ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಮುನಿರತ್ನ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ, ರೇವಣ್ಣ ಉಪಮುಖ್ಯಮಂತ್ರಿಯಾಗಲಿ ಎಂದು ಈ ಶಾಸಕರು ಒತ್ತಾಯ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ….
ದೇವೇಗೌಡರ ಮನೆ ಹೆಣ್ಣು ಮಕ್ಕಳಿಂದ ನಿರಂತರ ಕಿರುಕುಳ
July 8, 2019ಬೆಂಗಳೂರು: ಜೆಡಿಎಸ್ ಹಿರಿಯ ನಾಯಕ ಹೆಚ್.ವಿಶ್ವನಾಥ್ ಅವರ ಜೊತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ, ತಮ್ಮ ರಾಜೀನಾಮೆಗೆ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನೇ ನೇರ ಹೊಣೆಗಾರ ರನ್ನಾಗಿಸಿರುವ ಅವರು, ಗೌಡರ ಕುಟುಂಬ ರಾಜಕಾರಣದಿಂದ ಬೇಸತ್ತಿರುವುದಾಗಿ ಹೇಳಿ ದ್ದಾರೆ. ದೇವೇಗೌಡರ ಕುಟುಂಬ ರಾಜಕಾರ ಣದ ಕಿರುಕುಳದ ಕಾರಣಕ್ಕಾಗಿ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವು ದಾಗಿ ಗಂಭೀರ ಆರೋಪ ಮಾಡಿ ರುವ ಅವರು, ದೇವೇಗೌಡರ ಪುತ್ರಿ ಯರಿಂದ ತಮಗೆ ನಿರಂತರ ಕಿರು ಕುಳವಾಗುತ್ತಿದೆ….
ಪಟ್ಟು ಸಡಿಲಿಸದ ರಾಮಲಿಂಗಾ ರೆಡ್ಡಿ
July 8, 2019ಬೆಂಗಳೂರು: ರಾಜೀನಾಮೆ ಹಿಂಪಡೆಯುವಂತೆ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿ ಸಲು ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಂಧಾನ ವಿಫಲವಾಗಿದೆ. ರಾಮಲಿಂಗಾ ರೆಡ್ಡಿ ಅವರ ಜೊತೆ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಮೂಲಕ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ರೆಡ್ಡಿ ಅವರು ನಾನು ಈಗಾಗಲೇ ರಾಜೀ ನಾಮೆ ಕೊಟ್ಟಾಗಿದೆ. ಅದರಿಂದ ನಾನಾಗಲೀ, ನನ್ನ ಪುತ್ರಿಯಾಗಲೀ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನಗೆ ನಿಮ್ಮ ಅಧಿಕಾರವೂ ಬೇಡ, ಸಹವಾಸವೂ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎಂದು ಹೇಳಲಾಗಿದೆ. ಇದಾದ ನಂತರ ಡಿ.ಕೆ.ಶಿವಕುಮಾರ್…
ನಾವ್ಯಾರೂ ರಾಜೀನಾಮೆ ಹಿಂಪಡೆಯಲ್ಲ: ಅತೃಪ್ತ ಶಾಸಕರ ಘೋಷಣೆ
July 8, 2019ಮುಂಬೈ: ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರು ಒಗ್ಗಟ್ಟು ಪ್ರದರ್ಶಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಹೋಟೆಲ್ ಮುಂಭಾಗ ಚುಟುಕು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್, ಈ ಎಚ್ಚರಿಕೆ ಸಂದೇಶವನ್ನು ನೀಡಿದರು. ರಾಜೀ ನಾಮೆ ಕೊಟ್ಟಿರುವ ನಾವ್ಯಾರೂ ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಾವು ಮುಖ್ಯಮಂತ್ರಿ ಬದಲಾವಣೆ ಬೇಡಿಕೆ ಇಟ್ಟಿಲ್ಲ. ಬೇರೆ ಯಾರನ್ನೂ ಮುಖ್ಯಮಂತ್ರಿ ಮಾಡಬೇಕೆಂದು ಕೇಳಲೂ ಇಲ್ಲ ಎಂದರು. ಅವರ ಮಾತುಗಳನ್ನೇ ಜೆಡಿಎಸ್ ಶಾಸಕ ಗೋಪಾಲಯ್ಯ ಮತ್ತು ಕಾಂಗ್ರೆಸ್ ಶಾಸಕ ಬಿ.ಎಸ್.ಪಾಟೀಲ್…
ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ: ಸಿದ್ದರಾಮಯ್ಯ
July 8, 2019ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಬಗೆಹರಿಸುವ ನಿಟ್ಟಿ ನಲ್ಲಿ ಕಾಂಗ್ರೆಸ್ ವರಿಷ್ಠರು ಮುಂದಾ ಗಿದ್ದು, ಅತೃಪ್ತ ಶಾಸಕರ ಸಮಸ್ಯೆ ಆಲಿಸುವಂತೆ ಹಿರಿಯ ಮುಖಂಡ ರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿ.ಕೆ.ಹರಿಪ್ರಸಾದ್ ಅವರಿಗೆ ಜವಾಬ್ದಾರಿ ನೀಡಿದ್ದಾರೆ. ಈ ಮಧ್ಯೆ ಬೆಂಗ ಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದ ರಾಮಯ್ಯ, ರಾಜೀನಾಮೆ ನೀಡಿರುವ ಐದಾರು ಶಾಸಕರೊಂದಿಗೆ ಸಂಪರ್ಕ ದಲ್ಲಿರುವುದಾಗಿ ತಿಳಿಸಿದ್ದಾರೆ. ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ. ಆದರೆ, ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ. ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿದ್ದಾರೆಯೇ…
ಖರ್ಗೆಗೆ ಸಿಎಂ ಪಟ್ಟ ಸಾಧ್ಯತೆ
July 8, 2019ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದಿರುವ 13 ಶಾಸಕರು ತಮ್ಮ ವಿಧಾನಸಭಾ ಸದ ಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕವೂ ಸರ್ಕಾರ ಉಳಿಸಿಕೊಳ್ಳುವತ್ತ ಕಾಂಗ್ರೆಸ್-ಜೆಡಿಎಸ್ ನಾಯಕರು ಗಂಭೀರ ಚಿಂತನೆ ನಡೆಸಿದ್ದು, ಅಗತ್ಯ ಬಿದ್ದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬದಲಾವಣೆಯಂತಹ ಕಠಿಣ ನಿರ್ಧಾರ ಅನಿವಾರ್ಯ ಎನ್ನುವ ನಿಲುವಿಗೆ ಬಂದಿದ್ದಾರೆ. ಸರ್ಕಾರ ರಕ್ಷಣೆಗೆ ಹಲವು ಸೂತ್ರಗಳನ್ನು ಸಿದ್ಧಪಡಿಸಿದ್ದು, ಇದರಲ್ಲಿ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಸುವುದು ಸೇರಿದೆ. ಸರ್ಕಾರ ಉಳಿಯಬೇಕಾದರೆ ಅತೃಪ್ತ ಶಾಸಕರ ಬೇಡಿಕೆಗಳಿಗೆ ಮನ್ನಣೆ ನೀಡುವುದು ಅನಿವಾರ್ಯ ಎಂಬುದನ್ನು ಮನಗಂಡಿದ್ದಾರೆ. ರಾಜೀನಾಮೆ ನೀಡಿರುವ…
ಯಾವುದೇ ತ್ಯಾಗಕ್ಕೂ ಸಿದ್ಧ: ಜಿಟಿಡಿ
July 8, 2019ಬೆಂಗಳೂರು: ರಾಜ್ಯದ ಹಿತದೃಷ್ಟಿಯಿಂದ ತಾವು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ತಿಳಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪಕ್ಷದ ವರಿಷ್ಠರು ಹೇಳಿದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅಥವಾ ಬೇರೆ ಯಾರನ್ನೂ ಮುಖ್ಯಮಂತ್ರಿ ಮಾಡಿದರೂ ಕೂಡ ತಾವು ಒಪ್ಪುವುದಾಗಿ ಹೇಳಿದರು. ತನಗೆ ಮತ ನೀಡಿ ಗೆಲ್ಲಿಸಿರುವ ಚಾಮುಂ ಡೇಶ್ವರಿ ಕ್ಷೇತ್ರದ ಮತದಾರರಿಗೆ ದ್ರೋಹವೆಸಗಿ ಜೆಡಿಎಸ್ ಬಿಟ್ಟು ಬಿಜೆಪಿಗೆ…
ಮೈಸೂರಲ್ಲಿ ನಮೋ ಯೋಗ ಭವನ ಆರಂಭ
July 8, 2019ಮೈಸೂರು,ಜು.7-ಹತ್ತು ಹಲವು ವೈಶಿಷ್ಟ್ಯಗಳ ತಾಣ `ಮೈಸೂರು ನಗರ’ ಯೋಗ ಪರಂಪರೆಗೂ ಹೆಸರಾಗಿದ್ದು, ಇದೀಗ ಮೈಸೂರು ನಗರದಲ್ಲಿ ಮಹಾ ನಗರ ಪಾಲಿಕೆ ವತಿಯಿಂದ ನಿರ್ಮಾಣ ವಾಗಿರುವ ಮೊಟ್ಟ ಮೊದಲ ಯೋಗಾ ಭ್ಯಾಸ ಕೇಂದ್ರವಾದ `ನಮೋ ಯೋಗ ಭವನ’ದಲ್ಲಿ 50ಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸದಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ನಮೋ ಯೋಗ ಭವನ ಹಲವು ವಿಶೇಷತೆಗಳನ್ನು ಮೈದಳೆಯಲಿದೆ. ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯ 25 ಲಕ್ಷ ರೂ. ವೆಚ್ಚದಲ್ಲಿ 51ನೇ ವಾರ್ಡಿನ ರಾಮಾನುಜ ರಸ್ತೆಯಲ್ಲಿ `ನಮೋ ಯೋಗ ಭವನ’…
ಬುದ್ಧಿಶಕ್ತಿಯಲ್ಲಿ ಹೆಣ್ಣು ಮಕ್ಕಳೇ ಮುಂದು: ಶಾಸಕ ಎಸ್.ಎ.ರಾಮದಾಸ್
July 8, 2019ಮೈಸೂರು,ಜು.7(ಎಂಕೆ)- ಬುದ್ಧಿಶಕ್ತಿಯಲ್ಲಿ ಹೆಣ್ಣು ಮಕ್ಕಳೇ ಮುಂದಿದ್ದು, ಉತ್ತಮ ಶಿಕ್ಷಣ ನೀಡುವುದರಿಂದ ದೇಶದ ಪ್ರಗತಿಗೆ ಕೊಡುಗೆ ನೀಡುತ್ತಾರೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು. ಮೈಸೂರಿನ ಗೌರಿಶಂಕರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ವತಿಯಿಂದ ಅಖಿಲ ಭಾರತ ಸಾರ್ವಜನಿಕ ಸಂಪರ್ಕ ಮಹಾ ಸಂಘ(ಪಿಆರ್‍ಸಿಐ), ಯುವ ಸಂವಾಹಕರ ಒಕ್ಕೂಟ(ವೈಸಿಸಿ), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜನ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಹಮ್ಮಿ ಕೊಳ್ಳಲಾಗಿದ್ದ ‘ಹೆಣ್ಣುಮಗು ರಕ್ಷಿಸಿ: ಶಿಕ್ಷಣ ಕೊಡಿಸಿ’ ವಿಶೇಷ ಜಾಗೃತಿ ಕಾರ್ಯಕ್ರಮ…
ವಿದೇಶಕ್ಕಿಂತ ಭಾರತದಲ್ಲಿ ಹೃದ್ರೋಗ ಚಿಕಿತ್ಸೆಗೆ ಉತ್ತಮ ವ್ಯವಸ್ಥೆ
July 8, 2019ಮೈಸೂರು,ಜು.7(ವೈಡಿಎಸ್)-ವಿದೇಶ ಕ್ಕಿಂತ ಭಾರತದಲ್ಲಿ ಹೃದ್ರೋಗ ಚಿಕಿತ್ಸಾ ವ್ಯವಸ್ಥೆ ಚೆನ್ನಾಗಿದ್ದು, ಗುಣಮಟ್ಟದ ಚಿಕಿತ್ಸೆ ಯನ್ನು ತ್ವರಿತವಾಗಿ ನೀಡುವುದರಲ್ಲಿ ಭಾರತ ಪ್ರಪಂಚದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು. ಮೈಸೂರಿನ ಜಯದೇವ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ, ಪರಿಶೀಲಿಸಿದ ನಂತರ ಮಾತನಾಡಿದ ಅವರು, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಎಕೋ ಆಂಜಿಯೋಟೆಸ್ಟ್ ಮಾಡಲು 2-3 ವಾರ ಬೇಕಾಗುತ್ತದೆ. ವಿದೇಶದಲ್ಲಿ ಇನ್ಸೂರೆನ್ಸ್ ಇಲ್ಲದೆ ಆಪರೇಷನ್ ಮಾಡುವುದಿಲ್ಲ. ಫಿಜಿಷಿಯನ್ ಶಿಫಾರಸು ಮಾಡಬೇಕು. ಆದರೆ ಜಯದೇವದಲ್ಲಿ 1-2 ದಿನದಲ್ಲಿ ಆಪರೇಷನ್ ಮಾಡುತ್ತೇವೆ….










