ಮೈಸೂರು

ಸಿಎಂ ಕುಮಾರಸ್ವಾಮಿ ಜನತಾದರ್ಶನ, ಪ್ರಗತಿ ಪರಿಶೀಲನೆ
ಮೈಸೂರು

ಸಿಎಂ ಕುಮಾರಸ್ವಾಮಿ ಜನತಾದರ್ಶನ, ಪ್ರಗತಿ ಪರಿಶೀಲನೆ

June 4, 2019

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನಡೆ ನಂತರ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಆಡಳಿತ ಚುರುಕಿಗೆ ಚಾಲನೆ ನೀಡಿದ್ದಾರೆ.ಮುಖ್ಯಮಂತ್ರಿಗಳು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಕುಳಿತು ಜನರ ಸಮಸ್ಯೆಗಳನ್ನು ಆಲಿಸಿದ್ದಲ್ಲದೆ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಬಾಗೇಪಲ್ಲಿ-ಹಲಗೂರು ಹೆದ್ದಾರಿ ಅಗಲೀಕರಣಕ್ಕಾಗಿ ಕುದೂರು ವ್ಯಾಪ್ತಿಯಲ್ಲಿ ತಾವು ನೆಟ್ಟು ಪೋಷಿಸಿದ ಮರ ಗಳನ್ನು ಕಡಿಯದಂತೆ ಮನವಿ ಮಾಡಿದರು. ತಕ್ಷಣವೇ ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅವರು, ಮರ ಗಳನ್ನು…

ಇಂದು-ನಾಳೆ ಕೆಆರ್‍ಎಸ್‍ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ತಂಡ ಭೇಟಿ
ಮೈಸೂರು

ಇಂದು-ನಾಳೆ ಕೆಆರ್‍ಎಸ್‍ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ತಂಡ ಭೇಟಿ

June 4, 2019

ಮೈಸೂರು: ಕಾವೇರಿ ನೀರು ನಿರ್ವಹಣಾ ಸಮಿತಿ ಅಧಿ ಕಾರಿಗಳ ತಂಡವು ನಾಳೆ (ಜೂ.4) ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂ ಕಿನ ಕೃಷ್ಣರಾಜಸಾಗರ (ಕೆಆರ್‍ಎಸ್)ಕ್ಕೆ ಭೇಟಿ ನೀಡಲಿದೆ. ಕೇಂದ್ರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CNNL)ದ ನಿರ್ದೇ ಶನದಂತೆ ಕೆಆರ್‍ಎಸ್‍ಗೆ ಭೇಟಿ ನೀಡಲಿರುವ ಸಮಿತಿ ಸದಸ್ಯರು, ಜೂನ್ 4 ಮತ್ತು 5 ರಂದು ಪರಿಶೀಲನೆ ನಡೆಸುವರು. ಟೆಲಿಮೆಟ್ರಿ ಆಧಾರದ ಮೇಲೆ ಆನ್‍ಲೈನ್‍ನಲ್ಲಿ ಜಲಾಶಯದ ನೀರಿನ ಮಟ್ಟ, ಒಳ ಹಾಗೂ ಹೊರ ಅರಿವು, ಗೇಟ್‍ಗಳ ಕಾರ್ಯವೈಕರಿಯನ್ನು ತಿಳಿಯುವ ಪದ್ಧತಿಯನ್ನು ಜಾರಿಗೊಳಿಸಲಿರುವ ಉದ್ದೇಶದಿಂದ…

ಮೈಸೂರಿನಿಂದ ಕಣ್ಣೂರು ಏರ್‍ಪೋರ್ಟ್‍ಗೆ ಬಸ್ ಸೇವೆ ಒದಗಿಸಿ
ಮೈಸೂರು

ಮೈಸೂರಿನಿಂದ ಕಣ್ಣೂರು ಏರ್‍ಪೋರ್ಟ್‍ಗೆ ಬಸ್ ಸೇವೆ ಒದಗಿಸಿ

June 4, 2019

ಮೈಸೂರು: ಪ್ರಯಾ ಣಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ಕೊಡಗು ಪ್ರಾಂತ್ಯಗಳಿಂದ ಕೇರಳದ ಕಣ್ಣೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾರಿಗೆ ಬಸ್ ಸೌಲಭ್ಯ ಒದಗಿ ಸುವಂತೆ ಕಣ್ಣೂರು ವಿಮಾನ ನಿಲ್ದಾಣದ ಅಧಿಕಾರಿಗಳು ಕೋರಿಕೊಂಡಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‍ಆರ್‍ಟಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾ ಣದ ಅಧಿಕಾರಿಗಳು, ಮೈಸೂರು ಮತ್ತು ಕೊಡಗು ಭಾಗಗಳಿಂದ ಕಣ್ಣೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್ ಸೌಲಭ್ಯ ಕಲ್ಪಿಸಿದಲ್ಲಿ ಪ್ರಯಾಣಿಕರು ಹೆಚ್ಚಿನ…

ಜೂ. 6ರಂದು ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ
ಮೈಸೂರು

ಜೂ. 6ರಂದು ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ

June 4, 2019

ಮೈಸೂರು: ಸಕಾಲದಲ್ಲಿ ಮಳೆಗಾಗಿ ಪ್ರಾರ್ಥಿಸಲು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಮೇ 31ರಂದು ಸುತ್ತೋಲೆ ಹೊರಡಿಸಿ ರುವ ಕಂದಾಯ ಇಲಾಖೆ (ಮುಜರಾಯಿ) ಅಧೀನ ಕಾರ್ಯದರ್ಶಿ ಎಂ. ತಿಪ್ಪೀರಮ್ಮ ಅವರು, ಜೂನ್ 6 ರಂದು ಬ್ರಾಹ್ಮೀ ಮುಹೂರ್ತದಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆಯಾಗದೆ ಜನರು ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರಿನ ಅಭಾವ…

ಈಗಲೂ ಇವಿಎಂಗಳ ಮೇಲಿನ ಅನುಮಾನ ಕಾಡುತ್ತಿದೆ
ಮೈಸೂರು

ಈಗಲೂ ಇವಿಎಂಗಳ ಮೇಲಿನ ಅನುಮಾನ ಕಾಡುತ್ತಿದೆ

June 4, 2019

ಮೈಸೂರು: ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು, ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಯದ್ವಾ ತದ್ವಾ ಲೀಡ್ ಬಂದಿದ್ದ ಕಡೆ ಕಾಂಗ್ರೆಸ್‍ಗೆ ಹೆಚ್ಚು ಮತ ಲಭಿಸಿರು ವುದು ಇವಿಎಂ ಮೇಲಿನ ಅನುಮಾನಕ್ಕೆ ಪುಷ್ಟಿ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಇವಿಎಂಗಳ ಮೇಲೆ ಅನುಮಾನ ವ್ಯಕ್ತ ಪಡಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರದ ಲ್ಲಿರುವ ತಮ್ಮ ನಿವಾಸದ ಬಳಿ ಸೋಮ ವಾರ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು. ಸ್ಥಳೀಯ ಸಂಸ್ಥೆಗಳಿಗೆ ನಡೆದಿರುವ ಚುನಾವಣೆಯ…

ಸಿಎಂ ಗ್ರಾಮ ವಾಸ್ತವ್ಯ ಪುನಾರಂಭ
ಮೈಸೂರು

ಸಿಎಂ ಗ್ರಾಮ ವಾಸ್ತವ್ಯ ಪುನಾರಂಭ

June 4, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಮೊದಲ ಹಂತದಲ್ಲಿ ಯಾದಗಿರಿ ಮತ್ತು ಕಲಬುರಗಿಯಲ್ಲಿ ಕೈಗೊಳ್ಳಲಿದ್ದಾರೆ. ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂ. 22ರಂದು ಕಲಬುರಗಿ ಜಿಲ್ಲೆಯ ಅಫಜಲ ಪುರ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಲಿ ದ್ದಾರೆ. ಅಂತೆಯೇ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಗಳಲ್ಲೂ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ನಿಗದಿಯಾಗಿದೆ. ಈ ಮೊದಲು ಕುಮಾರಸ್ವಾಮಿ ಅವರು ಕೊಡಗು…

ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಹಿಂದಿಯೇತರ ರಾಜ್ಯಗಳುಜೂ.15ರಂದು ಬೆಂಗಳೂರಲ್ಲಿ ಶಕ್ತಿ ಪ್ರದರ್ಶನ
ಮೈಸೂರು

ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಹಿಂದಿಯೇತರ ರಾಜ್ಯಗಳುಜೂ.15ರಂದು ಬೆಂಗಳೂರಲ್ಲಿ ಶಕ್ತಿ ಪ್ರದರ್ಶನ

June 4, 2019

ಬೆಂಗಳೂರು: ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯಡಿ ಹಿಂದಿ ಭಾಷೆ ಹೇರಲು ಮುಂದಾಗಿರುವುದರ ವಿರುದ್ಧ ಈ ತಿಂಗಳ 15ರಂದು ಬೆಂಗಳೂರಿನಲ್ಲಿ ಹಿಂದಿಯೇತರ ರಾಜ್ಯಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ ಹಾಗೂ ಪುದುಚೇರಿ ಸೇರಿದಂತೆ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಮುಖ ರಾಜಕೀಯ ಮುಖಂಡರು, ಸಾಹಿತಿಗಳು, ಬರಹಗಾರರು, ಚಿಂತಕರು ಪಾಲ್ಗೊಳ್ಳ ಲಿದ್ದಾರೆ. ಹೋರಾಟದ ರೂಪುರೇಷೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಿದ್ಧಪಡಿ ಸಿದ್ದು,…

ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು

ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ

June 4, 2019

ಮೈಸೂರು: ಅತಿಸಾರ ಭೇದಿಯಿಂದ ಐದು ವರ್ಷದೊಳಗಿನ ಮಕ್ಕಳು ಸಾವಿಗೀಡಾಗುವುದನ್ನು ತಡೆ ಗಟ್ಟುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಇಂದಿನಿಂದ ಜೂ.17ರವರೆಗೆ ಪ್ರಸಕ್ತ ಸಾಲಿನ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ (ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯ ಕಾರ್ಯಕ್ರಮ) ನಡೆಯಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಭೇದಿ ಲಕ್ಷಣಗಳು ಕಂಡುಬಂದಲ್ಲಿ ಅಂತಹ ಪ್ರಕ ರಣಗಳನ್ನು ಸಂಶಯಾತ್ಮಕ ಅತಿಸಾರ ಭೇದಿ ಪ್ರಕರಣ ಎಂದು ಪರಿಗಣಿಸಿ, ಅಂತಹ ಮಕ್ಕಳಿಗೆ ವಿಶೇಷ ಆದ್ಯತೆಯ ಮೇರೆಗೆ 14 ದಿನಗಳವರೆವಿಗೂ ಓಆರ್‍ಎಸ್ ದ್ರಾವಣ ಮತ್ತು ಝಿಂಕ್ ಮಾತ್ರೆಗಳನ್ನು ದ್ರ್ರಾವಣ ರೂಪದಲ್ಲಿ…

ಸಾಂಕ್ರಾಮಿಕ ರೋಗ ಹರಡದಂತೆ ಕಟ್ಟೆಚ್ಚರ ವಹಿಸಲು ಮೈಸೂರು ಡಿಸಿ ಸೂಚನೆ
ಮೈಸೂರು

ಸಾಂಕ್ರಾಮಿಕ ರೋಗ ಹರಡದಂತೆ ಕಟ್ಟೆಚ್ಚರ ವಹಿಸಲು ಮೈಸೂರು ಡಿಸಿ ಸೂಚನೆ

June 4, 2019

ಮೈಸೂರು: ಮಳೆ ಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ, ಸ್ವಚ್ಛತೆ ಕಾಪಾಡುವುದರೊಂದಿಗೆ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡು ಸಾಂಕ್ರ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಾದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಆರಂಭ ವಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಆತಂಕವಿದೆ. ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ…

ನಾಲ್ವಡಿ ಕೃಷ್ಣರಾಜ ಒಡೆಯರ್ 135ನೇ ಜನ್ಮದಿನ ಆಚರಣೆ, ಸಿಹಿ ವಿತರಣೆ
ಮೈಸೂರು

ನಾಲ್ವಡಿ ಕೃಷ್ಣರಾಜ ಒಡೆಯರ್ 135ನೇ ಜನ್ಮದಿನ ಆಚರಣೆ, ಸಿಹಿ ವಿತರಣೆ

June 4, 2019

ಮೈಸೂರು: ನೀರು, ಆಸ್ಪತ್ರೆ, ಬಡಜನರ ಉದ್ಯೋಗಕ್ಕಾಗಿ ಕೈಗಾರಿಕೆಸ್ಕೃಗಳ ಸ್ಥಾಪನೆ ಜೊತೆಗೆ ಪ್ರಜಾತಂತ್ರ ವ್ಯವಸ್ಥೆಗೆ ಅಂದೇ ನಾಂದಿ ಹಾಡಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಹಿರಿಯ ಸಂಸ್ಕೃತಿ ಚಿಂತಕ ರಘುರಾಂ ವಾಜಪೇಯಿ ಅಭಿಪ್ರಾಯಪಟ್ಟರು. ಮೈಸೂರು ಅರಮನೆ ದಕ್ಷಿಣ ದ್ವಾರ ದಲ್ಲಿ ವರಾಹಸ್ವಾಮಿ ದೇವಸ್ಥಾನದ ಬಳಿ ಕರ್ನಾಟಕ ಸೇನಾ ಪಡೆ ಆಯೋಜಿಸಿದ್ದ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದರು. ಎಂಟು ವರ್ಷದ ಬಾಲಕನಾಗಿದ್ದಾಗಲೇ ಅಧಿಕಾರ ಸಿಕ್ಕಿದಾಗ, ಜನರಿಗಾಗಿ ಕೆರೆ- ಕಟ್ಟೆಗಳನ್ನು ಕಟ್ಟುವಂತೆ ತಾಯಿಯ ಸೂಚನೆ ಯಂತೆ ಕೆರೆ…

1 960 961 962 963 964 1,611
Translate »