ ಯುತ್ತಿರುವುದರಿಂದ ಉಂಟಾಗಿರುವ ಪ್ರವಾಹದಿಂದ ಸುತ್ತಲಿನ ಪ್ರದೇಶಗಳು ಜಲಾವೃತಗೊಂಡಿದ್ದು, ಜನರು ಅಪಾಯ ದಲ್ಲಿ ಸಿಲುಕಿದ್ದಾರೆ. ಅವರ ನೆರವಿಗಾಗಿ ಮೈಸೂರಿನ ಅಗ್ನಿಶಾಮಕ ದಳ, ಎರಡು ವಾಹನಗಳಲ್ಲಿ ದೋಣಿ, 100 ಮೀಟರ್ ದೂರದವರೆಗೆ ಪ್ರಖರ ಬೆಳಕು ನೀಡುವ ಲೈಟ್‍ಗಳು, ಮರ ಕತ್ತರಿಸುವ ಗರಗಸ, ಜೀವರಕ್ಷಕ ಸಾಮಗ್ರಿಗಳನ್ನು…
ಮೈಸೂರು ಪುರಭವನದಲ್ಲಿ `ನೆರವು ಕೇಂದ್ರ’ ಆರಂಭ
August 11, 2019ಮೈಸೂರು,ಆ.10(ವೈಡಿಎಸ್)-ವರು ಣನ ಆರ್ಭಟದಿಂದ ನಲುಗಿರುವ ಉತ್ತರ ಕರ್ನಾಟಕ, ಹಾಸನ, ಕೊಡಗು ಜಿಲ್ಲೆಗಳಿಗೆ ನೆರವು ನೀಡಲು ಜಿಲ್ಲಾಡಳಿತದಿಂದ ಪುರ ಭವನದಲ್ಲಿ `ನೆರವು ಕೇಂದ್ರ’ ಆರಂಭಿಸಿದ್ದು, 24 ಬಗೆಯ ತುರ್ತು ಅಗತ್ಯ ವಸ್ತುಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಸಂಘ-ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ. ಪ್ರವಾಹದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳೊಂದಿಗಿನ ಸಭೆ ಯಲ್ಲಿ ಮಾತನಾಡಿದ ಅವರು, ವರುಣನ ಆರ್ಭಟಕ್ಕೆ ರಾಜ್ಯದ 16 ಜಿಲ್ಲೆಗಳಲ್ಲಿ ನೆರೆ ಹಾವಳಿ ಹೆಚ್ಚಾಗಿ ಸಂತ್ರಸ್ತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮೈಸೂರಿನ…
ಸಹಜ ಸ್ಥಿತಿಯತ್ತ ಜಮ್ಮು-ಕಾಶ್ಮೀರಶಾಲಾ, ಕಾಲೇಜು ಪ್ರಾರಂಭ, ನಿಷೇಧಾಜ್ಞೆ ತೆರವು
August 11, 2019ಶ್ರೀನಗರ, ಆ.10- ಹಲವು ದಿನಗಳಿಂದ ಸ್ತಬ್ಧವಾಗಿದ್ದ ಜಮ್ಮು-ಕಾಶ್ಮೀರ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 5 ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ. ಉಳಿದೆಡೆಯೂ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಹೇರಿದ್ದ ನಿಷೇಧಾಜ್ಞೆಯನ್ನು ತೆರವುಗೊಳಿ ಸಿದ್ದರಿಂದ ಸ್ಥಗಿತಗೊಂಡಿದ್ದ ಸಾಮಾನ್ಯ ಚಟುವಟಿಕೆಗಳು ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮುವಿನ 5 ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಅಲ್ಲದೆ, ಸರ್ಕಾರಿ ಕಚೇರಿಗಳ ಹಾಜರಾತಿ ಯಲ್ಲಿಯೂ ಹೆಚ್ಚಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು, ಕಥುವಾ, ಸಾಂಬಾ, ಉಧಂಪುರ್ ಮತ್ತು ರಿಯಾಸಿಯ…
ಭಾರತದ ಮೇಲೆ ದಾಳಿಗೆ ಸ್ಕೆಚ್ ಪಾಕ್ ಕುತಂತ್ರದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ!
August 11, 2019ನವದೆಹಲಿ, ಆ.10-ಆರ್ಟಿಕಲ್ 370 ರದ್ದುಗೊಳಿಸಿದ ನಂತರ ಪಾಕಿಸ್ತಾನ ಭಾರತದ ಮೇಲೆ ಭಯೋತ್ಪಾದಕರ ದಾಳಿ ನಡೆಯುವ ಬಗ್ಗೆ ಎಚ್ಚರಿಸಿತ್ತು. ಈ ಬೆನ್ನಲ್ಲೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕೆ ಹಪಹಪಿಸುತ್ತಿ ರುವ ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ 12ಕ್ಕೂ ಹೆಚ್ಚು ಉಗ್ರ ಕ್ಯಾಂಪ್ ಗಳನ್ನು ಸಕ್ರಿಯಗೊಳಿಸಿರುವ ಮಾಹಿತಿ ಲಭ್ಯವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಗಡಿ ಬಳಿ ಇರುವ ಪಾಕ್ ಆಕ್ರಮಿತ ಪ್ರದೇಶಗಳಲ್ಲಿ ಪಾಕಿಸ್ತಾನ ಉಗ್ರರ ನೆಲೆಗಳನ್ನು ಸಕ್ರಿಯಗೊಳಿಸಿದೆ. ಕಳೆದ ವಾರ ಈ ಪ್ರದೇಶಗಳಲ್ಲಿ ಅತೀ ಹೆಚ್ಚು…
ಕೆಆರ್ ಕ್ಷೇತ್ರದಲ್ಲಿ ಮಳೆ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳಿ
August 11, 2019ಮೈಸೂರು: ಕೃಷ್ಣ ರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಹಿನ್ನೆಲೆಯಲ್ಲಿ ಆಗಿರುವ ಸಮಸ್ಯೆ ಗಳನ್ನು ಬಗೆಹರಿಸಲು ತ್ವರಿತ ಕ್ರಮ ಕೈಗೊಳ್ಳು ವಂತೆ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಾರ ಕಾಲ ಎಡಬಿಡದೆ ಸುರಿದ ಮಳೆಯ ಹಿನ್ನೆಲೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲೆ ದೋರಿರುವ ಸಮಸ್ಯೆಗಳ ಸಂಬಂಧ ಕ್ಷೇತ್ರದ ವಾರ್ಡ್‍ಗಳ ನಗರಪಾಲಿಕೆ ಸದಸ್ಯ ರೊಂದಿಗೆ ಶನಿವಾರ ತುರ್ತು ಸಭೆ ನಡೆಸಿ ಅವರು ಸಮಾ ಲೋಚಿಸಿದರು. ಮೈಸೂರಿನ ಕಾಡಾ ಕಟ್ಟಡ…
ಎಂಕೆಎಸ್ ಬ್ರಿಗೇಡ್‍ನಿಂದ ಬಂಡಿಪಾಳ್ಯದಲ್ಲಿ ಧಾನ್ಯ ಸಂಗ್ರಹ
August 11, 2019ಮೈಸೂರು, ಆ.10(ಎಂಟಿವೈ)- ರಾಜ್ಯದ ವಿವಿಧೆಡೆ ಉಂಟಾಗಿರುವ ಪ್ರವಾಹ ಸಂತ್ರ ಸ್ತರಿಗೆ ನೆರವು ನೀಡಲು ಮುಂದಾಗಿರುವ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದ ಎಂಕೆಎಸ್ ಬ್ರಿಗೇಡ್ ಕಾರ್ಯ ಕರ್ತರು ಶನಿವಾರ ಮೈಸೂರಿನ ಬಂಡಿ ಪಾಳ್ಯದಲ್ಲಿ ವರ್ತಕರಿಂದ ಆಹಾರ ಪದಾರ್ಥ ಸಂಗ್ರಹಿಸಿದರು. ಇಂದು ಮಧ್ಯಾಹ್ನ ಬ್ರಿಗೇಡ್‍ನ ಕಾರ್ಯ ಕರ್ತರೊಂದಿಗೆ ಬಂಡಿಪಾಳ್ಯಕ್ಕೆ ಆಗಮಿ ಸಿದ ಮಾಜಿ ಶಾಸಕ ಎಂ.ಕೆ.ಸೋಮ ಶೇಖರ್ ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ವಸ್ತು ಗಳನ್ನು ಸಂಗ್ರಹಿಸಿದರು. ಇದೇ ವೇಳೆ ಅಲ್ಲಿನ ವರ್ತಕರಿಂದಲೂ ವಿವಿಧ ವಸ್ತು ಗಳನ್ನು ಸಂಗ್ರಹಿಸಲಾಯಿತು. ಇದೇ…










