ಕುಶಾಲನಗರ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಿವೃತ್ತ ಕೆಎಎಸ್ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿ-ಹಾಸನ ರಾಜ್ಯ ಹೆದ್ದಾರಿ ತೊರೆನೂರು ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ. ಮೂಲತಃ ಮಡಿಕೇರಿ ತಾಲೂಕು, ಮೂರ್ನಾಡು ಸಮೀಪದ ಕುಂಬಳ ದಾಳು ನಿವಾಸಿ, ನಿವೃತ್ತ ಎಸಿ ಡಾ.ಕೆ.ಎ.ಅಪ್ಪಯ್ಯ(65) ಅಪಘಾತದಲ್ಲಿ ಮೃತಪಟ್ಟಿದ್ದು, ಜೊತೆಯಲ್ಲಿದ್ದ ಅವರ ಪತ್ನಿ ಮೀನಾಕ್ಷಿ ಅವರು ಅದೃಷ್ಟವ ಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಹಿಂಭಾಗದ ಸೀಟ್ ನಲ್ಲಿದ್ದ ಅಪ್ಪಯ್ಯ ಅವರ ಪ್ರೀತಿಯ ಶ್ವಾನವೂ ಬದುಕುಳಿದಿದೆ. ಬೆಂಗಳೂರಿನ ಹೆಬ್ಬಾಳು ಬಡಾವಣೆಯಲ್ಲಿ ನೆಲೆಸಿರುವ…
ಮೈಸೂರು ನಗರಪಾಲಿಕೆ ಇಂಜಿನಿಯರ್‍ಗಳಾದ ಸುನಿಲ್ ಬಾಬು, ಮೋಹನಕುಮಾರಿ ಅಮಾನತು
June 5, 2019– ಎಸ್.ಟಿ. ರವಿಕುಮಾರ್ ಮೈಸೂರು: ಮೈಸೂರಿನ ಪ್ರತಿ ಷ್ಠಿತ ಮಹಾತ್ಮ ಗಾಂಧಿ ರಸ್ತೆ ಕಾಮಗಾರಿ ಯಲ್ಲಿ ನಕಲಿ ಬಿಲ್ ತಯಾರಿಸಿ 1.40 ಕೋಟಿ ರೂ. ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆ ಅಸಿಸ್ಟೆಂಟ್ ಎಗ್ಸಿ ಕ್ಯುಟಿವ್ ಇಂಜಿನಿಯರ್ ಸುನಿಲ್ ಬಾಬು ಹಾಗೂ ಕಿರಿಯ ಇಂಜಿನಿಯರ್ ಎಂ.ವಿ. ಮೋಹನ ಕುಮಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ(ಮಹಾನಗರ ಪಾಲಿಕೆ-2) ನಾಗರಾಜ ಅವರು ಜೂನ್ 1 ರಂದು ಆದೇಶ (ಸಂಖ್ಯೆ : ನಇ 62…
ಕೆಆರ್‍ಎಸ್, ಕೆ.ಆರ್.ಆಸ್ಪತ್ರೆ, ಮುಡಾದಲ್ಲಿ ನಾಲ್ವಡಿಗೆ ನಮನ
June 5, 2019ಮೈಸೂರು: ಮೈಸೂರಿನ ಕೆ.ಆರ್.ಆಸ್ಪತ್ರೆ, ಮುಡಾ ಕಚೇರಿ ಹಾಗೂ ಕೆಆರ್‍ಎಸ್‍ನ ಬೃಂದಾವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಕೆ.ಆರ್.ಆಸ್ಪತ್ರೆಯಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಡೀನ್ ಡಾ. ಸಿ.ಪಿ. ನಂಜರಾಜ್, ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ನಂಜುಂಡಸ್ವಾಮಿ ಹಾಗೂ ಸ್ಥಾನಿಕ ವೈದ್ಯಾಧಿಕಾರಿ ಡಾ. ರಾಜೇಶ್ ಕುಮಾರ್ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಡಾ.ಮಂಜುನಾಥ, ಡಾ.ಬಂಗಾರು, ಮಹದೇವು, ಮಹದೇವ ಸ್ವಾಮಿ, ಮಂಗಳಮ್ಮ, ಕುಮಾರ್, ನರ್ಸಿಂಗ್ ಸಿಬ್ಬಂದಿ ಉಪಸ್ಥಿತರಿದ್ದರು….
ಅರಸು ಬಳಗಗಳ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ
June 5, 2019ಮೈಸೂರು: ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಮಂಗಳವಾರ ಅರಸು ಬಳಗಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಚರಿಸಲಾಯಿತು. ಮೈಸೂರಿನ ತ್ಯಾಗರಾಜ ರಸ್ತೆಯ ಅರಸು ಮಂಡಳಿ ಸಂಘದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮ ದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಚಿತ್ರಪಟಕ್ಕೆ ಪುಷ್ಪಾ ರ್ಚನೆ ಸಲ್ಲಿಸುವ ಮೂಲಕ ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಉದ್ಘಾಟನೆ ನೆರವೇರಿಸಿ ದರು. ಅಲ್ಲದೆ, ಈ ಆವರಣದಿಂದ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಚಿತ್ರಪಟದ ಮೆರವಣಿಗೆಗೂ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ನಾಲ್ವಡಿ ಕೃಷ್ಣರಾಜ…
ಜಲಭಾರ ಶಾಸ್ತ್ರವನ್ನಾಧರಿಸಿ ಕೆಆರ್‍ಎಸ್ ಅಣೆಕಟ್ಟೆ ನಿರ್ಮಿಸಿದ ನಾಲ್ವಡಿ ಗುಣಗಾನ
June 5, 2019ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೆಆರ್‍ಎಸ್ ಅಣೆಕಟ್ಟನ್ನು ಕಟ್ಟಿಸಿದ್ದೆ ರೋಚಕ ಪತ್ತೇದಾರಿ ಕಾದಂಬರಿಯಂತೆ. ಪ್ರತಿಯೊಂದು ಹಂತ ದಲ್ಲಿಯೂ ಮಹತ್ವ ನಿರ್ಣಯದೊಂದಿಗೆ ಜಲಭಾರ ಶಾಸ್ತ್ರದ ಅಡಿಯಲ್ಲಿ ಅಣೆಕಟ್ಟನ್ನು ಕಟ್ಟಿಸಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ರಂಗರಾಜು ಹೇಳಿದರು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತೋತ್ಸವ ಸಮಿತಿ ಹಾಗೂ ಅರಸು ಬಳಗಗಳ ಒಕ್ಕೂ ಟದ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿದ್ದ ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ…
ಆಧುನಿಕ ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅದ್ಧೂರಿ ಆಚರಣೆ
June 5, 2019ಮೈಸೂರು: ಆಧುನಿಕ ಮೈಸೂರು ನಿರ್ಮಾತೃ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಮಂಗಳವಾರ ಮೈಸೂರಿನಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ಅದ್ಧೂರಿ ಯಾಗಿ ನೆರವೇರಿತು. ಜೊತೆಗೆ ವಿವಿಧ ಸಂಘ- ಸಂಸ್ಥೆಗಳು ನಾಲ್ವಡಿಯವರ ಜಯಂತಿ ಆಚ ರಿಸಿ ಅವರ ಕೊಡುಗೆಗಳನ್ನು ಸ್ಮರಿಸಿದವು. ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆ ಯರ್ ಜಯಂತ್ಯೋತ್ಸವ ಸಮಿತಿ ಹಾಗೂ ಅರಸು ಬಳಗಗಳ ಒಕ್ಕೂಟದ ಸಂಯು ಕ್ತಾಶ್ರಯದಲ್ಲಿ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮ…
75 ಸಾವಿರ ಹುದ್ದೆ ಭರ್ತಿಗೆ ಮುಂದಾದ ಮೋದಿ ಸರ್ಕಾರ
June 4, 2019ನವದೆಹಲಿ: ಕಳೆದ 45 ವರ್ಷಗಳಲ್ಲಿಯೇ ಅತಿ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ದೇಶದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾಗಿದೆ. ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಮೋದಿ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಲಿದೆ. ಕೇಂದ್ರದ ಎಲ್ಲ ಸಚಿವಾಲಯಗಳಲ್ಲಿ ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಸರ್ಕಾರ, ಮುಂದಿನ ಕೆಲವು ತಿಂಗಳಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಿದ್ದು, ಭರವಸೆ ನೀಡಿದಂತೆ…
ಜವಾಬ್ದಾರಿ ಹೊತ್ತ 48 ಗಂಟೆಯೊಳಗೆಜವಾಬ್ದಾರಿ ಹೊತ್ತ 48 ಗಂಟೆಯೊಳಗೆರಕ್ಷಣಾ ಸಚಿವ ರಾಜ್‍ನಾಥ್‍ಸಿಂಗ್ ಸಿಯಾಚಿನ್‍ಗೆ ಭೇಟಿ
June 4, 2019ಜಮ್ಮು-ಕಾಶ್ಮೀರ: ಭಾರತದ ರಕ್ಷಣಾ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಲವತ್ತೆಂಟು ಗಂಟೆಯೊಳಗಾಗಿ ರಾಜ್ ನಾಥ್ ಸಿಂಗ್ ಅವರು ಸೋಮವಾರ ಸಿಯಾಚಿನ್‍ಗೆ ಭೇಟಿ ನೀಡಿ, ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿಯಲ್ಲಿ ನಿಯೋಜಿತರಾಗಿರುವ ಸೈನಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. “ಮುಂಚೂಣಿ ಸೇನಾ ಠಾಣೆಗೆ ಹಾಗೂ ಸಿಯಾಚಿನ್‍ನ ಬೇಸ್ ಕ್ಯಾಂಪ್‍ಗೆ ಭೇಟಿ ನೀಡಿದ್ದೆ. ‘ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿ’ ಯಲ್ಲಿ ಕಾರ್ಯ ನಿರ್ವಹಿಸುವ ಸೇನಾ ಸಿಬ್ಬಂದಿ ಜತೆಗೆ ಮಾತುಕತೆ ನಡೆಸಿದೆ” ಎಂದು ರಾಜ್‍ನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್…
ಕರ್ನಾಟಕ ಸೇರಿ ಹಲವು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ
June 4, 2019ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾ ವಣೆಯ ಬಳಿಕ ಕೆಲವು ರಾಜ್ಯಗಳಲ್ಲಿ ಬಿಜೆಪಿ, ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಮೂಲಕ ಪಕ್ಷದ ಮಟ್ಟದಲ್ಲಿ ಭಾರಿ ಬದಲಾವಣೆಗೆ ಚಾಲನೆ ನೀಡಲಿದೆ. ಇಷ್ಟರಲ್ಲೇ ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ತೆಲಂಗಾಣ ಮತ್ತು ಮಹಾ ರಾಷ್ಟ್ರ ರಾಜ್ಯ ಘಟಕದ ಅಧ್ಯಕ್ಷರ ಬದಲಾ ವಣೆ ಆಗಲಿದೆ ಎಂದು ಪಕ್ಷದ ಮೂಲ ಗಳು ತಿಳಿಸಿವೆ. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಕೇಂದ್ರ ಸಚಿವ ಸಂಪುಟ…
ದ್ವಿಗುಣವಾದ ಮೇಕೆದಾಟು ಯೋಜನಾ ವೆಚ್ಚ
June 4, 2019ಬೆಂಗಳೂರು: ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಸಮಾನಾಂತರ ವಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನಾ ವೆಚ್ಚ 5,460 ಕೋಟಿ ರೂ.ಯಿಂದ 9,000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಮೇಕೆದಾಟು ಜಲಾಶಯ ಯೋಜನೆಯ ಪೂರ್ಣ ವಿವರವನ್ನು ರಾಜ್ಯ ಸರ್ಕಾರ ಇದುವರೆಗೂ ಕೇಂದ್ರಕ್ಕೆ ನೀಡಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ, ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ ಬೆನ್ನಲ್ಲೇ ಸರ್ಕಾರದ ಉನ್ನತ ಮೂಲಗಳು ಈ ಮಾಹಿತಿಯನ್ನು ಬಹಿರಂಗಪಡಿಸಿವೆ. 2019ರ ಫೆಬ್ರವರಿಯಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ…










