News

ಕೆಎಂಎಫ್ ಮುಗಿಸಲು 15 ವರ್ಷದ ಹಿಂದೆಯೇ ಷಡ್ಯಂತರ ನಡೆದಿತ್ತು…
News

ಕೆಎಂಎಫ್ ಮುಗಿಸಲು 15 ವರ್ಷದ ಹಿಂದೆಯೇ ಷಡ್ಯಂತರ ನಡೆದಿತ್ತು…

April 11, 2023

ಬೆಂಗಳೂರು, ಏ.10(ಕೆಎಂಶಿ)- ಕೆಎಂಎಫ್ ಆಪೆÇೀಶನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು, 2008ರಲ್ಲಿಯೇ ನಂದಿನಿ ಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 2008ರಲ್ಲಿಯೇ ರಾಜ್ಯದ ಬಿಜೆಪಿ ಸರಕಾರ ರಾಜ್ಯದಲ್ಲಿ ಅಮುಲ್ ಮಾರು ಕಟ್ಟೆ ವಿಸ್ತರಣೆಗೆ ಬೆಂಬಲ ನೀಡಿತ್ತು ಎಂದು ತಿಳಿಸಿದ್ದಾರೆ. ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ರಾಷ್ಟ್ರ…

ಆನೆ ಪಾಲಕರಾದ ಬೊಮ್ಮನ್, ಬೆಳ್ಳಿ  ದಂಪತಿ ಭೇಟಿ ಮಾಡಿದ ಮೋದಿ
News

ಆನೆ ಪಾಲಕರಾದ ಬೊಮ್ಮನ್, ಬೆಳ್ಳಿ ದಂಪತಿ ಭೇಟಿ ಮಾಡಿದ ಮೋದಿ

April 10, 2023

ಮಧುಮಲೈ,ಏ.9(ಎಂಟಿವೈ, ಎಸ್‍ಎಸ್)- ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭಾನುವಾರ ಭೇಟಿ ನೀಡಿ, ಆಸ್ಕರ್ ಅವಾರ್ಡ್ ಪಡೆದಿರುವ `ದಿ ಎಲಿಫೆಂಟ್ ವಿಸ್ಪ ರರ್ಸ್’ ಕಿರುಚಿತ್ರದ ಪ್ರಮುಖ ಪಾತ್ರಧಾರಿಗಳಾದ ಹಾಗೂ ಆನೆಗಳ ಪಾಲಕರಾದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಗಳ ಕುಶಲೋಪರಿ ವಿಚಾರಿಸಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾ ರಿಗೆ ಮಾಡಿದ ಬಳಿಕ ಕೆಕ್ಕನಹಳ್ಳ ಬಾರ್ಡರ್‍ನಿಂದ ರಸ್ತೆ ಮಾರ್ಗವಾಗಿ ಮಧುಮಲೈನ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದರು. ಈ ವೇಳೆ…

ಸಿದ್ದರಾಮಯ್ಯ-ಡಿಕೆಶಿ ಹಗ್ಗಜಗ್ಗಾಟ 40 ಕ್ಷೇತ್ರ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು
News

ಸಿದ್ದರಾಮಯ್ಯ-ಡಿಕೆಶಿ ಹಗ್ಗಜಗ್ಗಾಟ 40 ಕ್ಷೇತ್ರ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು

April 5, 2023

ಬೆಂಗಳೂರು, ಏ.4-(ಕೆಎಂಶಿ) ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಹಗ್ಗ ಜಗ್ಗಾಟದಿಂದ 40 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ವರಿಷ್ಠರು ವಿಫಲವಾಗಿದ್ದಾರೆ. ರಾಜ್ಯದ ಉಳಿದ ನೂರು ವಿಧಾನ ಸಭಾ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡುವ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ಯಲ್ಲಿ ದೆಹಲಿಯಲ್ಲಿ ಇಂದು ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಕೇವಲ 60 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಅಂತಿಮ ಗೊಂಡಿರುವ ಎರಡನೇ ಪಟ್ಟಿ ಯಾವುದೇ…

ಇಂದಿನಿಂದ ಮೈಸೂರು-ಬೆಂಗಳೂರು ಎಕ್ಸ್‍ಪ್ರೆಸ್‍ವೇನಲ್ಲಿ ಟೋಲ್ ಸಂಗ್ರಹ
News

ಇಂದಿನಿಂದ ಮೈಸೂರು-ಬೆಂಗಳೂರು ಎಕ್ಸ್‍ಪ್ರೆಸ್‍ವೇನಲ್ಲಿ ಟೋಲ್ ಸಂಗ್ರಹ

March 14, 2023

ರಾಮನಗರ, ಮಾ. 13- ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಾಳೆಯಿಂದ (ಮಾ. 14ರ ಬೆಳಗ್ಗೆ 8 ಗಂಟೆಯಿಂದ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ನಿಡಘಟ್ಟದವರೆಗೆ ಟೋಲ್‍ಸಂಗ್ರಹ ಮಾಡುತ್ತಿದೆ. ಈ ಭಾಗದಲ್ಲಿನ ಎಲ್ಲ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣ ಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟೋಲ್‍ಸಂಗ್ರಹವನ್ನು ಆರಂಭಿಸಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ನಿನ್ನೆ ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಬಳಿ ಮೈಸೂರು ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ ಮಾಡಿದ್ದರು. ಈಗ ಟೋಲ್‍ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಹಿಂದೆ…

ರಾಜಮೌಳಿ RRR ಚಿತ್ರದ `ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ
News

ರಾಜಮೌಳಿ RRR ಚಿತ್ರದ `ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ

March 14, 2023

ಲಾಸ್ ಏಂಜಲೀಸ್, ಮಾ.13- ಅಕಾಡೆಮಿ ಅವಾಡ್ರ್ಸ್ ಸಮಾ ರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್. ರಾಜಮೌಳಿ ಅವರ ಆರ್‍ಆರ್‍ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. `ನಾಟು ನಾಟು..’, `ಲಿಫ್ಟ್ ಮಿ ಅಪ್’, `ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್‍ನಲ್ಲಿದ್ದವು. ಈ ಪೈಕಿ `ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ನಾಟು ನಾಟು…

ಹತ್ತೇ ನಿಮಿಷದಲ್ಲಿ ಆಸ್ತಿ ನೋಂದಣಿ
News

ಹತ್ತೇ ನಿಮಿಷದಲ್ಲಿ ಆಸ್ತಿ ನೋಂದಣಿ

March 3, 2023

ಬೆಂಗಳೂರು, ಮಾ.2(ಕೆಎಂಶಿ)-ಮಧ್ಯ ವರ್ತಿಗಳ ಹಾವಳಿ ಹತ್ತಿಕ್ಕಿ, ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಕೇವಲ 10 ನಿಮಿಷಗಳಲ್ಲೇ ಆಸ್ತಿ ನೋಂದಣಿ ಮಾಡುವ ಕಾವೇರಿ-2 ತಂತ್ರಾಂಶಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಇನ್ನು ಮೂರು ತಿಂಗಳಲ್ಲಿ ರಾಜ್ಯಾದ್ಯಂತ ಹೊಸ ತಂತ್ರಾಂಶ ಜಾರಿಗೊಳ್ಳಲಿದ್ದು, ಆಸ್ತಿ ನೋಂದಣಿ ಮಾಡಿಕೊಳ್ಳುವವರು ಮನೆ ಯಲ್ಲೇ ಕುಳಿತು, ಪ್ರಕ್ರಿಯೆ ಮುಗಿಸುವ ವ್ಯವಸ್ಥೆ ಇದಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್.ಅಶೋಕ್, ನೋಂದಣಿ ವ್ಯವಸ್ಥೆಯ ಲ್ಲಿನ ಸಮಸ್ಯೆ ಪರಿಹರಿಸಿ, ಹೊಸ ನವೀನ, ನಾಗರಿಕ ಸ್ನೇಹಿ, ವಂಚನೆ ರಹಿತ…

ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ; ಹಳೆ ಪಿಂಚಣಿ ಜಾರಿ ಸಂಬಂಧ ಉನ್ನತ ಸಮಿತಿ ರಚನೆ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ
News

ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ; ಹಳೆ ಪಿಂಚಣಿ ಜಾರಿ ಸಂಬಂಧ ಉನ್ನತ ಸಮಿತಿ ರಚನೆ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ

March 2, 2023

ಬೆಂಗಳೂರು, ಮಾ.1(ಕೆಎಂಶಿ)- ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮಾಡಿ, ಆದೇಶ ಹೊರಡಿಸಲಾಗಿದೆ. ಸರ್ಕಾರಿ ನೌಕರರ ಮುಷ್ಕರಕ್ಕೆ ತಲೆಬಾಗಿದ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ನೀಡಿದ್ದಲ್ಲದೆ, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡುವ ಸಂಬಂಧ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಮಣಿಯುತ್ತಿದ್ದಂತೆ ನೌಕರರು ಮುಷ್ಕರವನ್ನು ಹಿಂದಕ್ಕೆ ಪಡೆದು, ತಕ್ಷಣ ಕೆಲಸಕ್ಕೆ ಹಾಜ ರಾಗುವ…

ಮತ್ತೆ ಬಿಜೆಪಿ ಅಧಿಕಾರಕ್ಕೆ ತಂದರೆ ಕರ್ನಾಟಕದಲ್ಲಿ ಮತ್ತಷ್ಟು ಅಭಿವೃದ್ಧಿ ಪರ್ವ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯೂ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಿ ಮೋದಿ ಚಾಲನೆ
News

ಮತ್ತೆ ಬಿಜೆಪಿ ಅಧಿಕಾರಕ್ಕೆ ತಂದರೆ ಕರ್ನಾಟಕದಲ್ಲಿ ಮತ್ತಷ್ಟು ಅಭಿವೃದ್ಧಿ ಪರ್ವ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯೂ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ಕೆ ಪ್ರಧಾನಿ ಮೋದಿ ಚಾಲನೆ

February 28, 2023

ಬೆಂಗಳೂರು, ಫೆ.27(ಕೆಎಂಶಿ)- ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತಂದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಪರ್ವ ಕಾಣುತ್ತೀರಿ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮೇಲಿಂದ ಮೇಲೆ ರಾಜ್ಯ ಪ್ರವಾಸ ಕೈಗೊಳ್ಳುತ್ತಿ ರುವ ಮೋದಿ, ಇಂದು ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ರೋಡ್ ಶೋ ಹಾಗೂ ಬೃಹತ್ ಜನಸ್ತೋಮವನ್ನುದ್ದೇಶಿಸಿ ಮಾತನಾಡಿ, ಮತ್ತೆ ಡಬಲ್ ಇಂಜಿನ್ ಸರ್ಕಾರಕ್ಕೆ ಒತ್ತು ಕೊಟ್ಟರು. ಡಬಲ್ ಇಂಜಿನ್ ಸರ್ಕಾರವಿದ್ದರೆ, ರಾಜ್ಯದ ಅಭಿವೃದ್ಧಿಯನ್ನು ನೀವು ಕಣ್ಣಾರೆ ಕಾಣುತ್ತೀರಿ. ಕರ್ನಾಟಕ ಮತ್ತು…

ಇಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ಏರ್‍ಪೋರ್ಟ್ ಲೋಕಾರ್ಪಣೆ
News

ಇಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ಏರ್‍ಪೋರ್ಟ್ ಲೋಕಾರ್ಪಣೆ

February 27, 2023

ಬೆಂಗಳೂರು, ಫೆ.26- ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ರಣತಂತ್ರಗಳನ್ನು ರೂಪಿಸಿದ್ದು, ರಾಜ್ಯದಲ್ಲಿ ಸರಣಿ ಸಭೆ, ಸಮಾರಂಭಗಳಿಗೆ ಮುಂದಾಗಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರಿ ಕಾರ್ಯಕ್ರಮಗಳ ಹೆಸರಿ ನಲ್ಲಿ ಪದೇ ಪದೆ ರಾಜ್ಯಕ್ಕೆ ಭೇಟಿ ನೀಡುವ ಮೂಲಕ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರ ಕನಸಿನ ಯೋಜನೆಯಾದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ…

ಕಾಂಗ್ರೆಸ್ `ಟೆಂಡರ್ ಬಾಂಬ್’
News

ಕಾಂಗ್ರೆಸ್ `ಟೆಂಡರ್ ಬಾಂಬ್’

February 16, 2023

ಬೆಂಗಳೂರು, ಫೆ. 15 (ಕೆಎಂಶಿ)- ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಭ್ರಷ್ಟಾ ಚಾರದ ಆರೋಪ ಮತ್ತು ಪ್ರತ್ಯಾರೋಪ ಪ್ರತಿಧ್ವನಿಸಿದೆ. ಇಂದಿಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕರು ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗ ರಣಗಳ ತನಿಖೆಗೆ ಆಯೋಗ ರಚಿಸುವುದಲ್ಲದೆ, ಎಲ್ಲ ಟೆಂಡರ್‍ಗಳನ್ನು ರದ್ದು ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ…

1 2 3 4 5 73
Translate »