News

ಅಗತ್ಯ ಬಿದ್ದರೆ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ: ಸಿಎಂ
News

ಅಗತ್ಯ ಬಿದ್ದರೆ ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ: ಸಿಎಂ

March 19, 2022

ಬೆಂಗಳೂರು, ಮಾ.18- ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿ ಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯ ದಿಂದ ತ್ವರಿತವಾಗಿ ಅನು ಮೋದನೆ ಪಡೆದುಕೊಂಡು ಯೋಜನೆಗೆ ಚಾಲನೆ ನೀಡಲು ಇಂದಿನ ವಿಧಾನ ಮಂಡಲ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಅಂತರ ರಾಜ್ಯ ಜಲ ವಿವಾದಗಳ ಕುರಿತಂತೆ ಉಭಯ ಸದನಗಳ ಸಭಾ ನಾಯಕರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ಕಾವೇರಿ ಜಲ…

ರಾಜ್ಯದಲ್ಲಿ ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ  ಶೇ.70ರಷ್ಟು ಉದ್ಯೋಗ ಕಡ್ಡಾಯ
News

ರಾಜ್ಯದಲ್ಲಿ ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಕಡ್ಡಾಯ

March 19, 2022

ಬೆಂಗಳೂರು,ಮಾ.18(ಕೆಎಂಶಿ)-ಡಾ.ಸರೋಜಿನಿ ಮಹಿಷಿ ವರದಿ ಯಂತೆ ರಾಜ್ಯದಲ್ಲಿ ಪ್ರಾರಂಭವಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಕೊಡಬೇಕೆಂಬ ನಿಯಮದಲ್ಲಿ ಯಾವುದೇ ರಾಜೀ ಪ್ರಶ್ನೆಯೇ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರು ಗೇಶ್ ನಿರಾಣಿ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಶಾಸಕಿ ರೂಪಾಲಿ ಸಂತೋಷ್ ನಾಯಕ್ ಪರವಾಗಿ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಯಾವುದೇ ಭಾಗದಲ್ಲೂ ಹೊಸದಾಗಿ ಕೈಗಾರಿಕೆ ಸ್ಥಾಪನೆ ಮಾಡಿದರೆ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗಗಳನ್ನು ನೀಡಲೇಬೇಕು. ಇದು ನಮ್ಮ ಸರ್ಕಾರದ ಬದ್ಧತೆ. ವಿಶೇಷವಾಗಿ ಯುವಕರಿಗೆ…

ನಮಗೆ ಹೈಕಮಾಂಡ್ ಅಭಯ
News

ನಮಗೆ ಹೈಕಮಾಂಡ್ ಅಭಯ

March 18, 2022

ಬೆಂಗಳೂರು,ಮಾ.17(ಕೆಎಂಶಿ)-ಹೈಕಮಾಂಡ್ ಭಯ ಕಾಂಗ್ರೆಸ್‍ಗೆ, ನಮಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿರು ಗೇಟು ನೀಡಿದ್ದಾರೆ. ಬಜೆಟ್ ಮೇಲಿನ ಚರ್ಚೆಗೆ ಮುಖ್ಯ ಮಂತ್ರಿಗಳು ನೀಡಿರುವ ಉತ್ತರಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಿಂದ ಸಾಕಷ್ಟು ಪ್ರಮಾಣದಲ್ಲಿ ಅನುದಾನ ರಾಜ್ಯಕ್ಕೆ ಬರುತ್ತಿಲ್ಲ, ಇದನ್ನು ಕೇಳುವ ಧೈರ್ಯ ಮುಖ್ಯಮಂತ್ರಿ ಅವರಿಗೆ ಇಲ್ಲ ಎಂದು ಟೀಕಿಸಿದರು. ತಕ್ಷಣವೇ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು, ಕೇಂದ್ರ ದಿಂದ ಯಾವುದೇ ರೀತಿಯ ಅನ್ಯಾಯವಾಗಿಲ್ಲ, ರಾಜ್ಯಕ್ಕೆ ನೀಡಬೇಕಿದ್ದ ಹಣಕ್ಕಿಂತ ಹೆಚ್ಚು ಬಿಡುಗಡೆ ಮಾಡಿದ್ದಾರೆ ಎಂದರು. ನಾವು ಕೇಳುವುದಕ್ಕಿಂತ…

ತಹಸೀಲ್ದಾರ್‍ಗೆ ಭೂ ಸರ್ವೆ ಅಧಿಕಾರವಿದೆ: ಹೈಕೋರ್ಟ್
News

ತಹಸೀಲ್ದಾರ್‍ಗೆ ಭೂ ಸರ್ವೆ ಅಧಿಕಾರವಿದೆ: ಹೈಕೋರ್ಟ್

March 18, 2022

ಬೆಂಗಳೂರು: ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2) ರಡಿಯಲ್ಲಿ ಮುನ್ಸಿಪಲ್ ಕಾಪೆರ್Çರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನು ನಿಗದಿಪಡಿಸುವ ಅಧಿಕಾರ ತಹಸೀಲ್ದಾರ್‍ಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಅಲೋಕ್ ಅರದೆ ಮತ್ತು ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಆದೇಶ ಹೊರಡಿಸಿದ್ದು ಬೆಂಗಳೂರಿನ ಬಸ ವನಗುಡಿಯ ನಿವಾಸಿ ಸುನಿಲ್ ಚಜೆಡ್ ಎಂಬು ವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದ್ದು, 2020ರ ಅಕ್ಟೋಬರ್‍ನಲ್ಲಿ ಒಬ್ಬರು ನ್ಯಾಯಾಧೀಶರನ್ನೊಳ ಗೊಂಡ ಏಕಸದಸ್ಯ…

ರೊಟ್ಟಿ ನೀಡಲು ಸಾಲ   ಹೋಳಿಗೆ ತಿನ್ನಲು ಅಲ್ಲ…
News

ರೊಟ್ಟಿ ನೀಡಲು ಸಾಲ ಹೋಳಿಗೆ ತಿನ್ನಲು ಅಲ್ಲ…

March 17, 2022

ಬಜೆಟ್ ಮೇಲಿನ ಚರ್ಚೆಗೆ ಸುದೀರ್ಘ ಉತ್ತರ ನೀಡಿದ ಮುಖ್ಯಮಂತ್ರಿ, ಕೋವಿಡ್-19 ಸಂಕಷ್ಟದಲ್ಲೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮವಾಗೇ ತೆಗೆದುಕೊಂಡು ಹೋಗಿದ್ದೇವೆ, ನಮಗೆ ಸಾಲ ಮಾಡಲು ಹೆಚ್ಚಿನ ಅವಕಾಶ ಇದ್ದರೂ ಅದನ್ನು ಪೂರ್ಣವಾಗಿ ಬಳಕೆ ಮಾಡಿಕೊಳ್ಳದೆ ಜನರಿಗೆ ರೊಟ್ಟಿ ಕೊಡಲು ಎಷ್ಟು ಬೇಕೋ ಅಷ್ಟನ್ನು ಮಾತ್ರ ಮಾಡಿದ್ದೇವೆ ಎಂದರು. ಬಿ.ಎಸ್.ಯಡಿಯೂರಪ್ಪ ನೇತೃತ್ವ ದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈವರೆಗೂ ಹಣಕಾಸು ಶಿಸ್ತನ್ನು ಮೀರಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇರುವುದರಿಂ ದಲೇ ಇದು…

ಶಾಲಾ ಕಾಲೇಜಲ್ಲಿ ಹಿಜಾಬ್ ನಿಷೇಧ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್
News

ಶಾಲಾ ಕಾಲೇಜಲ್ಲಿ ಹಿಜಾಬ್ ನಿಷೇಧ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್

March 16, 2022

ಬೆಂಗಳೂರು, ಮಾ.15(ಕೆಎಂಶಿ)- ಹಿಜಾಬ್ ಸೇರಿದಂತೆ ಧಾರ್ಮಿಕ ಸಂಕೇತ ಬಿಂಬಿಸುವ ವಸ್ತ್ರಗಳಿಗೆ ತರಗತಿಯೊಳಗೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈ ಕೋರ್ಟ್ ಇಂದಿಲ್ಲಿ ಮಹತ್ವದ ತೀರ್ಪು ನೀಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶವನ್ನು ಎತ್ತಿಹಿಡಿದಿರುವುದಲ್ಲದೆ, ಹಿಜಾಬ್ ಸಮರ್ಥಿಸಿಕೊಂಡು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ ತೀರ್ಪನ್ನು ಹೈಕೋರ್ಟ್ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯ ಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನೀಸಾ…

ಸುಪ್ರೀಂಕೋರ್ಟ್‍ಗೆ ವಿದ್ಯಾರ್ಥಿನಿ ಮೇಲ್ಮನವಿ
News

ಸುಪ್ರೀಂಕೋರ್ಟ್‍ಗೆ ವಿದ್ಯಾರ್ಥಿನಿ ಮೇಲ್ಮನವಿ

March 16, 2022

ನವದೆಹಲಿ, ಮಾ. 15- ಶಿಕ್ಷಣ ಸಂಸ್ಥೆ ಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆ ಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿ ಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿಬಾ ನಾಜ್ ಎಂಬ ಮುಸ್ಲಿಂ ಸಮು ದಾಯದ ವಿದ್ಯಾರ್ಥಿನಿ, ವಕೀಲ ಅನಸ್ ತನ್ವೀರ್ ಅವರ ಮೂಲಕ ಸುಪ್ರೀಂಕೋರ್ಟ್‍ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಶಿಕ್ಷಣ ಕಾಯಿದೆಯು ಕಾಲೇಜು ಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸುವು ದಿಲ್ಲ. ಹಿಜಾಬ್ ಅಗತ್ಯದ ಆಚರಣೆಯಲ್ಲ ಎಂದು ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಯಾವುದೇ ಅಧಿಕಾರವನ್ನು ನೀಡುವುದಿಲ್ಲ. ಹಿಜಾಬ್ ಧರಿಸುವ…

ಚಾಮರಾಜನಗರದ ಆಕ್ಸಿಜನ್ ದುರಂತ: 24 ಮಂದಿ ಸಾವು ಪ್ರಕರಣ ರೋಹಿಣಿ ಸಿಂಧೂರಿಯದ್ದು ಏನೂ ತಪ್ಪಿಲ್ಲ
News

ಚಾಮರಾಜನಗರದ ಆಕ್ಸಿಜನ್ ದುರಂತ: 24 ಮಂದಿ ಸಾವು ಪ್ರಕರಣ ರೋಹಿಣಿ ಸಿಂಧೂರಿಯದ್ದು ಏನೂ ತಪ್ಪಿಲ್ಲ

March 16, 2022

ಬೆಂಗಳೂರು, ಮಾ.15-ಚಾಮರಾಜ ನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಯಲ್ಲಿ ಉಂಟಾದ ಲೋಪದ ಹಿನ್ನೆಲೆ ಯಲ್ಲಿ 24 ಕೊರೊನಾ ಸೋಂಕಿತರು ಸಾವನ್ನ ಪ್ಪಿದ್ದ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ನೇಮಿ ಸಿದ್ದ ಉಸ್ತುವಾರಿ ಸಮಿತಿಯು, ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಹೈಕೋರ್ಟ್‍ನ ನಿವೃತ್ತ ನ್ಯಾಯ ಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿಯು ನೀಡಿದ ವರದಿಯಲ್ಲಿ ರೋಗಿಗಳಿಗೆ ಸಕಾಲದಲ್ಲಿ ಆಕ್ಸಿಜನ್ ಒದಗಿಸುವಲ್ಲಿ ದಿವ್ಯ ನಿರ್ಲಕ್ಷ್ಯ ತೋರಿದ್ದೇ…

ಹಿಜಾಬ್ ಪ್ರಕರಣ: ಇಂದು ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು
News

ಹಿಜಾಬ್ ಪ್ರಕರಣ: ಇಂದು ಬೆಳಗ್ಗೆ 10.30ಕ್ಕೆ ಅಂತಿಮ ತೀರ್ಪು

March 15, 2022

ಬೆಂಗಳೂರು, ಮಾ. 14- ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಕರ್ನಾಟಕ ಹೈಕೋರ್ಟ್‍ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ಪೀಠದಲ್ಲಿದ್ದಾರೆ. ಶಿಕ್ಷಣ…

4317 ಶಿಕ್ಷಕರ ವಿರುದ್ಧ ಕಠಿಣ ಕ್ರಮ
News

4317 ಶಿಕ್ಷಕರ ವಿರುದ್ಧ ಕಠಿಣ ಕ್ರಮ

March 15, 2022

ಬೆಂಗಳೂರು,ಮಾ.14(ಕೆಎಂಶಿ)- ರಾಜ್ಯದಲ್ಲಿ 4,317 ಶಿಕ್ಷಕರು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಗಳನ್ನು ಅಸಮರ್ಪಕ ಮೌಲ್ಯಮಾಪನ ಮಾಡಿದ್ದು, ಭವಿಷ್ಯದ ಕನಸು ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಸಮ ರ್ಪಕ ಮೌಲ್ಯಮಾಪನ ಮಾಡಿದ ಶಿಕ್ಷಕರಿಂದ ಅಂಕದ ವ್ಯತ್ಯಾಸದ ಅನುಸಾರ 51,26,600 ರೂ. ದಂಡ ವಿಧಿಸ ಲಾಗಿದೆ, ಅದರಲ್ಲಿ 10,56,400 ರೂ. ವಸೂಲಿ ಮಾಡಲಾಗಿದೆ…

1 35 36 37 38 39 73
Translate »