ಬೆಂಗಳೂರು: ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮೈತ್ರಿ ಸರ್ಕಾರ ಕಂಪ್ಲೀಟ್ ಆಗುತ್ತೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗ್ತೀರಾ. ಒಳಗಡೆ ಏನು ಅನ್ನೋದು ನಮಗೆ ಗೊತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರಿಗೆ ಹೇಳಿರುವ ವಿಡಿಯೋ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತರ ಜೊತೆ ಮಾತ ನಾಡಿರುವ ನಿಖಿಲ್ ಕುಮಾರಸ್ವಾಮಿ, 4 ವರ್ಷ ಸರ್ಕಾರ ನಡೆಸುತ್ತೇವೆ. ಚುನಾವಣೆಗೆ ಮುಂದಿನ ತಿಂಗಳಿಂದಲೇ ಶುರು ಮಾಡಿ. ಒಂದು ವರ್ಷಕ್ಕೆ ಬರುತ್ತೋ, ಎರಡು ವರ್ಷಕ್ಕೆ ಬರುತ್ತೋ, ಮೂರು ವರ್ಷಕ್ಕೆ…
ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ
June 7, 2019ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ವೇಳೆ, ಮಾಧ್ಯಮದವರ ಬಳಿ ಮಾತನಾಡಲು ಏನಿದೆ, ನಮ್ಮ ಕೆಲಸ ಮಾಡಲು ಬಂದಿದ್ದೇವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ದವರು ಹಾಳಾಗಿದ್ದೀರಿ. ಇದೇ ವಿಚಾರಕ್ಕೆ ಸಿಎಂ ಕುಮಾರಸ್ವಾಮಿಯವರಿಗೆ ನಿಮ್ಮ ಬಗ್ಗೆ ಬಹಳ ಬೇಸರವಿದೆ. ಇಲ್ಲದೇ ಇರುವ ತಲೆಹರಟೆ ಪ್ರಶ್ನೆ ಕೇಳುತ್ತೀರಿ. ಮಾಧ್ಯಮದವರ…
ಮೈಸೂರು ವಿಮಾನ ನಿಲ್ದಾಣದಿಂದ 2ನೇ ವಿಮಾನ ಸೇವೆ ಇಂದು ಉದ್ಘಾಟನೆ
June 7, 2019ಮೈಸೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಾದೇಶಿಕ ಸಂಪರ್ಕ ಯೋಜನೆ ಯಡಿಯಲ್ಲಿ ಎರಡನೇ ವಿಮಾನ ಸೇವೆಯ ಉದ್ಘಾ ಟನಾ ಕಾರ್ಯಕ್ರಮ (ಜೂನ್ 7) ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆಯಲಿದೆ. ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಉದ್ಘಾ ಟನೆ ಮಾಡುವರು. ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್, ಸಂಸದ ಪ್ರತಾಪ್‍ಸಿಂಹ ಅವರು ಉಪಸ್ಥಿತರಿರುವರು. ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಪುಷ್ಪಲತಾಜಗನ್ನಾಥ್, ಕೇಂದ್ರ ಸರ್ಕಾರದ…
6 ತಿಂಗಳಲ್ಲಿ ಬೋಧಕರ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್
June 7, 2019ನವದೆಹಲಿ: ಮುಂದಿನ ಆರು ತಿಂಗಳೊಳಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡ ಬೇಕೆಂದು ಕೇಂದ್ರ ಧನಸಹಾಯ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಆದೇಶ ನೀಡಿದೆ. ಯುಜಿಸಿಯ ಆದೇಶವನ್ನು ಪಾಲಿಸದಿದ್ದರೆ ಧನಸಹಾಯ ನೆರವನ್ನು ನಿಲ್ಲಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಈ ಕುರಿತು ಕಳೆದ ಮಂಗಳವಾರ ಯುಜಿಸಿ ಸುತ್ತೋಲೆ ಹೊರಡಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಬೋಧಕ ಸಿಬ್ಬಂದಿ ಕೊರತೆಯಿದೆ ಎಂಬುದನ್ನು ಯುಜಿಸಿ ಮಾರ್ಗಸೂಚಿಯಲ್ಲಿ ಗಮನಕ್ಕೆ ತಂದಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಬೋಧಕ…
ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ
June 7, 2019ಮೈಸೂರು: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಗುರುವಾರ ಮೈಸೂರು ಸೇರಿದಂತೆ ರಾಜ್ಯದ ಎಲ್ಲೆಡೆ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ, ವರುಣಹೋಮ ಸೇರಿದಂತೆ ವಿವಿಧ ಪೂಜೆ ನಡೆಸಿ ದೇವರ ಮೊರೆ ಹೋಗಲಾಯಿತು. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 31ರಂದು ಸುತ್ತೋಲೆ ಹೊರಡಿಸಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥಿಸಿ ಜೂ.6 ರಂದು ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನೆಲೆ ಯಲ್ಲಿ ಇಂದು…
ಜೂ.10ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ
June 7, 2019ಬೆಂಗಳೂರು: ರಾಜ್ಯದ ವಿವಿಧೆಡೆ ಜೂನ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ಶುಕ್ರವಾರ ಮುಂಜಾನೆಯವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಜೂನ್ 8, 9 ಹಾಗೂ 10ರಂದು ಕೂಡ ಭಾರಿ ವರ್ಷಧಾರೆ ಮುಂದುವರಿಯಲಿದ್ದು, ದಕ್ಷಿಣ ಒಳ ನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…
ಮಾಜಿ ಶಾಸಕ ಎಂ.ಸತ್ಯನಾರಾಯಣ್ ವಿಧಿವಶ
June 7, 2019ಮೈಸೂರು: ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ ಅವರು ಗುರುವಾರ ರಾತ್ರಿ ನಿಧನರಾದರು. ಇವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಕೆಲ ದಿನಗಳ ಹಿಂದೆ ಮೈಸೂ ರಿನ ಇಲವಾಲ ಸಮೀಪದ ನಂಜಮ್ಮ ಜವರೇಗೌಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗುರುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೈಸೂರು ತಾಲೂಕು ಗುಂಗ್ರಾಲ್ ಛತ್ರ ಗ್ರಾಮದವರಾದ ಎಂ.ಸತ್ಯನಾರಾಯಣ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿದ್ದರು. ಇವರಿಬ್ಬರೂ ಒಂದೇ ಸಮಯದಲ್ಲಿ ತಾಲೂಕು ಬೋರ್ಡ್…
ನಿಫಾ ವೈರಸ್ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ
June 7, 2019ಮೈಸೂರು: ಬಾವಲಿ ಜ್ವರ (ನಿಫಾ ವೈರಸ್) ಹರಡದಂತೆ ಮುಂಜಾಗ್ರತಾ ಕ್ರಮ ವಾಗಿ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಕಾಣಿಸಿ ಕೊಂಡಿರುವ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿಫಾ ವೈರಸ್ ಹರಡಬಹುದೆಂದು ಶಂಕಿಸಲಾಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂನ್ 4ರಂದು ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾ ಧಿಕಾರಿಗಳು…
ಎಂಟು ಸಚಿವ ಸಂಪುಟ ಸಮಿತಿ ಪುನರ್ ರಚನೆ
June 7, 2019ನವದೆಹಲಿ: ಕೇಂದ್ರ ಸರ್ಕಾರವು ನೇಮಕಾತಿ ಸಮಿತಿ ಹಾಗೂ ಭದ್ರತಾ ಸಮಿತಿ ಸೇರಿದಂತೆ ಸಚಿವ ಸಂಪುಟ ಸಮಿತಿ ಗಳನ್ನು ಪುನರ್ ರಚಿಸಿದೆ. ನೇಮಕಾತಿ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮಾತ್ರ ಸದಸ್ಯರಾಗಿರಲಿದ್ದಾರೆ. ಸಚಿವ ಸಂಪುಟ ಸಚಿವಾಲಯವು ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರನ್ನು ಎಲ್ಲಾ 8 ಸಮಿತಿಗಳ ಸದಸ್ಯರನ್ನಾಗಿ ಮಾಡ ಲಾಗಿದೆ. ಪ್ರಧಾನಿ ಮೋದಿ ಅವರನ್ನು ವಸತಿ ಸಂಬಂಧಿಸಿದ ಹಾಗೂ ಸಂಸದೀಯ ವ್ಯವಹಾರಗಳ…
ರಂಜಾನ್ ಪ್ರಯುಕ್ತ ಮಧ್ಯರಾತ್ರಿವರೆಗೂ ಭರ್ಜರಿ ವ್ಯಾಪಾರ
June 7, 2019ಮೈಸೂರು: ರಂಜಾನ್ ಪ್ರಯುಕ್ತ ಮಂಡಿಮೊಹಲ್ಲಾ ಮತ್ತು ದೇವರಾಜ ಅರಸು ರಸ್ತೆಯ ಬಹುತೇಕ ಅಂಗಡಿಗಳು ಮಧ್ಯ ರಾತ್ರಿವರೆಗೂ ತೆರೆದು ವಹಿವಾಟು ನಡೆಸಿದವು. ನಗರದ ಮಂಡಿ ಮೊಹಲ್ಲಾದ ಮೀನಾ ಬಜಾರ್ ಮತ್ತಿತರೆ ಕಡೆಗಳಲ್ಲಿ ಮಧ್ಯರಾತ್ರಿ ವರೆಗೂ ಅಂಗಡಿಗಳನ್ನು ತೆರೆದು ಬಟ್ಟೆ, ಡ್ರೈಫ್ರೂಟ್ಸ್ ಮತ್ತಿತರೆ ವಸ್ತುಗಳ ಭರ್ಜರಿ ವ್ಯಾಪಾರ ನಡೆ ಯಿತು. ಹಾಗೆಯೇ ಅರಸು ರಸ್ತೆಯಲ್ಲೂ ಕೆಲವು ಅಂಗಡಿಗಳು ತೆರೆದು ವಹಿವಾಟು ನಡೆಸಿದವು. ಹಣ್ಣುಗಳ ಭರ್ಜರಿ ಮಾರಾಟ: ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ವೇಳೆ ಬೇಕಾದ ಶಾವಿಗೆ, ಖರ್ಜೂರ, ಗೋಡಂಬಿ, ಬಾದಾಮಿ,…










